ಮುಂಬಯಿ: ಹಾರ್ದಿಕ್ ಪಾಂಡ್ಯ(Hardik Pandya) ಹಾಗೂ ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್(Natasa Stankovic) ಡಿವೋರ್ಸ್ ಸುದ್ದಿಗಳ ಬೆನ್ನಲ್ಲೇ ಇದೀಗ ಮತ್ತೆ ಹಾರ್ದಿಕ್ ಪಾಂಡ್ಯ ಮೀಮ್ಸ್ ಹರಿದಾಡುತ್ತಿದೆ. ಬಿಸಿಸಿಐ ಘೋಷಿಸಿರುವ ಬಹುಮಾನ ಮೊತ್ತವನ್ನೂ ತಾಯಿ ಖಾತೆಗೆ ಹಾಕಿಬಿಡಿ ಅನ್ನೋ ಮೀಮ್ಸ್ ಭಾರಿ ವೈರಲ್ ಆಗುತ್ತಿದೆ.
ಹೌದು, ಹಾರ್ದಿಕ್ ಪಾಂಡ್ಯ ಬಗ್ಗೆ ಮೀಮ್ಸ್ಗಳು ವೈರಲ್ ಆಗಲು ಕೂಡ ಒಂದು ಕಾರಣವಿದೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಪತ್ನಿ ನತಾಶಾಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿತ್ತು. ಈ ವೇಳೆ ಪಾಂಡ್ಯ ತಾವು ತಮ್ಮ ಆಸ್ತಿಗಳನ್ನೆಲ್ಲ ತಾಯಿಯ ಹೆಸರಿನಲ್ಲಿ ಮಾಡಿಟ್ಟಿರುವುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದ ವಿಡಿಯೊ ವೈರಲ್ ಆಗಿತ್ತು.
ಆ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದ ಪಾಂಡ್ಯ “ನಾನು ಜಾಹಿರಾತು, ಕ್ರಿಕೆಟ್ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಇದೇ ಕಾರಣದಿಂದ ಇದೀಗ ನೆಟ್ಟಿಗರು ವಿಶ್ವಕಪ್ ಗೆದ್ದ ಬಹುಮಾನ ಮೊತ್ತ ಮತ್ತು ಬಿಸಿಸಿಐ ನೀಡಿದ ಮೊತ್ತವನ್ನು ಪಾಂಡ್ಯ ಅವರು ದಯಮಾಡಿ ಇದನ್ನು ನನ್ನ ತಾಯಿಯ ಖಾತೆಗೆ ಹಾಲಿ ಎಂದು ಹೇಳುವ ರೀತಿಯಲ್ಲಿ ಮೀಮ್ಸ್ಗಳನ್ನು ಮಾಡಿ ಹರಿಬಿಟ್ಟಿದ್ದಾರೆ.
ಭಾರತ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅತ್ಯಂತ ಮಹತ್ವದ್ದಾಗಿತ್ತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದರು. ಅದರಲ್ಲೂ ಫೈನಲ್ನಲ್ಲಿ ಸೋಲುವ ಭೀತಿಯಲ್ಲಿದ್ದ ಭಾರತ ತಂಡವನ್ನು ಕಾಪಾಡಿದ್ದೇ ಪಾಂಡ್ಯ. ಅಪಾಯಕಾರಿ ಹೆನ್ರಿಚ್ ಕ್ಲಾಸೆನ್ ವಿಕೆಟ್ ಕೀಳದೇ ಹೋಗಿದ್ದರೆ ಭಾರತದ ಕಪ್ ಆಸೆ ಮತ್ತೆ ನಿರಾಸೆಯಾಗುತ್ತಿತ್ತು.
ಹಾರ್ದಿಕ್ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್ ಸಂಪ್ರದಾಯದಂತೆ ಹಾರ್ದಿಕ್ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್-ಅಥಿಯಾ, ರಾಕಿಣಗ್ ಸ್ಟಾರ್ ಯಶ್ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.