Year-ender | 2022ರಲ್ಲಿ ಭಾರತ ಕ್ರಿಕೆಟ್​ ಕ್ಷೇತ್ರದ ಏಳು ಬೀಳಿನ ಹಾದಿ ಹೀಗಿತ್ತು - Vistara News

New year 2023

Year-ender | 2022ರಲ್ಲಿ ಭಾರತ ಕ್ರಿಕೆಟ್​ ಕ್ಷೇತ್ರದ ಏಳು ಬೀಳಿನ ಹಾದಿ ಹೀಗಿತ್ತು

2022ರಲ್ಲಿ (Year-ender) ಭಾರತದ ಕ್ರಿಕೆಟ್​ ಕ್ಷೇತ್ರದಲ್ಲಿ ಆಶಾದಾಯಕ ಬೆಳವಣಿಗೆ ಸಂಭವಿಸಿಲ್ಲವಾದರೂ, ಕೆಲವೊಂದು ಖುಷಿಯ ಸಂಗತಿಗಳೂ ನಡೆದಿವೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಭಾರತದ ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್​ಗೆ ಅಗಣಿತ ಅಭಿಮಾನಿಗಳಿದ್ದಾರೆ. ಹೀಗಾಗಿ ಅದು ಅತ್ಯಂತ ಶ್ರೀಮಂತ ಹಾಗೂ ಜನಪ್ರಿಯ ಆಟ. ಕ್ರಿಕೆಟ್​ ಭಾರತೀಯರ ಜೀವಾಳ ಹಾಗೂ ಅದರಲ್ಲೇ ನೋವು, ನಲಿವುಗಳನ್ನು ಕಾಣುವವರಿದ್ದಾರೆ. ಹೀಗಾಗಿ ಪ್ರತಿ ಬಾರಿಯೂ ಕ್ರಿಕೆಟ್​ನಲ್ಲಿ ಏನು ನಡೆಯುತ್ತಿದೆ ಎಂದು ಗಮನಿಸುತ್ತಿರುತ್ತೇವೆ. ಅಂತೆಯೇ ಭಾರತ ಕ್ರಿಕೆಟ್ ಕಾರಿಡಾರ್​ನಲ್ಲಿ 2022ರಲ್ಲಿ (Year-ender) ಹಲವು ಏಳು, ಬೀಳುಗಳು ಸಂಭವಿಸಿವೆ. ಅದರ ಸಂಕ್ಷಿಪ್ತ ನೋಟ ಇಲ್ಲಿದೆ.

19ರ ವಯೋಮಿತಿಯ ವಿಶ್ವ ಕಪ್​

ವರ್ಷಾರಂಭದಲ್ಲಿ ನಡೆದ 19 ವರ್ಷದೊಳಗಿನವರ ಕ್ರಿಕೆಟ್​ ವಿಶ್ವ ಕಪ್​ನಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಕೋಚಿಂಗ್​ ಸಿಬ್ಬಂದಿ ಸೇರಿದಂತೆ ಭಾರತ ಬಳಗದ 11 ಮಂದಿ ಕೊರೊನಾ ಸೋಂಕಿಗೆ ಒಳಗಾದ ಹೊರತಾಗಿಯೂ ಯಶ್​ ಧುಲ್​ ನಾಯಕತ್ವದ ಭಾರತ ತಂಡ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯ ಸೋಲದೇ ವಿಶ್ವ ಕಿರೀಟ ತನ್ನದಾಗಿಸಿಕೊಂಡಿತ್ತು. ಇದೇ ವೇಳೆ 19ರ ವಯೋಮಿತಿಯ ತಂಡದ ಪ್ರಾಬಲ್ಯ ಮುಂದುವರಿಯಿತಲ್ಲದೆ, ಕಳೆದ 32 ಪಂದ್ಯಗಳಲ್ಲಿ ಕೇವಲ ನಾಲ್ಕು ಪಂದ್ಯಗಳನ್ನು ಸೋತ ಸಾಧನೆಯನ್ನೂ ಮಾಡಿದೆ.

ಟಿ20 ವಿಶ್ವ ಕಪ್​ನಲ್ಲಿ ನಿರಾಸೆ

ರೋಹಿತ್​ ಶರ್ಮ ನೇತೃತ್ವದ ಭಾರತ ತಂಡ ಟಿ20 ವಿಶ್ವ ಕಪ್​ ಗೆಲ್ಲುವ ಯೋಜನೆಯೊಂದಿಗೆ ಆಸ್ಟ್ರೇಲಿಯಾಗೆ ತೆರಳಿತ್ತು. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ವಿರೋಚಿತ ಜಯ ದಾಖಲಿಸಿದ ಹೊರತಾಗಿಯೂ ದಕ್ಷಿಣ ಆಫ್ರಿಕಾ ವಿರುದ್ಧ ಗುಂಪು ಹಂತದ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲು ಎದರಾಯಿತು. ಆದರೆ, ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ 10 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದಾಗ ಭಾರತೀಯರ ಹೃದಯವೇ ಒಡೆದು ಹೋಯಿತು. ಜತೆಗೆ ಒಂದು ದಶಕದ ಐಸಿಸಿ ಟ್ರೋಫಿಯ ಬರ ಮುಂದುವರಿಯಿತು.

ವಿರಾಟ್​ ಕೊಹ್ಲಿಯ ಸಿಕ್ಸರ್​

ಭಾರತ ತಂಡ ವಿಶ್ವ ಕಪ್​ ಗೆಲ್ಲದ ಹೊರತಾಗಿಯೂ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಬಾರಿಸಿದ ಸಿಕ್ಸರ್​ ಸ್ಮರಣೀಯ ಎನಿಸಿಕೊಂಡಿತು. ಹ್ಯಾರಿಸ್​ ರವೂಫ್​ ಅವರ ಎಸೆತಕ್ಕೆ ವಿರಾಟ್​ ಕೊಹ್ಲಿ ಬಾರಿಸಿದ ಸಿಕ್ಸರ್​ ಕ್ರಿಕೆಟ್​ ಇತಿಹಾಸದ ಅಪರೂಪದ ಹೊಡೆತ ಎಂದೇ ಖ್ಯಾತಿ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಅಜೇಯವಾಗಿ ಬಾರಿಸಿರುವ 82 ರನ್​ ಅವರ ವೃತ್ತಿ ಕ್ರಿಕೆಟ್​ನ ಶ್ರೇಷ್ಠ ಇನಿಂಗ್ಸ್​ಗಳಲ್ಲೊಂದು.

ಕಾಮನ್ವೆಲ್ತ್​ ಗೇಮ್ಸ್​ನಲ್ಲಿ ವನಿತೆಯರಿಗೆ ಸೋಲು

ಹರ್ಮನ್​ ಪ್ರೀತ್​ ಕೌರ್​ ನೇತೃತ್ವದ ಭಾರತ ಮಹಿಳೆಯರ ಕ್ರಿಕೆಟ್​ ತಂಡಕ್ಕೆ ಕಾಮನ್ವೆಲ್ತ್​ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆಲ್ಲುವ ಅವಕಾಶವಿತ್ತು. ಆಸ್ಟ್ರೇಲಿಯಾ ತಂಡದ ವಿರುದ್ಧದ ಫೈನಲ್​ನಲ್ಲಿ ಭಾರತ ತಂಡಕ್ಕೆ ಕೊನೇ 27 ಎಸೆತಗಳಲ್ಲಿ 41 ರನ್​ ಬೇಕಾಗಿತ್ತು. ಆದರೆ, ಆಲ್​ಔಟ್​ ಆದ ಭಾರತ ತಂಡ ಬಂಗಾರ ಗೆಲ್ಲುವ ಅವಕಾಶ ನಷ್ಟ ಮಾಡಿಕೊಂಡಿತು.

ಏಷ್ಯಾ ಕಪ್​ನಲ್ಲಿ ರೋಹಿತ್ ಬಳಗಕ್ಕೆ ಬೇಸರ

ಶ್ರೀಲಂಕಾದ ಆತಿಥ್ಯದಲ್ಲಿ ಈ ಬಾರಿ ಯುಎಇನಲ್ಲಿ ಏಷ್ಯಾ ಕಪ್​ ನಡೆದಿತ್ತು. ಪಾಕಿಸ್ತಾನ ವಿರುದ್ಧ ಹಾಗೂ ಶ್ರೀಲಂಕಾ ವಿರುದ್ಧ ಸೋಲುವ ಮೂಲಕ ಟೂರ್ನಿಯಿಂದಲೇ ಹೊರ ಬಿತ್ತು. ಇಲ್ಲಿಯೂ ಟೀಮ್ ಇಂಡಿಯಾದ ಅಭಿಮಾನಿಗಳಿಗೆ ಬೇಸರ ಮೂಡಿತು.

ದೀಪ್ತಿ ಶರ್ಮಾ ಮಂಕಡಿಂಗ್​ ವಿವಾದ

ಇಂಗ್ಲೆಂಡ್ ಪ್ರವಾಸ ಹೋಗಿದ್ದ ಭಾರತ ಮಹಿಳೆಯರ ತಂಡ ಏಕ ದಿನ ಸರಣಿಯನ್ನು ಗೆದ್ದುಕೊಂಡಿದೆ. ಆದಾಗ್ಯೂ ಸರಣಿಯ ಕೊನೇ ಪಂದ್ಯದಲ್ಲಿ ಇಂಗ್ಲೆಂಡ್​ ತಂಡ ಆಟಗಾರ್ತಿ ಚಾರ್ಲಿ ಡೀನ್​ ಅವರನ್ನು ಭಾರತದ ಅಲ್​ರೌಂಡರ್​ ದೀಪ್ತಿ ಶರ್ಮ ಮಂಕಡಿಂಗ್ ಮಾಡಿದ್ದರು. ಇದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಯಿತು. ಕ್ರೀಡಾ ಸ್ಫೂರ್ತಿಯ ಕುರಿತು ಜಾಗತಿಕ ಕ್ರಿಕೆಟ್​ ಕ್ಷೇತ್ರದಲ್ಲಿ ದೊಡ್ಡ ಚರ್ಚೆಯೇ ನಡೆಯಿತು.

ಸೂರ್ಯಕುಮಾರ್ ಅಬ್ಬರ

ತಡವಾಗಿ ಭಾರತ ತಂಡದಲ್ಲಿ ಅವಕಾಶ ಪಡೆದಿರುವ ಸ್ಫೋಟಕ ಬ್ಯಾಟರ್​ ಸೂರ್ಯಕುಮಾರ್​ ಯಾದವ್ ಟಿ20 ಕ್ರಿಕೆಟ್​ನಲ್ಲಿ ನಂಬರ್​ ಒನ್​ ಸ್ಥಾನ ಪಡೆದುಕೊಂಡರು. ಒಟ್ಟು 32 ಪಂದ್ಯಗಳಲ್ಲಿ ಆಡಿರುವ ಅವರು 1214 ರನ್​ ಬಾರಿಸಿದ್ದು, ಅದರಲ್ಲಿ ಎರಡು ಶತಕಗಳು ಸೇರಿಕೊಂಡಿವೆ. ಗರಿಷ್ಠ ರನ್​ 117. 10 ಅರ್ಧ ಶತಕ, 5 ಬಾರಿ 30 ಪ್ಲಸ್​ ರನ್​ ಬಾರಿಸಿದ ಅವರು 185.6 ಬ್ಯಾಟಿಂಗ್ ಸರಾಸರಿಯನ್ನು ಹೊಂದಿದ್ದಾರೆ.

ಮಿಥಾಲಿ ರಾಜ್​, ಜೂಲನ್​ ಗೋಸ್ವಾಮಿ ವಿದಾಯ

ಭಾರತ ಮಹಿಳೆಯರ ಕ್ರಿಕೆಟ್​ ತಂಡದ ದಿಗ್ಗಜರೆನಿಸಿಕೊಂಡಿರುವ ಮಿಥಾಲಿ ರಾಜ್​ ಹಾಗೂ ಜೂಲನ್ ಗೋಸ್ವಾಮಿ ಅವರು 2022ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದರು. ಇವರಿಬ್ಬರು ಎರಡು ದಶಕಗಳ ಕಾಲ ಭಾರತ ತಂಡದ ಕಾಯಂ ಸದಸ್ಯರಾಗಿದ್ದರು ಹಾಗೂ ಯುವ ಕ್ರಿಕೆಟಿಗರಿಗೆ ಆದರ್ಶವಾಗಿದ್ದರು ಕೂಡ.

ಜಸ್​ಪ್ರಿತ್​ ಬುಮ್ರಾ ವಿಶ್ವ ದಾಖಲೆ

ಇಂಗ್ಲೆಂಡ್​ನ ಎಜ್​ಬಾಸ್ಟನ್​ನಲ್ಲಿ ನಡೆದ ಟೆಸ್ಟ್​​ ಸರಣಿಯ ಪಂದ್ಯದಲ್ಲಿ ವೇಗಿ ಜಸ್​ಪ್ರಿತ್​ ಬುಮ್ರಾ ತಂಡದ ನಾಯಕತ್ವ ವಹಿಸಿದ್ದರು. ಭಾರತದ ಬ್ಯಾಟಿಂಗ್ ಇನಿಂಗ್ಸ್​ನಲ್ಲಿ ಎದುರಾಳಿ ತಂಡದ ಬೌಲರ್​ ಸ್ಟುವರ್ಟ್​ ಬ್ರಾಡ್ ಅವರ ಒಂದೇ ಓವರ್​ನಲ್ಲಿ 35 ರನ್​ ಬಾರಿಸಿದ್ದರು. ಇದರಲ್ಲಿ ವೈಡ್​ ಮತ್ತು ನೋ ಬಾಲ್​ ಸೇರಿಕೊಂಡಿದ್ದರೂ, ಟೆಸ್ಟ್​ ಕ್ರಿಕೆಟ್​ನ ಓವರ್​ ಒಂದರಲ್ಲಿ ದಾಖಲಾಗಿರುವ ಗರಿಷ್ಠ ರನ್​ ಎನಿಸಿಕೊಂಡಿದೆ.

ಇದನ್ನೂ ಓದಿ | Team India | ಟಿ20 ತಂಡದಿಂದ ಕೆ ಎಲ್​ ರಾಹುಲ್​ ಔಟ್?​; ಗಾಯದಿಂದ ಸುಧಾರಿಸದ ರೋಹಿತ್​ ಶರ್ಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

Continue Reading

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading
Advertisement
Sleeping Tips
ಆರೋಗ್ಯ18 mins ago

Sleeping Tips: ದಿನಕ್ಕೆಷ್ಟು ತಾಸು ನಿದ್ದೆ ಮಾಡುತ್ತೀರಿ ನೀವು? ಇದು ಗಂಭೀರ ವಿಷಯ!

Rishabh Pant
ಅಂಕಣ21 mins ago

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Karnataka Weather
ಕರ್ನಾಟಕ48 mins ago

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Tooth Decay
ಆರೋಗ್ಯ1 hour ago

Tooth Decay: ನಮ್ಮ ಈ ದುರಭ್ಯಾಸಗಳು ಹಲ್ಲಿನ ಹುಳುಕಿಗೆ ಕಾರಣವಾಗುತ್ತವೆ

dina bhavishya read your daily horoscope predictions for April 29 2024
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

love jihad
ಕರ್ನಾಟಕ7 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ7 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು8 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ8 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ8 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202414 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202417 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202419 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202419 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ22 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌