Site icon Vistara News

IPL 2023: ಟಾಸ್ ಸೋತ ಆರ್​ಸಿಬಿ ತಂಡಕ್ಕೆ ಬ್ಯಾಟಿಂಗ್​ ಆಹ್ವಾನ

Royal Challengers Bangalore vs Gujarat Titans

#image_title

ಬೆಂಗಳೂರು: ಮಳೆಯಿಂದ ಅಡಚಣೆಯಾದ ಪಂದ್ಯದಲ್ಲಿ ಟಾಸ್​ ಗೆದ್ದ ಗುಜರಾತ್​ ಟೈಟನ್ಸ್​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಆತಿಥೇಯ ಆರ್​ಸಿಬಿ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಪ್ಲೇ ಆಫ್​ ಟಿಕೆಟ್​ ಪಡೆಯಬೇಕಿದ್ದರೆ ಆರ್​ಸಿಬಿಗೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಒಂದೊಮ್ಮೆ ಈ ಪಂದ್ಯ ಮಳೆಯಿಂದ ರದ್ದಾದರೆ ಮುಂಬೈ ಇಂಡಿಯನ್ಸ್​ ತಂಡ ಒಂದು ಅಂಕದ ಮುನ್ನಡೆಯೊಂದಿಗೆ ಪ್ಲೇ ಆಫ್ಗೆ ಪ್ರವೇಶ ಪಡೆಯಲಿದೆ.

ಇತ್ತಂಡಗಳ ಮುಖಾಮುಖಿ ದಾಖಲೆಗಳ ಬಗ್ಗೆ ಹೇಳುವುದಾದರೆ ಎರಡು ಸಂದರ್ಭಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ಎರಡೂ ತಂಡಗಳು ತಲಾ ಒಂದನ್ನು ಗೆದ್ದಿವೆ. ಮೇ 21ರ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮತ್ತೊಂದು ಬಾರಿ ಗೆಲುವಿಗಾಗಿ ಹೋರಾಟ ನಡೆಸಲಿದೆ.

ರಾಯಲ್​ ಚಾಲೆಂಜರ್ಸ್​ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್​​ವೆಲ್, ಮಹಿಪಾಲ್ ಲಾಮ್ರೊರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಸುಯಾಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹೇಜಲ್​ವುಡ್​.

ಇದನ್ನೂ ಓದಿ IPL 2023: ಮುಂಬೈ ಗೆದ್ದರೂ ಪ್ಲೇ ಆಫ್​ ಭವಿಷ್ಯ ಗುಜರಾತ್​ ಕೈಯಲ್ಲಿ

ಗುಜರಾತ್​ ಟೈಟನ್ಸ್​: ಶುಭಮನ್ ಗಿಲ್, ವೃದ್ಧಿಮಾನ್ ಸಾಹ, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ದಸುನ್ ಶನಕಾ, ರಾಹುಲ್ ತೆವಾಟಿಯಾ, ಮೋಹಿತ್ ಶರ್ಮಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್.

Exit mobile version