Site icon Vistara News

T20 World Cup 2024: ಈ ಮೊಬೈಲ್‌ ಆ್ಯಪ್​ನಲ್ಲಿ ಉಚಿತವಾಗಿ ಪ್ರಸಾರಗೊಳ್ಳಲಿದೆ ಟಿ20 ವಿಶ್ವಕಪ್​

T20 World Cup 2024

ಮುಂಬಯಿ: ಅಮೆರಿಕಾ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್(T20 World Cup 2024) ಟೂರ್ನಿ ಜೂನ್​ನಲ್ಲಿ ನಡೆಯಲಿದೆ. ಈಗಾಗಲೇ ಟೂರ್ನಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ.  ಪಂದ್ಯಾವಳಿ ಜೂನ್ 2 ರಿಂದ ಆರಂಭಗೊಂಡು ಜೂನ್​ 29ರ ತನಕ ನಡೆಯಲಿದೆ. ಒಟ್ಟು 55 ಪಂದ್ಯಗಳು ಇರಲಿದೆ. ಟೂರ್ನಿ ಆರಂಭಕ್ಕೆ ಇನ್ನು ಸರಿ ಸುಮಾರು 3 ತಿಂಗಳು ಬಾಕಿ ಇರುವಾಗಲೇ ಡಿಸ್ನಿ ಹಾಟ್​ಸ್ಟಾರ್(Hotstar) ಕ್ರಿಕೆಟ್​ ಪ್ರಿಯರಿಗೆ ಸಿಹಿ ಸುದ್ದಿ ನೀಡಿದೆ.

2023ರ ಏಕದಿನ ವಿಶ್ವಕಪ್​ ಟೂರ್ನಿಯಂತೆಯೇ ಈ ಬಾರಿಯ ಟಿ20 ವಿಶ್ವಕಪ್​ನ ಎಲ್ಲ​ ಪಂದ್ಯಗಳನ್ನು ಮೊಬೈಲ್​ನಲ್ಲಿ ಉಚಿತವಾಗಿ ಪ್ರಸಾರ ಮಾಡುವುದಾಗಿ ಡಿಸ್ನಿ ಹಾಟ್​ಸ್ಟಾರ್(disney+ hotstar) ಘೋಷಿಸಿದೆ. ಆದರೆ ಈ ಸೌಲಭ್ಯ ಕೇವಲ ಮೊಬೈಲ್ ಬಳಕೆದಾರರಿಗೆ ಮಾತ್ರ ಸಿಗಲಿದೆ.

ಇದನ್ನೂ ಓದು WPL 2024: ಗೆಲುವಿನೊಂದಿಗೆ ತವರಿನ ಅಭಿಯಾನ ಮುಗಿಸಿದ ಆರ್​ಸಿಬಿ; ಯುಪಿ ವಿರುದ್ಧ 23 ರನ್​ ಜಯ

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಆದರೆ, ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Exit mobile version