ಮುಂಬಯಿ: ಈ ಹಿಂದೆ ವರದಿಯಾದ ಪ್ರಕಾರ ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್(Nataša Stanković) ಅವರ ವಿವಾಹ ಮುರಿದು ಬಿದ್ದಿರುವುದು ಮತ್ತು ವಿಚ್ಛೇದನ ಪಡೆಯುವುದು ಬಹುತೇಖ ಖಚಿತ ಎನ್ನುವಂತಿದೆ. ಹೌದು, ಟಿ20 ವಿಶ್ವಕಪ್ ಗೆದ್ದು ತವರಿಗೆ ಮರಳಿರುವ ಹಾರ್ದಿಕ್ ಪಾಂಡ್ಯ ತಮ್ಮ ಮಗನೊಂದಿಗೆ ವಿಶ್ವಕಪ್ ಗೆಲುವನ್ನು ಸಂಭ್ರಮಿಸಿದ್ದಾರೆ. ಈ ಫೋಟೊ ಮತ್ತು ವಿಡಿಯೊಗಳನ್ನು ಪಾಂಡ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಪತ್ನಿ ಈ ಕಾರ್ಯಕ್ರಮಕ್ಕೆ ಗೈರಾಗಿರುವುದು ಕಂಡು ಈ ಜೋಡಿ ದೂರವಾದಂತೆ ತೋರುತ್ತಿದೆ.
ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾನ್‌ಕೋವಿಕ್ ವಿಚ್ಛೇದನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗಿತ್ತು. ಆದರೆ, ಈ ಜೋಡಿ ಮಾತ್ರ ಈ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಕೇವಲ ನಿಗೂಡ ಅರ್ಥದ ಪೋಸ್ಟ್ಗಳನ್ನು ಮಾತ್ರ ಮಾಡುತ್ತಿದ್ದರು.
ವಿಚ್ಛೇದನದ ಸುದ್ದಿಯ ನಡುವೆ, ಕೆಲ ದಿನಗಳ ಹಿಂದೆ ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದರು. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್ಫ್ರೆಂಡ್ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದರು. ಈ ವೇಳೆ ನತಾಶಗೆ ಪಾಪರಾಜಿಗಳು ಪಾಂಡ್ಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ನತಾಶ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು.
ಇದಾಗ ಬಳಿಕ ನತಾಶಾ ಸ್ಟಾನ್‌ಕೋವಿಕ್ ಅವರು ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದರು. ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿತ್ತು. ಈ ಫೋಟೊವನ್ನು ಕಂಡಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿತ್ತು. ಅಲ್ಲದೆ ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು ಎಂದು ವರದಿಯಾಗಿತ್ತು.
ಇದನ್ನೂ ಓದಿ Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್, ಹಾರ್ದಿಕ್, ಪಂತ್; ವಿಡಿಯೊ ವೈರಲ್
ಟಿ20 ವಿಶ್ವಕಪ್ ಗೆದ್ದಾಗ ಆಟಗಾರರ ಪತ್ನಿಯರು ಈ ಗೆಲುವಿನ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪತಿಯ ಫೋಟೊ ಮತ್ತು ಸಾಧನೆಯನ್ನು ಕೊಂಡಾಡಿದ್ದರು. ಆದರೆ ನತಾಶ ಯಾವುದೇ ಪೋಸ್ಟ್ ಕೂಡ ಮಾಡಿರಲಿಲ್ಲ. ಇದೀಗ ತವರಿಗೆ ಬಂದಿರುವ ಪಾಂಡ್ಯ ತಮ್ಮ ಮಗ ಅಗಸ್ತ್ಯನ ಜತೆಗೆ ಕೇಕ್ ಕತ್ತರಿಸಿ, ತಾವು ಗೆದ್ದ ಪದಕವನ್ನು ಮಗನ ಕೊರಳಿಗೆ ಹಾಕಿ ಸಂಭ್ರಮಿಸಿದ್ದಾರೆ. ಈ ಎಲ್ಲ ಸುಂದರ ಕ್ಷಣದ ಫೋಟೊ ಹಂಚಿಕೊಂಡು ‘ಎಲ್ಲವೂ ನಿನಗಾಗಿ. ನಾನೇನು ಮಾಡುತ್ತೇನೆಯೋ, ಅದು ನಿನ್ನ ಖುಷಿಗಾಗಿ ಮಾತ್ರ..’ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನು ನೋಡುವಾಗ ಪಾಂಡ್ಯ ಶೀಘ್ರದಲ್ಲೇ ನತಾಶಾಗೆ ವಿಚ್ಛೇದನ ನೀಡುವುದು ಖಚಿತ ಎನ್ನುವಂತಿದೆ.
ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್ ಸಂಪ್ರದಾಯದಂತೆ ಹಾರ್ದಿಕ್ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್ ರೀತಿಯಲ್ಲಿ ವಿವಾಹವಾಗಿದ್ದರು.