Site icon Vistara News

Hardik Pandya | ಭಾರತ ಟಿ20 ಕ್ರಿಕೆಟ್​ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕತ್ವ ಸಾಧ್ಯತೆ!​

Hardik Pandya

ನವದೆಹಲಿ: ಟೀಮ್​ ಇಂಡಿಯಾದ ಟಿ20 ನಾಯಕತ್ವವನ್ನು ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯಗೆ(Hardik Pandya) ನೀಡಲು ಬಿಸಿಸಿಐ ಚಿಂತನೆ ನಡೆಸುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ರೋಹಿತ್‌ ಶರ್ಮಾ ಏಕದಿನ ಮತ್ತು ಟೆಸ್ಟ್​ ತಂಡದ ನಾಯಕತ್ವದಲ್ಲಿ ಮಾತ್ರ ಮುಂದುವರಿಯಲಿದ್ದಾರೆ ಎಂದು ಹೇಳಲಾಗಿದೆ.

ಬುಧವಾರ ನಡೆದ ಬಿಸಿಸಿಐ ಅಪೆಕ್ಸ್​ ಕೌನ್ಸಿಲ್​ ಸಭೆಯಲ್ಲಿ ಈ ವೀಚಾರವನ್ನು ಚರ್ಚೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಎನ್‌ಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. “ಟಿ20 ತಂಡಕ್ಕೆ ನಾಯಕನನ್ನು ಬದಲಾವಣೆ ಮಾಡುವ ಯೋಜನೆ ಹೊಂದಿದ್ದೇವೆ. ಹಾರ್ದಿಕ್ ಪಾಂಡ್ಯ ಅವರ ಜತೆ ಚರ್ಚೆ ಮಾಡಲಾಗಿದೆ. ಈ ಬಗ್ಗೆ ನಿರ್ಧಾರ ತಿಳಿಸಲು ಅವರು ಕೆಲ ದಿನಗಳ ಸಮಯ ಕೇಳಿದ್ದಾರೆ. ಆದ್ದರಿಂದ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅವರಿಗೆ ಟಿ20 ಮಾದರಿಯಲ್ಲಿ ನಾಯಕತ್ವ ನೀಡಲು ನಿರ್ಧರಿಸಲಾಗಿದೆ” ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

“ಪ್ರಸ್ತುತ ಆಯ್ಕೆ ಸಮಿತಿಯು ಶಿಫಾರಸು ಮತ್ತು ತಂಡದ ಆಯ್ಕೆಯನ್ನು ಹೊರತುಪಡಿಸಿ ಬೇರೇನೂ ನಿರ್ಧಾರ ಮಾಡುವುದಿಲ್ಲ. ನಾಯಕತ್ವದಲ್ಲಿ ಬದಲಾವಣೆ ಮಾಡುವುದು ಮಹತ್ವದ ತೀರ್ಮಾನ, ನಿಗದಿತ ಆಯ್ಕೆ ಸಮಿತಿ ಇಲ್ಲದೆ ನಿರ್ಧಾರ ಮಾಡುವುದು ದೊಡ್ಡ ಪ್ರಮಾದವಾಗಲಿದೆ” ಎಂದು ಬಿಸಿಸಿಐ ಅಧಿಕಾರಿ ಹೇಳಿರುವುದಾಗಿ ವರದಿಯಾಗಿದೆ.

2022ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್​ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು ಹಾಗೂ ಚೊಚ್ಚಲ ಆವೃತ್ತಿಯಲ್ಲಿಯೇ ಗುಜರಾತ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಜತೆಗೆ ಕಳೆದ ನ್ಯೂಜಿಲ್ಯಾಂಡ್​, ಐರ್ಲೆಂಡ್​ ವಿರುದ್ಧದ ಟಿ20 ಸರಣಿಯಲ್ಲಿ ತಂಡವನ್ನು ಮುನ್ನಡೆ ಯಶಸ್ಸು ಕಂಡಿದ್ದರು. ಆದ್ದರಿಂದ ಬಹುತೇಕ ಪಾಂಡ್ಯ ಟಿ20ಯಲ್ಲಿ ಭಾರತ ತಂಡವನ್ನು ಮುನ್ನಡೆಸುವುದು ಪಕ್ಕಾ ಎನ್ನುವಂತಿದೆ.

ಇದನ್ನೂ ಓದಿ | IND VS BAN | ಪಂದ್ಯಶ್ರೇಷ್ಠ ಆಟಗಾರ ಕುಲ್​ದೀಪ್​ ಯಾದವ್​ ಕೈಬಿಟ್ಟ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸುನೀಲ್​ ಗವಾಸ್ಕರ್​!

Exit mobile version