ಆಂಧ್ರ ಪ್ರದೇಶ: ಟೀಮ್ ಇಂಡಿಯಾದ ಆಟಗಾರ ಹನುಮ ವಿಹಾರಿ(Hanuma Vihari) ಅವರು ಇತ್ತೀಗೆಗೆ ಮುಕ್ತಾಯ ಕಂಡ ರಣಜಿ ಟ್ರೋಫಿ ಟೂರ್ನಿಯ ವೇಳೆ ನಾಯಕತ್ವ ಬದಲಾವಣೆ ವಿಚಾರವಾಗಿ ಆಂಧ್ರಪ್ರದೇಶ ಕ್ರಿಕೆಟ್ ಅಸೋಸಿಯೇಶನ್(Andhra Cricket Association) ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಎಸಿಎ ಶೋಕಾಸ್ ನೋಟಿಸ್(ACA show-cause notice) ಜಾರಿ ಮಾಡಿದೆ.
ಹನುಮ ವಿಹಾರಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿ, ಬಂಗಾಳ ವಿರುದ್ಧದ ಮೊದಲ ಪಂದ್ಯದಲ್ಲಿ ನಾನು ತಂಡದ ನಾಯಕನಾಗಿದ್ದೆ. ಆಟದ ಸಮಯದಲ್ಲಿ ನಾನು 17 ನೇ ಆಟಗಾರನ ಮೇಲೆ ಕೂಗಾಡಿದ್ದೆ. ಅವನು ತನ್ನ ತಂದೆಗೆ (ರಾಜಕಾರಣಿಯಾಗಿದ್ದ) ದೂರು ನೀಡಿದ್ದ, ಪ್ರತಿಯಾಗಿ ಅವರ ತಂದೆ ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಸೋಸಿಯೇಷನ್ಗೆ ಕೇಳಿದರು. ಬಂಗಾಳ ವಿರುದ್ದದ ಪಂದ್ಯದಲ್ಲಿ ನಾವು ಗೆದ್ದರೂ, ನನ್ನ ಯಾವುದೇ ತಪ್ಪು ಇಲ್ಲದ ಹೊರತಾಗಿಯೂ ರಾಜೀನಾಮೆ ಕೊಡಲು ನನ್ನಲ್ಲಿ ಅಸೋಸಿಯೇಶನ್ ಕೇಳಿಕೊಂಡಿತು. ನಾನು ವೈಯಕ್ತಿಕವಾಗಿ ಆ ಆಟಗಾರನಿಗೆ ಏನೂ ಹೇಳಿರಲಿಲ್ಲ. ಆದರೆ ಕಳೆದ ಏಳು ವರ್ಷಗಳಲ್ಲಿ ಐದು ಬಾರಿ ತಂಡವನ್ನು ನಾಕೌಟ್ಗೆ ತಲುಪಿಸಿದ, ತಂಡಕ್ಕೆ ಎಲ್ಲವನ್ನೂ ಕೊಟ್ಟ ಆಟಗಾರನಿಗಿಂತ ಆ ಆಟಗಾರನೇ ಮಂಡಳಿಗೆ ಪ್ರಿಯವಾದ. ನಾನು ಮುಜುಗರ ಅನುಭವಿಸಿದೆ. ಇನ್ನೆಂದೂ ನಾನು ಆಂಧ್ರಪ್ರದೇಶದ ಪರ ಆಡಲಾರೆ ಎಂದು ಹೇಳಿದ್ದರು. ಇದೇ ವಿಚಾರವಾಗಿ ವಿಹಾರಿ ವಿರುದ್ಧ ಎಸಿಎ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ Hanuma Vihari: ಎಸಿಎ ಆರೋಪಕ್ಕೆ ತಿರುಗೇಟು ನೀಡಿದ ಹನುಮ ವಿಹಾರಿ
Hanuma Vihari's Instagram post.
— Johns. (@CricCrazyJohns) February 26, 2024
– He was asked to resign by the association as the captain during the first match for shouting at a player whose father is a politician.
It's sad to see what is happening in Indian domestic cricket. pic.twitter.com/ZgqHK5VjQB
ವಿಹಾರಿ ಮಾಡಿದ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಎಸಿಎ, ವಿಹಾರಿ ನಾಯಕತ್ವದ ನಿರ್ಗಮನವು ವೃತ್ತಿಪರ ಪರಿಗಣನೆಯ ಪರಿಣಾಮವಾಗಿದೆಯೇ ಹೊರತು ರಾಜಕೀಯ ಹಸ್ತಕ್ಷೇಪವಲ್ಲ, ವಿಹಾರಿ ಆಟಗಾರರನ್ನು ಬೆದರಿಸಿ ಸಹಿ ಮಾಡಿಸಿದ್ದಾರೆ ಎಂದು ಆಂಧ್ರ ಕ್ರಿಕೆಟ್ ಸಂಸ್ಥೆ ಆರೋಪ ಮಾಡಿತ್ತು.
ಬೇರೆ ತಂಡದ ಪರ ಆಡುವೆ..
ನೋಟಿಸ್ ಜಾರಿ ಮಾಡಿದ ಹಿನ್ನೆಲೆ ವಿಹಾರಿ ಅವರು ತಾನು ಬೇರೆ ತಂಡದ ಪರ ಆಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಹಾರಿ, ‘ನಾನು ಎಸಿಎಯಿಂದ ನಿರಾಕ್ಷೇಪಣ ಪ್ರಮಾಣಪತ್ರವನ್ನು ಕೋರಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ’ ಎಂದು ಹೇಳಿದ್ದಾರೆ.
ಎಂದಿರುವುದಾಗಿ ವರದಿ ಹೇಳಿದೆ. ಈ ಬಾರಿಯ ರಣಜಿ ಆವೃತ್ತಿಯಲ್ಲಿ ಪ.ಬಂಗಾಳ ವಿರುದ್ಧದ ಆರಂಭಿಕ ಪಂದ್ಯದಲ್ಲಿ 30 ವರ್ಷದ ವಿಹಾರಿ, ಆಂಧ್ರಪ್ರದೇಶ ತಂಡದ ನಾಯಕತ್ವ ವಹಿಸಿದ್ದರು. ಅವರನ್ನು ಇದ್ದಕ್ಕಿದ್ದಂತೆ ನಾಯಕತ್ವದಿಂದ ಕೆಳಕ್ಕಿಳಿಸಿ, ರಿಕ್ಕಿ ಭುಯಿಗೆ ಜವಾಬ್ದಾರಿ ನೀಡಲಾಗಿತ್ತು. ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ವಿಹಾರಿ, ಎಸಿಎ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.