ಮುಂಬಯಿ: ಹಾರ್ದಿಕ್ ಪಾಂಡ್ಯ(Hardik Pandya) ಅವರು ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡಿದ ಬಳಿಕ ಇದೀಗ ಜಾಲಿ ಮೂಡ್ನಲ್ಲಿದ್ದಾರೆ. ನತಾಶಗೆ ವಿಚ್ಛೇದನ ನೀಡಿ ಒಂದು ವಾರ ಕಳೆಯುವಷ್ಟರಲ್ಲಿ ಪಾಂಡ್ಯ ಬಾಲಿವುಡ್ನ ಖ್ಯಾತ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್, ಡೇಟಿಂಗ್ ಆರಂಭಿಸಿದ್ದಾರೆ ಎನ್ನಲಾಗಿತ್ತು. ಆದರೆ, ಪಾಂಡ್ಯ ಬ್ರಿಟಿಷ್ ಗಾಯಕಿ ಮತ್ತು ನಟಿ ಜಾಸ್ಮಿನ್ ವಾಲಿಯಾ(Jasmin Walia) ಜತೆ ಡೇಟಿಂಗ್(Hardik Pandya And Jasmin Walia Dating) ಮಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.
ಹೌದು, ನಟಿ ಜಾಸ್ಮಿನ್ ವಾಲಿಯಾ(Hardik Pandya And Jasmin Walia) ಮತ್ತು ಹಾರ್ದಿಕ್ ಪಾಂಡ್ಯ ಗ್ರೀಸ್ನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸುತ್ತಾಡಿದ ಫೋಟೊವನ್ನು ತಮ್ಮ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋಗಳಲ್ಲಿ ಇವರಿಬ್ಬರು ಜತೆಯಾಗಿ ಕಾಣಿಸಿಕೊಳ್ಳದಿದ್ದರೂ, ಒಂದೇ ಸಮಯದಲ್ಲಿ ಒಂದೇ ಸ್ಥಳದಲ್ಲಿರುವ ಫೋಟೋಗಳನ್ನು ಹಂಚಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.
ಜಾಸ್ಮಿನ್ ವಾಲಿಯಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆಯೂ ಕಾಣಿಸಿಕೊಂಡಿದ್ದರು. ಹೀಗಾಗಿ ಪಾಂಡ್ಯ ಮತ್ತು ಜಾಸ್ಮಿನ್ ಡೇಟಿಂಗ್ ನಡೆಸುತ್ತಿರುವುದು ಖಚಿತ ಎಂದು ನೆಟ್ಟಿಗರು ಕಮೆಂಟ್ ಮಾಡಲಾರಂಭಿಸಿದ್ದಾರೆ. ಹಾರ್ದಿಕ್ ಮತ್ತು ಜಾಸ್ಮಿನ್ ಪರಸ್ಪರ ಇನ್ಸ್ಟಾಗ್ರಾಮ್ನಲ್ಲಿ ಫೋಟೊಗಳಿಗೂ ಲೈಕ್ ಮಾಡಿಕೊಂಡಿದ್ದಾರೆ. ಹೀಗಾಗಿ ಡೇಟಿಂಗ್ ವದಂತಿ ಬಲವಾಗಿದೆ.
ಬ್ರಿಟಿಷ್ ಸಿಂಗರ್ ಹಾಗೂ ಟಿವಿ ನಟಿಯಾಗಿರುವ ಜಾಸ್ಮಿನ್ ವಾಲಿಯಾ ಅವರ ಪೋಷಕರು ಭಾರತೀಯ ಮೂಲದವರಾಗಿದ್ದಾರೆ ಎನ್ನಲಾಗಿದೆ. ಬ್ರಿಟಿಷ್ ರಿಯಾಲಿಟಿ ಟಿವಿ ಸಿರೀಸ್ನಲ್ಲಿ ಕಾಣಿಸಿಕೊಂಡ ನಂತರ ಜಾಸ್ಮಿನ್ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದರು.
ಇದನ್ನೂ ಓದಿ Hardik Pandya : ನನ್ನ ಅಪರಾಧದಲ್ಲಿ ನೀನು ಪಾಲುದಾರ; ಪುತ್ರನಿಗೆ ಈ ರೀತಿ ಬರ್ತ್ಡೇ ವಿಶ್ ಮಾಡಿದ ಪಾಂಡ್ಯ
2014ರಲ್ಲಿ ಜಾಸ್ಮಿನ್ ಯೂಟ್ಯೂಬ್ ಚಾನೆಲ್ ಆರಂಭಿಸಿ ಕೆಲ ಪಾಪ್ಯುಲರ್ ಹಾಡುಗಳನ್ನು ಹಾಡುವ ಮೂಲಕ ಗಮನಸೆಳೆದಿದ್ದರು. 2017ರಲ್ಲಿ ಬಾಂ ಡಿಗ್ಗಿ ಡಿಗ್ಗಿ ಹಾಡು ಇವರಿಗೆ ಖ್ಯಾತಿ ತಂದುಕೊಟ್ಟಿತ್ತು. ಇದಾದ ಬಳಿಕ ಜಾಸ್ಮಿನ್ ಬಿಗ್ಬಾಸ್ 13ರ ಫೈನಲಿಸ್ಟ್ ಅಸಿಮ್ ರಿಯಾಸ್ ಜತೆ 2022ರ ಮ್ಯೂಸಿಕ್ ವಿಡಿಯೋ ನೈಟ್ಸ್ & ಫೈಟ್ಸ್ನಲ್ಲಿಯೂ ಕೆಲಸ ಮಾಡಿದ್ದರು. ಸದ್ಯ ಪಾಂಡ್ಯ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ.
ಹಾರ್ದಿಕ್ ಮತ್ತು ನತಾಶಾ ನಡುವಿನ ಬ್ರೇಕಪ್ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿತ್ತು. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ಮನವಿ ಮಾಡಿತ್ತು.
ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್ ಸಂಪ್ರದಾಯದಂತೆ ಹಾರ್ದಿಕ್ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್ ರೀತಿಯಲ್ಲಿ ವಿವಾಹವಾಗಿದ್ದರು.