ICC World Cup 2023 : ಹಿಸ್ಟರಿ ರಿಪೀಟ್ಸ್​​; ಭಾರತ ತಂಡದ ವಿಶ್ವ ಕಪ್ ಟ್ರೋಫಿ ಕನಸು ಭಗ್ನ - Vistara News

ಕ್ರೀಡೆ

ICC World Cup 2023 : ಹಿಸ್ಟರಿ ರಿಪೀಟ್ಸ್​​; ಭಾರತ ತಂಡದ ವಿಶ್ವ ಕಪ್ ಟ್ರೋಫಿ ಕನಸು ಭಗ್ನ

ವಿಶ್ವ ಕಪ್ 2023ರ (ICC World Cup 2023) ಫೈನಲ್ ಪಂಧ್ಯದಲ್ಲಿ ಭಾರತ ತಂಡ 6 ವಿಕೆಟ್​ಗಳ ಸೋಲಿಗೆ ಒಳಗಾಗಿದೆ.

VISTARANEWS.COM


on

World Cup champion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: 130 ಕೋಟಿ ಭಾರತೀಯರ ಹೃದಯ ಭಾರವಾಗಿದೆ. ಮತ್ತೊಂದು ಏಕ ದಿನ ವಿಶ್ವ ಕಪ್​ (ICC World Cup 2023) ಗೆಲ್ಲುವ ಅವರೆಲ್ಲರ ಆಸೆ ಕಮರಿ ಹೋಗಿದೆ. ತವರು ನೆಲದಲ್ಲಿ ನಡೆದ ವಿಶ್ವ ಕಪ್ ಆವೃತ್ತಿಯಲ್ಲಿ ಟ್ರೋಫಿ ಗೆದ್ದೇ ಗೆಲ್ಲುತ್ತೇವೆ ಎಂಬ ಹುಮ್ಮಸ್ಸು ಬತ್ತಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನಡೆದ ಏಕ ದಿನ ವಿಶ್ವ ಕಪ್​ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತಲೆ ಬಾಗಿದ ಟೀಮ್ ಇಂಡಿಯಾದ ಪ್ರಯತ್ನಗಳು ಭಗ್ನವಾಗಿದೆ. 2003ರ ವಿಶ್ವ ಕಪ್​ನ ಫೈನಲ್ ಫಲಿತಾಂಶವು ಮತ್ತೊಂದು ಬಾರಿ ಪುನರಾವರ್ತನೆಯಾಗಿದೆ. ಅಂದು ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧವೇ 125 ರನ್​ಗಳಿಂದ ಸೋಲು ಕಂಡಿತ್ತು.

ಸೋಲಿನೊಂದಿಗೆ ಭಾರತ ತಂಡದ ಐಸಿಸಿ ಟ್ರೋಫಿ ಬರ ಮುಂದುವರಿಯಿತು. ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗೆ ವಿಶ್ವ ಕಪ್​​ ಕೊಡುಗೆ ಕೊಡುಗೆ ನೀಡುವ ಅಭಿಲಾಷೆಯೂ ಇಲ್ಲವಾಯಿತು. ಇದು ಆಸ್ಟ್ರೇಲಿಯಾ ತಂಡದ ಪಾಲಿಗೆ 6ನೇ ವಿಶ್ವ ಕಪ್​. ಆ ತಂಡ ಈ ಹಿಂದೆ 1987, 1999, 2003, 2007, 2015ರಲ್ಲಿ ಏಕ ದಿನ ವಿಶ್ವ ಕಪ್ ಗೆದ್ದಿತ್ತು. ಇದೀಗ ಮತ್ತೊಂದು ಟ್ರೋಫಿ ಆ ತಂಡಕ್ಕೆ ಸೇರ್ಪಡೆಯಾಗಿದ್ದು ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿತು.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಆದರೆ, ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ನಿರಾಯಾಸ ವಿಜಯ ಕಂಡಿತು. ಆಸ್ಟ್ರೇಲಿಯಾ ತಂಡದ ಪರ ಆರಂಭಿಕ ಬ್ಯಾಟರ್​​ ಟ್ರಾವಿಸ್ ಹೆಡ್​ 137 ರನ್​ ಬಾರಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

ಫೈನಲ್​ ಪಂದ್ಯದಲ್ಲಿ ಭಾರತ ತಂಡ ಸಂಪೂರ್ಣ ಪಾರಮ್ಯ ಸಾಧಿಸಿತು. ಆರಂಭದಲ್ಲಿ ಬೌಲಿಂಗ್​ನಲ್ಲಿ ಮೇಲುಗೈ ಸಾಧಿಸಿದ ಆಸೀಸ್ ಪಡೆ ಬಳಿಕ ಬ್ಯಾಟಿಂಗ್​ನಲ್ಲಿ ಮೇಲುಗೈ ಸಾಧಿಸಿತು. ಅತ್ಯಂತ ಸುಲಭ ಜಯ ತನ್ನದಾಗಿಸಿಕೊಂಡಿತು. ಹಾಲಿ ವಿಶ್ವ ಕಪ್​ನಲ್ಲಿ ಭಾರತ ತಂಡ ಸತತವಾಗಿ 10 ಪಂದ್ಯಗಳನ್ನು ಗೆದ್ದು ಫೈನಲ್​ಗೆ ಬಂದಿತ್ತು. ಆದರೆ, 11ನೇ ಪಂದ್ಯದಲ್ಲಿ ಸೋತಿತು. ಒಂದು ವೇಳೆ ಈ ಪಂದ್ಯದಲ್ಲಿ ಗೆದ್ದಿದ್ದರೆ ಭಾರತ ತಂಡ ವಿಶ್ವ ಕಪ್ ಆವೃತ್ತಿಯಲ್ಲಿ ಸತತವಾಗಿ 11 ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ತಂಡದ ದಾಖಲೆಯನ್ನು ಸರಿಗಟ್ಟಬಹುದಾಗಿತ್ತು.

ಇದನ್ನೂ ಓದಿ : IND vs AUS Final: ಭಾರತಕ್ಕೆ ಮತ್ತೆ ಕಂಟಕವಾದ ಅಂಪೈರ್; ನಿರೀಕ್ಷೆಯಂತೆ ಈ ಬಾರಿಯೂ ಸೋಲು

ಆರಂಭದಲ್ಲಿ ವಿಕೆಟ್ ಪತನ

ಸಾಧಾರಣ ಮೊತ್ತವನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾ ತಂಡ 47 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡಿತು. ವಾರ್ನರ್​ 7 ರನ್, ಮಿಚೆಲ್ ಮಾರ್ಷ್​ 15 ಹಾಗೂ ಸ್ಟೀವ್ ಸ್ಮಿತ್​​ 4 ರನ್ ಬಾರಿಸಿದರು. ಆದರೆ, ಟ್ರಾವಿಸ್ ಹೆಡ್​ ಹಾಗೂ ಮರ್ನಸ್​ ಲಾಬುಶೇನ್​ (58) ನಾಲ್ಕನೇ ವಿಕೆಟ್​ಗೆ 192 ರನ್​ ಬಾರಿಸಿದರು. ಅದು ಭಾರತ ತಂಡದ ಪಾಲಿಗೆ ಮುಳುವಾಯಿತು. ಟಾಸ್​ ಗೆದ್ದ ಬಳಿಕ ಆಸ್ಟ್ರೇಲಿಯಾ ತಂಡದ ನಾಯಕ ಇಬ್ಬನಿ ಪರಿಣಾಮವನ್ನು ಬಳಸಿಕೊಳ್ಳುವ ಸೂಚನೆ ನೀಡಿದ್ದರು. ಅಂತೆಯೇ ಅವರು ಅದನ್ನು ಸಾಧಿಸಿ ತೋರಿಸಿದ್ದಾರೆ.

ಭಾರತದ ಬ್ಯಾಟಿಂಗ್ ವೈಫಲ್ಯ

ಭಾರತ ತಂಡ ಮೊದಲ 39 ಎಸೆತಗಳಿಗೆ 50 ರನ್ ಬಾರಿಸಿತ್ತು. ಹೀಗಾಗಿ ದೊಡ್ಡ ಮೊತ್ತ ಗ್ಯಾರಂಟಿ ಎಂದು ನಂಬಲಾಗಿತ್ತು. ಆದರೆ ಅದಕ್ಕಿಂತ ಮೊದಲೇ ಶುಭ್​ಮನ್​ ಗಿಲ್​ 4 ರನ್ ಬಾರಿಸಿ ಔಟಾಗಿದ್ದರು. ಈ ವೇಳೆ ವಿರಾಟ್ ಕೊಹ್ಲಿಯೂ ರನ್​ ಗತಿ ಇಳಿಕೆಯಾಗದಂತೆ ನೋಡಿಕೊಂಡಿತು. ಆದರೆ, ನಂತರ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಲು ಮುಂದಾದ ರೋಹಿತ್​ ಶರ್ಮಾ 47 ರನ್​ಗಳಿಗೆ ಔಟಾದರು. ಅವರು 31 ಎಸೆತಗಳಿಗೆ 47 ರನ್ ಬಾರಿಸಿದ್ದರು. ಆದರೆ, ಆ ಬಳಿಕ ಬ್ಯಾಟ್ ಮಾಡಲು ಬಂದ ಶ್ರೇಯಸ್​ ಅಯ್ಯರ್​​ 4 ರನ್​ ಗೆ ಔಟಾದರು. ಅವರು ಅದಕ್ಕಿಂತ ಮೊದಲು ಅವರು ಒಂದು ಫೋರ್ ಬಾರಿಸಿದ್ದರು.

ರಾಹುಲ್​- ಕೊಹ್ಲಿ ಮೇಲೆ ಒತ್ತಡ

ಮೊದಲ ಮೂರು ವಿಕೆಟ್​​ಗಳು 81 ರನ್​ಗೆ ಪತನಗೊಂಡ ಕಾರಣ ಭಾರತ ತಂಡದ ಮೇಲೆ ಒತ್ತಡ ಬಿತ್ತು. ಮಾಜಿ ನಾಯಕ ವಿರಾಟ್​ ಕೊಹ್ಲಿ ಹಾಗೂ ವಿಕೆಟ್​ ಕೀಪರ್​ ಕೆ. ಎಲ್ ರಾಹುಲ್ ಮೇಲೆ ಇನಿಂಗ್ಸ್ ಕಟ್ಟುವ ಜವಾಬ್ದಾರಿ ಬಿತ್ತು. ಬಲಿಕ ಅವರಿಬ್ಬರು 67 ರನ್​ಗಳ ಜತೆಯಾಟವಾಡಿದರು. ಈ ವೇಳೆ ಭಾರತ ತಂಡದ ರನ್ ಗಳಿಕೆ ಕುಸಿತಗೊಂಡಿತ್ತು. 11 ಓವರ್​ಗಳ ಒಳಗೆ ಮೂರು ವಿಕೆಟ್​ ನಷ್ಟ ಮಾಡಿಕೊಂಡಿದ್ದರಿಂದ ವಿಕೆಟ್​ ಕಾಪಾಡುವುದು ಈ ಬ್ಯಾಟರ್​​ಗಳ ಪಾಲಿಗೆ ದೊಡ್ಡ ಸವಾಲಾಯಿತು. ಇವರಿಬ್ಬರ ಜತೆಯಾಟದ ವೇಳೆ ಸಿಂಗಲ್ ರನ್​ಗಳೇ ಹೆಚ್ಚು ಗಳಿಕೆಯಾಯಿತು.

ಏತನ್ಮಧ್ಯೆ ವಿರಾಟ್​ ಕೊಹ್ಲಿಯ ವಿಕೆಟ್ ದುರದೃಷ್ಟಕರವಾಗಿ ನಷ್ಟವಾಯಿತು. ಆಸೀಸ್​ ನಾಯಕ ಪ್ಯಾಟ್​ ಕಮಿನ್ಸ್ ಅವರ ಎಸೆತವನ್ನು ರಕ್ಷಿಸಲು ಮುಂದಾದ ಅವರು ಇನ್​ಸೈಡ್ ಎಜ್​ ಆಗಿ ಬೌಲ್ಡ್ ಆದರು. ಈ ವೇಳೆ ತಂಡಕ್ಕೆ ಮತ್ತೊಂದು ಆಘಾತ ಎದುರಾಯಿತು. ಯಾಕೆಂದರೆ ಮುಂದೆ ಆಡಲು ಬಂದ ರವೀಂದ್ರ ಜಡೇಜಾ 9 ರನ್​ಗಳಿಗೆ ಔಟ್ ಆದರು.

ಈ ರನ್ ಸಾಕೇ?

ಎರಡನೇ ಇನಿಂಗ್ಸ್ ವೇಳೆ ಇಬ್ಬನಿ ಪರಿಣಾಮ ಇರುತ್ತದೆ. ಬೌಲಿಂಗ್ ಮಾಡಲು ಕಷ್ಟ ಎಂಬ ಕಾರಣಕ್ಕೆ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮೊದಲು ಫೀಲ್ಡಿಂಗ್ ಮಾಡಿದ್ದರು. ಹೀಗಾಗಿ 250 ರನ್​ಗಳಿಗಿಂತ ಕಡಿಮೆ ಮೊತ್ತ ಗೆಲುವಿಗೆ ಸಾಕಾಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ. ಭಾರತ ತಂಡ 270ಕ್ಕಿಂತ ಹೆಚ್ಚು ರನ್ ಮಾಡಿದರೆ ಗೆಲುವು ಪಡೆಯು ಸಾಧ್ಯತೆಗಳು ಇವೆ. ಕ್ರಿಕೆಟ್​ ಪಂಡಿತರ ವಿಶ್ಲೇಷಣೆ ಪ್ರಕಾರ ಪಿಚ್​ ಸ್ವಲ್ಪ ನಿಧಾನಗತಿಯಲ್ಲಿದೆ. ನಿರೀಕ್ಷಿತ ಮಟ್ಟದಲ್ಲಿ ಬೌಂಡರಿ ಸಿಕ್ಸರ್​ಗಳನ್ನು ಹೊಡೆಯಲು ಸಾಧ್ಯವಿಲ್ಲ. ಹಾಗಾದರೆ 250ಕ್ಕಿಂತ ಹೆಚ್ಚಿನ ರನ್​ ದಾಟುವುದು ಆಸೀಸ್​ ಪಾಲಿಗೆ ಸವಾಲಾಗಬಹುದು. ಆದರೆ ಭಾರತ ತಂಡ ಅಷ್ಟೊಂದು ದೊಡ್ಡ ಮೊತ್ತ ಪೇರಿಸುವುದೇ ಎಂಬುದು ಅಭಿಮಾನಿಗಳ ಪಾಲಿಗೆ ಕೌತುಕದ ವಿಷಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Ishan Kishan: ರಣಜಿ ಟೂರ್ನಿಗೆ ಚಕ್ಕರ್​, ಅನಂತ್ ಅಂಬಾನಿ ವಿವಾಹ ಪೂರ್ವ ಸಂಭ್ರಮಕ್ಕೆ ಹಾಜರ್!

ಇಶಾನ್ ಅವರು​ ಮುಕೇಶ್‌ ಅಂಬಾನಿ(Mukesh Ambani) ಪುತ್ರ ಅನಂತ್‌ ಅಂಬಾನಿ(Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವಿವಾಹಪೂರ್ವ(Anant Ambani wedding) ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Ishan Kishan
Koo

ಮುಂಬಯಿ: ಟೀಮ್​ ಇಂಡಿಯಾದ ಯುವ ಬ್ಯಾಟರ್​ ಇಶಾನ್​ ಕಿಶನ್​(Ishan Kishan) ಅವರು ಬಿಸಿಸಿಐ(BCCI) ಮತ್ತು ಕೋಚ್​ ದ್ರಾವಿಡ್​ ಸೂಚನೆಯ ಮೇರೆಗೂ ರಣಜಿ ಆಡದೆ ದರ್ಪ ತೋರಿದ ಕಾರಣದಿಂದ ಇತ್ತೀಚೆಗೆ ಪ್ರಕಟಗೊಂಡ ಕೇಂದ್ರ ಗುತ್ತಿಗೆ(BCCI Annual Contract) ಪಡೆದ ಆಟಗಾರರ ಪಟ್ಟಿಯಿಂ ಹೊರಬಿದ್ದಿದ್ದರು. ಇದೀಗ ಇಶಾನ್ ಅವರು​ ಮುಕೇಶ್‌ ಅಂಬಾನಿ(Mukesh Ambani) ಪುತ್ರ ಅನಂತ್‌ ಅಂಬಾನಿ(Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವಿವಾಹಪೂರ್ವ(Anant Ambani wedding) ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ರಣಜಿ ಆಡಲು ಸೋಮಾರಿತನ ಆದರೆ, ಮೋಜು ಮಸ್ತಿಯಲ್ಲಿ ಮುಂದು ಎಂದು ಹೇಳುವ ಮೂಲಕ ಟೀಮ್​ ಇಂಡಿಯಾ ಅಭಿಮಾನಿಗಳು ಇಶಾನ್​ಗೆ ಸಾಮಾಜಿಕ ಜಾಲತಾಣದಲ್ಲಿ ಸರಿಯಾಗಿಯೇ ಕ್ಲಾಸ್​ ತೆಗೆದುಕೊಂಡಿದ್ದಾರೆ. ಜಾಮ್​ ನಗರದಲ್ಲಿ (Jamnagar) ನಡೆಯುತ್ತಿರುವ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ವಿವಾಹಪೂರ್ವ ಸಮಾರಂಭದಲ್ಲಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್​, ಎಂ.ಎಸ್​ ಧೋನಿ, ರೋಹಿತ್ ಶರ್ಮ, ಜಹೀರ್ ಖಾನ್​, ಡ್ವೇನ್​ ಬ್ರಾವೋ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್​ ಯಾದವ್​, ಕೃನಾಲ್ ಪಾಂಡ್ಯ , ರಶೀದ್ ಖಾನ್​, ಸ್ಯಾಮ್ ಕರನ್​, ಗ್ರೇಮ್ ಸ್ಮಿತ್ ಕೂಡ ಪಾಲ್ಗೊಂಡಿದ್ದಾರೆ. ಈ ಆಟಗಾರರು ಕುಟುಂಬ ಸಮೇತರಾಗಿ ಆಗಮಿಸಿದ ವಿಡಿಯೊಗಳು ಈಗಾಗಲೇ ವೈರಲ್​ ಆಗಿದೆ. ಮೂರು ದಿನಗಳ ಕಾಲ ಈ ಪ್ರೀ ವೆಡ್ಡಿಂಗ್ ಕಾರ್ಯಕ್ರಮಗಳು ನಡೆಯಲಿದೆ.

ಇದನ್ನೂ ಓದಿ Ishan Kishan: ಮತ್ತೆ ಎಡವಟ್ಟು ಮಾಡಿಕೊಂಡು ಬಿಸಿಸಿಐ ಕೆಂಗಣ್ಣಿಗೆ ಗುರಿಯಾದ ಇಶಾನ್​ ಕಿಶನ್​

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದ ಸಮಯದಲ್ಲಿ ಇಶಾನ್ ತಮ್ಮ ಮಾನಸಿಕ ಯೋಗಕ್ಷೇಮಕ್ಕಾಗಿ ವಿರಾಮವನ್ನು ಬಯಸಿ ಈ ಸರಣಿಯಿಂದ ಹಿಂದೆ ಸರಿದಿದ್ದರು. ಹೀಗಾಗಿ ಕೊನೇ ಕ್ಷಣದಲ್ಲಿ ಕೆ. ಎಸ್​ ಭರತ್ ಅವರನ್ನು ಬಿಸಿಸಿಐ ದಕ್ಷಿಣ ಆಫ್ರಿಕಾಗೆ ಕಳುಹಿಸಿತ್ತು. ರಜೆ ಪಡೆದಿದ್ದ ಇಶಾನ್​ ನೆರವಾಗಿ ಭಾರತಕ್ಕೆ ಬರುವ ಬದಲು ದುಬೈನಲ್ಲಿ ಇಳಿದು ಪಾರ್ಟಿಗೆ ಹೋಗಿದ್ದರು. ಬಳಿಕ ಅವರು ರಾಷ್ಟ್ರೀಯ ತಂಡಕ್ಕೆ ಹಿಂತಿರುಗಲಿಲ್ಲ.

ಡಿವೈ ಪಾಟೀಲ್ ಟಿ20 ಟೂರ್ನಿಯಲ್ಲಿ(DY Patil T20 Cup 2024) ಆಡುವ ಮೂಲಕ ಇಶಾನ್​ ಕಿಶನ್​ ಮತ್ತೆ ಬಿಸಿಸಿಐ(BCCI) ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಿಸಿಸಿಐ ಲೋಗೊ ಇರುವ ಹೆಲ್ಮೆಟ್​ ಧರಿಸಿ ಆಡಿದ್ದು ಇದಕ್ಕೆ ಪ್ರಮುಖ ಕಾರಣ. ದೇಶೀಯ ಕ್ರಿಕೆಟ್​ನಲ್ಲಿ ಆಡುವಾಗ ಯಾವುದೇ ಆಟಗಾರರು ಕೂಡ ಬಿಸಿಸಿಐ ಲೋಗೋ ಇರುವ ಹೆಲ್ಮೆಟ್ ಧರಿಸಿ ಆಡುವಂತಿಲ್ಲ. ಒಂದೊಮ್ಮೆ ಈ ಹೆಲ್ಮೆಟ್​ ಧರಿಸಿ ಆಡಿದರೂ ಕೂಡ ಲೋಗೊದ ಮೇಲೆ ಪ್ಲಾಸ್ಟರ್​ ಹಾಕಿ ಆಡಬೇಕು. ಆದರೆ ಇಶಾನ್​ ಈ ಕ್ರಮ ಪಾಲಿಸಲಿಲ್ಲ. ಹೀಗಾಗಿ ಬಿಸಿಸಿಐ ಇಶಾನ್​ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

Continue Reading

ಕ್ರೀಡೆ

BCCI: ವನಿತೆಯರ ರೆಡ್‌ ಬಾಲ್ ಕ್ರಿಕೆಟ್‌ ಟೂರ್ನಿ ನಡೆಸಲು ಮುಂದಾದ ಬಿಸಿಸಿಐ

ಪುರುಷರ ದೇಶಿಯ ಕ್ರಿಕೆಟ್‌ ಮಾದರಿಯಲ್ಲೇ ವನಿತೆಯರಿಗೂ ರೆಡ್‌ ಬಾಲ್‌ ಕ್ರಿಕೆಟ್‌(Women’s Red-Ball Tournament) ಪಂದ್ಯವನ್ನು ನಡೆಸಲು ಬಿಸಿಸಿಐ ಮುಂದಾಗಿದೆ. ಇದಕ್ಕಾಗಿ ಮಾರ್ಚ್ 28ರಿಂದ ಸೀನಿಯರ್ ಇಂಟರ್ ಜೋನಲ್ ಮಲ್ಟಿ-ಡೇ ಟ್ರೋಫಿಯನ್ನು (Senior Inter Zonal Multi Day Trophy) ನಡೆಸಲು ನಿರ್ಧರಿಸಲಾಗಿದೆ.

VISTARANEWS.COM


on

BCCI
Koo

ಮುಂಬಯಿ: ಭಾರತದಲ್ಲಿ ಸದ್ಯ ಮಹಿಳಾ ಕ್ರಿಕೆಟ್ ಕೂಡಾ ಹೆಚ್ಚಿನ ಮಹತ್ವ ಪಡೆಯುತ್ತಿದೆ. ಪುರುಷರ ಕ್ರಿಕೆಟ್​ನಂತೆ ಮಹಿಳಾ ಕ್ರಿಕೆಟ್​ಗೂ ಹೆಚ್ಚಿನ ಅವಕಾಶ ನೀಡುವ ಸಲುವಾಗಿ ಮಹಿಳಾ ಕ್ರಿಕೆಟ್​ ಲೀಗ್​ ಮತ್ತು ಮಹಿಳಾ ಕ್ರಿಕೆಟಿಗರಿಗೂ ಪುರುಷರಂತೆ ಸಮಾನವಾದ ವೇತನವನ್ನು ಈಗಾಗಲೇ ಬಿಸಿಸಿಐ(BCCI) ಜಾರಿಗೆ ತಂದಿರುವುದು ನಿಮಗೆ ಗೊತ್ತೆ ಇದೆ. ಅದೇ ರೀತಿ ಇದೀಗ ಮತ್ತೊಂದು ದಿಟ್ಟ ಹೆಜ್ಜೆ ಇಟ್ಟಿದೆ.

ಪುರುಷರ ದೇಶಿಯ ಕ್ರಿಕೆಟ್‌ ಮಾದರಿಯಲ್ಲೇ ವನಿತೆಯರಿಗೂ ರೆಡ್‌ ಬಾಲ್‌ ಕ್ರಿಕೆಟ್‌(Women’s Red-Ball Tournament) ಪಂದ್ಯವನ್ನು ನಡೆಸಲು ಬಿಸಿಸಿಐ ಮುಂದಾಗಿದೆ. ಇದಕ್ಕಾಗಿ ಮಾರ್ಚ್ 28ರಿಂದ ಸೀನಿಯರ್ ಇಂಟರ್ ಜೋನಲ್ ಮಲ್ಟಿ-ಡೇ ಟ್ರೋಫಿಯನ್ನು (Senior Inter Zonal Multi Day Trophy) ನಡೆಸಲು ನಿರ್ಧರಿಸಲಾಗಿದೆ.

ಈ ಹಿಂದೆ ಮಹಿಳಾ ಕ್ರಿಕೆಟಿಗರಿಗೆ ಪುರುಷರಿಗಿಂತ ಕಡಿಮೆ ವೇತನ ಸಿಗುತ್ತಿತ್ತು. ಈ ತಾರತಮ್ಯವನ್ನು ಹೋಗಲಾಡಿಸಲು ಬಿಸಿಸಿಐ 2022ರಲ್ಲಿ ಪ್ರಮುಖ ನಿರ್ಧರವೊಂದನ್ನು ಕೈಗೊಂಡಿತ್ತು. ಗುತ್ತಿಗೆಯಲ್ಲಿರುವ ಆಟಗಾರರಿಗೆ ಸಮಾನ ಮ್ಯಾಚ್ ಫೀಸ್ ನೀಡಲು ನಿರ್ಧರಿಸಿತ್ತು. ಅದರಂತೆ ಈಗ ಮಹಿಳಾ ಕ್ರಿಕೆಟಿಗರಿಗೆ ಪುರುಷರಿಗೆ ಸಮಾನವಾದ ಪಂದ್ಯ ಶುಲ್ಕವನ್ನು ನೀಡಲಾಗುತ್ತದೆ. ಟೆಸ್ಟ್​ನಲ್ಲಿ ಪ್ರತಿ ಪಂದ್ಯಕ್ಕೆ 15 ಲಕ್ಷ ರೂ., ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರೂ., ಟಿ20 ಅಂತಾರಾಷ್ಟ್ರೀಯ ಪಂದ್ಯಕ್ಕೆ 3 ಲಕ್ಷ ರೂ ನೀಡಲಾಗುತ್ತದೆ.

ಇದೀಗ ಮಹಿಳೆಯರಿಗೂ ದೇಶೀಯ ಕ್ರಿಕೆಟ್​ ಟೂರ್ನಿಯನ್ನು ಏರ್ಪಡಿಸಿ ಈ ಮೂಲಕ ಮಹಿಳಾ ಕ್ರಿಕೆಟ್​ನ ಶ್ರೇಯಕ್ಕಾಗಿ ಬಿಸಿಸಿಐ ಪಣತೊಟ್ಟಿದೆ. ಪುಣೆಯಲ್ಲಿ ಪಂದ್ಯಗಳನ್ನು ನಡೆಸಲು ಅಂತಿಮ ಸಿದ್ಧತೆ ನಡೆದಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಬಿಸಿಸಿಐ ತೆಗೆದುಕೊಂಡ ಈ ನಿರ್ಧಾರಕ್ಕೆ ಅನೇಕ ಮಹಿಳಾ ಮತ್ತು ಪುರುಷ ಕ್ರಿಕೆಟಿಗರು ಸ್ವಾಗತಿಸಿದ್ದಾರೆ.

ಇದನ್ನೂ ಓದಿ WPL 2024: ಮೈದಾನಕ್ಕೆ ನುಗ್ಗಿ ಪಂದ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯ ಬಂಧನ

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಈ ಪಂದ್ಯಾವಳಿಗೆ ಆತಿಥ್ಯ ವಹಿಸಲಿದೆ. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಮಧ್ಯ ಮತ್ತು ಈಶಾನ್ಯ ವಲಯಗಳನ್ನು ಪ್ರತಿನಿಧಿಸುವ ಆರು ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ತಲಾ ಮೂರು ದಿನಗಳ ಐದು ಪಂದ್ಯಗಳ ಸರಣಿಯಲ್ಲಿ ತಂಡಗಳು ಸ್ಪರ್ಧಿಸಲಿವೆ.

ಪ್ರಸಕ್ತ ಸಾಗುತ್ತಿಡುವ 2ನೇ ಆವೃತ್ತಿಯ ಡಬ್ಲ್ಯುಪಿಎಲ್​ ಟೂರ್ನಿ ಮುಕ್ತಾಯದ ಬಳಿಕ ರೆಡ್‌ ಬಾಲ್‌ ಪಂದ್ಯಾವಳಿ ಪ್ರಾರಂಭವಾಗಲಿದೆ. ಮಾರ್ಚ್ 28ರಂದು ಪೂರ್ವ ವಲಯ ಮತ್ತು ಈಶಾನ್ಯ ವಲಯ, ಪಶ್ಚಿಮ ವಲಯ ಮತ್ತು ಕೇಂದ್ರ ವಲಯಗಳ ನಡುವೆ ಕ್ವಾರ್ಟರ್ ಫೈನಲ್ ಪಂದ್ಯಗಳು ಆರಂಭವಾಗಲಿವೆ. ಏಪ್ರಿಲ್ 3ರಂದು ಸೆಮಿಫೈನಲ್ ಪಂದ್ಯಗಳು, ಫೈನಲ್ ಪಂದ್ಯ ಏಪ್ರಿಲ್ 9ರಂದು ನಡೆಯಲಿದೆ.

Continue Reading

ಕ್ರೀಡೆ

Nathan Lyon: ವಿಂಡೀಸ್​ ದಿಗ್ಗಜ ವಾಲ್ಶ್ ದಾಖಲೆ ಮುರಿದ ನಥಾನ್​ ಲಿಯೋನ್

ನಥಾನ್​ ಲಿಯೋನ್(Nathan Lyon)​ ಅವರು ವೆಸ್ಟ್​ ಇಂಡೀಸ್​ ದಿಗ್ಗಜ ಬೌಲರ್​ ಕೊರ್ಟ್ನಿ ವಾಲ್ಶ್(Courtney Walsh) ಅವರ ಟೆಸ್ಟ್ ವಿಕೆಟ್ ದಾಖಲೆನ್ನು ಮುರಿದಿದ್ದಾರೆ.

VISTARANEWS.COM


on

nathan lyon
Koo

ಸಿಡ್ನಿ: ಗಾಯದ ಸಮಸ್ಯೆಯಿಂದಾಗಿ ಕೆಲವು ವರ್ಷ ಕ್ರಿಕೆಟ್​ನಿಂದ ದೂರ ಉಳಿದಿದ್ದ ಆಸ್ಟ್ರೇಲಿಯಾದ ಸ್ಪಿನ್ನರ್​ ನಥಾನ್​ ಲಿಯೋನ್(Nathan Lyon)​ ಅವರು ವೆಸ್ಟ್​ ಇಂಡೀಸ್​ ದಿಗ್ಗಜ ಬೌಲರ್​ ಕೊರ್ಟ್ನಿ ವಾಲ್ಶ್(Courtney Walsh) ಅವರ ಟೆಸ್ಟ್ ವಿಕೆಟ್ ದಾಖಲೆನ್ನು ಮುರಿದಿದ್ದಾರೆ. ಈ ಮೂಲಕ ಅತ್ಯಧಿಕ ಟೆಸ್ಟ್​ ವಿಕೆಟ್ ಕಿತ್ತ ಬೌಲರ್​ಗಳ ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೇರಿದ್ದಾರೆ.

ನ್ಯೂಜಿಲ್ಯಾಂಡ್​ ವಿರುದ್ಧ ಸಾಗುತ್ತಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ನಾಲ್ಕು ವಿಕೆಟ್ ಕೀಳುವ ಮೂಲಕ ಲಿಯೋನ್ ಈ ಸಾಧನೆ ಮಾಡಿದರು. ಶ್ರೀಲಂಕಾದ ಮಾಜಿ ಆಟಗಾರ ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾದ ಶೇನ್ ವಾರ್ನ್ ಈ ಸಾಧಕರ ಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನ ಪಡೆದಿದ್ದಾರೆ. ಪ್ರಸಕ್ತ ಕ್ರಿಕೆಟ್​ ಆಡುತ್ತಿರುವ ಆಟಗಾರರ ಪೈಕಿ ಟೆಸ್ಟ್​ನಲ್ಲಿ ಅತಿ ಹೆಚ್ಚು ವಿಕೆಟ್​ ಕಿತ್ತ ದಾಖಲೆ ಕೂಡ ಜೇಮ್ಸ್ ಆಂಡರ್ಸನ್ ಹೆಸರಿನಲ್ಲಿದೆ.

ಕೊರ್ಟ್ನಿ ವಾಲ್ಶ್ ಅವರು 519 ವಿಕೆಟ್​ಗಳ ದಾಖಲೆಯೊಂದಿಗೆ ಇದುವರೆಗೆ 7ನೇ ಸ್ಥಾನದಲ್ಲಿದ್ದರು. ಆದರೆ ಇದೀಗ ನಥಾನ್​ ಲಿಯೋನ್ 521* ವಿಕೆಟ್​ ಪಡೆಯುವ ಮೂಲಕ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ. 36 ವರ್ಷದ ಲಿಯೋನ್ ಇದುವರೆಗೆ 128 ಟೆಸ್ಟ್ ಆಡಿದ್ದಾರೆ. ಅಚ್ಚರಿ ಎಂದರೆ 32440 ಎಸೆತ ಎಸೆದಿರುವ ಲಿಯಾನ್ 31608 ಎಸೆತಗಳವರೆಗೆ ಒಂದೇ ಒಂದು ನೋ ಬಾಲ್ ಎಸೆಯಲಿಲ್ಲ. 50 ರನ್​ಗೆ 8 ವಿಕೆಟ್​ ಉಡಾಯಿಸಿದ್ದು ಇವರ ವೈಯಕ್ತಿಕ ಗರಿಷ್ಠ ಸಾಧನೆಯಾಗಿದೆ. 23 ಬಾರಿ 5 ವಿಕೆಟ್​ ಗೊಂಚಲು ಪಡೆದಿದ್ದಾರೆ. 4 ಬಾರಿ 10 ವಿಕೆಟ್​ಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ Nathan Lyon: ಟೆಸ್ಟ್​ ಕ್ರಿಕೆಟ್​ನಲ್ಲಿ ನೂತನ ದಾಖಲೆ ಬರೆದ ನಥಾನ್​ ಲಿಯೋನ್

ಟೆಸ್ಟ್​ ಕ್ರಿಕೆಟ್​ನಲ್ಲಿ 700 ವಿಕೆಟ್​ಗಳ ಸನಿಹದಲ್ಲಿರುವ ಆ್ಯಂಡರ್ಸನ್​ಗೆ ಈ ಮೈಲುಗಲ್ಲು ನಿರ್ಮಿಸಲು ಇನ್ನು ಕೇವಲ 2 ವಿಕೆಟ್​ಗಳ ಅಗತ್ಯವಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಭಾರತ ವಿರುದ್ಧದ ಅಂತಿಮ ಟೆಸ್ಟ್​ನಲ್ಲಿ(India vs England 5th Test) ಅವರು ಈ ದಾಖಲೆ ಬರೆಯುವ ವಿಶ್ವಾಸದಲ್ಲಿದ್ದಾರೆ. ಭಾರತ ಪ್ರವಾಸದ ವೇಳೆಯೇ ಆ್ಯಂಡರ್ಸನ್ ಅವರು 700 ವಿಕೆಟ್​ ಸಾಧನೆ ಭಾರತದ ನೆಲದಲ್ಲೇ ಮಾಡುತ್ತೇನೆ ಎಂದು ಭವಿಷ್ಯ ನುಡಿದಿದ್ದರು. ಇದೀಗ ಕಾಲ ಸನ್ನಿಹಿತವಾದಂತಿದೆ.

ಟೆಸ್ಟ್​ನಲ್ಲಿ ಅತಿ ಹೆಚ್ಚು ವಿಕೆಟ್​ ಪಡೆದ ಬೌಲರ್​ಗಳ ಪಟ್ಟಿ

ಆಟಗಾರದೇಶವಿಕೆಟ್​
ಮುತ್ತಯ್ಯ ಮುರಳೀಧರನ್ಶ್ರೀಲಂಕಾ800
ಶೇನ್ ವಾರ್ನ್ ಆಸ್ಟ್ರೇಲಿಯಾ708
ಜೇಮ್ಸ್ ಆಂಡರ್ಸನ್ ಇಂಗ್ಲೆಂಡ್​696*
ಅನಿಲ್ ಕುಂಬ್ಳೆಭಾರತ619
ಸ್ಟುವರ್ಟ್ ಬ್ರಾಡ್ಇಂಗ್ಲೆಂಡ್​604
ಗ್ಲೆನ್ ಮೆಕ್‌ಗ್ರಾತ್ಆಸ್ಟ್ರೇಲಿಯಾ563
ನಥಾನ್​ ಲಿಯೊನ್​ಆಸ್ಟ್ರೇಲಿಯಾ521*
ಕರ್ಟ್ನಿ ವಾಲ್ಷ್ ವೆಸ್ಟ್​ ಇಂಡೀಸ್​519
ರವಿಚಂದ್ರನ್ ಅಶ್ವಿನ್ಭಾರತ501*
ಡೇಲ್ ಸ್ಟೈನ್ದಕ್ಷಿಣ ಆಫ್ರಿಕಾ439
Continue Reading

ಕ್ರೀಡೆ

Pro Kabaddi Final: ಕೆಲವೇ ಕ್ಷಣದಲ್ಲಿ ಫೈನಲ್; ಚೊಚ್ಚಲ ಪ್ರಶಸ್ತಿಗಾಗಿ ಪುಣೇರಿ-ಹರಿಯಾಣ ಫೈಟ್​

ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಪ್ರಶಸ್ತಿ ಕಾಳಗದಲ್ಲಿ ಪುಣೇರಿ ಪಲ್ಟಾನ್‌(Puneri Paltan) ಮತ್ತು ಹರಿಯಾಣ ಸ್ಟೀಲರ್ಸ್‌(Haryana Steelers) ಕಾದಾಟ ನಡೆಸಲಿದೆ.

VISTARANEWS.COM


on

Pro Kabaddi Final
Koo

ಹೈದರಾಬಾದ್​: 10ನೇ ಆವೃತ್ತಿ ಪ್ರೊ ಕಬಡ್ಡಿಯ ಫೈನಲ್(Pro Kabaddi Final)​ ಪಂದ್ಯ ಇನ್ನೇನು ಕೆಲವೇ ಕ್ಷಣದಲ್ಲಿ ಆರಂಭಗೊಳ್ಳಲಿದೆ. ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಪ್ರಶಸ್ತಿ ಕಾಳಗದಲ್ಲಿ ಪುಣೇರಿ ಪಲ್ಟಾನ್‌(Puneri Paltan) ಮತ್ತು ಹರಿಯಾಣ ಸ್ಟೀಲರ್ಸ್‌(Haryana Steelers) ಕಾದಾಟ ನಡೆಸಲಿದೆ. ಇಲ್ಲಿ ಯಾರೇ ಗೆದ್ದರು ಕೂಡ ಚೊಚ್ಚಲ ಪ್ರಶಸ್ತಿ ಗೆದ್ದ ಸಾಧನೆ ಮಾಡಲಿದ್ದಾರೆ.

ಬುಧವಾರ ನಡೆದಿದ್ದ 2 ಸೆಮಿಫೈನಲ್‌ನಲ್ಲಿ ಪುಣೆ ತಂಡ 3 ಬಾರಿ ಚಾಂಪಿಯನ್ ಪಾಟ್ನಾ ಪೈರೇಟ್ಸ್‌ ವಿರುದ್ಧ 37-21 ಅಂಕಗಳಿಂದ, ಹರ್ಯಾಣ ಹಾಲಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ 31-27 ಅಂಕಗಳಿಂದ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತಿಗೇರಿದವು.

ಪುಣೇರಿ ತಂಡ ಈ ಆವೃತ್ತಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡಿ ಆಡಿದ 22 ಪಂದ್ಯಗಳಲ್ಲಿ 17 ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿತ್ತು. ಕನ್ನಡಿಗ ಕೋಚ್‌ ಬಿ.ಸಿ. ರಮೇಶ್‌ ಮಾರ್ಗ ದರ್ಶನವೂ ಕೂಡ ಈ ತಂಡದ ಯಶಸ್ಸಿಗೆ ಪ್ರಮುಖ ಕಾರಣ. ನಾಯಕ ಅಸ್ಲಾಂ ಇನಾಮ್ದಾರ್‌, ಪಂಕಜ್​ ಅಭಿನೇಶ್​, ಮೊಹಮ್ಮದ್ರೇಜಾ ಚಿಯಾನೆಹ್ ಮತ್ತು ಮೋಹಿತ್​ ತಂಡದ ಪ್ರಮುಖ ಆಟಗಾರರಾಗಿದ್ದಾರೆ.

ಇದನ್ನೂ ಓದಿ Pro Kabaddi: ಹಾಲಿ ಚಾಂಪಿಯನ್​ ಜೈಪುರಕ್ಕೆ ಸೋಲು; ಪುಣೇರಿ-ಹರ್ಯಾಣ ಫೈನಲ್​ ಫೈಟ್​

ಹರಿಯಾಣ ತಂಡ ಇದೇ ಮೊದಲ ಬಾರಿಗೆ ಫೈನಲ್​ ಪಂದ್ಯ ಆಡುತ್ತಿದೆ. ಜತೆಗೆ ಹಾಲಿ ಚಾಂಪಿಯನ್​ ಜೈಪುರಕ್ಕೆ ಸೋಲುಣಿಸಿದ್ದು ಕೂಡ ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಪುಣೇರಿ ಪಲ್ಟಾನ್​ಗೆ ಇದು ಸತತ ಎರಡನೇ ಫೈನಲ್​ ಪಂದ್ಯ. ಕಳೆದ ಬಾರಿಯೂ ಫೈನಲ್​ ಪ್ರವೇಶಿಸಿತ್ತು. ಆದರೆ ಇಲ್ಲಿ ಸೋತು ರನ್ನರ್​ ಅಪ್​ ಸ್ಥಾನಕ್ಕೆ ತೃತ್ತಿಪಟ್ಟಿತ್ತು. ಫೈನಲ್‌ನಲ್ಲಿ ಪ್ರಶಸ್ತಿ ಗೆದ್ದ ತಂಡ 3 ಕೋಟಿ ರೂ. ನಗದು ಪುರಸ್ಕಾರ ಬಾಚಿಕೊಳ್ಳಲಿದೆ. ರನ್ನರ್‌ ಅಪ್‌ ತಂಡಕ್ಕೆ 1.8 ಕೋಟಿ ರೂ. ಬಹುಮಾನ ಲಭಿಸಲಿದೆ.

ಮುಖಾಮುಖಿ


ಒಟ್ಟು ಪಂದ್ಯಗಳು 14

ಪುಣೇರಿ ಜಯ 8

ಹರಿಯಾಣ ಜಯ 5

ಪಂದ್ಯ ಟೈ 1

Continue Reading
Advertisement
Rahanna In Anant Ambani Pre Wedding
ದೇಶ3 mins ago

ಅಂಬಾನಿ ಮಗನ ಮದುವೆ ಸಂಭ್ರಮದಲ್ಲಿ ರಿಹಾನಾ ಶೋ; ಅವರ ಸಂಭಾವನೆ ಕೇಳಿದರೆ ಶಾಕ್!

Blast in Bengaluru Anant Ambani
ಬೆಂಗಳೂರು13 mins ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಅಂಬಾನಿ ಪುತ್ರನ ಮದುವೆಗೂ ಕನೆಕ್ಷನ್‌?

Blast in Bengaluru Timer kept at 1 pm DK Shivakumar reveals details
ಬೆಂಗಳೂರು15 mins ago

Blast in Bengaluru: ಬಾಂಬ್‌ ಇಟ್ಟು ಇಡ್ಲಿ ತಿಂದ; 1 ಗಂಟೆಗೆ ಟೈಮರ್‌ ಇಟ್ಟ: ಪಿನ್‌ ಟು ಪಿನ್‌ ಮಾಹಿತಿ ಬಿಚ್ಚಿಟ್ಟ ಡಿಕೆಶಿ

PSI Exam
ಕರ್ನಾಟಕ23 mins ago

PSI Exam Result: ಪಿಎಸ್‌ಐ ಮರು ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ABVP demands strict action against those who shouted pro Pak slogan
ರಾಯಚೂರು24 mins ago

Raichur News: ಪಾಕ್‌ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಎಬಿವಿಪಿ ಆಗ್ರಹ

Inauguration programme of new Annapurna Bhojanalaya building
ಶಿವಮೊಗ್ಗ27 mins ago

Hosanagara News: ಪಂಚ ಆಲಯಗಳಿಂದ ಗ್ರಾಮಾಭಿವೃದ್ಧಿ ಸಾಧ್ಯ: ಡಾ.ಕೆ.ವಿ.ಪತಂಜಲಿ

Fishes die in Hottakeri lake
ಶಿವಮೊಗ್ಗ28 mins ago

Shivamogga News: ಹೊಟ್ಟಕೇರಿ ಕೆರೆಯಲ್ಲಿ ನೂರಾರು ಮೀನುಗಳ ಸಾವು

Paytm
ದೇಶ46 mins ago

Paytm Fine: ನಿಷೇಧದ ಬೆನ್ನಲ್ಲೇ ಪೇಟಿಎಂಗೆ ಮತ್ತೊಂದು ಶಾಕ್‌, ಬಿತ್ತು 5.49 ಕೋಟಿ ರೂ. ದಂಡ

Ishan Kishan
ಕ್ರೀಡೆ54 mins ago

Ishan Kishan: ರಣಜಿ ಟೂರ್ನಿಗೆ ಚಕ್ಕರ್​, ಅನಂತ್ ಅಂಬಾನಿ ವಿವಾಹ ಪೂರ್ವ ಸಂಭ್ರಮಕ್ಕೆ ಹಾಜರ್!

Ranil Wickremesinghe And Narendra Modi
ದೇಶ1 hour ago

ಚೀನಾವನ್ನು ಕೈಬಿಟ್ಟು ಭಾರತಕ್ಕೆ ಮಹತ್ವದ ಗುತ್ತಿಗೆ ಕೊಟ್ಟ ಶ್ರೀಲಂಕಾ; ರಾಜತಾಂತ್ರಿಕ ಮುನ್ನಡೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Blast in Bengaluru Time bomb planted in rameshwaram cafe Important evidence found
ಬೆಂಗಳೂರು3 hours ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು5 hours ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ6 hours ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ16 hours ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ2 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ3 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ3 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ3 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ4 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

ಟ್ರೆಂಡಿಂಗ್‌