ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ (ಜಿಟಿ) ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವನ್ನು ಸೋಲಿಸಿತು. ಈ ಮೂಲಕ ಆರ್ಸಿಬಿಯ ಪ್ಲೇಆಫ್ ಅವಕಾಶ ನಷ್ಟವಾಯಿತು. ಆದರೆ, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಶುಭಮನ್ ಶತಕಗಳನ್ನು ಬಾರಿಸಿದ್ದಾರೆ. ಅದೇ ರೀತಿ ಭಾನುವಾರದ ಮೊದಲ ಪಂದ್ಯದಲ್ಲಿ ಕ್ಯಾಮೆರಾನ್ ಗ್ರೀನ್ ಕೂಡ ಶತಕ ಬಾರಿಸಿದ್ದಾರೆ. ಈ ಶತಕಗಳ ಬಗ್ಗೆ ಹಿರಿಯ ಆಟಗಾರರು ಪ್ರಶಂಸೆಗಳನ್ನು ವ್ಯಕ್ತಪಡಿಸಿದ್ದಾರೆ. ಅವರು ಏನೆಂದರು ಎಂಬುದನ್ನು ನೋಡೋಣ.
ಕ್ಯಾಮೆರಾನ್ ಗ್ರೀನ್ ಮತ್ತು ಶುಭ್ಮನ್ ಗಿಲ್ ಉತ್ತಮವಾಗಿ ಬ್ಯಾಟಿಂಗ್ ಮಾಡಿದರು. ವಿರಾಟ್ ಅವರ ಅದ್ಭುತವಾಗಿತ್ತು. ಬ್ಯಾಕ್ ಟು ಬ್ಯಾಕ್ ಗಳಿಸಿದ್ದಾರೆ. ಅವರೆಲ್ಲರೂ ತಮ್ಮದೇ ರೀತಿಯಲ್ಲಿ ಸಾಧನೆ ಮಾಡಿದವರು. ಮುಂಬಯಿ ಇಂಡಿಯನ್ಸ್ ತಂಡವನ್ನು ಪ್ಲೇಆಫ್ನಲ್ಲಿ ನೋಡಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿನ್ ಬರೆದುಕೊಂಡಿದ್ದಾರೆ.
ಭಾರತದ ಲೆಜೆಂಡರಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ ಟ್ವೀಟ್ ಮಾಡಿದ್ದಾರೆ. ವಿರಾಟ್ ಕೊಹ್ಲಿ ತಮ್ಮ 7 ನೇ ಐಪಿಎಲ್ ಶತಕವನ್ನು ಗಳಿಸಿದ್ದಾರೆ. ದುರದೃಷ್ಟವಶಾತ್ ಇಂದು ಇತರರಿಂದ ಹೆಚ್ಚಿನ ಬೆಂಬಲ ಸಿಗಲಿಲ್ಲ. ಶುಭ್ಮನ್ ಗಿಲ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರಿಗೆ ವಿಜಯ್ ಶಂಕರ್ ಅವರಿಂದ ಅಗತ್ಯ ಬೆಂಬಲ ಪಡೆದರು. ಗುಜರಾತ್ಗೆ ಅದ್ಭುತ ಗೆಲುವು ಸಿಕ್ಕಿದೆ. ಪ್ಲೇ ಆಫ್ಗೆ ಪ್ರವೇಶಿಸಿದ್ದಕ್ಕಾಗಿ ಮುಂಬೈಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಆರ್ಸಿಬಿ ತಂಡದ ನಿರ್ಗಮನದ ಬಳಿಕ ಟ್ವೀಟ್ ಮಾಡಿದ ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಭಾರತದ ಆರಂಭಿಕ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ಗೆ ಶುಭಾಶಯ ಹೇಳಿದ್ದಾರೆ. ಅಭಿನಂದನೆಗಳು ಶುಭ್ಮನ್ ಗಿಲ್ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಐಪಿಎಲ್ 2023 ರ 70ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೊಹ್ಲಿ ದಾಖಲೆಯ ಶತಕವನ್ನು ಬಾರಿಸುವ ಮೂಲಕ ಆರ್ಸಿಬಿ ತಂಡಕ್ಕೆ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಲು ಸಹಾಯ ಮಾಡಿದರು. ಆದರೆ ಕೊಹ್ಲಿಯ ಅಜೇಯ 101 (61 ಎಸೆತ) ವ್ಯರ್ಥವಾಯಿತು, ಗಿಲ್ ಐಪಿಎಲ್ 2023 ರಲ್ಲಿ ಸತತ ಎರಡನೇ ಶತಕವನ್ನು ಬಾರಿಸಿ ಗುರಜಾತ್ ತಂಡಕ್ಕೆ ಗೆಲುವು ತಂದುಕೊಟ್ಟರು. 14 ಪಂದ್ಯಗಳಿಂದ 20 ಅಂಕಗಳೊಂದಿಗೆ ಗುಜರಾತ್ ತಂಡ ಐಪಿಎಲ್ 2023 ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನ ಪಡೆಯಿತು.