Site icon Vistara News

Virat kohli : ಕೊಹ್ಲಿಯ ಶತಕಗಳ ದಾಖಲೆಗೆ ಪ್ರಧಾನಿ ಮೋದಿಯ ಪ್ರಶಂಸೆ ಹೀಗಿತ್ತು

Virat kohli

ನವದೆಹಲಿ: ಭಾರತದ ಬ್ಯಾಟಿಂಗ್ ದಂತಕಥೆ ವಿರಾಟ್ ಕೊಹ್ಲಿ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಅವರ 50 ನೇ ಏಕದಿನ ಶತಕವು ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್​ನಲ್ಲಿ ಈ ದಾಖಲೆ ಸೃಷ್ಟಿಯಾಯಿತು. ಅವರ ಶತಕದ ನೆರವಿನಿಮದ ಕಿವೀಸ್ ವಿರುದ್ಧ ಭಾರತ 397 ರನ್ ಗಳಿಸಿತು. ವಿರಾಟ್ ಕೊಹ್ಲಿ ಅವರ ಐತಿಹಾಸಿಕ ಶತಕವು ಭಾರತ ಮತ್ತು ವಿಶ್ವದಾದ್ಯಂತದ ಶತಕೋಟಿ ಹೃದಯಗಳನ್ನು ಗೆದ್ದಿತು. ಜತೆಗೆ 12 ವರ್ಷಗಳ ನಂತರ ವಿಶ್ವಕಪ್ ಮನೆಗೆ ಬರಲಿದೆ ಎಂದು ಅಭಿಮಾನಿಗಳು ಆಶಿಸಿದರು.

ಶತಕಗಳ ದಾಖಲೆ ಬರೆದ ಕೊಹ್ಲಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಇಂದು ವಿರಾಟ್ ಕೊಹ್ಲಿ ತಮ್ಮ 50 ನೇ ಏಕದಿನ ಶತಕವನ್ನು ಗಳಿಸಿದ್ದಾರೆ ಮಾತ್ರವಲ್ಲ, ಅತ್ಯುತ್ತಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಅವರು ಶ್ರೇಷ್ಠತೆ ಮತ್ತು ಪರಿಶ್ರಮದ ಸ್ಫೂರ್ತಿಗೆ ಉದಾಹರಣೆಯಾಗಿದ್ದಾರೆ. ಈ ಗಮನಾರ್ಹ ಮೈಲಿಗಲ್ಲು ಅವರ ನಿರಂತರ ಸಮರ್ಪಣೆ ಮತ್ತು ಅಸಾಧಾರಣ ಪ್ರತಿಭೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

ಇದನ್ನೂ ಓದಿ: Rohit Sharma: ಸಿಕ್ಸರ್​ ಬಾರಿಸಿ ‘ವಿಶ್ವ’ ದಾಖಲೆ ಬರೆದ ರೋಹಿತ್​ ಶರ್ಮ

ಗೃಹ ಸಚಿವರ ಶ್ಲಾಘನೆ

ಏಕದಿನ ಕ್ರಿಕೆಟ್ನಲ್ಲಿ 50ನೇ ಶತಕ ಬಾರಿಸಿದ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದ ವಿರಾಟ್ ಕೊಹ್ಲಿಗೆ ಅಭಿನಂದನೆಗಳು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಇದು ನಿಮ್ಮ ಅತ್ಯುತ್ತಮ ಕ್ರೀಡಾ ಮನೋಭಾವ, ಸಮರ್ಪಣೆ ಮತ್ತು ಸ್ಥಿರತೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಏಕದಿನ ಕ್ರಿಕೆಟ್​ನಲ್ಲಿ 50 ಶತಕಗಳನ್ನು ಪೂರೈಸುವ ಮೂಲಕ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ ವಿರಾಟ್ ಕೊಹ್ಲಿಗೆ ಧನ್ಯವಾದಗಳು. ಇದು ನಿಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಗೆ ಸಾಕ್ಷಿಯಾಗಿದೆ. ನಿಮ್ಮ ಗಮನಾರ್ಹ ದಾಖಲೆಯು ಯುವ ಮಹತ್ವಾಕಾಂಕ್ಷಿ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡುತ್ತದೆ ಮತ್ತು ಆಟದ ಅಭಿಮಾನಿಗಳಿಗೆ ವ್ಯಾಪಕ ಸಂತೋಷವನ್ನು ತಂದಿದೆ.

Exit mobile version