ಅಹಮದಾಬಾದ್: ಟೀಮ್ ಇಂಡಿಯಾದ ಬ್ಯಾಟಿಂಗ್ ಸೆನ್ಷೇಷನಲ್ ಶುಭಮನ್ ಗಿಲ್ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ಕಿವೀಸ್(IND VS NZ) ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಚೊಚ್ಚಲ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶುಭಮನ್ ಗಿಲ್ ವಿಸ್ಫೋಟಕ ಬ್ಯಾಟಿಂಗ್ ನಡೆಸಿದರು. ಕೇವಲ 63 ಎಸೆತ ಎದುರಿಸಿ ಅಜೇಯ 126 ರನ್ ಬಾರಿಸಿದರು. ಈ ಮನಮೋಹಕ ಇನಿಂಗ್ಸ್ ವೇಳೆ 12 ಬೌಂಡರಿ ಮತ್ತು 7 ಭರ್ಜರಿ ಸಿಕ್ಸರ್ ಸಿಡಿಸಿದರು. ಇದೇ ವೇಳೆ ಅವರು ಭಾರತ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ವೈಯಕ್ತಿಕ ಮೊತ್ತ ಬಾರಿಸಿದ ನೂತನ ದಾಖಲೆ ಬರೆದರು.
ಇದನ್ನೂ ಓದಿ IND VS NZ: ಶುಭಮನ್ ಗಿಲ್ ಶತಕದ ಕಮಾಲ್; ಕಿವೀಸ್ಗೆ 235 ರನ್ ಸವಾಲ್
ಶುಭಮನ್ ಗಿಲ್ ಅವರು 123 ರನ್ ಗಳಿಸಿದ ವೇಳೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ದಾಖಲೆಯನ್ನು ಮುರಿದರು. ವಿರಾಟ್ ಕೊಹ್ಲಿ ಅವರು ಅಫಘಾನಿಸ್ತಾನ ವಿರುದ್ಧ ಅಜೇಯ 122 ರನ್ ಗಳಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಆದರೆ ಗಿಲ್ ಕಿವೀಸ್ ವಿರುದ್ಧ 126 ರನ್ ಪೇರಿಸಿ ಈ ದಾಖಲೆಯನ್ನು ಹಿಂದಿಕ್ಕಿದರು. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 118 ರನ್ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.