Site icon Vistara News

Grand Prix 2024 Competition: ಬೆಳ್ಳಿ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್

Grand Prix 2024 Competition

Grand Prix 2024 Competition:Lovlina Borgohain Secures Silver Medal In Grand Prix 2024 Competition

ನವದೆಹಲಿ: ಟೋಕಿಯೊ ಒಲಿಂಪಿಕ್ ಪದಕ ವಿಜೇತೆ ಭಾರತೀಯ ಬಾಕ್ಸರ್(Indian boxer Lovlina Borgohain) ಲವ್ಲಿನಾ ಬೊರ್ಗೊಹೈನ್(Lovlina Borgohain) ಅವರು ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಟೂರ್ನಿಗೂ ಮುನ್ನ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಜೆಕ್ ಗಣರಾಜ್ಯದಲ್ಲಿ ನಡೆದ ಗ್ರ್ಯಾಂಡ್ ಪ್ರಿಕ್ಸ್ 2024 ಸ್ಪರ್ಧೆಯಲ್ಲಿ(Grand Prix 2024 Competition) ಬೆಳ್ಳಿ ಪದಕವನ್ನು ಜಯಿಸಿದ್ದಾರೆ. ಅವರ ಈ ಪ್ರದರ್ಶನ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಭರವಸೆಯನ್ನು ಹೆಚ್ಚಿಸುವಂತೆ ಮಾಡಿದೆ.

ಮಹಿಳಾ ವಿಭಾಗದ ಫೈನಲ್​ ಪಂದ್ಯದಲ್ಲಿ ಲವ್ಲಿನಾ ಚೀನಾದ ಲಿ ಕಿಯಾನ್ ವಿರುದ್ಧ ತೀವ್ರ ಹೋರಾಟ ನಡೆಸಿದರೂ ಕೂಡ 2-3 ಅಂಕಗಳ ಅಂತರದಿಂದ ಸೋತರು. ಇದಕ್ಕೂ ಮುನ್ನ ನಡೆದ ರೌಂಡ್​ ರಾಬಿನ್​ ಸುತ್ತಿನಲ್ಲಿ ಲವ್ಲಿನಾ ಇಂಗ್ಲೆಂಡ್‌ನ ಚಾಂಟಲ್ ರೀಡ್ ವಿರುದ್ಧ 3-2 ರಿಂದ ತನ್ನ ಮೊದಲ ಪಂದ್ಯವನ್ನು ಗೆದಿದ್ದರು. ಎರಡನೇ ಪಂದ್ಯದಲ್ಲಿ ಸೋಲು ಕಂಡಿದ್ದರು. 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೆಲ್ಟರ್‌ವೇಟ್ ವಿಭಾಗದಲ್ಲಿ ಲವ್ಲಿನಾ ಕಂಚಿನ ಪದಕವನ್ನು ಗೆದ್ದಿದ್ದರು.

2024ರ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ ಬಾಕ್ಸಿಂಗ್‌ನಲ್ಲಿ ಭಾರತ ಆರು ಕೋಟಾಗಳನ್ನು ಪಡೆದಿದ್ದು, ಅಮಿತ್ ಪಂಗಲ್ (51 ಕೆಜಿ), ನಿಶಾಂತ್ ದೇವ್ (71 ಕೆಜಿ), ನಿಖತ್ ಜರೀನ್ (50 ಕೆಜಿ), ಪ್ರೀತಿ ಪವಾರ್ (54 ಕೆಜಿ), ಜೈಸ್ಮಿನ್ ಲಂಬೋರಿಯಾ (57 ಕೆಜಿ), ಲೊವ್ಲಿನಾ ಬೊರ್ಗೊಹೈನ್ (75 ಕೆಜಿ) ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

ಟೋಕಿಯೊ 2020 ರ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ (ಮಹಿಳೆಯರ 75 ಕೆಜಿ), ಎರಡು ಬಾರಿಯ ವಿಶ್ವ ಚಾಂಪಿಯನ್ ನಿಖತ್ ಜರೀನ್ (ಮಹಿಳೆಯರ 50 ಕೆಜಿ) ಮತ್ತು ಪ್ರೀತಿ ಪವಾರ್ (ಮಹಿಳೆಯರ 54 ಕೆಜಿ) ಕಳೆದ ವರ್ಷ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ತಮ್ಮ ಒಲಿಂಪಿಕ್ಸ್​ ಕೋಟಾಗಳನ್ನು ಗೆದ್ದಿದ್ದರು.

ಇದನ್ನೂ ಓದಿ Euro 2024: ಕ್ರೊವೇಷಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪೇನ್

ಚಿನ್ನ ಗೆದ್ದ ಬಾಕ್ಸರ್​ಗಳಿಗೆ ಭಾರೀ ನಗದು ಪ್ರಶಸ್ತಿ ಘೋಷಣೆ


ಕೆಲವು ತಿಂಗಳ ಹಿಂದೆ ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ಪ್ರಕಟಿಸಿತ್ತು. ಇದೀಗ ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (International Boxing Association) ಕೂಡ ಮಹತ್ವದ ನಿರ್ಧಾರ ಕೈಗೊಂಡಿದ್ದು, ಚಿನ್ನ ಗೆಲ್ಲುವ ಪ್ರತಿಯೊಬ್ಬ ಬಾಕ್ಸರ್​ಗಳಿಗೆ 41.68 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಜತೆಗೆ ಕೋಚ್‌, ರಾಷ್ಟ್ರೀಯ ತಂಡಗಳಿಗೆ 10 ಲಕ್ಷ ನೀಡುವುದಾಗಿಯೂ ಪ್ರಕಟಿಸಿದೆ. ಆದರೆ, 2020ರ ಟೋಕಿಯೊ ಒಲಿಂಪಿಕ್ಸ್‌ ಬಾಕ್ಸಿಂಗ್ ಸ್ಪರ್ಧೆಗಳನ್ನು ಐಬಿಎ(IBA) ನೆರವಿಲ್ಲದೇ ಐಒಸಿಯೇ ಸಂಘಟಿಸಿತ್ತು. ಕ್ರೀಡಾ ಸಂಸ್ಥೆಗಳು ನೀಡುವ ಬಹುಮಾನ ಹಣಕ್ಕೂ ಐಒಸಿ ಸಮ್ಮತಿ ನೀಡಿಲ್ಲ.

ಪ್ಯಾರಿಸ್​ ಒಲಿಂಪಿಕ್ಸ್​ ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

Exit mobile version