ಚೆನ್ನೈ: ಐಪಿಎಲ್ 16ನೇ ಆವೃತ್ತಿಗೆ ವೇಗದ ಬೌಲರ್ ಮುಕೇಶ್ ಚೌಧರಿ ಅಲಭ್ಯರಾಗಿದ್ದಾರೆ. ಎಡಗೈ ಬೌಲರ್ ಗಾಯದ ಸಮಸ್ಯೆಗೆ ಒಳಗಾಗಿದ್ದು, ಇನ್ನೂ ಸುಧಾರಿಸಿಕೊಳ್ಳದ ಕಾರಣ ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಲು ಸಾಧ್ಯವಾಗುತ್ತಿಲ್ಲ. ರಾಜಸ್ಥಾನ್ ರಾಯಲ್ಸ್ನ ಮಾಜಿ ವೇಗದ ಬೌಲರ್ ಆಕಾಶ್ ಸಿಂಗ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಸಿಎಸ್ಕೆ.
ಆಕಾಶ್ ಸಿಂಗ್ 2020ರಲ್ಲಿ 19ರ ವಯೋಮಿತಿಯ ವಿಶ್ವ ಕಪ್ನಲ್ಲಿ ಭಾರತ ತಂಡದ ಪರವಾಗಿ ಆಡಿದ್ದರು. 9 ಪಂದ್ಯಗಳಲ್ಲಿ ಅವರು 7 ವಿಕೆಟ್ ಉರುಳಿಸಿದ್ದರು. ಮುಕೇಶ್ ಚೌಧರಿ 2021ರ ಐಪಿಎಲ್ನ 13 ಪಂದ್ಯಗಳಲ್ಲಿ 16 ವಿಕೆಟ್ ತಮ್ಮದಾಗಿಸಿಕೊಂಡಿದ್ದರು. ಈ ಮೂಲಕ ಕ್ರಿಕೆಟ್ ವಿಶ್ಲೇಷಕರ ಗಮನ ಸೆಳೆದಿದ್ದರು. ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಅವರು ಮಕೇಶ್ ಚೌಧರಿ ಈ ಬಾರಿಯ ಐಪಿಎಲ್ನಲ್ಲಿ ಆಡುವುದಿಲ್ಲ ಎಂದು ಈ ಹಿಂದೆಯೇ ಸೂಚನೆ ಕೊಟ್ಟಿದ್ದರು. ಇದೀಗ ಅವರ ಅಲಭ್ಯತೆಗೆ ಖಾತರಿಯಾಗಿದೆ. ಸಿಎಸ್ಕೆ ತಂಡ ಗುಜರಾತ್ ಟೈಟನ್ಸ್ ವಿರುದ್ಧ ಮಾರ್ಚ್ 31ರಂದು ನಡೆಯುವ ಪಂದ್ಯದಲ್ಲಿ ಎದುರಾಗಲಿದೆ.
5000 ರನ್ ಸನಿಹದಲ್ಲಿ ಧೋನಿ
ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅವರು ಈ ವರೆಗೆ 234 ಪಂದ್ಯಗಳಿಂದ 4978 ರನ್ ಗಳಿಸಿದ್ದಾರೆ. ಈ ಟೂರ್ನಿಯಲ್ಲಿ ಅವರು 22 ರನ್ ಗಳಿಸಿದರೆ 5 ಸಾವಿರ ರನ್ ಪೂರೈಸಿದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆ ಬರೆಯಲಿದ್ದಾರೆ. ಇದರ ಜತೆಗೆ 185 ರನ್ ಬಾರಿಸಿದರೆ ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ (5162) ಅವರನ್ನು ಹಿಂದಿಕ್ಕಲಿದ್ದಾರೆ. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ 6ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
ಸಿಕ್ಸರ್ ದಾಖಲೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಯುನಿವರ್ಸ್ ಬಾಸ್ ಖ್ಯಾತಿಯ ವಿಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರಿನಲ್ಲಿದೆ ಅವರು 357 ಸಿಕ್ಸರ್ಗಳನ್ನು ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಸದ್ಯ ಧೋನಿ 229 ಸಿಕ್ಸರ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ಬಾರಿ ಅವರು 23 ಸಿಕ್ಸ್ ಸಿಡಿಸಿದರೆ 250 ಸಿಕ್ಸರ್ ಕ್ಲಬ್ಗೆ ಸೇರುವ ಜತೆಗೆ ಎಬಿಡಿ ಅವರ ದಾಖಲೆಯನ್ನು ಮುರಿಯಲಿದ್ದಾರೆ ಎಬಿಡಿ 251 ಸಿಕ್ಸರ್ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 240 ಸಿಕ್ಸರ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ ಅವರಿಗೂ ಎಬಿಡಿ ಅವರ ದಾಖಲೆ ಮುರಿಯುವ ಅವಕಾಶವಿದೆ.
ಇದನ್ನೂ ಓದಿ IPL 2023: ಐಪಿಎಲ್ನಲ್ಲಿ ಹಲವು ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ
250ನೇ ಐಪಿಎಲ್ ಪಂದ್ಯ
ಐಪಿಎಲ್ನ ಇದುವರೆಗಿನ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯವನ್ನಾಡಿದ ದಾಖಲೆ ಧೋನಿ ಹೆಸರಿನಲ್ಲಿದೆ. ಸದ್ಯ ಅವರು 234 ಪಂದ್ಯಗಳನ್ನಾಡಿದ್ದಾರೆ. ಈ ಬಾರಿ ಅವರು 16 ಪಂದ್ಯಗಳಲ್ಲಿ ಆಡಿದರೆ 250 ಪಂದ್ಯಗಳನ್ನು ಪೂರೈಸಿದ ಮೊದಲ ಆಟಗಾರ ಎಂಬ ಮೈಲುಗಲ್ಲು ಸ್ಥಾಪಿಸಲಿದ್ದಾರೆ. ಆರ್‌ಸಿಬಿ ಆಟಗಾರ ದಿನೇಶ್ ಕಾರ್ತಿಕ್ 229 ಪಂದ್ಯಗಳನ್ನಾಡಿ ಈ ಸಾಧನೆ ಮಾಡಿದವರ ಪಟ್ಟಿಯಲ್ಲಿ ದ್ವಿ