Hasin Jahan: ಮೊಹಮ್ಮದ್​ ಶಮಿ ಕುಟುಂಬದ ವಿರುದ್ಧ ವ್ಯಂಗ್ಯವಾಡಿದ ವಿಚ್ಛೇದಿತ ಪತ್ನಿ - Vistara News

ಕ್ರೀಡೆ

Hasin Jahan: ಮೊಹಮ್ಮದ್​ ಶಮಿ ಕುಟುಂಬದ ವಿರುದ್ಧ ವ್ಯಂಗ್ಯವಾಡಿದ ವಿಚ್ಛೇದಿತ ಪತ್ನಿ

Hasin Jahan: ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಹಸೀನ್ ಜಹಾನ್, ಶಮಿ ಮಾತ್ರವಲ್ಲ ಅವರ ಕುಟುಂಬ ಸದಸ್ಯರು ಕೂಡ ನನಗೆ ಅತಿಯಾದ ಹಿಂಸೆ ನೀಡಿದ್ದಾರೆ, ಆದರೆ, ನಾನು ಇನ್ನೂ ನಾಶವಾಗಿಲ್ಲ ಎಂದು ಬರೆಯುವ ಮೂಲಕ ಶಮಿ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.

VISTARANEWS.COM


on

Hasin Jahan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ(Mohammed Shami) ಅವರ ವಿರುದ್ಧ ಸದಾ ಒಂದಿಲ್ಲೊಂದು ಕಾರಣಗಳಿಂದ ಟೀಕಿಸುತ್ತಿರುವ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್(Hasin Jahan) ಈ ಬಾರಿ ಶಮಿಯ ಕುಟುಂಬದ ವಿರುದ್ಧ ಅನಗತ್ಯ ಟೀಕೆ ಮಾಡಿದ್ದಾರೆ.

ಹೌದು, ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಹಸೀನ್ ಜಹಾನ್, ಶಮಿ ಮಾತ್ರವಲ್ಲ ಅವರ ಕುಟುಂಬ ಸದಸ್ಯರು ಕೂಡ ನನಗೆ ಅತಿಯಾದ ಹಿಂಸೆ ನೀಡಿದ್ದಾರೆ, ಆದರೆ, ನಾನು ಇನ್ನೂ ನಾಶವಾಗಿಲ್ಲ ಎಂದು ಬರೆಯುವ ಮೂಲಕ ಶಮಿ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.

ಮೂವರು ಮಹಿಳೆಯರು ಹೊಂಡವೊಂದಕ್ಕೆ ಬಿದ್ದು ಮೇಲೆ ಬರಲು ಸಾಧ್ಯವಾಗದೇ ಇದ್ದಾಗ ಒಂದು ಮಹಿಳೆ ತನ್ನ ತಲೆಯ ಮೇಲೆ ಮರದ ತುಂಡನ್ನು ಹೊತ್ತುಕೊಂಡು ಉಳಿದ ಇಬ್ಬರು ಮಹಿಳೆಯರನ್ನು ರಕ್ಷಿಸಿ ಮೇಲಕ್ಕೆ ಹೋಗುವಂತೆ ಸಹಾಯ ಮಾಡುತ್ತಾಳೆ. ಬಳಿಕ ತಾನು ಮೇಲೆ ಬರಲು ಸಹಾಯ ಯಾಚಿಸಿದಾಗ ಮೇಲಿದ್ದ ಇಬ್ಬರು ಮಹಿಳೆಯರು ಬಂಡೆಕಲ್ಲುಗಳನ್ನು ಕೆಳಗೆ ಹಾಕಿ ಈಕೆಯನ್ನು ನಾಶ ಪಡಿಸಲು ಮುಂದಾಗುತ್ತಾರೆ. ಹೇಗೋ ಕಷ್ಟಗಳನ್ನು ಸಹಿಸಿಕೊಂಡು ಮೇಲೆ ಬಂದ ತಕ್ಷಣ ತನಗೆ ಮೋಸ ಮಾಡಿದ ಇಬ್ಬರು ಮಹಿಳೆಯರು ನಿಂತಿದ್ದ ಜಾಗ ಕುಸಿದು ಬಿದ್ದು ಇಬ್ಬರು ಪ್ರಪಾತಕ್ಕೆ ಬೀಳುತ್ತಾರೆ. ಈ ವಿಡಿಯೊವನ್ನು ಹಂಚಿಕೊಂಡಿರುವ ಹಸೀನ್ ಜಹಾನ್ ತನ್ನನ್ನು ಶಮಿ ಕುಟುಂಬ ನಾಶ ಪಡೆಸಲು ಮುಂದಾಗಿತ್ತು. ಆದರೆ, ನಾನು ನಾಶವಾಗಿಲ್ಲ ಎಂದು ಎಂದು ಬರೆದುಕೊಂಡು ಶಮಿ ಕುಟುಂಬ ತನಗೆ ಚಿತ್ರಹಿಂಸೆ ನೀಡಿತ್ತು ಎಂದು ಹೇಳಿಕೊಂಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಹಸೀನ್ ಜಹಾನ್ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಣ್ಣು ಮಿಟುಕಿಸುವ ಒಂದು ನಿಮಿಷದ ವಿಡಿಯೊ ಹಂಚಿಕೊಂಡಿರುವ ಹಸೀನ್ ಜಹಾನ್, ನಾಯಿಗಳ ದಂಡು ಹೆಣ್ಣು ಮಕ್ಕಳ ಹಿಂದಿನಿಂದ ಮಾತ್ರ ಬೊಗಳುತ್ತದೆ ಎಂದು ಬರೆದುಕೊಂಡಿದ್ದರು.

ಕೆಲವು ತಿಂಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ರೋಹಿತ್​ ಶರ್ಮ ಅವರು ತಮ್ಮ ಪುಟ್ಟ ಮಗಳು ಸಮೈರಾ ತೊಡೆ ಮೇಲೆ ಹಾಯಾಗಿ ಮಲಗಿರುವ ಫೋಟೊ ಹಂಚಿಕೊಂಡಿದ್ದ ಹಸೀನ್ ಜಹಾನ್, ಹೆಚ್ಚಿನ ತಂದೆಯಂದಿರು ತಮ್ಮ ಪುಟ್ಟ ಮಗಳನ್ನು ದೇವರಂತೆ ಕಂಡು ಅವರಿಂದ ಶಾಂತಿ ಕಂಡುಕೊಳ್ಳುತ್ತಾರೆ. ಮತ್ತು ಕೆಲವು ತಂದೆಯರು ವೇಶ್ಯೆಯರ ಮಡಿಲಲ್ಲಿ!. ಅಲ್ಲಾಹು ಯಾವುದೇ ಮಗಳಿಗೆ ಇಂತಹ ಗುಣವಿಲ್ಲದ ತಂದೆಯನ್ನು ಎಂದಿಗೂ ನೀಡದಿರಲಿ. ಆಮೀನ್. ನನ್ನ ಪುಟ್ಟ ಮಗಳಿಗೆ ತಾಳ್ಮೆಯನ್ನು ನೀಡುವಂತೆ ನಾನು ಅಲ್ಲಾಹುವಿನನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್​ ಮಾಡಿ ಶಮಿಯನ್ನು ಅನಗತ್ಯವಾಗಿ ಕೆಣಕ್ಕಿದ್ದರು.

ಇದನ್ನೂ ಓದಿ Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

16 ಆಗಸ್ಟ್ 2018 ರಂದು, ಹಸಿನ್ ಜಹಾನ್(Hasin Jahan) ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.

ಜೀವನಾಂಶ ನೀಡುತ್ತಿರುವ ಶಮಿ

2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಇದೇ ವರ್ಷದ ಜನವರಿಯಲ್ಲಿ ತೀರ್ಪು ಪ್ರಕಟಿಸಿ, ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್​ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿತ್ತು. ಕೋರ್ಟ್​ ಸೂಚನೆಯಂತೆ ಶಮಿ ಅವರು ಈ ಮೊತ್ತವನ್ನು ನೀಡಿತ್ತಲೇ ಬರುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Paris Olympics: ಸೆಮಿ ಫೈನಲ್​ ಪ್ರವೇಶಿಸಿದ ವಿನೇಶ್ ಫೋಗಟ್

Paris Olympics: ಪ್ಯಾರಿರ್ಸ್​ ಒಲಿಂಪಿಕ್ಸ್​ ಆರಂಭಕ್ಕೇ ಕೆಲವೇ ದಿನ ಬಾಕಿ ಇರುವಾಗ ಮ್ಯಾಡ್ರಿಡ್​ನಲ್ಲಿ ನಡೆದಿದ್ದ ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್(Grand Prix) ಕುಸ್ತಿ ಟೂರ್ನಿಯಲ್ಲಿ ವಿನೇಶ್ ಫೋಗಟ್ ಚಿನ್ನದ ಪದಕ ಗೆದ್ದು ಬೀಗಿದ್ದರು.

VISTARANEWS.COM


on

Paris Olympics
Koo

ಪ್ಯಾರಿಸ್​: ಭಾರತೀಯ ಕುಸ್ತಿ ಒಕ್ಕೂಟದ ವಿರುದ್ಧ ತೊಡೆತಟ್ಟಿ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ(Kartavya Path) ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದ ಕುಸ್ತಿಪಟು ವಿನೇಶ್ ಫೋಗಟ್(Vinesh Phogat), ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ 50 ಕೆಜಿ ಮಹಿಳಾ ಸಿಂಗಲ್ಸ್​ ವಿಭಾಗದಲ್ಲಿ ಸೆಮಿಫೈನಲ್​ ಪ್ರವೇಶಿಸಿಸಿದ್ದಾರೆ. ಈ ಮೂಲಕ ಪದಕ ಭರವಸೆಯೊಂದನ್ನು ಮೂಡಿಸಿದ್ದಾರೆ.

ಮಂಗಳವಾರ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಈ ಗೆಲುವು ಕಂಡಾಗಲೇ ವಿನೇಶ್​ ಈ ಬಾರಿ ಪದಕ ಗೆಲ್ಲುವುದು ಖಚಿತ ಎಂದು ನಿರ್ಧರಿಸಲಾಗಿತ್ತು. ಇದೀಗ ಸೆಮಿ ಹಂತಕ್ಕೇರಿರುವ ಅವರು ಪದಕವೊಂದನ್ನು ಖಾತ್ರಿ ಪಡಿಸಿದ್ದಾರೆ.ಪ್ಯಾರಿರ್ಸ್​ ಒಲಿಂಪಿಕ್ಸ್​ ಆರಂಭಕ್ಕೇ ಕೆಲವೇ ದಿನ ಬಾಕಿ ಇರುವಾಗ ಮ್ಯಾಡ್ರಿಡ್​ನಲ್ಲಿ ನಡೆದಿದ್ದ ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್(Grand Prix) ಕುಸ್ತಿ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದು ಬೀಗಿದ್ದರು.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

Continue Reading

ಕ್ರೀಡೆ

Paris Olympics: ಫೈನಲ್​ ಪ್ರವೇಶಿಸಿದ ನೀರಜ್​ ಚೋಪ್ರಾ; ಕುಸ್ತಿಯಲ್ಲಿ ವಿನೇಶ್ ಕ್ವಾರ್ಟರ್​ ಫೈನಲ್​ಗೆ

Paris Olympics: ‘ಬಿ’ ವಿಭಾಗದ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿದ ನೀರಜ್​ ತಮ್ಮ ಮೊದಲ ಎಸೆತವನ್ನೇ 89.34 ಮೀ. ದೂರ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದರು. ಇವರ ಜತೆ ಪಾಕಿಸ್ತಾನದ ಅರ್ಷದ್ ನದೀಮ್ 86.59 ಮೀ. ಸಾಧನೆಯೊಂದಿಗೆ ಫೈನಲ್​ ಟಿಕೆಟ್​ ಪಡೆದರು.

VISTARANEWS.COM


on

Paris Olympics
Koo

ಪ್ಯಾರಿಸ್​: ಟೋಕಿಯೊ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ನೀರಜ್​ ಚೋಪ್ರಾ(Neeraj Chopra) ಅವರು ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಟೂರ್ನಿಯಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಇಂದು(ಮಂಗಳವಾರ) ನಡೆದ ಜಾವೆಲಿನ್​ ಅರ್ಹತಾ ಸುತ್ತಿನ ಪಂದ್ಯದಲ್ಲಿ 89.34 ಮೀ. ದೂರ ಜಾವೆಲಿನ್​ ಎಸೆದು ಫೈನಲ್​ ಪ್ರವೇಶಿಸಿದ್ದಾರೆ. ಆದರೆ ಭಾರತದ ಮತ್ತೋರ್ವ ಜಾವೆಲಿನ್‌ ಎಸೆತಗಾರ ಕಿಶೋರ್‌ ಜೇನಾ 9ನೇ ಸ್ಥಾನಿಯಾಗಿ ನಿರಾಸೆ ಮೂಡಿಸಿದರು.

‘ಬಿ’ ವಿಭಾಗದ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿದ ನೀರಜ್​ ತಮ್ಮ ಮೊದಲ ಎಸೆತವನ್ನೇ 89.34 ಮೀ. ದೂರ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದರು. ಇವರ ಜತೆ ಪಾಕಿಸ್ತಾನದ ಅರ್ಷದ್ ನದೀಮ್ 86.59 ಮೀ. ಸಾಧನೆಯೊಂದಿಗೆ ಫೈನಲ್​ ಟಿಕೆಟ್​ ಪಡೆದರು.

89.34 ಮೀ. ದೂರ ಜಾವೆಲಿನ್​ ಎಸೆದದ್ದು ನೀರಜ್​ ಅವರ 2ನೇ ಶ್ರೇಷ್ಠ ಸಾಧನೆಯಾಗಿದೆ. ಅವರ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಟೋಕಿಯೊದಲ್ಲಿ 87.58 ಮೀ. ಸಾಧನೆಯೊಂದಿಗೆ ಚಿನ್ನ ಗೆದ್ದಿದ್ದರು. ಆಗಸ್ಟ್​ 8ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ನೀರಜ್​ ಚೋಪ್ರಾ ಚಿನ್ನದ ಪದಕ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ‘ಎ’ ವಿಭಾಗದಲ್ಲಿ ಜರ್ಮನಿಯ ಜೂಲಿಯನ್ ವೆಬರ್ 87.76 ಮೀ. ದೂರ ಎಸೆದು ಮೊದಲ ಸ್ಥಾನದೊಂದಿಗೆ ಫೈನಲ್​ ಪ್ರವೇಶಿಸಿದ್ದರು.

ಕಾಶಿನಾಥ್ ನಾಯ್ಕ್ ಅವರು ನೀರಜ್ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಆತ್ಮವಿಶ್ವಾಸದಿಂದ ಈ ಮಾತನ್ನು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿನಾಥ್, “ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದಾರೆ.

ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ವಿನೇಶ್​


ಭಾರತ ಮಹಿಳಾ ಕುಸ್ತಿಪಟು ವಿನೇಶ್​ ಪೋಗಟ್​ 50 ಕೆಜಿ ವಿಭಾಗದಲ್ಲಿ ಇಂದು ನಡೆದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದಾರೆ. ಇಂದೇ ನಡೆಯುವ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್​ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ ಸೆಣಸಾಡಲಿದ್ದಾರೆ.

Continue Reading

ಕ್ರೀಡೆ

IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

IND vs SL: ರಾಹುಲ್​ ಬ್ಯಾಟಿಂಗ್​ ವೈಫಲ್ಯಕ್ಕೆ ತಂಡದ ಕೆಲ ನಿರ್ಧಾರವೇ ಕಾರಣ ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ. ಅನುಭವಿ ಆಟಗಾರನಾಗಿದ್ದರೂ ಕೂಡ ಅವರನ್ನು 7ನೇ ಕ್ರಮಾಂಕದಲ್ಲಿ ಆಡಿಸಿದ್ದು ಕೂಡ ಅವರ ವೈಫಲ್ಯಕ್ಕೆ ಕಾರಣ ಎಂದು ಅನೇಕ ಮಾಜಿ ಆಟಗಾರರು ಟೀಕೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

IND vs SL
Koo

ಕೊಲಂಬೊ: ಶ್ರೀಲಂಕಾ(IND vs SL) ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಹೀನಾಯವಾ್ಗಿ ಸೋಲು ಕಂಡಿದ್ದ ಭಾರತ ನಾಳೆ ನಡೆಯುವ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯಕ್ಕೆ ತಂಡದಲ್ಲಿ ಹಲವು ಬದಲಾವಣೆ ಮಾಡುವ ಸಾಧ್ಯತೆ ಕಂಡುಬಂದಿದೆ. ಮೂಲಗಳ ಪ್ರಕಾರ ಆಯ್ಕೆ ಸಮಿತಿ ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರನ್ನು ಕೈ ಬಿಟ್ಟು ರಿಷಭ್​ ಪಂತ್​ಗೆ(Rishabh Pant) ಅವಕಾಶ ನೀಡಲಿದೆ ಎನ್ನಲಾಗಿದೆ.

ರಾಹುಲ್​ ಕಳೆದ ದ್ವಿತೀಯ ಪಂದ್ಯದಲ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದರು. ಮೊದಲ ಪಂದ್ಯದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ್ದರು. ಇದೀಗ ಸರಣಿ ಸೋಲಿನ ಭೀತಿಯಲ್ಲಿರುವ ಭಾರತ ತಂಡ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಎದುರಾಳಿ ಬೌಲರ್​ಗಳ ಲೆಕ್ಕಾಚಾರವನ್ನು ಬುಡಮೇಲು ಮಾಡುವಂತಹ ಪಂತ್​ ಅವರನ್ನು ಮೂರನೇ ಪಂದ್ಯದಲ್ಲಿ ಆಡಿಸಲು ತಂಡ ಮುಂದಾಗಿದೆ ಎಂದು ತಿಳಿದುಬಂದಿದೆ.

ರಾಹುಲ್​ ಬ್ಯಾಟಿಂಗ್​ ವೈಫಲ್ಯಕ್ಕೆ ತಂಡದ ಕೆಲ ನಿರ್ಧಾರವೇ ಕಾರಣ ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ. ಅನುಭವಿ ಆಟಗಾರನಾಗಿದ್ದರೂ ಕೂಡ ಅವರನ್ನು 7ನೇ ಕ್ರಮಾಂಕದಲ್ಲಿ ಆಡಿಸಿದ್ದು ಕೂಡ ಅವರ ವೈಫಲ್ಯಕ್ಕೆ ಕಾರಣ ಎಂದು ಅನೇಕ ಮಾಜಿ ಆಟಗಾರರು ಟೀಕೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲ ನೆಟ್ಟಿಗರು ರಾಹುಲ್​ ವಿಷಯದಲ್ಲಿ ಮಾತ್ರ ಏಕೆ ಹೀಗಾಗುತ್ತಿದೆ ಎಂದು ಬಿಸಿಸಿಐ ಮತ್ತು ಆಯ್ಕೆ ಸಮಿತಿಗೆ ಪ್ರಶ್ನೆ ಮಾಡಿದ್ದಾರೆ.

ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನ ಪಿಚ್​ ಸಿನ್ನರ್​ಗಳಿಗೆ ಹೆಚ್ಚಿನ ನೆರವು ನೀಡುವ ಕಾರಣ ಶಿವಂ ದುಬೆ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಅವರ ಬದಲಿಗೆ ಸ್ಪಿನ್​ ಆಲ್​ರೌಂಡರ್​ ಆಗಿರುವ ರಿಯಾನ್ ಪರಾಗ್ ಸ್ಥಾನ ಪಡೆಯಬಹುದು. ಟಿ20 ಸರಣಿಯಲ್ಲಿ ಬ್ಯಾಟಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಪರಾಗ್​ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಇವರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ.

ಇದನ್ನೂ ಓದಿ IND vs SL ODI : ಎರಡನೇ ಏಕ ದಿನ ಪಂದ್ಯದಲ್ಲಿ ಭಾರತ ತಂಡಕ್ಕೆ32 ರನ್ ಸೋಲು, ಸರಣಿಯಲ್ಲಿ ಲಂಕಾಗೆ ಮುನ್ನಡೆ

ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್​ ಪರ ಘಾತಕ ಬೌಲಿಂಗ್​ ಮೂಲಕ ಹಲವು ವಿಕೆಟ್​ ಕಿತ್ತಿದ್ದ ಹರ್ಷಿತ್ ರಾಣಾ ಕೂಡ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆ ಇದೆ. ದುಬಾರಿಯಾಗಿ ಕಂಡು ಬರುತ್ತಿರುವ ಮೊಹಮ್ಮದ್​ ಸಿರಾಜ್​ ಬದಲಿಗೆ ಇವರು ಆಡುವ ಸಾಧ್ಯತೆ ಇದೆ. ಗಂಭೀರ್​ ಅವರ ಮಾರ್ಗದರ್ಶನಲ್ಲಿ ಆಡಿದ ಅನುಭವ ಕೂಡ ಹರ್ಷಿತ್ ರಾಣಾಗೆ ಇದೆ.

ಮೂರನೇ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್​ ಪಂತ್​ (ವಿಕೀ), ರಿಯಾನ್​ ಪರಾಗ್​, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.

Continue Reading

ಕ್ರೀಡೆ

PRO KABADDI LEAGUE : ಪ್ರೊ ಕಬಡ್ಡಿ ಲೀಗ್ ಉಳಿಸಿಕೊಂಡ ಆಟಗಾರರ ಪಟ್ಟಿ ಪ್ರಕಟ! ಪವನ್ ಸೆಹ್ರಾವತ್, ಪ್ರದೀಪ್ ನರ್ವಾಲ್ ಹರಾಜಿಗೆ

PRO KABADDI LEAGUE : ದಬಾಂಗ್ ಡೆಲ್ಲಿ ಕೆಸಿ ತನ್ನ ರೈಡರ್ ಜೋಡಿ ಅಶು ಮಲಿಕ್ ಮತ್ತು ನವೀನ್ ಕುಮಾರ್ ಅವರನ್ನು ಉಳಿಸಿಕೊಂಡಿದೆ. ಸೀಸನ್ 10 ರಲ್ಲಿ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿ ವಿಜೇತ ಅಸ್ಲಂ ಇನಾಮ್ದಾರ್ ಅವರನ್ನು ಪುಣೇರಿ ಪಲ್ಟನ್ ಉಳಿಸಿಕೊಂಡಿದೆ. ಜೈಪುರ ಪಿಂಕ್ ಪ್ಯಾಂಥರ್ಸ್ ತನ್ನ ಸ್ಟಾರ್ ರೈಡರ್ ಅರ್ಜುನ್ ದೇಶ್ವಾಲ್ ಅವರನ್ನು ಉಳಿಸಿಕೊಂಡಿದೆ.

VISTARANEWS.COM


on

PRO KABADDI LEAGUE
Koo

ಬೆಂಗಳೂರು: ಪ್ರೊ ಕಬಡ್ಡಿ ಲೀಗ್ (PRO KABADDI LEAGUE) 11ನೇ ಆವೃತ್ತಿಗೆ ‘ಎಲೈಟ್ ಉಳಿಸಿಕೊಂಡ ಆಟಗಾರರು’, ‘ಉಳಿಸಿಕೊಂಡ ಯುವ ಆಟಗಾರರು’ ಮತ್ತು ‘ಅಸ್ತಿತ್ವದಲ್ಲಿರುವ ಹೊಸ ಯುವ ಆಟಗಾರರ’ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಪ್ರತಿಯೊಂದು ಫ್ರಾಂಚೈಸಿಗಳು ಪ್ರಬಲ ಆಟಗಾರರ ಗುಂಪನ್ನು ಉಳಿಸಿಕೊಂಡಿವೆ ಮತ್ತು ಪ್ರೊ ಕಬಡ್ಡಿ ಲೀಗ್ ಸೀಸನ್ 11 ಆಟಗಾರರ ಹರಾಜಿನಲ್ಲಿ ಬಲವಾದ ಘಟಕಗಳನ್ನು ನಿರ್ಮಿಸಲು ನೋಡುತ್ತಿವೆ. 2024ರ ಆಗಸ್ಟ್ 15 ಮತ್ತು 16ರಂದು ನಡೆಯಲಿರುವ ಪ್ರೊ ಕಬಡ್ಡಿ ಲೀಗ್ 11ನೇ ಆವೃತ್ತಿಯ ಆಟಗಾರರ ಹರಾಜಿನಲ್ಲಿ ಪವನ್ ಶೆರಾವತ್ ಮತ್ತು ಪ್ರದೀಪ್ ನರ್ವಾಲ್ ಅವರಂತಹ ಸ್ಟಾರ್ ಆಟಗಾರರು ಪಾಲ್ಗೊಳ್ಳಲಿದ್ದಾರೆ.

ದಬಾಂಗ್ ಡೆಲ್ಲಿ ಕೆಸಿ ತನ್ನ ರೈಡರ್ ಜೋಡಿ ಅಶು ಮಲಿಕ್ ಮತ್ತು ನವೀನ್ ಕುಮಾರ್ ಅವರನ್ನು ಉಳಿಸಿಕೊಂಡಿದೆ. ಸೀಸನ್ 10 ರಲ್ಲಿ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿ ವಿಜೇತ ಅಸ್ಲಂ ಇನಾಮ್ದಾರ್ ಅವರನ್ನು ಪುಣೇರಿ ಪಲ್ಟನ್ ಉಳಿಸಿಕೊಂಡಿದೆ. ಜೈಪುರ ಪಿಂಕ್ ಪ್ಯಾಂಥರ್ಸ್ ತನ್ನ ಸ್ಟಾರ್ ರೈಡರ್ ಅರ್ಜುನ್ ದೇಶ್ವಾಲ್ ಅವರನ್ನು ಉಳಿಸಿಕೊಂಡಿದೆ.

ಎಲೈಟ್ ರಿಟೈನ್ಡ್ ಪ್ಲೇಯರ್ಸ್ (ಇಆರ್ ಪಿ) ವಿಭಾಗದಲ್ಲಿ 22, ಉಳಿಸಿಕೊಂಡ ಯುವ ಆಟಗಾರರ (ಆರ್​ವೈಪಿ) ವಿಭಾಗದಲ್ಲಿ 26 ಮತ್ತು ಅಸ್ತಿತ್ವದಲ್ಲಿರುವ ಹೊಸ ಯುವ ಆಟಗಾರರ (ಇಎನ್​​ವೈಪಿ) ವಿಭಾಗದಲ್ಲಿ 40 ಸೇರಿದಂತೆ ಒಟ್ಟು 88 ಆಟಗಾರರನ್ನು ಮೂರು ವಿಭಾಗಗಳಲ್ಲಿ ಉಳಿಸಿಕೊಳ್ಳಲಾಗಿದೆ. ಸ್ಟಾರ್ ಆಟಗಾರರಾದ ಪವನ್ ಶೆರಾವತ್, ಪರ್ದೀಪ್ ನರ್ವಾಲ್, ಮಣಿಂದರ್ ಸಿಂಗ್, ಫಝೆಲ್ ಅತ್ರಾಚಲಿ ಮತ್ತು ಮೊಹಮದ್ರೆಜಾ ಶಡ್ಲೋಯಿ ಚಿಯಾನೆ ಅವರನ್ನು ಬಿಡುಗಡೆ ಮಾಡಲಾಗಿದೆ. ಆಟಗಾರರು 2024 ರ ಆಗಸ್ಟ್ 15 ರಿಂದ 16 ರವರೆಗೆ ಮುಂಬೈನಲ್ಲಿ ನಡೆಯಲಿರುವ ಪಿಕೆಎಲ್ ಸೀಸನ್ 11 ಆಟಗಾರರ ಹರಾಜಿನಲ್ಲಿ ಹರಾಜಿಗೆ ಒಳಗಾಗಲಿದ್ದಾರೆ.

ಇದನ್ನೂ ಓದಿ: Dinesh Karthik : ದಕ್ಷಿಣ ಆಫ್ರಿಕಾದ ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್​ ತಂಡ ಸೇರಿದ ದಿನೇಶ್ ಕಾರ್ತಿಕ್​

ಪಿಕೆಎಲ್ ಸೀಸನ್ 11 ಆಟಗಾರರ ಹರಾಜಿನಲ್ಲಿ ದೇಶೀಯ ಮತ್ತು ವಿದೇಶಿ ಆಟಗಾರರನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗುವುದು: ವರ್ಗ ಎ, ಬಿ, ಸಿ ಮತ್ತು ಡಿ. ಆಟಗಾರರನ್ನು ಪ್ರತಿ ವಿಭಾಗದಲ್ಲಿ ‘ಆಲ್ ರೌಂಡರ್ಸ್’, ‘ಡಿಫೆಂಡರ್ಸ್’ ಮತ್ತು ‘ರೈಡರ್ಸ್’ ಎಂದು ಉಪವಿಭಜಿಸಲಾಗುವುದು.

ಪ್ರತಿ ವಿಭಾಗದ ಮೂಲ ಬೆಲೆ ಎ – 30 ಲಕ್ಷ ರೂ., ವರ್ಗ ಬಿ – 20 ಲಕ್ಷ ರೂ., ವರ್ಗ ಸಿ – 13 ಲಕ್ಷ ರೂ., ವರ್ಗ ಡಿ – 9 ಲಕ್ಷ ರೂ. ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2024 ರ ಎರಡು ಅಂತಿಮ ತಂಡಗಳ 24 ಆಟಗಾರರು ಸೇರಿದಂತೆ ಸೀಸನ್ 11 ಪ್ಲೇಯರ್ ಪೂಲ್ 500+ ಆಟಗಾರರನ್ನು ಒಳಗೊಂಡಿರುತ್ತದೆ. ಪ್ರತಿ ಫ್ರಾಂಚೈಸಿಗೆ ಲಭ್ಯವಿರುವ ಒಟ್ಟು ವೇತನ ಪರ್ಸ್ 5 ಕೋಟಿ ರೂಪಾಯಿ.

Continue Reading
Advertisement
Bangladesh unrest
ವಿದೇಶ1 min ago

Bangladesh Unrest: ಬಾಂಗ್ಲಾ ಸಂಸತ್‌ ವಿಸರ್ಜನೆ; ಮಾಜಿ ಪ್ರಧಾನಿ ಖಲೀದಾ ಜಿಯಾ ಜೈಲಿನಿಂದ ರಿಲೀಸ್‌

SSC Recruitment 2024
ಉದ್ಯೋಗ22 mins ago

SSC Recruitment 2024: ಗುಡ್‌ನ್ಯೂಸ್‌; 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Paris Olympics
ಕ್ರೀಡೆ33 mins ago

Paris Olympics: ಸೆಮಿ ಫೈನಲ್​ ಪ್ರವೇಶಿಸಿದ ವಿನೇಶ್ ಫೋಗಟ್

Money Guide
ಮನಿ-ಗೈಡ್46 mins ago

Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

Lalbagh Flower Show
ಕರ್ನಾಟಕ50 mins ago

Lalbagh Flower Show: ಆ.8ರಿಂದ 19ವರೆಗೆ ಲಾಲ್‌ಬಾಗ್‌ ಫ್ಲವರ್‌ ಶೋ; ಅನಾವರಣವಾಗಲಿದೆ ಭೀಮ ಸಂದೇಶ

Physical Abuse
ಬೆಂಗಳೂರು53 mins ago

Physical Abuse : ಬೆಂಗಳೂರಿನಲ್ಲಿ ಶಾಲಾ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ ಯುವಕ

Paris Olympics
ಕ್ರೀಡೆ1 hour ago

Paris Olympics: ಫೈನಲ್​ ಪ್ರವೇಶಿಸಿದ ನೀರಜ್​ ಚೋಪ್ರಾ; ಕುಸ್ತಿಯಲ್ಲಿ ವಿನೇಶ್ ಕ್ವಾರ್ಟರ್​ ಫೈನಲ್​ಗೆ

LK advani
ದೇಶ1 hour ago

L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

women PG bangalore
ಪ್ರಮುಖ ಸುದ್ದಿ2 hours ago

Women PG: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಇನ್ನು ಮುಂದೆ ಕಟ್ಟುನಿಟ್ಟಿನ ರೂಲ್ಸ್! ಫಾಲೋ ಮಾಡದಿದ್ದರೆ ಕೇಸ್

IND vs SL
ಕ್ರೀಡೆ2 hours ago

IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌