Site icon Vistara News

World Cup 2023 : ಏಕ ದಿನ ವಿಶ್ವ ಕಪ್​ನಲ್ಲಿ ಭಾರತ ತಂಡದ ವೇಳಾಪಟ್ಟಿ ಇಂತಿದೆ

Team India

ಮುಂಬಯಿ: ಏಕ ದಿನ ವಿಶ್ವ ಕಪ್​ನ (World Cup 2023) ಆತಿಥ್ಯಕ್ಕೆ ಭಾರತ ತಂಡ ಸಜ್ಜಾಗಿದೆ. ಐಸಿಸಿ ಜೂನ್​ 27ರಂದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತ ತಂಡಕ್ಕೆ ವಿಶ್ವ ಕಪ್​ ಗೆಲ್ಲುವುದೊಂದೇ ಬಾಕಿ ಇದೆ. ವೇಳಾಪಟ್ಟಿ ಘೋಷಣೆಯಾಗುತ್ತಿದ್ದಂತೆ ಭಾರತ ತಂಡದ ಅಭಿಮಾನಿಗಳ ಉತ್ಸಾಹ ಹೆಚ್ಚಾಗಿದೆ. 2011ರಲ್ಲಿ ಭಾರತ ತಂಡ ಏಕ ದಿನ ವಿಶ್ವಕಪ್​ಗೆ ಆತಿಥ್ಯ ವಹಿಸಿತ್ತು. ಆ ವರ್ಷ ಪ್ರಶಸ್ತಿ ಗೆದ್ದುಕೊಂಡಿತ್ತು. ಇದೀಗ ಮೆನ್ ಇನ್ ಬ್ಲೂ ತಂಡ 2023ರ ಐಸಿಸಿ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡವಾಗಿದೆ. ಕರಡು ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಹೀಗಾಗಿ ಭಾರತವು ಅಕ್ಟೋಬರ್ 8ರಂದು ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸುವ ಮೂಲಕ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ಅಕ್ಟೋಬರ್​ 15ರಂದು ಅಹಮದಾಬಾದ್​​ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಸ್ಪಿನ್ ಸ್ನೇಹಿ ಪಿಚ್​ಗಳ ಮೇಲೆ ಭಾರತ ತಂಡ ಹೆಚ್ಚು ಅವಲಂಬಿತವಾಗಿದ್ದು, ವಿಶ್ವ ಕಪ್​ ಗೆಲ್ಲುವ ಅವಕಾಶವನ್ನು ಹೆಚ್ಚಿಸಿಕೊಂಡಿದೆ.

2023ರ ಐಸಿಸಿ ವಿಶ್ವಕಪ್​ನಲ್ಲಿ ಭಾರತ ತಂಡದ ವೇಳಾಪಟ್ಟಿ

ಭಾರತ ತಂಡವು ಅಕ್ಟೊಬರ್​ನಲ್ಲಿ ಫುಲ್​ ಬ್ಯುಸಿಯಾಗಿದೆ. ದೊಡ್ಡ ದೊಡ್ಡ ತಂಡಗಳನ್ನು ಎದುರಿಸಲಿದೆ. ಅಕ್ಟೋಬರ್ 8ರಂದು ಚೆನ್ನೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಆದರೆ ಅಕ್ಟೋಬರ್ 15ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹಣಾಹಣಿ ಟೂರ್ನಿಯ ಹೈಲೈಟ್​ ಎನಿಸಿಕೊಂಡಿದೆ.

ಇದನ್ನೂ ಓದಿ : ICC World Cup 2023: ಏಕದಿನ ವಿಶ್ವ ಕಪ್​ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ; ಬೆಂಗಳೂರಿನಲ್ಲೂ ಇದೆ ಪ್ರಮುಖ ಪಂದ್ಯ

ಬಿಸಿಸಿಐ ಮತ್ತು ಪಿಸಿಬಿ ನಡುವೆ ನಡೆಯುತ್ತಿರುವ ಎಲ್ಲಾ ಒಳಜಗಳಗಳ ನಡುವೆ ಐಸಿಸಿ ಅಹಮದಾಬಾದ್​ನಲ್ಲಿ ಭಾರತ ವಿರುದ್ಧ ಆಡುವುದಿಲ್ಲ ಎಂಬ ಪಿಸಿಬಿಯ ಮನವಿಯನ್ನು ತಿರಸ್ಕರಿಸಿದೆ. ಆದ್ದರಿಂದ, ಕರಡು ವೇಳಾಪಟ್ಟಿಯಂತೆಯೇ ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಪಂದ್ಯ ನಡೆಯಲಿದೆ.

ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡವನ್ನು ಹೊರತುಪಡಿಸಿ ಭಾರತವು ಇತರ ಮೂರು ದೊಡ್ಡ ತಂಡಗಳನ್ನು ಎದುರಿಸಲು ಸಜ್ಜಾಗಿದೆ. ಅಕ್ಟೋಬರ್ 22ರಂದು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಅಕ್ಟೋಬರ್ 29ರಂದು ಲಕ್ನೋದ ಎಕಾನಾ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿದೆ.

ವಿಶ್ವಕಪ್ 2023ರ ಪಂದ್ಯಗಳ ತಾಣಗಳು

Exit mobile version