Shubhman Gill: ಎರಡು ಶತಕಗಳ ಬಳಿಕ ವೈರಲ್​ ಆಯ್ತು ಡೇಟಿಂಗ್ ಬಗ್ಗೆ ಗಿಲ್​ ಹೇಳಿದ ಆ ಮಾತು! Vistara News
Connect with us

ಕ್ರಿಕೆಟ್

Shubhman Gill: ಎರಡು ಶತಕಗಳ ಬಳಿಕ ವೈರಲ್​ ಆಯ್ತು ಡೇಟಿಂಗ್ ಬಗ್ಗೆ ಗಿಲ್​ ಹೇಳಿದ ಆ ಮಾತು!

ಕ್ರಿಕೆಟರ್​ ಶುಭ್​ಮನ್​ ಗಿಲ್​ ಬಾಲಿವುಡ್​ ನಟಿ ಸಾರಾ ಆಲಿಖಾನ್​ ಜತೆ ಡೇಟಿಂಗ್ ಮಾಡುತ್ತಾರೆ ಎಂಬ ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ.

VISTARANEWS.COM


on

sara alikhan
Koo

ಮುಂಬಯಿ: ಭಾರತ ತಂಡದ ಯುವ ಬ್ಯಾಟರ್​ ಶುಭ್​ಮನ್ ಗಿಲ್​ ಕೌಶಲಭರಿತ ಕ್ರಿಕೆಟಿಗ ಎಂಬ ಕಾರಣಕ್ಕೆ ಆಗಾಗ ಸುದ್ದಿಯಲ್ಲಿರುತ್ತಾರೆ. ಇದೇ ವೇಳೆ ಅವರು ಡೇಟಿಂಗ್ ಕಾರಣಕ್ಕೂ ಸುದ್ದಿಯಲ್ಲಿರುತ್ತಾರೆ. ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಜೊತೆ ಶುಬ್ಮನ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಆಗಾಗ ಮುನ್ನೆಲೆಗೆ ಬರುತ್ತಿರುತ್ತಾರೆ. ಆದರೆ, ಕಳೆದ ವರ್ಷ ಅವರು ಬಾಲಿವುಡ್​ ನಟಿ ಸಾರಾ ಅಲಿ ಖಾನ್ ಅವರೊಂದಿಗೆ ಡಿನ್ನರ್ ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುವ ಮೂಲಕವೂ ಸುದ್ದಿಗೆ ಗ್ರಾಸವಾಗಿದ್ದರು. ಇದೇ ವೇಳೆ ಅವರು ಎಲ್ಲರನ್ನೂ ಗೊಂದಲಕ್ಕೆ ಈಡುಮಾಡಿದ್ದರು. ಯಾವ ಸಾರಾ ಜತೆ ಅವರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಅನುಮಾನಗಳು ಹುಟ್ಟಿಕೊಂಡಿದ್ದವು.

ಹಾಲಿ ಆವೃತ್ತಿಯ ಐಪಿಎಲ್​ ಲೀಗ್​ ಹಂತದ ತಮ್ಮ ಕೊನೇ ಎರಡು ಪಂದ್ಯಗಳಲ್ಲಿ ಸತತವಾಗಿ ಎರಡು ಶತಕ ಬಾರಿಸಿದ ಬಳಿಕ ಶುಭ್​ಮನ್​ ಗಿಲ್ ಮತ್ತೆ ಸುದ್ದಿಯಲ್ಲಿದ್ದಾರೆ. ಅವರ ಬಗ್ಗೆ ಕ್ರಿಕೆಟ್​ ಕ್ಷೇತ್ರವೇ ಹೊಗಳುತ್ತಿದೆ. ಇವೆಲ್ಲದರ ನಡುವೆ ಗಿಲ್​ ಅವರು ತಮ್ಮ ಡೇಟಿಂಗ್ ಕುರಿತು ಮಾತನಾಡಿದ್ದ ವಿಡಿಯೊವೊಂದು ವೈರಲ್​ ಆಗುತ್ತಿದೆ. ಅದರಲ್ಲಿ ಅವರು ಬಾಲಿವುಡ್​ನ ಅತ್ಯಂತ ಫಿಟ್​ ಮಹಿಳೆಯೊಬ್ಬರ ಜತೆ ಡೇಟಿಂಗ್ ಮಾಡುತ್ತಿರುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಅವರ ಹೇಳಿಕೆ ಪ್ರಕಾರದ ಅದು ಸಾರಾ ಅಲಿಖಾನ್​.

ನಿರೂಪಕ ಸೋನಮ್ ಬಜ್ವಾ ನಡೆಸಿಕೊಡುವ ಕಾರ್ಯಕ್ರಮದ ವಿಡಿಯೊ ಅದು. ಅದರಲ್ಲಿ ಗಿಲ್​ಗೆ ನೀವು ‘ಸಾರಾ’ ಜೊತೆ ಡೇಟಿಂಗ್ ಮಾಡುತ್ತಿದ್ದೀರಾ ಎಂದು ಕೇಳಿದಾಗ, “ಇರಬಹುದು” ಎಂದು ಉತ್ತರಿಸಿದ್ದರು. ಈ ವೇಳೆ ಅವರು ಸತ್ಯ ಬಹಿರಂಗಪಡಿಸಲು ನಿರೂಪಕಿ ಕೇಳುತ್ತಾರೆ. ಆಗ ಗಿಲ್​ “ಇರಬಹುದು, ಇಲ್ಲದಿರಬಹುದು ಎಂದು ಹೇಳುತ್ತಾರೆ. ಈ ಮೂಲಕ ಅವರು ತಮ್ಮ ಡೇಟಿಂಗ್​ ವಿಷಯವನ್ನು ಪೂರ್ತಿಯಾಗಿ ಬಹಿರಂಗಪಡಿಸಿಲ್ಲ. ಈ ವಿಡಿಯೊಗೆ ಸಿಕ್ಕಾಪಟ್ಟೆ ಪ್ರಶ್ನೆಗಳು ಎದುರಾಗಿವೆ. ಸಾರಾ ಯಾರು, ಸಚಿನ್ ಮಗಳೇ, ಬಾಲಿವುಡ್​ ನಟಿಯೇ ಎಂದು ಸಾಕಷ್ಟು ಮಂದಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ ವ: Kartik Aaryan: 10 ದಿನಗಳ ಚಿತ್ರೀಕರಣಕ್ಕೆ 20 ಕೋಟಿ ರೂ. ಸಂಭಾವನೆ ಪಡೆದ ಕಾರ್ತಿಕ್‌ ಆರ್ಯನ್‌: ಕ್ಲಾರಿಟಿ ಕೊಟ್ಟ ನಟ!

ಸಾರಾ ಅಲಿ ಖಾನ್ ಮತ್ತು ಶುಭ್​ಮನ್​ ಕಳೆದ ವರ್ಷ ಆಗಸ್ಟ್​​ನಲ್ಲಿ ಒಟ್ಟಿಗೆ ಊಟ ಮಾಡುತ್ತಿರುವ ವೀಡಿಯೊ ವೈರಲ್ ಆಗಿತ್ತು. ಆ ಬಳಿಕ ವದಂತಿಗಳಿಗೆ ತಿರುವು ಸಿಕ್ಕಿತು. ಅದೇ ರೀತಿ ಅವರು ಜತೆಯಾಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ದೃಶ್ಯಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

ಸಾರಾ ಅಲಿಖಾನ್​ ಶುಭ್​ಮನ್​ಗಿಂತ ಮೊದಲು ಸಿಂಬಾ ನಟ ಕಾರ್ತಿಕ್​ ಆರ್ಯನ್​ ಜತೆಗೂ ಡೇಟಿಂಗ್ ಮಾಡುತ್ತಿದ್ದರು ಎಂಬ ಸುದ್ದಿ ಹರಿದಾಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

ತಾಯಿ, ಮಗಳ ಜೀವ ತೆಗೆಯಿತು ಐಪಿಎಲ್ ಲಕ್ನೊ ತಂಡದ ಹೋರ್ಡಿಂಗ್

ಚಲಿಸುತ್ತಿದ್ದ ಕಾರಿನ ಮೇಲೆ ಹೋರ್ಡಿಂಗ್​ ಬಿದ್ದ ಕಾರಣ ತಾಯಿ, ಮಗಳು ಮೃತಪಟ್ಟಿದ್ದರೆ ಚಾಲಕ ಗಾಯಗೊಂಡಿದ್ದಾರೆ.

VISTARANEWS.COM


on

Ekana Stadium
Koo

ಲಖನೌ: ಲಕ್ನೋದ ಅಟಲ್ ಬಿಹಾರಿ ವಾಜಪೇಯಿ (ಎಕಾನಾ) ಕ್ರಿಕೆಟ್ ಸ್ಟೇಡಿಯಂ ಬಳಿ ಸೋಮವಾರ ಭಾರಿ ಬಿರುಗಾಳಿಯ ಸಮಯದಲ್ಲಿ ದೊಡ್ಡ ಹೋರ್ಡಿಂಗ್ ಬಿದ್ದು ಕಾರು ನಜ್ಜುಗುಜ್ಜಾದ ಪರಿಣಾಮ ತಾಯಿ, ಮಗಳು ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾರೆ. ತಾಯಿ-ಮಗಳು ಇಬ್ಬರನ್ನೂ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ ಆಗಲೇ ಅವರಿಬ್ಬರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ವೈದ್ಯರು ಘೋಷಿಸಿದ್ದಾರೆ.

ಗಾಜಿಪುರ ಪೊಲೀಸ್ ಠಾಣೆ ಪ್ರದೇಶದ ಇಂದಿರಾ ನಗರ ಕಾಲೋನಿ ನಿವಾಸಿಗಳಾದ ಪ್ರೀತಿ ಜಗ್ಗಿ (38) ಮತ್ತು ಅವರ ಮಗಳು ಏಂಜೆಲ್ (15) ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ವಾಹನದ ಮೇಲೆ ಜಾಹೀರಾತು ಫಲಕ ಬಿದ್ದಿದೆ ಎಂದು ಗೋಸಾಯ್​​ಗಂಜ್ ಸಹಾಯಕ ಪೊಲೀಸ್ ಆಯುಕ್ತ (ಎಎಸ್ಪಿ) ಅಮಿತ್ ಕುಮಾವತ್ ಮಾಹಿತಿ ನೀಡಿದ್ದಾರೆ.

ಅವರು ತಮ್ಮ ಚಾಲಕ ಸರ್ತಾಜ್ (28) ಅವರೊಂದಿಗೆ ಮಾಲ್ಗೆ ಪ್ರದೇಶಕ್ಕೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕ್ರೀಡಾಂಗಣದ ಗೇಟ್ ಸಂಖ್ಯೆ 2 ರ ಮುಂಭಾಗದ ಜಾಹೀರಾತು ಫಲಕವು ಅವರ ವಾಹನದ ಮೇಲೆ ಬಿದ್ದಿದೆ ಎಂದು ಅವರು ಹೇಳಿದರು. ಸರ್ತಾಜ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತನಿಖೆ ಆರಂಭಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : Odisha Train Accident: ರೈಲು ಅಪಘಾತ ಸಂಭವಿಸಿದ ಸ್ಥಳದಲ್ಲಿ ‘ಪ್ರೇಮ ಕವನಗಳು’ ಅನಾಥ!

ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿರುವವೀಡಿಯೊದಲ್ಲಿ, ಜಾಹೀರಾತು ಫಲಕದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಚಾಲಕ ಸಹಾಯಕ್ಕಾಗಿ ತೀವ್ರವಾಗಿ ಬೇಡಿಕೊಳ್ಳುತ್ತಿರುವುದನ್ನು ಕಾಣಬಹುದು. ಚಂಡಮಾರುತದ ಪರಿಣಾಮವಾಗಿ ಬೃಹತ್ ಬೋರ್ಡ್ ಕುಸಿದಿದೆ ಎಂದು ಹೇಳಲಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಪೊಲೀಸರು ಘಟನಾ ಸ್ಥಳದಲ್ಲಿ ಹಾಜರಿದ್ದರು. ತಕ್ಷಣವೇ ಎಲ್ಲಾ ಪ್ರಯಾಣಿಕರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸ್ಕಾರ್ಪಿಯೋ ಎಸ್ ಯುವಿ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿತ್ತು. ಹೀಗಾಗಿ ತಕ್ಷಣದಲ್ಲೇ ಒಳಗೆ ಸಿಲುಕಿದ್ದವರನ್ನು ಹೊರಗೆ ಎಳೆಯಲು ಸಾಧ್ಯವಾಗಿರಲಿಲ್ಲ. ಕ್ರೇನ್ ಸಹಾಯದಿಂದ ಬಿದ್ದ ಜಾಹೀರಾತು ಫಲಕವನ್ನು ತೆಗೆದು ಹಾಕಿ ಅವರನ್ನು ಹೊರಗೆಳೆಯಲಾಗಿದೆ.

ಎಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದ ಹೋರ್ಡಿಂಗ್​ ಇದಾಗಿದೆ. ಈ ಕ್ರೀಡಾಂಗಣವು 2018ರಲ್ಲಿ ತನ್ನ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಯೋಜಿಸಿದ್ದು ಅಲ್ಲಿಂದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಐಪಿಎಲ್​ನ ಲಕ್ನೊ ಸೂಪರ್​ ಜೈಂಟ್ಸ್​ ತಂಡದ ತವರ ಸ್ಟೇಡಿಯಮ್​ ಇದಾಗಿದೆ.

Continue Reading

ಕ್ರಿಕೆಟ್

Wrestlers Protest : ಕುಸ್ತಿಪಟುಗಳ ಬಾಯಿ ಮುಚ್ಚಿಸಿದರೇ ಅಮಿತ್​ ಶಾ? ಕೆಲಸಕ್ಕೆ ಮರಳಿದ ಸಾಕ್ಷಿ

ಪ್ರತಿಭಟನೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಸಾಕ್ಷಿ ಮಲಿಕ್ ಅವರು ನಮ್ಮ ಬೇಡಿಕೆ ಈಡೇರಿಲ್ಲ ಧರಣಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

VISTARANEWS.COM


on

Sakshi Malik
Koo

ನವ ದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್​ಭೂಷನ್​ ಸಿಂಗ್ ಶರಣ್​ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳ ಜತೆ ಮಾತನಾಡಿರುವ ಕೇಂದ್ರ ಗೃಹಮಂತ್ರಿ ಅಮಿತ್​ ಶಾ, ಪರಿಹಾರವೊಂದರನ್ನು ಕಂಡುಕೊಂಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಕುಸ್ತಿಪಟುಗಳ ಜತೆ ಉನ್ನತಮಟ್ಟದ ಸಭೆ ನಡೆಸಿದ ಅಮಿತ್​ ಶಾ ಅವರು ಕುಸ್ತಿಪಟುಗಳು ನೀಡುತ್ತಿದ್ದ ನಿರಂತರ ಹೇಳಿಕೆಗಳಿಗೂ ಬ್ರೇಕ್​ ಹಾಕಿದ್ದಾರೆ ಎನ್ನಲಾಗಿದೆ. ಶುಕ್ರವಾರ ಕುಸ್ತಿಪಟು ಸಾಕ್ಷಿ ಮಲಿಕ್​ ಅವರು ರೈಲ್ವೆ ಇಲಾಖೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆದರೆ, ಎಎನ್​​ಐ ಜತೆ ಮಾತನಾಡಿದ ಸಾಕ್ಷಿ ಮಲಿಕ್​, ನಮ್ಮ ಬೇಡಿಕೆ ಈಡೇರಿಲ್ಲ ಎಂಬುದಾಗಿ ಹೇಳಿಕೆ ಕೊಟ್ಟಿದ್ದಾರೆ.

“ಇದು ಸಾಮಾನ್ಯ ಮಾತುಕತೆಯಾಗಿತ್ತು. ಸಭೆಯಲ್ಲಿ ಯಾವುದೇ ಅಂತಿಮ ಪರಿಹಾರವನ್ನು ಸಾಧಿಸಲಾಗಲಿಲ್ಲ. ಆರೋಪಿಗಳನ್ನು ಬಂಧಿಸಬೇಕೆಂಬ ನಮ್ಮ ಬೇಡಿಕೆಯೂ ಮುಂದುವರಿಯುತ್ತದೆ” ಎಂದು ಮಲಿಕ್ ತಿಳಿಸಿದ್ದಾರೆ.

ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಸಹ ಒಲಿಂಪಿಯನ್ ಮತ್ತು ವಿಶ್ವ ಚಾಂಪಿಯನ್​​ಷಿಪ್​ ಪದಕ ವಿಜೇತೆ ವಿನೇಶ್ ಫೋಗಟ್ ಅವರು ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಅಪ್ರಾಪ್ತ ವಯಸ್ಸಿನ ಕುಸ್ತಿಪಟು ಸೇರಿ ಏಳು ಕುಸ್ತಿಪಟುಗಳ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಅವರೆಲ್ಲರೂ ಒತ್ತಾಯಿಸಿದ್ದಾರೆ. ಆದರೆ, ಸಿಂಗ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ನಾವು ನಮ್ಮ ಹೆಸರುಗಳನ್ನು ಹಿಂತೆಗೆದುಕೊಂಡಿಲ್ಲ, ವಿನೇಶ್, ನಾನು ಮತ್ತು ಭಜರಂಗ್ ಈ ಪ್ರತಿಭಟನೆಯಲ್ಲಿ ಒಟ್ಟಿಗೆ ಇದ್ದೇವೆ ಮತ್ತು ನಾವು ನಮ್ಮ ಹೆಸರುಗಳನ್ನು ಹಿಂತೆಗೆದುಕೊಂಡಿಲ್ಲ” ಎಂದು ಮಲಿಕ್ ಎಎನ್ಐಗೆ ತಿಳಿಸಿದರು.

ವರದಿಗಳ ಪ್ರಕಾರ, ಕಳೆದ ಜನವರಿಯಲ್ಲಿ ಪ್ರತಿಭಟನೆ ಆರಂಭಗೊಂಡ ಬಳಿಕ ಇದೇ ಮೊದಲ ಬಾರಿಗೆ ಅಮಿತ್​ ಶಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಇದಕ್ಕೂ ಮೊದಲು ಕುಸ್ತಿಪಟುಗಳ ಜತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮಾತ್ರ ಸಭೆ ನಡೆಸಿದ್ದರು.

ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ವಿಸರ್ಜಿಸಲು ಹರಿದ್ವಾರಕ್ಕೆ ತೆರಳಿದ್ದ ನಂತರ ಈ ಪ್ರತಿಭಟನೆ ಹೆಚ್ಚು ಕಾವು ಪಡೆದುಕೊಂಡಿತ್ತು. ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9 ರೊಳಗೆ ಬಂಧಿಸುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ. ಸಾಕ್ಷಿ ಮಲಿಕ್ ಅವರ ತಂದೆ ಸುಖ್ಬೀರ್ ಮಲಿಕ್ ಮತನಾಡಿ, ನಮ್ಮೆರಡು ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ ಎಂದು ಹೇಳಿದ್ದರು.

ನಮ್ಮ ಹೋರಾಟ ಮುಂದುವರಿಯುತ್ತದೆ: ಸಾಕ್ಷಿ ಮಲಿಕ್

ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಸಾಕ್ಷಿ ಮಲಿಕ್​ ನಿರಾಕರಿಸಿದ್ದಾರೆ. ಮಲಿಕ್ ಈ ಹಿಂದೆ ದೆಹಲಿಯಲ್ಲಿರುವ ಉತ್ತರ ರೈಲ್ವೆ ಕಚೇರಿಯಲ್ಲಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ ಎಂಬುದಾಗಿ ಸುದ್ದಿಯಾಗಿತ್ತು.

ನಾವು ಪ್ರತಿಭಟನೆಯಿಂದ ಹಿಂದೆ ಸರಿಯಲಿಲ್ಲ. ಎಲ್ಲವೂ ವದಂತಿಗಳು. ಬಾಕಿ ಇರುವ ಕೆಲವು ಕೆಲಸಗಳನ್ನು ಮುಗಿಸಲು ನಾನು ಕಚೇರಿಗೆ ಬಂದಿದ್ದೇನೆ. ಮುಂದೆ ಏನು ಮಾಡಬೇಕು ಪ್ರತಿಭಟನೆಯನ್ನು ಅಹಿಂಸಾತ್ಮಕ ರೀತಿಯಲ್ಲಿ ಹೇಗೆ ಮುಂದುವರಿಸಬೇಕು ಎಂಬುದರ ಬಗ್ಗೆ ಕಾರ್ಯತಂತ್ರವನ್ನು ರೂಪಿಸುತ್ತಿದ್ದೇವೆ ಎಂದು ಮಲಿಕ್ ಹೇಳಿದ್ದಾರೆ.

ಇದಕ್ಕೂ ಮೊದಲು,ಒಲಿಂಪಿಯನ್ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂಬ ವರದಿಗಳನ್ನು ಅವರು ನಿರಾಕರಿಸಿದ್ದಾರೆ. ಈ ಸುದ್ದಿ ಸಂಪೂರ್ಣವಾಗಿ ತಪ್ಪು. ನ್ಯಾಯಕ್ಕಾಗಿ ಹೋರಾಟದಲ್ಲಿ, ನಮ್ಮಲ್ಲಿ ಯಾರೂ ಹಿಂದೆ ಸರಿದಿಲ್ಲ, ನಾವು ಸಹ ಹಿಂದೆ ಸರಿಯುವುದಿಲ್ಲ. ಸತ್ಯಾಗ್ರಹದ ಜೊತೆಗೆ, ನಾನು ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ಪೂರೈಸಬೇಕಾಗಿದೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ದಯವಿಟ್ಟು ಯಾವುದೇ ತಪ್ಪು ಸುದ್ದಿಗಳನ್ನು ಹರಡಬೇಡಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.

Continue Reading

ಕ್ರಿಕೆಟ್

WTC Final 2023 : ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸುವ ಸೂಚನೆ ನೀಡಿದ ರೋಹಿತ್​ ಶರ್ಮಾ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್​ ಪ್ರಶಸ್ತಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಜೂನ್ 7ರಂದು ಮುಖಾಮುಖಿಯಾಗಲಿವೆ.

VISTARANEWS.COM


on

Rohit Sharma
Koo

ಲಂಡನ್​: ಜೂನ್ 7 ರಂದು ಲಂಡನ್​​ನ ದಿ ಓವಲ್​ ಸ್ಟೇಡಿಯಮ್​ನಲ್ಲಿ ಆರಂಭವಾಗಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ (WTC Final 2023) ಫೈನಲ್​​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಏತನ್ಮಧ್ಯೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಚಾಂಪಿಯನ್​ಷಿಪ್​ ಪಂದ್ಯಕ್ಕೆ ಮುಂಚಿತವಾಗಿ ಬ್ಯಾಟಿಂಗ್​ನಲ್ಲಿ ಅಬ್ಬರದ ಪ್ರದರ್ಶನ ನೀಡುವ ಭರವಸೆ ತೋರಿದ್ದಾರೆ. ಓವಲ್ ಇಂಗ್ಲೆಂಡ್​ನಲ್ಲಿರುವ ಬ್ಯಾಟಿಂಗ್ ಪ್ರಿಯ ಪಿಚ್ ಆಗಿದ್ದು, ಅಬ್ಬರಿಸುವುದು ಗ್ಯಾರಂಟಿ ಎಂದು ಹೇಳಿದ್ದಾರೆ.

ಈ ಮೈದಾನದಲ್ಲಿ ಭಾರತ ಕೊನೆಯ ಬಾರಿಗೆ ಆಡಿದಾಗ ಹಿಟ್​ಮ್ಯಾನ್ ರೋಹಿತ್​​ ಅದ್ಭುತ ಟೆಸ್ಟ್ ಶತಕ ಭಾರಿಸಿದ್ದರು. ಅದೇ ವಿಶ್ವಾಸದೊಂದಿಗೆ ಮತ್ತೊಂದು ಮೂರಂಕಿ ಮೊತ್ತವನ್ನು ಬಾರಿಸುವ ಸೂಚನೆ ನೀಡಿದ್ದಾರೆ 2021ರಲ್ಲಿ ಟೀಮ್ ಆತಿಥೇಯ ಇಂಡಿಯಾ ಇಂಗ್ಲೆಂಡ್ ವಿರುದ್ಧ ಈ ಪಿಚ್​ನಲ್ಲಿ ಆಡಿತ್ತು. ಪಂದ್ಯದಲ್ಲಿ ರೋಹಿತ್ 256 ಎಸೆತಗಳಲ್ಲಿ 127 ರನ್ ಗಳಿಸಿದರು. ಅವರ ಪ್ರದರ್ಶನದಿಂದ ಭಾರತ ತಂಡ ಭರ್ಜರಿ ವಿಜಯ ದಾಖಲಿಸಿತ್ತು. ಹೀಗಾಗಿ ಈ ಬಾರಿಯೂ ರೋಹಿತ್​ ಬ್ಯಾಟಿಂಗ್​ ಬಗ್ಗೆ ಕುತೂಹಲ ಕೆರಳಿದೆ.

ನಿರ್ಣಾಯಕ ಪಂದ್ಯಕ್ಕೆ ಮುಂಚಿತವಾಗಿ, ಅವರು ಎದುರಾಳಿ ಬೌಲರ್​ಗಳನ್ನು ನಿಭಾಯಿಸಲು ಸತತವಾಗಿ ಅಭ್ಯಾಸ ಮಾಡುತ್ತಿದ್ದಾರೆ. ಅಲ್ಲಿನ ಹವಾಮಾನವೂ ಅವರಿಗೆ ಎಷ್ಟರ ಮಟ್ಟಿಗೆ ನೆರವು ನೀಡುತ್ತದೆ ಎಂದು ನೋಡಬೇಕಿದೆ. ಈ ಕುರಿತು ಮಾತನಾಡಿದ ರೋಹಿತ್​ “ಹವಾಮಾನವು ಬದಲಾಗುತ್ತಲೇ ಇರುತ್ತದೆ. ಆದ್ದರಿಂದ ಸುದೀರ್ಘ ಇನಿಂಗ್ಸ್​ ಬಗ್ಗೆ ಗಮನಹರಿಸಬೇಕಾಗಿದೆ ದೀರ್ಘಕಾಲದವರೆಗೆ ಏಕಾಗ್ರತೆಯನ್ನು ಹೊಂದಿರಬೇಕಾಗುತ್ತದೆ. ಬೌಲರ್​​ಗಳನ್ನು ಯಾವಾಗ ದಂಡಿಸಬೇಕು ಎಂಬ ಪ್ರಜ್ಞೆಯನ್ನು ಗಳಿಸಬೇಕಾಗುತ್ತೆ. ಅದಕ್ಕೆ ನಾನು ಸಿದ್ದನಾಗಿದ್ದೇನೆ ಎಂದು ಹೇಳಿದ್ದಾರೆ.

ಓವಲ್​ನಲ್ಲಿ ಸ್ಕೋರ್​ ಬಾರಿಸುವುದು ನನ್ನ ಯೋಜನೆಯಾಗಿದೆ. ಅದಕ್ಕೆ ಪೂರಕ ಯೋಜನೆಗಳನ್ನು ಸಿದ್ದಪಡಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ. “ನಮ್ಮ ಸಾಮರ್ಥ್ಯ ಏನು ಎಂಬುದನ್ನು ನಾವು ಮೊದಲು ಅರ್ಥಮಾಡಿಕೊಳ್ಳಬೇಕು. ಅಂತೆಯೇ ಓವಲ್​ ಇಂಗ್ಲೆಂಡ್​ನ ಅತ್ಯುತ್ತಮ ಬ್ಯಾಟಿಂಗ್ ಪಿಚ್​ಗಳಲ್ಲಿ ಒಂದಾಗಿದೆ ಎಂದು ನಮಗೆ ತಿಳಿದಿದೆ. ಹೀಗಾಗಿ ರನ್​ ಹೇಗೆ ಗಳಿಸಬೇಕು ಎಂದು ಅರಿತುಕೊಳ್ಳಬೇಕಾಗುತ್ತದ. ಸ್ಕ್ವೇರ್​ ಬೌಂಡರಿ ಮೂಲಕ ರನ್​ ಗಳಿಸುವುದು ಸುಲಭ. ಇಲ್ಲಿ ಯಶಸ್ಸು ಸಾಧಿಸಲು ಅದುವೇ ಉತ್ತಮ ಎಂದು ಹೇಳಿದ್ದಾರೆ.

ಇದನ್ನೂ ಓದಿ : IPL 2023 : ಡಕ್​ಔಟ್​ ಆಗುವ ಮೂಲಕ ಅನಗತ್ಯ ದಾಖಲೆ ಸೃಷ್ಟಿಸಿಕೊಂಡ ರೋಹಿತ್ ಶರ್ಮಾ

ಕಳೆದ ವರ್ಷ ಸೌತಾಂಪ್ಟನ್​ನ ರೋಸ್ ಬೌಲ್​​ನಲ್ಲಿ ನಡೆದ ಡಬ್ಲ್ಯುಟಿಸಿ 2021ರ ಫೈನಲ್​ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಎಂಟು ವಿಕೆಟ್​ಗಳಿಂದ ಸೋಲಿಸಿದ್ದ ನ್ಯೂಜಿಲ್ಯಾಂಡ್​ ತಂಡ ಚಾಂಪಿಯನ್​ಪಟ್ಟ ಅಲಂಕರಿಸಿತ್ತು.

2021-23ರ ಆವೃತ್ತಿಯಲ್ಲಿ ಆಸ್ಟ್ರೇಲಿಯಾ 19 ಟೆಸ್ಟ್​​ಗಳಲ್ಲಿ 66.67 ಅಂಕಗಳೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​​ನಲ್ಲಿ ಅಗ್ರಸ್ಥಾನದಲ್ಲಿದೆ. ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಕಾಂಗರೂಗಳನ್ನು 2-1 ರಿಂದ ಸೋಲಿಸಿದ ನಂತರ ಭಾರತವು 58.8 ಅಂಕಗಳೊಂದಿಗೆ ಫೈನಲ್​ಗೆ ಪ್ರವೇಶಿಸಿತು.

Continue Reading

ಕ್ರಿಕೆಟ್

WTC Final 2023: ನೂತನ ಜೆರ್ಸಿಯಲ್ಲಿ ಫೋಟೋಶೂಟ್​ ಮಾಡಿಸಿದ ಟೀಮ್​ ಇಂಡಿಯಾ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್ ಪಂದ್ಯ ಜೂನ್​ 7 ರಿಂದ ಆರಂಭಗೊಳ್ಳಲಿದೆ.

VISTARANEWS.COM


on

Edited by

wtc final 2023
Koo

ಲಂಡನ್: ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್(WTC Final 2023)​ ಪಂದ್ಯದಲ್ಲಿ ಭಾರತ ತಂಡ ನೂತನ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ. ಇದಕ್ಕೂ ಮುನ್ನ ಟೀಮ್​ ಇಂಡಿಯಾ ಆಟಗಾರರು ಹೊಸ ಜೆರ್ಸಿಯಲ್ಲಿ ಫೋಟೋಶೂಟ್​ ಮಾಡಿಸಿಕೊಂಡಿದ್ದಾರೆ. ಆಟಗಾರರ ಫೋಟೊಗಳನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಲೈಟ್ಸ್, ಕ್ಯಾಮೆರಾ, ಹೆಟ್​ಶಾಟ್​ ಎಂದು ಬರೆದುಕೊಂಡಿದೆ. ಈ ಫೋಟೊಗಳು ವೈರಲ್​ ಆಗಿವೆ. ಮಹತ್ವದ ಪಂದ್ಯಕ್ಕೂ ಮುನ್ನ ಆಟಗಾರರಿಗೆ ಅಡಿಡಾಸ್​ ಸಂಸ್ಥೆ ಹೊಸ ಜೆರ್ಸಿ ಕಿಟ್​ಗಳನ್ನು ಒದಗಿಸಿದೆ.

ಭಾರತ ತಂಡದ ಆಟಗಾರರು ಈ ಜೆರ್ಸಿಯಲ್ಲಿ ಕ್ಯಾಮರಾಗೆ ಫೋಸ್​ ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ​, ರೋಹಿತ್​ ಶರ್ಮಾ, ಶುಭ್​ಮನ್ ಗಿಲ್​, ಆರ್.ಅಶ್ವಿನ್​, ರವೀಂದ್ರ ಜಡೇಜಾ ಮತ್ತು ಇತರ ಆಟಗಾರರ ಫೋಟೋಗಳನ್ನು ಬಿಸಿಸಿಐ ಮತ್ತು ಐಸಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಇತ್ತೀಚೆಗೆ ಭಾರತ ಕ್ರಿಕೆಟ್​ ತಂಡ ಆಟಗಾರರ ಕಿಟ್​​ ಪ್ರಾಯೋಜಕ್ವವನ್ನು ಅಡಿಡಾಸ್ ವಹಿಸಿಕೊಂಡಿತ್ತು. ಮೂರು ಮಾದರಿಯ ಕ್ರಿಕೆಟ್​ಗೆ ಹೊಸ ಜರ್ಸಿ ಸಿದ್ಧಪಡಿಸಲಾಗಿದೆ. ಟೆಸ್ಟ್​​ಗೆ ಸಾಂಪ್ರದಾಯಿಕ ಬಿಳಿ ಮತ್ತು ಏಕದಿನಕ್ಕೆ ನೀಲಿ ಬಣ್ಣದ ಡ್ರೆಸ್​ನಲ್ಲಿ ಭಾರತ ಇನ್ನು ಮುಂದೆ ಕಣಕ್ಕಿಳಿಯಲಿದೆ.

ಈ ಮಹತ್ವದ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಟಗಾರರು ಈಗಾಗಲೇ ಭರ್ಜರಿ ಅಭ್ಯಾಸದಲ್ಲಿ ತೊಡಗಿದ್ದಾರೆ. ಐಪಿಎಲ್​ನಲ್ಲಿ ಮಿಂಚಿದ್ದ ಶುಭಮನ್​ ಗಿಲ್​ ವಿರಾಟ್​ ಕೊಹ್ಲಿ, ಮೊಹಮ್ಮದ್​ ಶಮಿ ಮತ್ತು ಸಿರಾಜ್​ ಈ ಪಂದ್ಯದಲ್ಲಿ ಯಾವ ರೀತಿಯ ಫಾರ್ಮ್​ ತೋರ್ಪಡಿಸಲಿದ್ದಾರೆ ಎಂದು ಕಾದು ನೋಡಬೇಕಿದೆ. ಒಂದೊಮ್ಮೆ ಇವರಲ್ಲಿ ಇಬ್ಬರು ಆಟಗಾರರು ಮಿಂಚಿದರೂ ಭಾರತಕ್ಕೆ ಗೆಲುವು ಖಚಿತ ಎನ್ನಲಡ್ಡಿಯಿಲ್ಲ.

ಈ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ಯಾರು ಮಾಡಲಿದ್ದಾರೆ ಎಂಬ ಅನುಮಾನ ಎಲ್ಲರಲ್ಲಿಯೂ ಮೂಡಿದೆ. ಆದರೆ ಸದ್ಯದ ಮಾಹಿತಿ ಪ್ರಕಾರ ಶ್ರೀಕರ್​ ಭರತ್​ ಅವರು ಕೀಪಿಂಗ್​ ಗ್ಲೌಸ್​ ತೊಡುವುದು ಪಕ್ಕಾ ಎಂಬಂತಿದೆ. ಇಶಾನ್​ ಕಿಶನ್​ ಅವರು 5 ದಿನಗಳ ಕಾಲ ಕೀಪಿಂಗ್​ ನಡೆಸುವಷ್ಟು ಸಾಮರ್ಥ್ಯ ಇಲ್ಲದ ಕಾರಣ ಅವರಿಗೆ ಅವಕಾಶ ಸಿಗುವುದು ಅನುಮಾನ.​

ಇದನ್ನೂ ಓದಿ WTC Final 2023: ಫೈನಲ್​ಗೂ ಮುನ್ನವೇ ಮೈಂಡ್​ ಗೇಮ್​ ಆರಂಭಿಸಿದ ಆಸೀಸ್​ ಆಟಗಾರರು; ಕೊಹ್ಲಿ ಬಗ್ಗೆ ಹೇಳಿದ್ದೇನು?

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್.ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್). ಮೀಸಲು ಆಟಗಾರರು: ಯಶಸ್ವಿ ಜೈಸ್ವಾಲ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.

Continue Reading
Advertisement
Transport Minister Ramalinga reddy
ಕರ್ನಾಟಕ47 mins ago

Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

DCM DK Shivakumar
ಕರ್ನಾಟಕ2 hours ago

Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು

Indian Railways help desk
ದೇಶ2 hours ago

Odisha Train Accident : ಅವಘಡದಲ್ಲಿ ಮೃತಪಟ್ಟವರನ್ನು ಗುರುತಿಸಲು ಭಾರತೀಯ ರೈಲ್ವೆ ಮನವಿ

Water tap
ಕರ್ನಾಟಕ3 hours ago

Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Rehena Fathima
ದೇಶ3 hours ago

ಬೆತ್ತಲೆಯಾಗುವುದು ಯಾವಾಗಲೂ ಅಶ್ಲೀಲವಲ್ಲ: ಬೆತ್ತಲಾದ 33 ವರ್ಷದ ಮಹಿಳೆಗೆ ಕೇರಳ ಹೈಕೋರ್ಟ್​​ನಿಂದ ರಿಲೀಫ್​

A sapling was planted on the banks of Tunga in Shivamogga
ಕರ್ನಾಟಕ3 hours ago

World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ

Ashwini Vaishnav
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ರೈಲು ದುರಂತ ಬಳಿಕ ಪರಿಹಾರ ಕಾರ್ಯ; ರೈಲ್ವೆ ಸಚಿವರ ನಡೆ ಅನುಕರಣೀಯ

World Environment Day celebration at Shirsi veda health centere
ಉತ್ತರ ಕನ್ನಡ4 hours ago

Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Ekana Stadium
ಕ್ರಿಕೆಟ್4 hours ago

ತಾಯಿ, ಮಗಳ ಜೀವ ತೆಗೆಯಿತು ಐಪಿಎಲ್ ಲಕ್ನೊ ತಂಡದ ಹೋರ್ಡಿಂಗ್

Bike Accident in Charmadi Ghat
ಕರ್ನಾಟಕ4 hours ago

Bike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್‌ ಚಕ್ರಕ್ಕೆ ಸಿಲುಕಿ ಸ್ಕೂಟರ್‌ ಸವಾರ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Chakravarthy Sulibele and MB Patil
ಕರ್ನಾಟಕ14 hours ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ14 hours ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ21 hours ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

Mangalore Moral Policing News
ಉಡುಪಿ2 days ago

Video: ನಮ್ಮ ನಿದ್ದೆಗೆಡಿಸಿದ್ದಾರೆ; ಮುಸ್ಲಿಮರೊಂದಿಗೆ ಬೀಚ್​​ಗೆ ಬಂದಿದ್ದ ಹುಡುಗಿಯರ ವಿರುದ್ಧ ನಿಂತ ಮಹಿಳೆಯರು

horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲೇಬೇಕು!

South facing house vastu
ಭವಿಷ್ಯ3 days ago

Vastu Tips : ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆ ಕೂಡ ಶುಭವಂತೆ! ಹೌದೇ? ಏನೆನ್ನುತ್ತದೆ ವಾಸ್ತು ಶಾಸ್ತ್ರ?

jackfruit
ಕೃಷಿ3 days ago

Krishi Khajane : ಹುಲುಸಾಗಿ ಹಲಸು ಬೆಳೆಯಿರಿ, ಎಕರೆಗೆ 2.5 ಲಕ್ಷ ಆದಾಯ ಪಡೆಯಿರಿ!

Bus Driver
ಕರ್ನಾಟಕ3 days ago

Viral Video: ಬೆಂಗಳೂರು ಟ್ರಾಫಿಕ್‌ನಲ್ಲೇ ಊಟ ಮಾಡಿ ಮುಗಿಸಿದ ಡ್ರೈವರ್! ಇಲ್ಲಿದೆ ನೋಡಿ ವಿಡಿಯೊ

horoscope today
ಪ್ರಮುಖ ಸುದ್ದಿ3 days ago

Horoscope Today : ಈ ಮೂರು ರಾಶಿಯವರಿಗೆ ಖರ್ಚು ಹೆಚ್ಚು; ಇಂದು ನಿಮ್ಮ ಭವಿಷ್ಯ ಹೀಗಿದೆ

Siddaramaiah
ಕರ್ನಾಟಕ3 days ago

Congress Guarantee : ಹೂ ಈಸ್‌ ಯುವರ್‌ ಯಜಮಾನಿ? ಸಿದ್ದರಾಮಯ್ಯ ಸುದ್ದಿಗೋಷ್ಠಿಯ ತಮಾಷೆ ಪ್ರಸಂಗಗಳು ಇಲ್ಲಿವೆ!

ಟ್ರೆಂಡಿಂಗ್‌

error: Content is protected !!