ಗಯಾನಾ: ಹಾರ್ದಿಕ್ ಪಾಂಡ್ಯ(Hardik Pandya) ವಿಂಡೀಸ್(IND vs WI) ವಿರುದ್ಧದ ಇಂದು(ಭಾನುವಾರ) ನಡೆಯುವ ದ್ವಿತೀಯ ಟಿ20 ಪಂದ್ಯದಲ್ಲಿ ಒಂದು ವಿಕೆಟ್ ಕಬಳಿಸಿದರೆ ಜಸ್ಪ್ರೀತ್ ಬುಮ್ರಾ(jasprit bumrah) ದಾಖಲೆಯೊಂದನ್ನು ಹಿಂದಿಕ್ಕಲಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಗರಿಷ್ಠ ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ನಾಲ್ಕನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಬುಮ್ರಾ ಮತ್ತು ಪಾಂಡ್ಯ ತಲಾ 70 ವಿಕೆಟ್ ಪಡೆದಿದ್ದಾರೆ.
ಅತ್ಯಧಿಕ ವಿಕೆಟ್ ಪಡೆದವರ ಭಾರತೀಯ ಬೌಲರ್ಗಳ ಪಟ್ಟಿಯಲ್ಲಿ ಯಜುವೇಂದ್ರ ಚಹಲ್(93*) ಮೊದಲ ಸ್ಥಾನದಲ್ಲಿದ್ದಾರೆ. ಭುವನೇಶ್ವರ್ ಕುಮಾರ್(90), ಆರ್. ಅಶ್ವಿನ್(72) ಕ್ರಮವಾಗಿ ಆ ಬಳಿಕದ ಸ್ಥಾನದಲ್ಲಿದ್ದಾರೆ. ಒಂದೊಮ್ಮೆ ಪಾಂಡ್ಯ ಮೂರು ವಿಕೆಟ್ ಪಡೆದರೆ ಆಗ ಅಶ್ವಿನ್ ಅವರನ್ನೂ ಕೂಡ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಲಿದ್ದಾರೆ.
ಈಗಾಗಲೇ ಮೊದಲ ಪಂದ್ಯವನ್ನು ಸೋತಿರುವ ಭಾರತ ಈ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಒಂದೊಮ್ಮೆ ಸೋತರೆ ವಿಂಡೀಸ್ ತಂಡ ತನ್ನ ಹಳೆಯ ಫಾರ್ಮ್ಗೆ ಮರಳಿದ ಸ್ಪಷ್ಟ ಉತ್ತರ ಸಿಗಲಿದೆ. ಟ್ವಿ20ಯಲ್ಲಿ ಅಬ್ಬರಿಸಿದ ಇಶಾನ್ ಕಿಶನ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಸಿಡಿಯಬೇಕಾದ ಅನಿವಾರ್ಯತೆ ಇದೆ. ನಾಯಕ ಪಾಂಡ್ಯ ಕೂಡ ಆಲ್ರೌಂಡರ್ ಪ್ರದರ್ಶನ ನೀಡಬೇಕಿದೆ.
ಇದನ್ನೂ ಓದಿ Hardik Pandya : ರಾಷ್ಟ್ರಗೀತೆ ಹಾಡುವಾಗ ಭಾವುಕರಾದ ಹಾರ್ದಿಕ್ ಪಾಂಡ್ಯ
ಭಾರತ ತಂಡ ಈ ಪಂದ್ಯದಲ್ಲಿ ಕೇವಲ 2 ಸ್ಪಿನ್ ಬೌಲಿಂಗ್ಗೆ ಅವಕಾಶ ನೀಡುವ ಸಾಧ್ಯತೆ ಕಂಡುಬಂದಿದೆ. ಕಳೆದ ಪಂದ್ಯದಲ್ಲಿ ಮೂವರು ಸ್ಪಿನ್ನರ್ಗಳನ್ನು ಕಣಕ್ಕಿಳಿಸಿದರೂ ಇದರಿಂದ ಯಾವುದೇ ಪ್ರಯೋಜನ ಉಂಟಾಗಿರಲಿಲ್ಲ. ಹೀಗಾಗಿ ಹೆಚ್ಚುವರಿ ಬ್ಯಾಟರ್ ಆಯ್ಕೆ ಮಾಡುವ ಸಾಧ್ಯತೆ ಇದೆ. ಅಕ್ಷರ್ ಅವರನ್ನು ಕೈ ಬಿಟ್ಟು ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು. ಕಳೆದ ಪಂದ್ಯದ ಸೋಲಿಗೂ ಬ್ಯಾಟಿಂಗ್ ಕೊರತೆಯೇ ಪ್ರಮುಖ ಕಾರಣವಾಗಿತ್ತು.
ಸಂಭಾವ್ಯ ತಂಡ
ವೆಸ್ಟ್ ಇಂಡೀಸ್: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ರೋಸ್ಟನ್ ಚೇಸ್, ಶಿಮ್ರೋನ್ ಹೆಟ್ಮೇರ್, ಜೇಸನ್ ಹೋಲ್ಡರ್, ಶೈಯ್ ಹೋಪ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮಾರಿಯೋ ಶೆಫರ್ಡ್, ಒಶಾನೆ ಥಾಮಸ್.
ಭಾರತ: ಇಶಾನ್ ಕಿಶನ್, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ),ಸಂಜು ಸ್ಯಾಮ್ಸನ್, ತಿಲಕ್ ವರ್ಮ ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಆರ್ಶ್ದೀಪ್ ಸಿಂಗ್, , ಮುಖೇಶ್ ಕುಮಾರ್