Site icon Vistara News

Hasin Jahan: ‘ಹೆಣ್ಣು ಎಂದರೆ ನಿಮಗೆ ಮಜಾ​ ಮಾಡೋ ವಸ್ತು’; ಗಂಗೂಲಿ ವಿರುದ್ಧ ಹರಿಹಾಯ್ದ ಶಮಿ ಮಾಜಿ ಪತ್ನಿ

Hasin Jahan

Hasin Jahan: Mohammad Shami's Wife Hasin Jahan Slams Sourav Ganguly for their dispute

ಕೋಲ್ಕತಾ: ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ(Mohammed Shami) ಅವರ ವಿರುದ್ಧ ಸದಾ ಒಂದಿಲ್ಲೊಂದು ಕಾರಣಗಳಿಂದ ಟೀಕಿಸುತ್ತಿರುವ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್(Hasin Jahan) ಈ ಬಾರಿ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಸೌರವ್​ ಗಂಗೂಲಿ(sourav ganguly) ವಿರುದ್ಧ ಹರಿಹಾಯ್ದಿದ್ದಾರೆ.

ಆರ್​ಜಿ ಕರ್​ ಮೆಡಿಕಲ್​ ಕಾಲೇಜು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಘಟನೆಯನ್ನು ಖಂಡಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ಕೂಡ​ ವಿಷಾದ ವ್ಯಕ್ತಪಡಿಸಿದೆ. ಇದೇ ಪ್ರಕರಣದ ಬಗ್ಗೆ ಸೌರವ್​ ಗಂಗೂಲಿ ಕೂಡ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಆದರೆ, ಗಂಗೂಲಿ ನೀಡಿದ್ದ ಒಂದು ಹೇಳಿಕೆ ಬಗ್ಗೆ ಹಸೀನಾ ಜಹಾನ್​ ಕಿಡಿಕಾರಿದ್ದಾರೆ.

ಮಾಧ್ಯಮದ ಜತೆ ಮಾತನಾಡು ವೇಳೆ ಗಂಗೂಲಿ, “ಏನು ನಡೆದೆಯೋ ಅದು ತಪ್ಪು. ಆದರೆ, ಇಂತಹ ಘಟನೆಗಳು ಪ್ರಪಂಚದಾದ್ಯಂತ ನಡೆಯುತ್ತದೆ. ಇದನ್ನೇ ಗುರಿಯಾಗಿಸಿಕೊಂಡು ಕೇವಲ ಪಶ್ಚಿಮ ಬಂಗಾಳದ ಸುರಕ್ಷತೆಯನ್ನು ಪ್ರಶ್ನೆ ಮಾಡುವುದು ಸರಿಯಲ್ಲ. ಭಾರತ ಒಂದು ಅದ್ಭುತ ದೇಶ. ಪಶ್ಚಿಮ ಬಂಗಾಳ ಕೂಡ ಒಂದು ಶ್ರೇಷ್ಠ ರಾಜ್ಯ. ಇದೊಂದು ಪ್ರಕರಣದಿಂದ ಇಡೀ ರಾಜ್ಯವನ್ನು ಬೊಟ್ಟು ಮಾಡಿ ದೂಷಿಸುವುದು ಸರಿಯಲ್ಲ. ಈ ಪ್ರಕರಣದಲ್ಲಿ ಆರೋಪಿ ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಗಂಗೂಲಿ ಹೇಳಿದ್ದರು.

ಗಂಗೂಲಿ ನೀಡಿದ ಈ ಹೇಳಿಕೆಯ ವಿಡಿಯೋ ತುಣಕನ್ನು ತಮ್ಮ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಶೇರ್​ ಮಾಡಿರುವ ಹಸೀನಾ ಜಹಾನ್​, “ಸೌರವ್ ಗಂಗೂಲಿಯಂತಹವರಿಗೆ ಮಹಿಳೆಯರು ಬಹುಶಃ ಮನರಂಜನೆ ಮತ್ತು ಮೋಜಿನ ವಸ್ತುವಾಗಿದೆ. ಆದ್ದರಿಂದಲೇ ವಿಶ್ವದೆಲ್ಲೆಡೆ ಇಂತಹ ಅತ್ಯಾಚಾರದಂತಹ ಘಟನೆಗಳು ನಡೆಯುತ್ತಿದೆ. ಪಶ್ಚಿಮ ಬಂಗಾಳ ಮತ್ತು ಭಾರತ ಮಹಿಳೆಯರಿಗೆ ಸುರಕ್ಷಿತವಾಗಿದೆ. ನಿಜವಾಗಿ ಸೌರವ್, ನಿಮ್ಮ ಸ್ವಂತ ಮಗಳು ಸುರಕ್ಷಿತವಾಗಿದ್ದಾರೆ ಮತ್ತು ಅದಕ್ಕಾಗಿಯೇ ನೀವು ಇತರರ ಸುರಕ್ಷತೆಯ ಬಗ್ಗೆ ಚಿಂತಿಸುವುದಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ Hasin Jahan: ‘ನಾಯಿಗಳ ದಂಡು’… ಎಂದು ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ವಿಚ್ಛೇದಿತ ಪತ್ನಿ?; ವಿಡಿಯೊ ವೈರಲ್​

16 ಆಗಸ್ಟ್ 2018 ರಂದು, ಹಸಿನ್ ಜಹಾನ್(Hasin Jahan) ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.

2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಇದೇ ವರ್ಷದ ಜನವರಿಯಲ್ಲಿ ತೀರ್ಪು ಪ್ರಕಟಿಸಿ, ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್​ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿತ್ತು. ಕೋರ್ಟ್​ ಸೂಚನೆಯಂತೆ ಶಮಿ ಅವರು ಈ ಮೊತ್ತವನ್ನು ನೀಡಿತ್ತಲೇ ಬರುತ್ತಿದ್ದಾರೆ.

Exit mobile version