ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಂಬೈ ಇಂಡಿಯನ್ಸ್ ಐಪಿಎಲ್ 2024 ಋತುವಿಗೆ ಫ್ರಾಂಚೈಸಿಗೆ ಹಿಂದಿರುಗಿದ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ನೇಮಿಸಿದೆ. ರೋಹಿತ್ ಶರ್ಮಾ ಅವರ 10 ವರ್ಷಗಳ ನಾಯಕತ್ವದ ನಂತರ ಹಾರ್ದಿಕ್ ತಂಡದ ಮುಂದಾಳತ್ವ ವಹಿಸಿಕೊಂಡಿದ್ದಾರೆ. 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಐಪಿಎಲ್ ಚಾಂಪಿಯನ್ಸ್ ಪಟ್ಟದ ಕಡೆಗೆ ಮುನ್ನಡೆಸಿದ ಹಾರ್ದಿಕ್, ಎರಡು ವರ್ಷಗಳ ನಂತರ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ್ದರು. ಪಾಂಡ್ಯ ಅವರ ನೇಮಕದ ಹೊರತಾಗಿಯೂ 10 ವರ್ಷ ತಂಡವನ್ನು ಮುನ್ನಡೆಸಿದ್ದ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಮಾಹಿತಿ ಲಭ್ಯವಿಲ್ಲ. ಅವರು ನಾಯಕತ್ವದ ಹೊರತಾಗಿಯೂ ತಂಡದಲ್ಲಿ ಮುಂದುವರಿಯುವರೇ ಎಂದು ಕಾದು ನೋಡಬೇಕಾಗಿದೆ.
HARDIK PANDYA WILL LEAD MUMBAI INDIANS IN IPL 2024…!!! pic.twitter.com/lFVgaxhZmM
— Johns. (@CricCrazyJohns) December 15, 2023
“ಇದು ಪರಂಪರೆಯನ್ನು ನಿರ್ಮಿಸುವ ಭಾಗವಾಗಿದೆ ಮತ್ತು ಭವಿಷ್ಯಕ್ಕೆ ನಿರ್ಧಾರವಾಗಿದೆ. ಈ ತತ್ವಕ್ಕೆ ಅನುಗುಣವಾಗಿ ಹಾರ್ದಿಕ್ ಪಾಂಡ್ಯ ಐಪಿಎಲ್ 2024 ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ” ಎಂದು ತಂಡದ ಜಾಗತಿಕ ಪ್ರದರ್ಶನ ಮುಖ್ಯಸ್ಥ ಮಹೇಲಾ ಜಯವರ್ಧನೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವಕ್ಕಾಗಿ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. 2013 ರಿಂದ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಅವರ ಅಧಿಕಾರಾವಧಿ ಅಸಮಾನ್ಯವಾಗಿದೆ. ಅವರ ನಾಯಕತ್ವವು ತಂಡಕ್ಕೆ ಸಾಟಿಯಿಲ್ಲದ ಯಶಸ್ಸನ್ನು ತಂದುಕೊಟ್ಟಿದೆ ಮಾತ್ರವಲ್ಲ, ಐಪಿಎಲ್ ಇತಿಹಾಸದಲ್ಲಿ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿ ಅವರ ಸ್ಥಾನವನ್ನು ಭದ್ರಪಡಿಸಿದೆ ಎಂದು ಹೇಳಿದ್ದಾರೆ.
ಅಂತಿಮ ಪಟ್ಟಿ ಬಿಡುಗಡೆ ವೇಳೆ ಅಚ್ಚರಿಯ ನಿರ್ಧಾರ
Ro,
— Mumbai Indians (@mipaltan) December 15, 2023
In 2013 you took over as captain of MI. You asked us to 𝐁𝐞𝐥𝐢𝐞𝐯𝐞. In victories & defeats, you asked us to 𝘚𝘮𝘪𝘭𝘦. 10 years & 6 trophies later, here we are. Our 𝐟𝐨𝐫𝐞𝐯𝐞𝐫 𝐜𝐚𝐩𝐭𝐚𝐢𝐧, your legacy will be etched in Blue & Gold. Thank you, 𝐂𝐚𝐩𝐭𝐚𝐢𝐧 𝐑𝐎💙 pic.twitter.com/KDIPCkIVop
ಚುಟುಕು ಕ್ರಿಕೆಟ್ ಟೂರ್ನಿ, ಬಿಸಿಸಿಐನ ಬಿಲಿಯನ್ ಡಾಲರ್ ಬೇಬಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭವಾಗುವ ಮೊದಲೇ ಹೈಡ್ರಾಮಾ ನಡೆದಿತ್ತುಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಗುಜರಾತ್ ಟೈಟಾನ್ಸ್ (Gujarat Titans) ತಂಡವು ಉಳಿಸಿಕೊಂಡರೂ ಅವರು ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಟ್ರೇಡ್ ಮೂಲಕ ಸೇರಿಕೊಂಡಿದ್ದರು.
It's Official. Hardik Pandya Traded To Mumbai Indians..
— Gujarat Titans (@Gujrat_titans_) November 26, 2023
Thank You Hardik Pandya.. You Will be Missed in our Dressing Room.. #HardikPandya pic.twitter.com/P7nK2QbKF6
ಗುಜರಾತ್ ಟೈಟಾನ್ಸ್ ತಂಡವು ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್ ಪಾಲಾಗಿರುವುದನ್ನು ದೃಢಪಡಿಸಿದೆ. “ಮುಂಬೈ ಇಂಡಿಯನ್ಸ್ ಸೇರಿದ ಹಾರ್ದಿಕ್ ಪಾಂಡ್ಯ ಅವರಿಗೆ ಅಭಿನಂದನೆಗಳು. ತಂಡವು ನಿಮ್ಮನ್ನು ಮಿಸ್ ಮಾಡಿಕೊಳ್ಳಲಿದೆ” ಎಂದು ಪೋಸ್ಟ್ ಮಾಡಿದೆ. ಡಿಸೆಂಬರ್ 11ರವರೆಗೆ ಟ್ರೇಡಿಂಗ್ ವಿಂಡೋ ತೆರೆದಿರುವ ಕಾರಣ ಇನ್ನಷ್ಟು ಅಚ್ಚರಿಗಳು ಕಾದಿವೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : MS Dhoni : ಧೋನಿ ವಿರುದ್ಧ ಫಿಕ್ಸಿಂಗ್ ಆರೋಪ ಮಾಡಿದ ಐಪಿಎಸ್ ಅಧಿಕಾರಿಗೆ ಜೈಲು ಶಿಕ್ಷೆ
ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್ ತಂಡ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಟ್ರೇಡಿಂಗ್ ವಿಂಡೋ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಹಾರ್ದಿಕ್ ಪಾಂಡ್ಯ ಅವರನ್ನು ಖರೀದಿಸುತ್ತದೆ ಎಂದೇ ಹೇಳಲಾಗಿತ್ತು. ಆದರೆ, ಗುಜರಾತ್ ಟೈಟನ್ಸ್ ತಂಡವು ಏಕಾಏಕಿ ರಿಟೇನ್ ಆದ ಆಟಗಾರರ ಪಟ್ಟಿ ಬಿಡುಗಡೆ ಮಾಡಿತ್ತು. ಹಾರ್ದಿಕ್ ಪಾಂಡ್ಯ ಅವರನ್ನೇ ನಾಯಕ ಎಂದು ಘೋಷಿಸಿತ್ತು. ಆದರೆ, ದಿಢೀರ್ ಬೆಳವಣಿಗೆಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಹಾರ್ದಿಕ್ ಪಾಂಡ್ಯ ಅವರನ್ನು ಖರೀದಿಸಿದೆ.
Hardik Pandya announced as captain for the IPL 2024 season.
— Mumbai Indians (@mipaltan) December 15, 2023
Read more➡️https://t.co/vGbcv9HeYq pic.twitter.com/SvZiIaDnxw
ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಸೇರುವುದು ಬಹುತೇಕ ಖಚಿತವಾದ ಕಾರಣ ಕ್ಯಾಮೆರೂನ್ ಗ್ರೀನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಮಾರಾಟ ಮಾಡಲು ಮುಂಬೈ ಇಂಡಿಯನ್ಸ್ ಮುಂದಾಗಿದೆ ಎನ್ನಲಾಗಿದೆ. ಇದರಿಂದ ಅವರಿಗೆ ಹೆಚ್ಚುವರಿ 17.5 ಕೋಟಿ ರೂಪಾಯಿ ಉಳಿತಾಯವಾಗುತ್ತದೆ.