Site icon Vistara News

VISTARA TOP 10 NEWS : ಲಿಂಗಾಯತ ಸಿಎಂ ಕೂಗು ಪ್ರಬಲ, ಪಕ್ಷಕ್ಕೆ ಬದ್ಧವೆಂದ ಜೆಡಿಎಸ್‌ ಶಾಸಕರು ಮತ್ತಿತರ ದಿನದ ಪ್ರಮುಖ ಸುದ್ದಿಗಳು

World cup cricket

1. ಶಾಮನೂರು ಹೇಳಿಕೆಗೆ ಪೂರ್ಣ ಬೆಂಬಲವೆಂದ ಬಿಎಸ್‌ವೈ; ನಮ್ಮದು ಜಾತ್ಯತೀತ ಸರ್ಕಾರ ಎಂದ ಸಿಎಂ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ಲಿಂಗಾಯತರ ಅವಗಣನೆ (Neglecting Lingayats) ಮತ್ತು ಲಿಂಗಾಯತರು ಸಿಎಂ (Lingayat CM Demdand) ಆಗಬೇಕು. ಅಲ್ಲದೆ, ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಆಗಿದೆ ಎಂಬ ಲಿಂಗಾಯತ ಸಮುದಾಯದ (Lingayat community) ಹಿರಿಯ ನಾಯಕ, 92 ವರ್ಷದ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಮಾತು ಈಗ ರಾಜ್ಯ ರಾಜಕಾರಣದಲ್ಲಿ (Karnataka Politics) ಗದ್ದಲವನ್ನು ಸೃಷ್ಟಿ ಮಾಡಿದೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ (Former CM BS Yediyurappa) ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿ, ಶಾಮನೂರು ಅವರು ವ್ಯಕ್ತಪಡಿಸಿರುವ ಭಾವನೆಗಳಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ತಿರುಗೇಟು ನೀಡಿದ್ದು, ಇದು ಜಾತ್ಯತೀತ ಸರ್ಕಾರ (Secular Government) ಯಾರಿಗೂ ತೊಂದರೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನು ಓದಿ : ಶಾಮನೂರು ಶಿವಶಂಕರಪ್ಪರಿಗೆ ಸಿಎಂ ಸ್ಪಷ್ಟ ಉತ್ತರ ಕೊಡಬೇಕು: ಬಸವರಾಜ ಬೊಮ್ಮಾಯಿ

2. ಮೈತ್ರಿಯಿಂದ 5 ವರ್ಷದೊಳಗೆ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ; ಇಲ್ಲದಿದ್ದರೆ ರಾಜಕೀಯ ನಿವೃತ್ತಿ: ಎಚ್‌ಡಿಕೆ
ಬೆಂಗಳೂರು/ ರಾಮನಗರ: ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ (Karnataka Problem) ಈ ಮೈತ್ರಿ ಪರಿಹಾರವಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ (Political retirement) ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದರು. ಬಿಡದಿಯ ಕೇತಿಗಾನಹಳ್ಳಿಯ ತೋಟದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ಜತೆಗಿನ ಮೈತ್ರಿ ನನ್ನ ಸ್ವಾರ್ಥಕ್ಕೆ ಅಲ್ಲ. ನಾಡಿನ ಹಿತಕ್ಕಾಗಿ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಆಗದಂತೆ ಕಾನೂನಿನ ವ್ಯಾಪ್ತಿಯೊಳಗೇ ಈ ಸಮಸ್ಯೆ ಪರಿಹಾರ ಪಡೆಯುವ ಕೆಲಸ ಮಾಡುತ್ತೇನೆ ಎಂದು ಒತ್ತಿ ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಮಿಸ್ಟರ್ ಡಿ.ಕೆ. ಶಿವಕುಮಾರ್ ನಿಮ್ಮ ಕೆಟ್ಟ ರಾಜಕೀಯ ಆಟ ನಡೆಯಲ್ಲ; ಗುಡುಗಿದ ಎಚ್.ಡಿ. ದೇವೇಗೌಡ

3. ಗಟ್ಟಿಯಾಯ್ತು ಬಿಜೆಪಿ ಮೈತ್ರಿ; ಪಕ್ಷದ ನಿರ್ಧಾರಕ್ಕೆ ಬದ್ಧವೆಂದ ಜೆಡಿಎಸ್‌ ಶಾಸಕರು, ನಾಯಕರು!
ಬೆಂಗಳೂರು/ರಾಮನಗರ: ಬಿಜೆಪಿ ಜತೆ ಮೈತ್ರಿ(BJP JDS alliance) ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ಮುಖಂಡರಲ್ಲಿ, ಕಾರ್ಯಕರ್ತರಲ್ಲಿ ಉಂಟಾಗಿದ್ದ ಕೆಲ ಗೊಂದಲಗಳನ್ನು ‌(JDS Politics) ಜೆಡಿಎಸ್ ವರಿಷ್ಠ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ .ದೇವೇಗೌಡ (HD Devegowda) ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ನಿವಾರಿಸಿದ್ದಾರೆ. ಹಾಗೆಯೇ, ಪಕ್ಷದ ಹಿತಕ್ಕಾಗಿ ವರಿಷ್ಠರು ತೆಗೆದುಕೊಂಡಿರುವ ನಿರ್ಧಾರ ಸರಿ ಇದೆ. ಅವರ ನಿರ್ಧಾರಕ್ಕೆ ನಾವು ಬದ್ಧ ಇದ್ದೇವೆ ಎಂದು ಎಲ್ಲ ಮುಖಂಡರು, ಶಾಸಕರು ಸ್ಪಷ್ಟ ಮಾತುಗಳಲ್ಲಿ ಸಭೆಯಲ್ಲಿ ಹೇಳಿದ್ದಾರೆ. ಈ ಮೂಲಕ ಬಿಜೆಪಿ – ಜೆಡಿಎಸ್‌ ಮೈತ್ರಿ ಬಗ್ಗೆ ಜೆಡಿಎಸ್‌ ಪಕ್ಷದೊಳಗೆ ಇದ್ದ ಆಂತರಿಕ ಭಿನ್ನಾಭಿಪ್ರಾಯಗಳು ಶಮನ ಆದಂತೆ ಆಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

4. ಏಷ್ಯನ್​ ಗೇಮ್ಸ್​ನ ಎಂಟನೇ ದಿನ ಪದಕಗಳ ಅರ್ಧ ಶತಕ ದಾಟಿದ ಭಾರತ
ಹ್ಯಾಂಗ್ಝೌ : ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್​ ಗೇಮ್ಸ್​ನಲ್ಲಿ (Asian Games) ಭಾರತದ ಅಥ್ಲೀಟ್​ಗಳು ಪರಾಕ್ರಮ ಮೆರೆಯುತ್ತಿದ್ದಾರೆ. ಎಂಟನೇ ದಿನವಾದ ಭಾನುವಾರ ಭಾರತ ಮೂರು ಚಿನ್ನ, ಏಳು ಬೆಳ್ಳಿ ಹಾಗೂ ನಾಲ್ಕು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಭಾನುವಾರದ ಅಂತ್ಯಕ್ಕೆ 13 ಚಿನ್ನ , 21 ಬೆಳ್ಳಿ ಹಾಗೂ 19 ಕಂಚಿನ ಪದಕಗಳೊಂದಿಗೆ ಒಟ್ಟು 53 ಪದಕಗಳು ಭಾರತದ ಪಾಲಾಗಿದೆ. ಇನ್ನೂ ಒಂದು ವಾರದ ಸ್ಪರ್ಧೆ ಬಾಕಿ ಇರುವಂತೆಯೇ ಟೂರ್ನಿಯಲ್ಲಿ ಪದಕಗಳ ಅರ್ಧ ಶತಕ ಬಾರಿಸಿದೆ. 29 ಚಿನ್ನದೊಂದಿಗೆ 112 ಪದಕ ಗೆದ್ದಿರುವ ಜಪಾನ್​, 30 ಚಿನ್ನದ ಸಮೇತ 125 ಪದಕ ಗೆದ್ದಿರುವ ಕೊರಿಯಾ ಹಾಗೂ 131 ಚಿನ್ನದ ಸಮೇತ 242 ಪದಕ ಗೆದ್ದಿರುವ ಆತಿಥೇಯ ಚೀನಾ ಭಾರತಕ್ಕಿಂತ ಮೇಲಿನ ಮೂರು ಸ್ಥಾನಗಳಲ್ಲಿವೆ. ಪೂರ್ಣ ಸುದ್ದಿಗೆ ಕ್ಲಿಕ್ ಮಾಡಿ.

5. ದಂಪತಿಗೆ ನಟ ನಾಗಭೂಷಣ ಕಾರು ಡಿಕ್ಕಿ, ಮಹಿಳೆ ಸಾವು; ಹಿಟ್‌ ಆ್ಯಂಡ್‌ ರನ್?
ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ಇತ್ತೀಚೆಗೆ ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಟಿಸಿರುವ ನಾಗಭೂಷಣ ಅವರ (Actor Nagabhushana) ಕಾರು ದಂಪತಿಗೆ ಡಿಕ್ಕಿಯಾಗಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ (ಸೆಪ್ಟೆಂಬರ್‌ 30) ದಂಪತಿಯು ನಡೆದುಕೊಂಡು ಹೋಗುವಾಗ ನಾಗಭೂಷಣ ಅವರ ಕಾರು ಡಿಕ್ಕಿಯಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

6. ಪೊರಕೆ ಹಿಡಿದು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ಮೋದಿ; ಕಸ ಗುಡಿಸಿದ ಶಾ, ನಡ್ಡಾ!

7. ಕರಾಚಿಯಲ್ಲಿ ಮೋಸ್ಟ್ ವಾಂಟೆಂಡ್ ಲಷ್ಕರೆ ಉಗ್ರ ಕೈಸರ್ ಫಾರೂಕ್ ಹತ್ಯೆ, 26/11 ದಾಳಿಯ ಮಾಸ್ಟರ್ ಮೈಂಡ್?

8. ಮಣಿಪುರ ವಿದ್ಯಾರ್ಥಿಗಳ ಭೀಕರ ಹತ್ಯೆ; ನಾಲ್ವರನ್ನು ಬಂಧಿಸಿದ ಸಿಬಿಐ, ಇಬ್ಬರು ವಶಕ್ಕೆ

9. ವಿಶ್ವಕಪ್‌ ಪಂದ್ಯಾವಳಿಗೆ ದಿನಗಣನೆ…ವರ್ಲ್ಡ್‌ ಕಪ್‌ ಕುರಿತ ಕುತೂಹಲಕರ ಸಂಗತಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

10. ಹಾಯ್‌ ಪುಟ್ಟಾ.. ಹೇಗಿದಿಯಾ?; ದೇವರ ಹುಂಡಿಯಲ್ಲಿ ಓಡಿ ಹೋದ ಗೆಳತಿಗೊಂದು ಪತ್ರ!
ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version