ಮುಂಬಯಿ: ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡಿ ಒಂದು ವಾರ ಕಳೆಯುವ ಮುನ್ನವೇ ಇದೀಗ ಹಾರ್ದಿಕ್ ಮತ್ತೊಂದು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಬಾಲಿವುಡ್ನ ಖ್ಯಾತ ನಟಿಯನ್ನು ಪಾಂಡ್ಯ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ಗುರುವಾರ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಜಂಟಿ ಹೇಳಿಕೆ ಪ್ರಕಟಿಸುವ ಮೂಲಕ ತಮ್ಮ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದರು.
ಹೌದು, ವರದಿಗಳ ಪ್ರಕಾರ ಹಾರ್ದಿಕ್ ಪಾಂಡ್ಯ ಬಾಲಿವುಡ್ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್, ಡೇಟಿಂಗ್ ಆರಂಭಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಂಡ್ಯ ಇನ್‌ಸ್ಟಾಗ್ರಾಂನಲ್ಲಿ ಅನನ್ಯ ಪಾಂಡೆ ಅವರನ್ನು ದೀಢಿರ್ ಆಗಿ ಫಾಲೋ ಮಾಡಲಾರಂಭಿಸಿದ್ದು. ಅತ್ತ ಅನನ್ಯ ಪಾಂಡೆ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲಾರಂಭಿಸಿದ್ದಾರೆ. ಈ ವಿಚಾರ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಹೊಸ ಸಂಚಲನ ಹುಟ್ಟುಹಾಕಿದ್ದು ಪಾಂಡ್ಯ ಸದ್ಯದಲ್ಲೇ ಅನನ್ಯ ಪಾಂಡೆ ಜತೆ ಹಸೆಮಣೆ ಏರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ಸಂದರ್ಭದಲ್ಲೂ ಹಾರ್ದಿಕ್ ಪಾಂಡ್ಯ ಹಾಗೂ ಅನನ್ಯ ಪಾಂಡೆ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಇಬ್ಬರೂ ಜತೆಯಾಗಿ ಬಿಂದಾಸ್ ಡ್ಯಾನ್ಸ್ ಕೂಡ ಮಾಡಿದ್ದರು. ಈ ಘಟನೆ ನಡೆದ 2 ದಿನಗಳ ಬಳಿಕ ಇದೀಗ ಇಬ್ಬರು ಪರಸ್ಪರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಲೊ ಮಾಡಿಕೊಂಡಿದ್ದಾರೆ. ಸದ್ಯ ಚಾಟಿಂಗ್ನಲ್ಲಿರುವ ಈ ಜೋಡಿ ಮುಂದೆ ಡೇಟಿಂಗ್ ಮಾಡಲಿದ್ದಾರೆ ಎಂದು ಕೆಲ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ Suryakumar Yadav : ಮುಂದಿನ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನಾಯಕತ್ವವೂ ನಷ್ಟ
ಅನನ್ಯ ಪಾಂಡೆ ನಟ ಆಧಿತ್ಯ ರಾಯ್ ಕಪೂರ್ ಜತೆ ಕೆಲವು ಸಮಯದಿಂದ ಡೇಟಿಂಗ್ ನಡೆಸುತ್ತಿದ್ದರು. ಆದರೆ ಈ ಜೋಡಿ ತಮ್ಮ ಸಂಬಂಧದ ಬಗ್ಗೆ ಎಲ್ಲೂ ತುಟಿಬಿಚ್ಚಿರಲಿಲ್ಲ. ಆದರೆ, ಕೆಲ ದಿನಗಳ ಹಿಂದಷ್ಟೇ ಅನನ್ಯ ಪಾಂಡೆ ಮತ್ತು ಆಧಿತ್ಯ ರಾಯ್ ಜತೆ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿತ್ತು. ಇದೀಗ ಪಾಂಡ್ಯ ಜತೆ ಡೇಟಿಂಗ್ ನಡೆಸುತ್ತಿರುವುದಾಗಿ ವರದಿಯಾಗಿದೆ.
ಹಾರ್ದಿಕ್ ಮತ್ತು ನತಾಶಾ ನಡುವಿನ ಬ್ರೇಕಪ್ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ತಿಳಿಸಿವೆ.
ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್ ಸಂಪ್ರದಾಯದಂತೆ ಹಾರ್ದಿಕ್ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್ ರೀತಿಯಲ್ಲಿ ವಿವಾಹವಾಗಿದ್ದರು.