ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ(Mohammed Shami) ಅವರ ವಿರುದ್ಧ ಸದಾ ಒಂದಿಲ್ಲೊಂದು ಕಾರಣಗಳಿಂದ ಟೀಕಿಸುತ್ತಿರುವ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್(Hasin Jahan) ಮತ್ತೆ ವಿಲಕ್ಷಣ ಹೇಳಿಕೆ ನೀಡಿದ್ದಾರೆ. ರೋಹಿತ್ ಶರ್ಮ ಮತ್ತು ಅವರ ಮಗಳ ಫೋಟೊ ಹಂಚಿಕೊಂಡು ಶಮಿಯನ್ನು ಹೀಯಾಳಿಸಿದ್ದಾರೆ.
ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೋಹಿತ್ ಶರ್ಮ ಅವರು ತಮ್ಮ ಪುಟ್ಟ ಮಗಳು ಸಮೈರಾ ತೊಡೆ ಮೇಲೆ ಹಾಯಾಗಿ ಮಲಗಿರುವ ಫೋಟೊ ಹಂಚಿಕೊಂಡ ಹಸೀನ್ ಜಹಾನ್, ಹೆಚ್ಚಿನ ತಂದೆಯಂದಿರು ತಮ್ಮ ಪುಟ್ಟ ಮಗಳನ್ನು ದೇವರಂತೆ ಕಂಡು ಅವರಿಂದ ಶಾಂತಿ ಕಂಡುಕೊಳ್ಳುತ್ತಾರೆ. ಮತ್ತು ಕೆಲವು ತಂದೆಯರು ವೇಶ್ಯೆಯರ ಮಡಿಲಲ್ಲಿ!. ಅಲ್ಲಾಹು ಯಾವುದೇ ಮಗಳಿಗೆ ಇಂತಹ ಗುಣವಿಲ್ಲದ ತಂದೆಯನ್ನು ಎಂದಿಗೂ ನೀಡದಿರಲಿ. ಆಮೀನ್. ನನ್ನ ಪುಟ್ಟ ಮಗಳಿಗೆ ತಾಳ್ಮೆಯನ್ನು ನೀಡುವಂತೆ ನಾನು ಅಲ್ಲಾಹುವಿನನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಶಮಿಯನ್ನು ಮತ್ತೆ ಅನಗತ್ಯವಾಗಿ ಕೆಣಕ್ಕಿದ್ದಾರೆ.
16 ಆಗಸ್ಟ್ 2018 ರಂದು, ಹಸಿನ್ ಜಹಾನ್(Hasin Jahan) ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.
ಇದನ್ನೂ ಓದಿ IPL 2024: ‘ಯಾವ ಪರಿಣಾಮವೂ ಬೀರಲ್ಲ’; ತಂಡ ತೊರೆದ ಹಾರ್ದಿಕ್ಗೆ ಟಾಂಗ್ ನೀಡಿದ ಶಮಿ
ಐಪಿಎಲ್ ವೇಳೆ ಪ್ರೇಮಾಂಕುರ
ಮಾಡೆಲ್ ಆಗಿರುವ ಹಸೀನ್ ಜಹಾನ್. ಕೆಕೆಆರ್ ತಂಡದಲ್ಲಿ ಚಿಯರ್ ಲೀಡರ್ ಆಗಿ ಕೆಲಸ ಮಾಡುತ್ತಿದ್ದರು. 2011ರಲ್ಲಿ ಶಮಿ ಮತ್ತು ಹಸೀನ್ ಭೇಟಿಯಾಗಿದ್ದರು. ಈ ಭೇಟಿ ಸ್ನೇಹಕ್ಕೆ ತಿರುಗಿ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಅಲ್ಲದೆ, 2014ರಲ್ಲಿ ಮದುವೆಯಾಗಿದ್ದರು. ಈ ಜೋಡಿಗೆ ಒಬ್ಬಳು ಹೆಣ್ಣು ಮಗಳು ಕೂಡ ಇದ್ದಾಳೆ. ಸದ್ಯ ಪ್ರತ್ಯೇಕವಾಗಿ ವಾಸಿಸುತ್ತಿರುವ ಈ ಜೋಡಿ ಕೋರ್ಟ್‌ನಲ್ಲಿ ಕೌಟುಂಬಿಕ ಸಮಸ್ಯೆ ಎದುರಿಸುತ್ತಿದ್ದಾರೆ.
ಜೀವನಾಂಶ ನೀಡುತ್ತಿರುವ ಶಮಿ
2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಇದೇ ವರ್ಷದ ಜನವರಿಯಲ್ಲಿ ತೀರ್ಪು ಪ್ರಕಟಿಸಿ, ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿತ್ತು. ಕೋರ್ಟ್ ಸೂಚನೆಯಂತೆ ಶಮಿ ಅವರು ಈ ಮೊತ್ತವನ್ನು ನೀಡಿತ್ತಲೇ ಬರುತ್ತಿದ್ದಾರೆ.