1. BJP Politics : ಬಿಎಸ್‌ವೈ ಸಭೆಗೆ ಸೋಮಶೇಖರ್, ಬೈರತಿ ಗೈರು; ಯಡಿಯೂರಪ್ಪ ನೀಡಿದ ಮಹತ್ವದ ಸುಳಿವೇನು?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (BJP Politics) ನಡೆಯುತ್ತಿರುವ ಆಪರೇಷನ್ ಹಸ್ತ ಚರ್ಚೆ, ಬಿಬಿಎಂಪಿ ಚುನಾವಣೆ ಸಿದ್ಧತೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ತಮ್ಮದೇ ನಿವಾಸದಲ್ಲಿ ಆಯೋಜಿಸಿದ ಬೆಂಗಳೂರಿನ ಶಾಸಕರ ಮಹತ್ವದ ಸಭೆಗೆ (Bangalore BJP MLAs meeting) ಮಹಾನಗರದ 16 ಶಾಸಕರ ಪೈಕಿ ಏಳು ಬಿಜೆಪಿ ಶಾಸಕರು ಗೈರುಹಾಜರಾಗಿದ್ದರು (Seven out of 16 BJP MLAs Absent). ಅದರಲ್ಲೂ ಮುಖ್ಯವಾಗಿ ಆಪರೇಷನ್ ಹಸ್ತದ (Operation Hasta) ಸುಳಿಯಲ್ಲಿ ಸಿಲುಕಿದವರೆಂದು ಹೇಳಲಾದ ಮಾಜಿ ಸಚಿವರಾದ ಎಸ್.ಟಿ ಸೋಮಶೇಖರ್ (ST Somashekhar) ಮತ್ತು ಬೈರತಿ ಬಸವರಾಜ್ (Byrathi Basavaraj) ಅವರು ಭಾಗವಹಿಸದೆ ಇರುವುದು ಭಾರಿ ಕುತೂಹಲ ಕೆರಳಿಸಿದೆ. ಸಭೆಯ ಬಳಿಕ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು ನಮ್ಮ ಶಾಸಕರು ಯಾರು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದರು. ಅದರ ಜತೆಗೇ ಒಬ್ಬಿಬ್ಬರು ಈ ಬಗ್ಗೆ ಯೋಚಿಸುತ್ತಿದ್ದಾರೆ, ಅದರ ಬಗ್ಗೆ ಮಾತಾಡುತ್ತೇವೆ ಎಂಬ ಸುಳಿವನ್ನೂ ಬಿಟ್ಟುಕೊಟ್ಟರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2.Ration Card : ಹೊಸ ರೇಷನ್ ಕಾರ್ಡ್ ಸದ್ಯಕ್ಕಿಲ್ಲ; ಗೃಹಲಕ್ಷ್ಮಿ, ಅನ್ನಭಾಗ್ಯದ ಕನಸು ನನಸು ದೂರ!
ಬೆಂಗಳೂರು: ಹೊಸ ರೇಷನ್ ಕಾರ್ಡ್‌ಗೆ (New Ration Card) ಅರ್ಜಿ ಕರೆಯುವ ತೀರ್ಮಾನವನ್ನು ರಾಜ್ಯ ಸರ್ಕಾರ (Congress Government) ತಾತ್ಕಾಲಿಕವಾಗಿ ಮುಂದೂಡಿದೆ. ಈ ಮೂಲಕ ಗೃಹಲಕ್ಷ್ಮಿ (Gruha lakshmi scheme), ಅನ್ನಭಾಗ್ಯ ಯೋಜನೆಯ (Anna Bhagya Scheme) ಫಲಾನುಭವಿಗಳಾಗಲು ಉತ್ಸುಕರಾಗಿದ್ದ ಅರ್ಹ ಫಲಾನುಭವಿಗಳ ಕನಸಿಗೆ ತಣ್ಣೀರೆರಚಿದಂತೆ ಆಗಿದೆ. ಶೀಘ್ರವೇ ಹೊಸ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್‌ಗೆ (APL and BPL Card) ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಹೇಳಿದ್ದರು. ಅಲ್ಲದೆ, ಯೆಲ್ಲೋ ಬೋರ್ಡ್ ಕಾರು (Yellow Board Car) ಹೊಂದಿರುವವರೂ ಬಿಪಿಎಲ್ ಪಡಿತರವನ್ನು ಪಡೆಯಬಹುದು ಎಂದು ಹೇಳಿದ್ದರು. ಈಗ ಸರ್ಕಾರ ಈ ನಿರ್ಧಾರದಿಂದ ಸ್ವಲ್ಪ ಹಿಂದೆ ಸರಿದಂತೆ ಕಾಣುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Lok Sabha Election 2024: ಎಲ್‌ಪಿಜಿ ಬೆಲೆ ಇಳಿಕೆ, ಕಿಸಾನ್ ಸಮ್ಮಾನ್ ನಿಧಿ ಹೆಚ್ಚಳ; ಚುನಾವಣೆ ಮುನ್ನ ಮೋದಿ ಗುಡ್ ನ್ಯೂಸ್
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಎಂಬ ಒಕ್ಕೂಟ ರಚಿಸಿದ ಬೆನ್ನಲ್ಲೇ ಎನ್‌ಡಿಎ ಕೂಡ ಮೈತ್ರಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದೆ. ಇದರ ಮಧ್ಯೆಯೇ ಸಾರ್ವತ್ರಿಕ ಚುನಾವಣೆಯಲ್ಲಿ (Lok Sabha Election 2024) ಜನರ ಮತ ಸೆಳೆಯಲು ‘ಬೆಲೆ ಇಳಿಕೆ’ಯ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಹರ್ ಘರ್ ಜಲ್ (Har Ghar Jal) ಯೋಜನೆ ಅಡಿಯಲ್ಲಿ ಕ್ಷಿಪ್ರವಾಗಿ ಮನೆಗಳಿಗೆ ನಲ್ಲಿ ನೀರು ಪೂರೈಕೆ, ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆ ಸೇರಿ ಹಲವು ಯೋಜನೆಗಳ ಮೂಲಕ ಜನರ ವಿಶ್ವಾಸ ಗಳಿಸಲು ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Temple Grant Stopped : ದೇಗುಲಗಳ ಅನುದಾನ ತಡೆ ಆದೇಶ ವಾಪಸ್; ಭುಗಿಲೆದ್ದ ಆಕ್ರೋಶಕ್ಕೆ ಮಣಿದ ಸರ್ಕಾರ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ (Renovation of Temples) 2022-23ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನವನ್ನು ತಡೆ (Temple Grant Stopped) ಹಿಡಿಯುವಂತೆ ಸೂಚಿಸಿದ್ದ ಆದೇಶವನ್ನು ಮುಜರಾಯಿ ಇಲಾಖೆ (Muzrai Department) ವಾಪಸ್ ಪಡೆದಿದೆ. ರಾಜ್ಯ ಸರ್ಕಾರ (Government of Karnataka) ಗ್ಯಾರಂಟಿ ಯೋಜನೆಗಳಿಗೆ (Congress Guarantee) ಹಣ ಹೊಂದಿಸಿಕೊಳ್ಳುವುದಕ್ಕಾಗಿ ದೇವಸ್ಥಾನಗಳ ಅನುದಾನಕ್ಕೇ ಕತ್ತರಿ ಹಾಕಿದೆ ಎಂಬ ಆಕ್ರೋಶ ಭುಗಿಲೆದ್ದ ಬೆನ್ನಿಗೆ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ ಪಡೆದಿದೆ. ಸ್ವತಃ ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ (Ramalinga reddy) ಅವರೇ ಇದನ್ನು ಸ್ಪಷ್ಟಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Commission Politics : 40 ಪರ್ಸೆಂಟ್ ಹಗರಣದ ತನಿಖೆಗೆ ಆದೇಶ; ತಿಂಗಳೊಳಗೆ ವರದಿ ಸಲ್ಲಿಕೆಗೆ ಸೂಚನೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಕಮಿಷನ್ ಪಾಲಿಟಿಕ್ಸ್ (Commission Politics) ಜೋರಾಗಿ ಸದ್ದು ಮಾಡುತ್ತಿದೆ. ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ (40 percent commission) ಆರೋಪ ಮಾಡಿ, ಸೋಷಿಯಲ್ ಮೀಡಿಯಾ (Social Media Campaign) ಸಹಿತ ರಾಜ್ಯಾದ್ಯಂತ ಅಭಿಯಾನ ಮಾಡಿದ್ದ ಕಾಂಗ್ರೆಸ್ ಈಗ ಅಧಿಕಾರಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ (Retired High Court Judge Nagamohan Das) ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ಸಮಿತಿಯು ಒಂದು ತಿಂಗಳೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಗುಣಮಟ್ಟ ಪರೀಕ್ಷೆಯ ಅಗತ್ಯಬಿದ್ದರೆ 3ನೇ ಸ್ವತಂತ್ರ ಸಂಸ್ಥೆ ನೇಮಕಕ್ಕೂ ಅವಕಾಶ ಕಲ್ಪಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Congress Politics : ಪರಿಷತ್ ನಾಮನಿರ್ದೇಶನಕ್ಕೆ ದಲಿತ ಟಚ್; ಸುಧಾಮ್ ದಾಸ್ ವಿರುದ್ಧ ಹೈಕಮಾಂಡ್‌ಗೆ ಪತ್ರ
8. Guest Teachers Appointment : ಪ್ರಾಥಮಿಕ, ಪ್ರೌಢಶಾಲೆಗೆ 10 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಅನುಮತಿ
9. Virat Kohli : 15 ವರ್ಷಗಳ ಕ್ರಿಕೆಟ್ ಪಯಣದಲ್ಲಿ ಕೊಹ್ಲಿಯ ಸಾಧನೆಗಳನ್ನು ವಿವರಿಸಿದಷ್ಟೂ ಮುಗಿಯದು
10. Viral News : ಇಡೀ ಏರಿಯಾದ ಕರೆಂಟ್ ತೆಗೆದ ಮೀನು! ಇದಕ್ಕೆ ಕಾರಣವಾಗಿದ್ದು ಹಕ್ಕಿ!
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ