Site icon Vistara News

Rishabh Pant: ಪಂತ್​ ಶೀಘ್ರ ಚೇತರಿಕೆಗೆ ಟೀಮ್ ಇಂಡಿಯಾ ಆಟಗಾರರಿಂದ ಪ್ರಾರ್ಥನೆ

Rishabh Pant

ಇಂದೋರ್​: ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್​ ಪಂತ್(Rishabh Pant)​ ಶೀಘ್ರ ಚೇತರಿಕೆಗೆ ಟೀಮ್​ ಇಂಡಿಯಾ ಆಟಗಾರರು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ನ್ಯೂಜಿಲ್ಯಾಂಡ್​ ವಿರುದ್ಧದ ಅಂತಿಮ ಏಕದಿನ ಸರಣಿಯನ್ನಾಡಲು ಟೀಮ್​ ಇಂಡಿಯಾ ಆಟಗಾರರು ಇಂದೋರ್​ ತಲುಪಿದ್ದಾರೆ. ಇದೇ ವೇಳೆ ಆಟಗಾರರಾದ ಸೂರ್ಯಕುಮಾರ್​ ಯಾದವ್​, ಕುಲ್​ದೀಪ್​ ಯಾದವ್​, ವಾಷಿಂಗ್ಟನ್​ ಸುಂದರ್​ ಸೇರಿ ಹಲವು ಆಟಗಾರರು ಮಹಾಕಾಳೇಶ್ವರ ದೇವಸ್ಥಾನದಲ್ಲಿ ರಿಷಭ್​ ಪಂತ್​ ಶೀಘ್ರ ಗುಣಮುಖರಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೂರ್ಯಕುಮಾರ್ ಯಾದವ್, ಪಂತ್ ಅವರು ತಂಡದ ಪ್ರಮುಖ ಸದಸ್ಯರಾಗಿದ್ದಾರೆ ಮತ್ತು ಅವರು ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಮುಖ್ಯವಾಗಿದೆ. ಸದ್ಯ ಅವರು ಮುಂಬೈಯ ಖಾಸಗಿ ಆಸ್ಪತ್ರೆಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇಚರಿಕೆ ಕಾಣುತ್ತಿದ್ದಾರೆ. ಅರು ಶೀಘ್ರ ಗುಣಮುಖರಾಗಲೆಂದು ನಾವು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಸೂರ್ಯಕುಮಾರ್​ ಹೇಳಿದರು.

ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ?

ಜನರಿಗೆ 7ರಂದು ರಿಷಭ್​ ಪಂತ್ ಮಂಡಿಯ ಗಾಯಕ್ಕೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು. ಇದೀಗ ಮೂಳೆ ಜೋಡಣೆಯಾಗುತ್ತಿದ್ದು, ಉಳಿದ ಗಾಯಗಳೂ ನೈಸರ್ಗಿಕವಾಗಿ ವಾಸಿಯಾಗುತ್ತಿದೆ. ಮೂಳೆ ಶಸ್ತ್ರಚಿಕಿತ್ಸೆಗೆ ಆರು ವಾರಗಳ ವಿಶ್ರಾಂತಿ ಬೇಕಾಗುತ್ತದೆ. ಅಲ್ಲಿಯ ತನಕ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಅವರು ಪುನಶ್ಚೇತನಕ್ಕೆ ಒಳಗಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಡಿಸೆಂಬರ್​ 30ರಂದು ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಸುಟ್ಟ ಗಾಯಗಳು ಹಾಗೂ ಮಂಡಿಯ ಗಾಯಗೊಂಡಿಗೆ ರಿಷಭ್​ ಪಂತ್​ ಪಾರಾಗಿದ್ದರು. ಡೆಹ್ರಾಡೂನ್​ನಲ್ಲಿ ಆರಂಭದಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ | Rishabh Pant | ಆಡದಿದ್ದರೂ ಪರ್ವಾಗಿಲ್ಲ, ಐಪಿಎಲ್​ ವೇಳೆ ಪಂತ್​ ನನ್ನ ಜತೆಗಿರಬೇಕು ಎಂದು ಹೇಳಿದ ಡೆಲ್ಲಿ ಕ್ಯಾಪಿಟಲ್ಸ್​ ಕೋಚ್​​ ರಿಕಿ ಪಾಂಟಿಂಗ್​

Exit mobile version