ಮುಂಬಯಿ: ಭಾರತ ಮತ್ತು ಪಾಕ್(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಕಮ್ರಾನ್ ಅಕ್ಮಲ್(Kamran Akmal) ವಿರುದ್ಧ ಹರ್ಭಜನ್ ಸಿಂಗ್(Harbhajan Singh) ಮತ್ತೆ ಕಿಡಿ ಕಾರಿದ್ದಾರೆ. ನಿನೋಬ್ಬ ನಾಲಾಯಕ್(Nalaayak) ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(viral video) ಆಗಿದೆ.
ಎಎನ್ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್ ಸಿಂಗ್ ಅವರು ಕಮ್ರಾನ್ ಅಕ್ಮಲ್ ಒಬ್ಬ ನಾಲಾಯಕ್, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.
ಇದಕ್ಕೂ ಮುನ್ನ ಹರ್ಭಜನ್ ಸಿಂಗ್ ಅವರು ಟ್ವೀಟ್ ಮಾಡಿ ಅಕ್ಮಲ್ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದರು.
ಇದನ್ನೂ ಓದಿ IND vs USA: ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ; ಯಾರಿಗೆ ಕೊಕ್?
ಕ್ಷಮೆ ಕೇಳಿದ್ದ ಅಕ್ಮಲ್
ವಿವಾದಾತ್ಮಕ ಹೇಳಿಕೆಗೆ ಭಾರೀ ಟಿಕೆ ಮತ್ತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಮ್ರಾನ್ ಅಕ್ಮಲ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕ್ಷಮೆ ಯಾಚಿಸಿದ್ದರು. “ಇತ್ತೀಚಿನ ನನ್ನ ಹೇಳಿಕೆಗೆ ಹರ್ಭಜನ್ ಸಿಂಗ್ ಮತ್ತು ಸಿಕ್ಖ್ ಸಮುದಾಯದ ಬಳಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಮಾತುಗಳು ಅಗೌರವ ಮತ್ತು ಅಸಮರ್ಪಕ. ವಿಶ್ವಾದ್ಯಂತ ಇರುವ ಸಿಕ್ಖ್ ಸಮುದಾಯದ ಮೇಲೆ ನನಗೆ ಅಪಾರ ಗೌರವ ಇದೆ. ಯಾರನ್ನೂ ನೋಯಿಸುವ ಉದ್ದೇಶ ನನಗೆ ಇರಲಿಲ್ಲ. ನಿಜವಾಗಿಯೂ ಕ್ಷಮೆ ಯಾಚಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದರು.
ಏನಿದು ಪ್ರಕರಣ?
ಭಾನುವಾರ ಪಾಕ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಭಾರತ ತಂಡದ ವೇಗಿ ಅರ್ಶ್ದೀಪ್ ಅವರು ಪಂದ್ಯದ ಕೊನೆಯ ಓವರ್ ಬೌಲಿಂಗ್ ಮಾಡುತ್ತಿದ್ದ ವೇಳೆ ಅಕ್ಮಲ್ “ಕುಚ್ ಭೀ ಹೋ ಸಕ್ತಾ ಹೈ.. 12 ಬಜ್ ಗಯೇ ಹೈ (ಏನು ಬೇಕಾದರೂ ಸಂಭವಿಸಬಹುದು. 12 ರ ನಂತರ ಯಾವುದೇ ಸಿಖ್ಖರನ್ನು ನೀಡಲಾಗುವುದಿಲ್ಲ) ಎಂದು ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.
ಭಾನುವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ, ಪಾಕ್ ಬೌಲರ್ಗಳ ನಿಖರ ದಾಳಿಗೆ ತಡೆಯೊಡ್ಡುವಲ್ಲಿ ವಿಫಲವಾಗಿ ಕೇವಲ 119 ರನ್ನಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಪಾಕ್ ಕೂಡ ಭಾರತದ ಬೌಲಿಂಗ್ ದಾಳಿಗೆ ನಲುಗಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ ಸೋಲು ಕಂಡಿತು. ಮೊಹಮ್ಮದ್ ರಿಜ್ವಾನ್(31) ಒಂದು ಹಂತದ ವರೆಗೆ ಭಾರತೀಯ ಬೌಲರ್ಗಳನ್ನು ಕಾಡಿದರೂ ಕೂಡ ಬುಮ್ರಾ ಎಸೆತಕ್ಕೆ ಕ್ಲೀನ್ ಬೌಲ್ಡ್ ಆದರು. ಇಲ್ಲಿಂದ ಪಾಕ್ ಕುಸಿತ ಕೂಡ ಆರಂಭವಾಯಿತು. ಭಾರತ ಪಂದ್ಯವನ್ನು ಗೆದ್ದು ಬೀಗುವಲ್ಲಿ ಯಶಸ್ಸು ಕಂಡಿತ್ತು.