ಮುಂಬಯಿ: ಟಿ-20 ವಿಶ್ವಕಪ್ ಬಳಿಕ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ವಿರುದ್ಧ ನಡೆಯುವ ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. ಅದರಲ್ಲೂ, ಕಳೆದ ಐಪಿಎಲ್‌ನಲ್ಲಿ ಮೊದಲ ಬಾರಿಗೆ ನಾಯಕತ್ವ ವಹಿಸಿಕೊಂಡು, ಗುಜರಾತ್ ಟೈಟನ್ಸ್ ಚಾಂಪಿಯನ್ ಆಗುವುದರಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸುವ ಅವಕಾಶ ನೀಡಲಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕತ್ವ ಇದ್ದರೆ, ಏಕದಿನ ಸರಣಿಯ ಮುಂದಾಳತ್ವವನ್ನು ಶಿಖರ್ ಧವನ್ ಅವರಿಗೆ ನೀಡಲಾಗಿದೆ. ಈ ಎರಡೂ ಸರಣಿಗಳಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ, ಬಾಂಗ್ಲಾದೇಶ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗಳಿಗೆ ರೋಹಿತ್ ಹಾಗೂ ಕೊಹ್ಲಿ ವಾಪಸಾಗಲಿದ್ದಾರೆ.
ಮೊದಲ ಬಾರಿಗೆ ಪಾಂಡ್ಯ ನಾಯಕತ್ವ
ಕಳೆದ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮೊದಲ ಬಾರಿಗೆ ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ, ಚೊಚ್ಚಲ ಯತ್ನದಲ್ಲಿಯೇ ಭಾರಿ ಯಶಸ್ಸು ಸಾಧಿಸಿದ್ದರು. ಪಾಂಡ್ಯ ನೇತೃತ್ವದಲ್ಲಿ ಗುಜರಾತ್ ಟೈಟನ್ ಐಪಿಎಲ್ ಚಾಂಪಿಯನ್ ಆದ ಬಳಿಕ ಭಾರತ ತಂಡದ ನೇತೃತ್ವವನ್ನೂ ಇವರಿಗೆ ನೀಡಬೇಕು ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುವ ಅವಕಾಶ ಹಾರ್ದಿಕ್ ಪಾಂಡ್ಯ ಅವರಿಗೆ ಲಭಿಸಿದೆ. ಹಾಗೆಯೇ, ನ್ಯೂಜಿಲೆಂಡ್ ವಿರುದ್ಧದ ಎರಡೂ ಸರಣಿಗಳಿಗೆ ರಿಷಭ್ ಪಂತ್ ಅವರನ್ನು ಉಪನಾಯಕ ಎಂದು ಘೋಷಿಸಲಾಗಿದೆ.
ನಾಲ್ಕೂ ಸರಣಿಗೆ ಘೋಷಿಸಲಾದ ತಂಡಗಳು ಹೀಗಿವೆ
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ
ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ಉಪನಾಯಕ), ಶುಭ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ದೀಪಕ್ ಚಾಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.
ಟಿ-20 ಸರಣಿಗೆ ಆಯ್ಕೆಯಾದ ತಂಡ
ಹಾರ್ದಿಕ್ ಪಾಂಡ್ಯ, (ನಾಯಕ), ರಿಷಭ್ ಪಂತ್ (ಉಪನಾಯಕ), ಶುಭ್ಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ ಕುಮಾರ್, ಉಮ್ರಾನ್ ಮಲಿಕ್.
ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್.ರಾಹುಲ್ (ಉಪ ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆ.ಎಸ್.ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.
ಏಕದಿನ ಸರಣಿ
ರೋಹಿತ್ ಶರ್ಮಾ (ನಾಯಕ), ಕೆ.ಎಲ್.ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಯಶ್ ದಯಾಳ್.
ಇದನ್ನೂ ಓದಿ | T20 World Cup | ಟಿ20 ಕ್ರಿಕೆಟ್ನಲ್ಲಿ ನೂತನ ದಾಖಲೆ ಬರೆದ ಸೂರ್ಯಕುಮಾರ್ ಯಾದವ್