ಮುಂಬಯಿ: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಟೀಮ್ ಇಂಡಿಯಾದ(team india) ಆಟಗಾರ ರಿಷಭ್ ಪಂತ್(Rishabh Pant) ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಶೀಘ್ರದಲ್ಲೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಮುಂಬೈನಲ್ಲಿರುವ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಂತ್,(Rishabh Pant Health) ಶೀಘ್ರದಲ್ಲೇ ಡಿಸ್ಚಾರ್ಜ್ ಆಗಿ ಮನೆಗೆ ಮರಳುವ ಸುಳಿವನ್ನು ನೀಡಿದ್ದಾರೆ. ಪಂತ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿಯೊಂದನ್ನು ಹಾಕುವ ಮೂಲಕ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.
ಪಂತ್ ಅವರು ತಮ್ಮ ಮನೆಯ ಫೋಟೊವೊಂದನ್ನು ಶೇರ್ ಮಾಡುವ ಮೂಲಕ “ಹೊರಗೆ ಕುಳಿತಾಗ ಮಾತ್ರ ತಾಜಾ ಗಾಳಿಯನ್ನ ಉಸಿರಾಡಲು ಸಾಧ್ಯ, ತುಂಬಾ ಧನ್ಯನಾಗಿದ್ದೇನೆ” ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಶೀಘ್ರದಲ್ಲೇ ಮನೆಗೆ ಮರಳುವ ಸುಳಿವು ನೀಡಿದ್ದಾರೆ. ಇನ್ನೊಂದೆಡೆ ಇನ್ಸೈಡ್ ಸ್ಪೋರ್ಟ್ ಸುದ್ದಿ ಪ್ರಕಾರ, ಪಂತ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಮನೆಗೆ ಬಂದಿದ್ದಾರೆ ಎಂದು ವರದಿ ಮಾಡಿದೆ.
ಇದನ್ನೂ ಓದಿ Rishabh Pant: ಇದೇ ವಾರ ಡಿಸ್ಚಾರ್ಜ್ ಆಗಲಿದ್ದಾರೆ ರಿಷಭ್ ಪಂತ್
ಡಿಸೆಂಬರ್ 30 ರಂದು ಹೊಸ ವರ್ಷಕ್ಕೆ ಅಮ್ಮನಿಗೆ ಸರ್ಪ್ರೈಸ್ ಕೊಡಲು ಮನೆಗೆ ಹೋಗ್ತಿದ್ದಾಗ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿತ್ತು. ಗಂಭೀರವಾಗಿ ಗಾಯಗೊಂಡ ಪಂತ್, ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಿಸಿಸಿಐ ಮುಂಬೈನಲ್ಲಿರುವ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿತ್ತು.