Site icon Vistara News

Harmanpreet : ಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ನಾಯಕಿ ಹರ್ಮನ್​ಪ್ರೀತ್​ ಕೌರ್, ಕೋಚ್ ಅನ್ಮೋಲ್​

Harmanpreet

ಬೆಂಗಳೂರು: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲುವಿನ ನಂತರ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್​ಪ್ರೀತ್​ ಕೌರ್, ಭಾರತ ಮಹಿಳಾ ತಂಡದ ಹೆಡ್​​ ಕೋಚ್ ಅಮೋಲ್ ಮಜುಂದಾರ್ ಮತ್ತು ಫೀಲ್ಡಿಂಗ್ ಕೋಚ್ ಮುನೀಶ್ ಬಾಲಿ ಮಂಗಳವಾರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಅಮೋಲ್ ಮತ್ತು ಬಾಲಿ ಅವರೊಂದಿಗೆ ಹರ್ಮನ್ಪ್ರೀತ್ ಅವರ ಚಿತ್ರವು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​ನಲ್ಲಿ ವೈರಲ್ ಆಗಿದೆ. ವಿಶೇಷವೆಂದರೆ, ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಕಳೆದ ವಾರ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು ದಾಖಲಿಸಿದೆ.

ಇದನ್ನೂ ಓದಿ : Shakib al hasan : ಶಕಿಬ್​ ಲಂಕಾಗೆ ಬಂದರೆ ಕಲ್ಲೇಟು ಗ್ಯಾರಂಟಿ; ಬಾಂಗ್ಲಾ ನಾಯಕನಿಗೆ ಎಚ್ಚರಿಕೆ

2014ರ ಬಳಿಕ ತವರು ನೆಲದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿರುವ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ 347 ರನ್ ಗಳ ಭರ್ಜರಿ ಜಯ ದಾಖಲಿಸಿದೆ. ವುಮೆನ್ ಇನ್ ಬ್ಲೂ ಆಸ್ಟ್ರೇಲಿಯಾವನ್ನು 8 ವಿಕೆಟ್ ಗಳಿಂದ ಸೋಲಿಸಿ ಮತ್ತೊಂದು ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು. ಭಾರತೀಯ ಮಹಿಳಾ ತಂಡ ಈಗ ವೈಟ್ ಬಾಲ್ ಸ್ವರೂಪದತ್ತ ಗಮನ ಹರಿಸಲಿದೆ.

ಭಾರತೀಯ ಮಹಿಳೆಯರ ಚಾರಿತ್ರಿಕ ಸಾಧನೆ

ಮುಂಬಯಿ: ಭಾರತದ ಕ್ರಿಕೆಟ್​ ಕ್ಷೇತ್ರದಲ್ಲಿ ಇತಿಹಾಸವೊಂದು ಸೃಷ್ಟಿಯಾಗಿದೆ. ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ವಿರುದ್ಧ (Ind vs Aus ) ಟೆಸ್ಟ್ ಪಂದ್ಯದಲ್ಲಿ ಮೊದಲ ಬಾರಿ ಗೆಲುವು ಸಾಧಿಸಿದೆ. ಭಾರತದ ಪಾಲಿಗೆ ಇದು ಮೊದಲ ಸರಣಿ ಗೆಲವು ಕೂಡ ಹೌದು. ಇದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ದಿನವಾಗಲಿದೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾವು ಅಲಿಸಾ ಹೀಲಿ ನೇತೃತ್ವದ ತಂಡವನ್ನು 8 ವಿಕೆಟ್​ಗಳಿಂದ ಹೀನಾಯವಾಗಿ ಸೋಲಿಸುವ ಮೂಲಕ ಈ ಕೀರ್ತಿ ತನ್ನದಾಗಿಸಿಕೊಂಡಿದೆ. ಪಂದ್ಯದ ಆರಂಭದಿಂದಲೂ ಮೇಲುಗೈ ಸಾಧಿಸಿಕೊಂಡು ಬಂದಿದ್ದ ಭಾರತೀಯ ಪಡೆ ಪಂದ್ಯದ ನಾಲ್ಕನೇ ದಿನ ಗೆಲುವ ಸಾಧಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಈ ಮೊದಲ ಗೆಲುವಿಗೂ ಮುನ್ನ ಭಾರತ ಮಹಿಳಾ ಕ್ರಿಕೆಟ್ ತಂಡ ಆಸೀಸ್ ವಿರುದ್ಧ 10 ಪಂದ್ಯಗಳನ್ನು ಆಡಿತ್ತು. 6ರಲ್ಲಿ ಸೋಲು ಮತ್ತು 4ರಲ್ಲಿ ಡ್ರಾ ಮಾಡಿಕೊಂಡಿತ್ತು.

Exit mobile version