Team India | ಟೀಮ್‌ ಇಂಡಿಯಾ ವಿಶ್ವದ ಅತ್ಯಂತ ಕಳಪೆ ಸೀಮಿತ ಓವರ್‌ಗಳ ತಂಡ ಎನ್ನುತ್ತಾರೆ ವಾನ್‌; ಕಾರಣ ಇಲ್ಲಿದೆ - Vistara News

T20 ವಿಶ್ವಕಪ್

Team India | ಟೀಮ್‌ ಇಂಡಿಯಾ ವಿಶ್ವದ ಅತ್ಯಂತ ಕಳಪೆ ಸೀಮಿತ ಓವರ್‌ಗಳ ತಂಡ ಎನ್ನುತ್ತಾರೆ ವಾನ್‌; ಕಾರಣ ಇಲ್ಲಿದೆ

2011ರ ವಿಶ್ವ ಕಪ್‌ ಬಳಿಕ ಟೀಮ್‌ ಇಂಡಿಯಾ (Team India) ಯಾವುದೇ ಐಸಿಸಿ ಟೂರ್ನಿಯಲ್ಲಿ ಚಾಂಪಿಯನ್‌ ಆಗಿಲ್ಲ ಎಂದು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕೆಲ್‌ ವಾನ್‌ ಟೀಕಿಸಿದ್ದಾರೆ.

VISTARANEWS.COM


on

Ind vs pak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್‌ : ಭಾರತ ತಂಡ (Team India) ಟಿ೨೦ ವಿಶ್ವ ಕಪ್‌ನ ಪ್ರಶಸ್ತಿ ರೇಸ್‌ನಿಂದ ನಿರ್ಗಮಿಸುತ್ತಿದ್ದಂತೆ ಒಬ್ಬೊಬ್ಬರು ಒಂದೊಂದು ರೀತಿಯ ವಿಶ್ಲೇಷಣೆ ಶುರು ಮಾಡಿಕೊಂಡಿದ್ದಾರೆ. ಆಟಗಾರರ ಆಯ್ಕೆ ಸರಿ ಇರಲಿಲ್ಲ, ನಾಯಕತ್ವ ಗಟ್ಟಿಯಾಗಿರಲಿಲ್ಲ, ಪ್ಲೇಯಿಂಗ್ ಇಲೆವೆನ್‌ ದುರ್ಬಲವಾಗಿತ್ತು, ಕೆಲಸಕ್ಕೆ ಬಾರದ ಹಿರಿಯ ಆಟಗಾರರೇ ತುಂಬಿಕೊಂಡಿದ್ದರು ಎಂದೆಲ್ಲ ಟೀಕೆಗಳನ್ನು ಮಾಡಲಾಗುತ್ತಿದೆ. ಈ ಎಲ್ಲ ಟೀಕಾಸ್ತ್ರಗಳ ನಡುವೆ ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕೆಲ್‌ ವಾನ್‌ ಅವರು ನೀಡಿರುವ ಹೇಳಿಕೆ ಹೆಚ್ಚು ಗಮನ ಸೆಳೆಯುತ್ತಿದೆ. ಏಕೆಂದರೆ, ಅವರ ಪ್ರಕಾರ ಟೀಮ್‌ ಇಂಡಿಯಾ ಸೀಮಿತ ಓವರ್‌ಗಳ ಕ್ರಿಕೆಟ್‌ ಮಾದರಿಯಲ್ಲಿ ಅತ್ಯಂತ ಕಳಪೆ ತಂಡ.

ಟೀಮ್‌ ಇಂಡಿಯಾ ಐಸಿಸಿ ಟಿ೨೦ Rank ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಹಾಲಿ ವಿಶ್ವ ಕಪ್‌ನ ಗುಂಪು ಎರಡರಲ್ಲಿದ್ದ ಬಳಗ, ಸೂಪರ್‌-೧೨ ಹಂತದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಟೇಬಲ್‌ ಟಾಪರ್‌ ಎನಿಸಿಕೊಂಡು ಸೆಮಿಫೈನಲ್‌ಗೇರಿತ್ತು. ಅದರೆ, ಉಪಾಂತ್ಯದ ಹಣಾಹಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿತು. ಅದರಲ್ಲೂ ಬೌಲರ್‌ಗಳು ಪೇಲವವಾಗಿ ಕಂಡರು. ಹೀಗಾಗಿ ೧೦ ವಿಕೆಟ್‌ಗಳ ಹೀನಾಯ ಸೋಲಿಗೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಇಂಗ್ಲೆಂಡ್‌ನ ಮಾಜಿ ನಾಯಕ ಮೈಕೆಲ್‌ ವಾನ್‌, ಭಾರತ ತಂಡ ಸೀಮಿತ ಓವರ್‌ಗಳ ಟೂರ್ನಿಯಲ್ಲಿ ಯಾವುದೇ ಸಾಧನೆ ಮಾಡುತ್ತಿಲ್ಲ. ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿರುವ ತಂಡವದು ಎಂದು ಹೇಳಿದ್ದಾರೆ.

೨೦೧೧ರಲ್ಲಿ ಭಾರತ ತಂಡ ಏಕ ದಿನ ವಿಶ್ವ ಕಪ್‌ ಗೆದ್ದ ಬಳಿಕ ಯಾವುದೇ ಸ್ಮರಣಿಯ ಸಾಧನೆ ಮಾಡಿಲ್ಲ. ಹಾಗಾದರೆ ಇಷ್ಟು ವರ್ಷಗಳ ಕಾಲ ಮಾಡಿದ್ದೇನು? ವಿಶ್ವದ ಎಲ್ಲ ಆಟಗಾರರು ಭಾರತಕ್ಕೆ ಹೋಗಿ ಐಪಿಎಲ್‌ ಆಡುತ್ತಾರೆ ಹಾಗೂ ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳುತ್ತಿದ್ದಾರೆ. ಆದರೆ ಭಾರತ ತಂಡದ ಆಟಗಾರರು ಮಾಡುತ್ತಿರುವುದೇನು,” ಎಂದು ವಾನ್‌ ಪ್ರಶ್ನಿಸಿದ್ದಾರೆ.

“ಭಾರತ ತಂಡದಲ್ಲಿ ಉತ್ತಮ ಆಟಗಾರರು ಇದ್ದಾರೆ. ಆದರೆ, ಅವರ ಕೊಡುಗೆಗಳು ಯಾವುವು? ಎದುರಾಳಿ ತಂಡದ ಬೌಲರ್‌ಗಳಿಗೆ ಅವರು ತಮ್ಮ ವಿಕೆಟ್‌ ಒಪ್ಪಿಸುತ್ತಿರುವುದು ಯಾಕೆ? ಭಾರತ ತಂಡವನ್ನು ಟೀಕೆ ಮಾಡುವುದಕ್ಕೆ ಯಾರೂ ಮುಂದಾಗುತ್ತಿಲ್ಲ. ಯಾಕೆಂದರೆ ಸಾಮಾಜಿಕ ಜಾಲತಾಣಗಳ ಮೂಲಕ ವಿರೋಧ ವ್ಯಕ್ತವಾಗುತ್ತವೆ ಹಾಗೂ ಬಿಸಿಸಿಐನಲ್ಲಿ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂಬ ಭಯ. ಆದರೆ, ಭಾರತ ತಂಡ ಉತ್ತಮವಾಗಿಲ್ಲ ಎಂಬುದನ್ನು ಹೇಳುವುದಕ್ಕೆ ಇದು ಸೂಕ್ತ ಸಮಯ. ಅಂತೆಯೇ ಆ ತಂಡದ ಬೌಲರ್‌ಗಳು ಕೂಡ ಸಮರ್ಥರಲ್ಲ,” ಎಂದು ವಾನ್‌ ಹೇಳಿದ್ದಾರೆ.

ಇದನ್ನೂ ಓದಿ | Boycott IPL | ವಿಶ್ವ ಕಪ್‌ ಸೆಮಿ ಫೈನಲ್‌ ಸೋಲಿನ ಬಳಿಕ ಬಾಯ್ಕಾಟ್‌ ಐಪಿಎಲ್‌ ಟ್ರೆಂಡಿಂಗ್‌ ಜೋರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

T20 World Cup 2024: ಸಂಜು ಸ್ಯಾಮ್ಸನ್‌ಗಿಂತ(sanju samson) ರಿಷಭ್​ ಪಂತ್(Rishabh Pant) ಅವರನ್ನು ಆಯ್ಕೆ ಮಾಡುತ್ತೇನೆ. ಅವರು ಎಡಗೈ ಆಟಗಾರ, ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲುವ ಬೃಹತ್ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಹಿಂದೆಯೂ ಕೂಡ ಭಾರತಕ್ಕೆ ಸ್ಮರಣೀಯ ಇನಿಂಗ್ಸ್​ ಆಡಿ ಗೆಲುವು ತಂದುಕೊಟ್ಟಿದ್ದಾರೆ. ಟಿ20 ವಿಶ್ವಕಪ್​ನಲ್ಲಿಯೂ ಅವರು ಮ್ಯಾಚ್​ ವಿನ್ನಿಂಗ್​ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಯುವರಾಜ್​ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

T20 World Cup 2024
Koo

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರನ್ನು ಆಡಿದರೆ ಉತ್ತಮ ಎಂದು ಹಲವು ಮಾಜಿ ಆಟಗಾರರು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದೀಗ ಈ ಪಟ್ಟಿಗೆ ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್​ ಸಿಂಗ್(Yuvraj Singh) ಕೂಡ ಯಾರನ್ನು ಆಡಿಸಿದರೆ ಉತ್ತಮ ಎಂದು ಹೇಳಿದ್ದಾರೆ.​​

​ಐಸಿಸಿ​ ಸಂದರ್ಶವೊಂದರಲ್ಲಿ ಮಾತನಾಡಿದ ಯುವರಾಜ್​ ಸಿಂಗ್​, “ನಾನು ಸಂಜು ಸ್ಯಾಮ್ಸನ್‌ಗಿಂತ(sanju samson) ರಿಷಭ್​ ಪಂತ್(Rishabh Pant) ಅವರನ್ನು ಆಯ್ಕೆ ಮಾಡುತ್ತೇನೆ. ಅವರು ಎಡಗೈ ಆಟಗಾರ, ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲುವ ಬೃಹತ್ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಹಿಂದೆಯೂ ಕೂಡ ಭಾರತಕ್ಕೆ ಸ್ಮರಣೀಯ ಇನಿಂಗ್ಸ್​ ಆಡಿ ಗೆಲುವು ತಂದುಕೊಟ್ಟಿದ್ದಾರೆ. ಟಿ20 ವಿಶ್ವಕಪ್​ನಲ್ಲಿಯೂ ಅವರು ಮ್ಯಾಚ್​ ವಿನ್ನಿಂಗ್​ ಪ್ರದರ್ಶನ ತೋರುವ ವಿಶ್ವಾಸವಿದೆ” ಎಂದು ಹೇಳಿದರು.

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್​ ಪಂತ್​ ಅವರು 14 ತಿಂಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಈ ಬಾರಿಯ ಐಪಿಎಲ್​ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಿದ್ದರು. ಪಂತ್​ ದೀರ್ಘಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರೂ ಕೂಡ ಅವರ ಪ್ರದರ್ಶನದಲ್ಲಿ ಯಾವುದೇ ವ್ಯತ್ಯಾಸ ಮಾತ್ರ ಕಂಡುಬಂದಿರಲಿಲ್ಲ. ಹಳೆಯ ಫಾರ್ಮ್​ನಂತೆ ಪ್ರದರ್ಶನ ತೋರಿದ್ದರು. ಹೀಗಾಗಿ ಯುವರಾಜ್​ ಕೂಡ ಪಂತ್​ರನ್ನು ಟಿ20ಯಲ್ಲಿ ಆಡಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

Continue Reading

ಕ್ರೀಡೆ

T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

T20 World Cup 2024: ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿವೆ. ಮೇ 27ರಿಂದ ಅಭ್ಯಾಸ ಪಂದ್ಯಗಳು ಆರಂಭಗೊಳ್ಳಲಿದೆ. ಲೀಗ್​ ಹಂತದ ಪಂದ್ಯಗಳಿಗೆ ಜೂನ್​ 1ರಿಂದ ಚಾಲನೆ ಸಿಗಲಿದೆ. ಈ ಮಹತ್ವದ ಟೂರ್ನಿಯನ್ನಾಡಲು ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ವಿರಾಟ್​ ಕೊಹ್ಲಿ(Virat Kohli), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್, ಮೊಹಮ್ಮದ್​ ಸಿರಾಜ್​​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

ಒಂದೇ ಅಭ್ಯಾಸ ಪಂದ್ಯ


ಭಾರತ ಕೇವಲ ಒಂದೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಮೂಲ ವೇಳಾಪಟ್ಟಿಯ ಪ್ರಕಾರ ಭಾರತ ತಂಡದ ಆಟಗಾರರು ಮೇ 21ರಂದು ನ್ಯೂಯಾರ್ಕ್​ಗೆ ತೆರಳಬೇಕಿತ್ತು. ಆದರೆ ಐಪಿಎಲ್​ ಟೂರ್ನಿಯಿಂದಾಗಿ ಇದು ಸಾಧ್ಯವಾಗಲಿಲ್ಲ. ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರಿಕೆಟ್

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

T20 World Cup 2024: ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

VISTARANEWS.COM


on

T20 World Cup 2024
Koo

ಸಿಡ್ನಿ: ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ(IPL 2024) ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಪರ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಭಾರೀ ಸಂಚಲನ ಸೃಷ್ಟಿಸಿದ್ದ ಯುವ ಬ್ಯಾಟರ್​ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ಅವರನ್ನು ಕೊನೆಗೂ ಕ್ರಿಕೆಟ್​ ಆಸ್ಟ್ರೇಲಿಯಾ ಮುಂದಿನ ತಿಂಗಳು ಆರಂಭಗೊಳ್ಳಲಿರುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಪ್ರಯಾಣದ ಮೀಸಲು ಆಟಗಾರನಾಗಿ ಆಯ್ಕೆ ಮಾಡಿದೆ. ಇವರ ಜತೆಗೆ ಮ್ಯಾಟ್ ಶಾರ್ಟ್ ಕೂಡ ಅವಕಾಶ ಪಡೆದಿದ್ದಾರೆ. ಉಭಯ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಿದ ವಿಚಾರವನ್ನು ಕ್ರಿಕೆಟ್​ ಆಸ್ಟ್ರೇಲಿಯಾ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿದೆ. ಆಸ್ಟ್ರೇಲಿಯಾ(Australia T20 World Cup squad) ತನ್ನ ಮೊದಲ ಪಂದ್ಯವನ್ನು ಜೂನ್​ 3ರಂದು ಉಗಾಂಡ ವಿರುದ್ಧ ಆಡಲಿದೆ.

ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. 

ಡೆಲ್ಲಿ ತಂಡದ ಪರ ಅತಿ ಕಡಿಮೆ ಎಸೆತಗಳಿಂದ ಅರ್ಧಶತಕ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಫ್ರೇಸರ್-ಮೆಕ್‌ಗುರ್ಕ್ ಪಾತ್ರರಾಗಿದ್ದರು. ಜತೆಗೆ ಈ ಆವೃತ್ತಿಯ ಐಪಿಎಲ್​ನಲ್ಲಿ ಅತಿ ಕಡಿಮೆ ಎಸೆತಗಳಿಂದ(15) ಅರ್ಧಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಕೂಡ ಬರೆದಿದ್ದರು. ಈ ಬಾರಿ ಒಟ್ಟು 9 ಐಪಿಎಲ್​ ಪಂದ್ಯಗಳನ್ನಾಡಿದ ಮೆಕ್‌ಗುರ್ಕ್ 330 ರನ್​ ಬಾರಿಸಿದ್ದಾರೆ. 84 ರನ್​ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

ಇದನ್ನೂ ಓದಿ T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

ಲುಂಗಿ ಎನ್‌ಗಿಡಿ ಬದಲಿಗೆ ಆಲ್​ರೌಂಡರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ಅವರನ್ನು ಡೆಲ್ಲಿ ತಂಡ ಬದಲಿ ಆಟಗಾರನಾಗಿ ಮೂಲಬೆಲೆ 50 ಲಕ್ಷ ರೂ.ಗೆ ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. ಮೆಕ್‌ಗುರ್ಕ್ ಲಿಸ್ಟ್ ಎ ಪಂದ್ಯದಲ್ಲಿ ಕೇವಲ 29 ಎಸೆತದಲ್ಲಿ ಶತಕ ಬಾರಿಸಿ ಅತ್ಯಂತ ವೇಗದ ಶತಕದ ವಿಶ್ವದಾಖಲೆ ಬರೆದಿದ್ದರು. ಈ ಬಾರಿಯ ಐಪಿಎಲ್​ನಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿಸಿದ್ದರು. ಮುಂದಿನ ಬಾರಿ ಇವರಿಗೆ ಹರಾಜಿನಲ್ಲಿ ದುಬಾರಿ ಬೆಲೆ ಸಿಗುವ ಸಾಧ್ಯತೆ ಇದೆ.

ಮಿಚೆಲ್​ ಮಾರ್ಷ್​ ತಂಡದ ನಾಯಕನಾಗಿದ್ದಾರೆ.

ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್, ಟಿಮ್‌ ಡೇವಿಡ್ ಅವರನ್ನು ಬ್ಯಾಟಿಂಗ್​ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ಗ್ಲೆನ್​ ಮ್ಯಾಕ್ಸ್‌ವೆಲ್‌, ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್ ತಂಡದ ಸ್ಟಾರ್​ ಆಲ್​ರೌಂಡರ್​ಗಳಾಗಿದ್ದಾರೆ. ಸ್ಪಿನ್ಸ್‌ ಬೌಲರ್​ಗಳಾಗಿ ಆ್ಯಡಂ ಝಂಪಾ ಮತ್ತು ಆ್ಯಶ್ಟನ್​ ಅಗರ್ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. ಪ್ರಯಾಣದ ಮೀಸಲು ಆಟಗಾರರು: ಮ್ಯಾಟ್ ಶಾರ್ಟ್, ಜೇಕ್ ಫ್ರೇಸರ್-ಮೆಕ್‌ಗುರ್ಕ್

Continue Reading

ಕ್ರೀಡೆ

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

KMF Nandini Logo: ಜೆರ್ಸಿ ಬಿಡುಗಡೆಯ ಬಳಿಕ ಮಾತನಾಡಿದ, ಕ್ರಿಕೆಟ್ ಐರ್ಲೆಂಡ್‌ನ ಮುಖ್ಯ ಹಣಕಾಸು ಅಧಿಕಾರಿ ಆ್ಯಂಡ್ರ್ಯೂ ಮೇ,” ಕರ್ನಾಟಕ ಹಾಲು ಒಕ್ಕೂಟವನ್ನು ಹೊಸ ಪಾಲುದಾರರಾಗಿ ಸ್ವಾಗತಿಸಲು ನಮಗೆ ಸಂತೋಷವಾಗುತ್ತಿದೆ. ಟಿ–20 ವಿಶ್ವಕಪ್‌ನಲ್ಲಿ ಐರ್ಲೆಂಡ್ ಪುರುಷರ ತಂಡದ ಅಧಿಕೃತ ಪ್ರಾಯೋಜಕರಾಗಿ ನಂದಿನಿಯನ್ನು ಘೋಷಿಸಲು ಸಂತಸವಾಗುತ್ತಿದೆ” ಎಂದು ಹೇಳಿದರು.

VISTARANEWS.COM


on

KMF Nandini Logo
Koo

ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ನಂದಿನಿ ಲೋಗೋ(KMF Nandini Logo) ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿತ್ತು. ಇದೀಗ ಐರ್ಲೆಂಡ್(Ireland) ತಂಡ ಕೂಡ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಪ್ರಕಟಿಸಿದೆ. ಇದು ಮಾತ್ರವಲ್ಲದೆ ಕ್ರಿಕೆಟ್​ ಐರ್ಲೆಂಡ್ ತನ್ನ ಅಧಿಕೃತ ವೆಬ್​ಸೈಟ್​ನ ಫೋಟೊದಲ್ಲಿಯೂ ನಂದಿನಿ ಲೋಗೋ ಇರುವ ಜೆರ್ಸಿಯ ದೊಡ್ಡ ಫೋಟೊವನ್ನು ಹಾಕಿ ‘ವೆಲ್​ಕಮ್​ ನಂದಿನಿ'(WELCOME NANDINI) ಎಂದು ಬರೆದುಕೊಂಡಿದೆ. ಸೋಮವಾರ ಕ್ರಿಕೆಟ್​ ಐರ್ಲೆಂಡ್ ಈ ಜೆರ್ಸಿಯನ್ನು ಅನಾವರಣ ಮಾಡಿತು.

ಜೆರ್ಸಿ ಬಿಡುಗಡೆಯ ಬಳಿಕ ಮಾತನಾಡಿದ, ಕ್ರಿಕೆಟ್ ಐರ್ಲೆಂಡ್‌ನ ಮುಖ್ಯ ಹಣಕಾಸು ಅಧಿಕಾರಿ ಆ್ಯಂಡ್ರ್ಯೂ ಮೇ,” ಕರ್ನಾಟಕ ಹಾಲು ಒಕ್ಕೂಟವನ್ನು ಹೊಸ ಪಾಲುದಾರರಾಗಿ ಸ್ವಾಗತಿಸಲು ನಮಗೆ ಸಂತೋಷವಾಗುತ್ತಿದೆ. ಟಿ–20 ವಿಶ್ವಕಪ್‌ನಲ್ಲಿ ಐರ್ಲೆಂಡ್ ಪುರುಷರ ತಂಡದ ಅಧಿಕೃತ ಪ್ರಾಯೋಜಕರಾಗಿ ನಂದಿನಿಯನ್ನು ಘೋಷಿಸಲು ಸಂತಸವಾಗುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ. ಶುದ್ಧತೆ ಮತ್ತು ಶ್ರೇಷ್ಠತೆಯ ಪ್ರತೀಕವಾಗಿರುವ ನಂದಿನಿಯು ಈಗ ಜಾಗತಿಕ ಬ್ರ್ಯಾಂಡ್‌ ಆಗಿ ಗುರುತಿಸಿಕೊಳ್ಳುವುದಕ್ಕೆ ಹೆಮ್ಮೆ ಎನಿಸುತ್ತದೆ. ಈ ಮೂಲಕ ನಂದಿನಿಯ ಮೌಲ್ಯ ಮತ್ತು ಜನಪ್ರಿಯತೆ ಮತ್ತಷ್ಟು ಹೆಚ್ಚಾಗಲಿದ್ದು, ಜನಪ್ರಿಯ ಕ್ರೀಡೆಯಾದ ಕ್ರಿಕೆಟ್‌ ತಂಡದ ಪ್ರಾಯೋಜಕತ್ವದಿಂದಾಗಿ ನಂದಿನಿ ಲೋಗೋ ವಿಶ್ವವ್ಯಾಪಿ ರಾರಾಜಿಸಲಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇನಷ್ಟು ತಂಡಗಳ ಪ್ರಾಯೋಜಕ್ವ ಪಡೆದರೂ ಅಚ್ಚರಿಯಿಲ್ಲ.  

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading
Advertisement
Narendra Modi
ದೇಶ3 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ4 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ4 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ5 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ5 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ5 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ6 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ6 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ6 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ22 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌