ಹಲವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾದ ಅಹಮದಾಬಾದ್​ನ​ ಪಿಚ್​ ಹೇಗಿದೆ? - Vistara News

ಕ್ರಿಕೆಟ್

ಹಲವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾದ ಅಹಮದಾಬಾದ್​ನ​ ಪಿಚ್​ ಹೇಗಿದೆ?

1984ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ಈ ಅಂಗಳದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲಾಗಿತ್ತು. ಆದರೆ ಆ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿತ್ತು.

VISTARANEWS.COM


on

Groundstaff at the Narendra Modi Stadium put the roller to work ahead of the final
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್: ಕ್ರಿಕೆಟ್​ ಅಭಿಮಾನಿಗಳು ಕಾದು ಕುಳಿತಿರುವ ಭಾರತ ಮತ್ತು ಆಸ್ಟ್ರೇಲಿಯಾ(India vs Australia, Final) ನಡುವಣ ವಿಶ್ವಕಪ್​ ಫೈನಲ್​ ಪಂದ್ಯಕ್ಕೆ ಗಂಟೆಗಳ ಲೆಕ್ಕಾಚಾರದಲ್ಲಿ ಇನ್ನೊಂದೆ ದಿನ ಬಾಕಿ ಉಳಿದಿದೆ. ಭಾನುವಾರ ಮಧ್ಯಾಹ್ನ ಪಂದ್ಯ ಆರಂಭಗೊಳ್ಳಲಿದೆ. ಆದರೆ ಸದ್ಯಕ್ಕಿರುವ ಕುತೂಹಲವೇನೆಂದರೆ ಅಹಮದಾಬಾದ್​ನ ಪಿಚ್(Ahmedabad Pich)​ ಹೇಗೆ ವರ್ತಿಸಲಿದೆ ಎನ್ನುವುದು.

ಆಸ್ಟ್ರೇಲಿಯಾ ವಿರುದ್ಧವೇ ಮೊದಲ ಪಂದ್ಯ…

ಮೊಟೆರಾ ಕ್ರೀಡಾಂಗಣ ನಿರ್ಮಾಣವಾಗಿದ್ದು 1982ರಲ್ಲಿ. ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಅಡಿಯಲ್ಲಿ ನಿರ್ಮಾಣಗೊಂಡ ಈ ಸ್ಟೇಡಿಯಂನ ಆಗಿನ ಹೆಸರು ಸರ್ದಾರ್ ಪಟೇಲ್ ಸ್ಟೇಡಿಯಂ. 1984ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ಈ ಅಂಗಳದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲಾಗಿತ್ತು. ಆದರೆ ಆ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿತ್ತು.

ಇದನ್ನೂ ಓದಿ IND vs AUS: ಭಾರತ-ಆಸೀಸ್​ ವಿಶ್ವಕಪ್​ ಸಾಧನೆಯ ಅಂಕಿ ಅಂಶ ಹೇಗಿದೆ?

ಹಲವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿ

ಹಲವು ಐತಿಹಾಸಿಕ ಘಟನೆಗಳಿಗೆ ಈ ಕ್ರೀಡಾಂಗಣ ಸಾಕ್ಷಿಯಾಗಿದೆ. ಹಲವು ‘ಪ್ರಥಮ’ಗಳು ಈ ಮೊಟೆರಾ ಮೈದಾನದಲ್ಲಿ ದಾಖಲಾಗಿದೆ. 1987ರಲ್ಲಿ ಇದೇ ಮೈದಾನದಲ್ಲಿ ಭಾರತದ ಸುನೀಲ್ ಗಾವಸ್ಕರ್ ಟೆಸ್ಟ್ ಕ್ರಿಕೆಟ್ ನಲ್ಲಿ ಹತ್ತು ಸಾವಿರ ರನ್ ಗಳಿಸಿದ ವಿಶ್ವದ ಮೊದಲ ಸಾಧಕನಾಗಿ ಮೂಡಿ ಬಂದಿದ್ದರು. ಏಳು ವರ್ಷದ ನಂತರ ಇದೇ ಮೈದಾನದಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆಯನ್ನು ಕಪಿಲ್ ದೇವ್ ಮಾಡಿದ್ದರು. ಅಂದು 432ನೇ ವಿಕೆಟ್ ಪಡೆದು ಸರ್ ರಿಚರ್ಡ್ ಹ್ಯಾಡ್ಲಿ ದಾಖಲೆಯನ್ನು ಮುರಿದಿದ್ದರು. 2011ರಲ್ಲಿ ಇದೇ ಮೊಟೆರಾ ಅಂಗಳದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ ನಲ್ಲಿ 18 ಸಾವಿರ ರನ್ ಬಾರಿಸಿದ ಏಕೈಕ ಆಟಗಾರ ಎಂಬ ಸಾಧನೆ ಮಾಡಿದ್ದರು.

ಯುವಿ ಬ್ಯಾಟಿಂಗ್​ ಸಾಹಸ…

2011ರ ವಿಶ್ವಕಪ್ ಕ್ವಾರ್ಟರ್ ಫೈನಲ್ ಪಂದ್ಯವನ್ನು ಯಾವ ಭಾರತೀಯ ಅಭಿಮಾನಿಯೂ ಮರೆಯಲು ಅಸಾಧ್ಯ. ಆಸ್ಟ್ರೇಲಿಯಾ ವಿರುದ್ಧದ ಆ ಪಂದ್ಯದಲ್ಲಿ ವೀರೋಚಿತವಾಗಿ ಹೋರಾಡಿದ್ದ ಯುವರಾಜ್ ಸಿಂಗ್ ಭಾರತಕ್ಕೆ ಜಯ ತಂದಿತ್ತಿದ್ದರು.

ಇದನ್ನೂ ಓದಿ IND vs AUS: ಗಂಗೂಲಿ ಮಾಡಿದ ಎಡವಟ್ಟನ್ನು ರೋಹಿತ್​ ಶರ್ಮಾ ಮಾಡದಿರಲಿ…

ಪುನರ್ ನಿರ್ಮಾಣ

2015ರವರೆಗೆ ಮೊಟೆರಾ ಸರ್ದಾರ್ ಪಟೇಲ್ ಮೈದಾನದಲ್ಲಿ 12 ಟೆಸ್ಟ್, 23 ಏಕದಿನ ಮತ್ತು ಒಂದು ಟಿ20 ಪಂದ್ಯವನ್ನು ಯಶಸ್ವಿಯಾಗಿ ನಡೆಸಲಾಗಿದೆ. 2015ರಲ್ಲಿ ಈ ಮೈದಾನವನ್ನು ಸಂಪೂರ್ಣವಾಗಿ ಕೆಡವಲಾಯಿತು. ಬ್ಯಾಟಿಂಗ್​ ಟ್ರ್ಯಾಕ್​ ಆಗಿದ್ದ ಈ ಪಿಚ್​ ಈಗ ಬೌಲಿಂಗ್​ ಟ್ರ್ಯಾಕ್​ ಆಗಿ ಮಾರ್ಪಟ್ಟಿದೆ. ಇಲ್ಲಿ ಆಡಿದ ಈ ಬಾರಿಯ 4 ವಿಶ್ವಕಪ್​ ಪಂದ್ಯಗಳಲ್ಲಿ 286 ರನ್‌ಗಳೇ ಅತಿ ದೊಡ್ಡ ಸ್ಕೋರ್ ಆಗಿದೆ. ಯಾವ ಪಂದ್ಯದಲ್ಲೂ 300ರ ಗಡಿ ದಾಟಲು ಸಾಧ್ಯವಾಗಲಿಲ್ಲ.

315 ರನ್ ಗಳಿಸಿದರೆ ಗೆಲುವು ಖಚಿತ

ಫೈನಲ್​ ಪಂದ್ಯಕ್ಕೆ ಹೊಸ ಪಿಚ್​ನಲ್ಲಿ ಆಡಿಸಲಾಗುವುದು ಎಂಬ ಮಾತು ಕೂಡ ಕೇಳಿ ಬಂದಿದೆ. ಇದು ಸ್ಪೋ ಬ್ಯಾಟಿಂಗ್​ ಪಿಚ್​ ಎಂದು ಕೆಲವರು ಹೇಳಿದ್ದರೆ, ಇನ್ನು ಕೆಲವರು ಇದು ಸಂಪೂರ್ಣ ಬ್ಯಾಟಿಂಗ್​ ಪಿಚ್​ ಎಂದಿದ್ದಾರೆ. ಆದರೆ ಸ್ಥಳೀಯ ಪಿಚ್​ ಕ್ಯುರೇಟರ್​ ನೀಡಿದ ಮಾಹಿತಿಯ ಪ್ರಕಾರ, ಇಲ್ಲಿ ಸ್ವಲ್ಪ ದೊಡ್ಡ ಸ್ಕೋರ್ ಕಲೆಹಾಕಬಹುದಾಗಿದೆ. ಆದರೆ ನಿರಂತರವಾಗಿ ಹಾರ್ಡ್ ಹಿಟ್ಟಿಂಗ್ ಮಾಡಲು ಸಾಧ್ಯವಿಲ್ಲ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ತಂಡ 315 ರನ್ ಗಳಿಸಿದರೆ ಗೆಲುವು ಖಚಿತ. ಚೇಸಿಂಗ್ ಸುಲಭವಲ್ಲ ಎಂದು ಹೇಳಿದ್ದಾರೆ. 2023ರ ವಿಶ್ವಕಪ್‌ಗೂ ಮುನ್ನ ಅಹಮದಾಬಾದ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಲಾ ಒಂದು ಪಂದ್ಯವನ್ನಾಡಿತ್ತು. ಈ ಪಂದ್ಯವನ್ನು ಭಾರತ ಗೆದ್ದು ಬೀಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

WPL 2024: ಭುಜದ ಗಾಯ; ಟೂರ್ನಿಯಿಂದಲ್ಲೇ ಹೊರಬಿದ್ದ ಕನ್ನಡತಿ ವೃಂದಾ

ಕರ್ನಾಟಕದ ಯುವ ಬ್ಯಾಟರ್‌ ವೃಂದಾ ದಿನೇಶ್(Vrinda Dinesh) ಅವರು ಭುಜದ ಗಾಯದಿಂದಾಗಿ ಸಂಪೂರ್ಣವಾಗಿ ಡಬ್ಲ್ಯುಪಿಎಲ್​ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ

VISTARANEWS.COM


on

vrinda dinesh injury
Koo

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2024ರ(WPL 2024) ಮಿನಿ ಹರಾಜಿನಲ್ಲಿ 1.30 ಕೋಟಿಗೆ ಯು.ಪಿ ವಾರಿಯರ್ಸ್‌ ಪಾಲಾಗಿದ ಕರ್ನಾಟಕದ ಯುವ ಬ್ಯಾಟರ್‌ ವೃಂದಾ ದಿನೇಶ್(Vrinda Dinesh) ಅವರು ಭುಜದ ಗಾಯದಿಂದಾಗಿ ಸಂಪೂರ್ಣವಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಬುಧವಾರ ಮುಂಬೈ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್​ ಮಾಡುವ ವೇಳೆ ವೃಂದಾ ಭಜದ ಗಾಯಕ್ಕೆ ತುತ್ತಾಗಿದ್ದರು. ಅವರ ಗಾಯದ ಪ್ರಮಾಣ ಗಂಭೀರವಾಗಿರುವ ಕಾರಣದಿಂದಾಗಿ ಅವರು ಈ ಬಾರಿಯ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ವೃಂದಾ ದಿನೇಶ್ ಈ ಬಾರಿ ಮೂರು ಪಂದ್ಯಗಳನ್ನು ಆಡಿದ್ದರು. ಆರ್​ಸಿಬಿ ವಿರುದ್ಧ ಆಡಿದ ಚೊಚ್ಚಲ ಪಂದ್ಯದಲ್ಲಿ 18 ರನ್ ಬಾರಿಸಿದ್ದ ಅವರು ಡೆಲ್ಲಿ ಎದುರಿನ ದ್ವಿತೀಯ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಮುಂಬೈ ಎದುರಿನ ಮೂರನೇ ಪಂದ್ಯದಲ್ಲಿ ಗಾಯದಿಂದಾಗಿ ಬ್ಯಾಟಿಂಗ್​ ನಡೆಸಿರಲಿಲ್ಲ.

ಬೆಂಗಳೂರಿನವರದಾದ ವೃಂದಾ ದಿನೇಸ್​ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿ. ಸೀನಿಯರ್ ಮಹಿಳಾ ಏಕದಿನ ಟ್ರೋಫಿಯಲ್ಲಿ ಕರ್ನಾಟಕದ ತಂಡವು ಫೈನಲ್ ತಲುಪುವಲ್ಲಿ ವೃಂದಾ ಪ್ರಮುಖ ಪಾತ್ರ ವಹಿಸಿದ್ದರು. 11 ಇನ್ನಿಂಗ್ಸ್‌ ಗಳಲ್ಲಿ 47.70 ರ ಸರಾಸರಿಯಲ್ಲಿ 477 ರನ್ ಗಳಿಸಿದ್ದರು. ವೃಂದಾ ಇತ್ತೀಚೆಗಷ್ಟೇ ಭಾರತ ‘ಎ’ ತಂಡವನ್ನು ಪ್ರತಿನಿಧಿಸಿದ್ದರು. ಆರಂಭಿಕ ಹಂತದಲ್ಲಿ ಕನ್ನಡತಿ ವೃಂದಾ ದಿನೇಶ್ ಅವರು ಡಬ್ಲ್ಯುಪಿಎಲ್​ನಲ್ಲಿ ಅತ್ಯಧಿಕ ಮೊತ್ತಕ್ಕೆ ಸೇಲ್​ ಆದ ಅನ್​ಕ್ಯಾಪ್ಡ್​ ಪ್ಲಯರ್​ ಎನ್ನುವ ಕೀರ್ತಿಗೆ ಪಾತ್ರವಾದರೂ ಈ ಸಂತಸ ಹಚ್ಚು ಕಾಲ ಉಳಿಯಲಿಲ್ಲ. ಕಶ್ವಿ ಗೌತಮ್ ಅವರು ಬರೋಬ್ಬರಿ 2 ಕೋಟಿ ರೂ. ಪಡೆದು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದರು.

ಇದನ್ನೂ ಓದಿ WPL Points Table: ಯುಪಿ​ಗೆ ಸತತ 2ನೇ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಮುಂಬೈ

ಬಿಡ್ಡಿಂಗ್​ ಬಳಿಕ ಮಾತನಾಡಿದ್ದ ವೃಂದಾ ದಿನೇಶ್, ‘ರಾಷ್ಟ್ರೀಯ ತಂಡದ ಪರ ಆಡದ ನನಗೆ ಇಷ್ಟೊಂದು ಬೇಡಿಕೆಯ ಮೊತ್ತ ಸಿಗಬಹುದೆಂದು ಕನಸಿನಲ್ಲಿಯೂ ಎನಿಸಿಕೊಂಡಿರಲಿಲ್ಲ. ಆದರೆ ನಾನು ಯಾವುದಾದರು ಒಂದು ತಂಡಕ್ಕೆ ಸೇಲ್​ ಆಗಬಹುದೆಂದು ನಂಬಿಕೆ ಇತ್ತು. ನನಗೆ ಸಿಕ್ಕ ಈ ಮೊತ್ತದಲ್ಲಿ ನನ್ನ ಎಲ್ಲ ಏಳು- ಬೀಳಿನಲ್ಲಿ ಜತೆಗಿದ್ದ ನನ್ನ ತಂದೆ ಮತ್ತು ತಾಯಿಗೆ ಕಾರನ್ನು ಉಡುಗೊರೆಯಾಗಿ ನೀಡುತ್ತೇನೆ” ಎಂದು ಹೇಳಿದ್ದರು. ಆದರೆ ಅವರಿಗೆ ಈ ಬಾರಿ ಟೂರ್ನಿ ಆಡಲು ಗಾಯದ ಸಮಸ್ಯೆ ಅಡ್ಡಿಪಡಿಸಿದ್ದು ನಿಜಕ್ಕೂ ಬೇಸರದ ಸಂಗತಿ. ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿದ್ದರೆ ಅವರಿಗೆ ಟೀಮ್​ ಇಂಡಿಯಾ ಪರ ಆಡುವ ಅವಕಾಶವೂ ಲಭಿಸುತ್ತಿತ್ತು.

ಯಪಿ ತಂಡ ಸತತ ಎರಡು ಗೆಲುವು ಸಾಧಿಸಿ 4 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಸದ್ಯ 3ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ವೃಂದಾ ದಿನೇಶ್ ಅಲಭ್ಯತೆ ತಂಡದ ಬ್ಯಾಟಿಂಗ್​ ವಿಭಾಗಕ್ಕೆ ಕೊಂಚ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆ ಇದೆ.

Continue Reading

ಕ್ರೀಡೆ

Yuvraj Singh: ಲೋಕಸಭಾ ಸ್ಪರ್ಧೆ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಯುವರಾಜ್​ ಸಿಂಗ್​

ಲೋಕಸಭೆ ಚುನಾವಣೆಯಲ್ಲಿ(Lok Sabha polls 2024) ಗುರುದಾಸ್‌ಪುರದಿಂದ (Gurdaspur) ಸ್ಪರ್ಧಿಸಲಿದ್ದಾರೆ ಎನ್ನುವ ಮಾತನ್ನು ಯುವರಾಜ್​ ಸಿಂಗ್​ ತಳ್ಳಿ ಹಾಕಿದ್ದಾರೆ.

VISTARANEWS.COM


on

Yuvraj Singh
Koo

ಮುಂಬಯಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ(Lok Sabha polls 2024) ಮಾಜಿ ಕ್ರಿಕೆಟರ್‌ ಯುವರಾಜ್‌ ಸಿಂಗ್‌(Yuvraj Singh) ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೆಲವು ದಿನಗಳಿಂದ ಜೋರಾಗಿ ಕೇಳಿ ಬರುತ್ತಿದೆ. ಈ ಬಗ್ಗೆ ಯುವರಾಜ್​ ಸಿಂಗ್ ಅವರು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಯುವರಾಜ್​ ಸಿಂಗ್​ ಅವರು ಪಂಜಾಬ್​ನ ಬಿಜೆಪಿ(Bharatiya Janata Party) ಅಧ್ಯಕ್ಷ ಸುನೀಲ್​ ಜೊಹಾರ್(Sunil Jakhar)​ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕ್ಯಾಬಿನೆಟ್​ನಲ್ಲಿ ಮಂತ್ರಿಯಾಗಿರುವ ಯುವ ಲೀಡರ್​ ಒಬ್ಬರ ಸಂಪರ್ಕದಲ್ಲಿದ್ದಾರೆ ಎಂದು ನ್ಯೂಸ್​ 18 ವರದಿ ಮಾಡಿತ್ತು. ಅವರು ಶೀಘ್ರದಲ್ಲೇ ಬಿಜೆಪಿ ಸೇರಿ ಗುರುದಾಸ್‌ಪುರದಿಂದ(Gurdaspur) ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ, ಎಲ್ಲ ಊಹಾಪೋಹ ಸುದ್ದಿಗಳಿಗೆ ಯುವಿ ಈಗ ಸ್ಪಷ್ಟನೆ ನೀಡಿದ್ದಾರೆ.

​”ಗುರುದಾಸ್‌ಪುರದಿಂದ ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ ಎನ್ನುವುದು ಸುಳ್ಳು ಸುದ್ದಿ. ನಾನು ಸ್ಪರ್ಧಿಸುವುದಿಲ್ಲ. ಆದರೆ, ನಾನು ವಿವಿಧ ರೀತಿಯಲ್ಲಿ ಜನರನ್ನು ಬೆಂಬಲಿಸಲು ಮತ್ತು ಸಹಾಯ ಮಾಡಲು ಬಯಸುತ್ತೇನೆ. ಇದನ್ನು YOUWECAN ಫೌಂಡೇಷನ್ ಮೂಲಕ ಮುಂದುವರಿಸುತ್ತೇನೆ” ಎಂದು ಯುವರಾಜ್ ಸಿಂಗ್ ಸಾಮಾಜಿಕ ಜಾಲತಾಣ X ಮೂಲಕ ಹಂಚಿಕೊಂಡಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವು ಅನುಮಾನಗಳಿಗೆ ತೆರೆ ಎಳೆದಿದ್ದಾರೆ.

ಯುವರಾಜ್​ ಸಿಂಗ್​ಗೆ ಬಿಜೆಪಿ ಟಿಕೆಟ್​ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರಲು ಪ್ರಮುಖ ಕಾರಣವೆಂದರೆ, ಇತ್ತೀಚೆಗೆ ಕೇಂದ್ರ ಭೂ ಸಾರಿಗೆ-ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಖಾತೆ ಸಚಿವ ನಿತಿನ್‌ ಗಡ್ಕರಿ(Nitin Gadkari) ಭೇಟಿಯಾಗಿದ್ದರು. ಹೀಗಾಗಿ, ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿತ್ತು. ಇದೀಗ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎನ್ನುವುದನ್ನು ಸ್ವತಃ ಯುವಿಯೇ ಖಚಿತಪಡಿಸಿದ್ದಾರೆ.

ಇದನ್ನೂ ಓದಿ Gautam Gambhir: ರಾಜಕೀಯಕ್ಕೆ ಗುಡ್‌ಬೈ ಹೇಳಿದ ಗೌತಮ್‌ ಗಂಭೀರ್‌; ಮಾಜಿ ಕ್ರಿಕೆಟಿಗನ ಈ ನಿರ್ಧಾರಕ್ಕೆ ಕಾರಣವೇನು?

ಭಾರತದ ಸುದೀರ್ಘ‌ ವಿಶ್ವಕಪ್‌ ಬರಗಾಲವನ್ನು ನೀಗಿಸಿದ್ದು 2011ರ ಪಂದ್ಯಾವಳಿ(2011 World Cup). ಇದು ಯುವರಾಜ್‌ ಪಾಲಿಗೆ ಹೆಚ್ಚು ಸ್ಮರಣೀಯ. ಒಂದು ಶತಕ, 4 ಅರ್ಧ ಶತಕ, 15 ವಿಕೆಟ್‌, 4 ಪಂದ್ಯಶ್ರೇಷ್ಠ ಪ್ರಶಸ್ತಿ, ಕೊನೆಗೆ ಸರಣಿಶ್ರೇಷ್ಠ ಸಮ್ಮಾನ! ವಿಶ್ವಕಪ್‌ ಕೂಟವೊಂದರಲ್ಲಿ 300 ಪ್ಲಸ್‌ ರನ್‌ ಜತೆಗೆ 15 ವಿಕೆಟ್‌ ಸಂಪಾದಿಸಿದ ಮೊದಲ ಆಲ್‌ರೌಂಡರ್‌ ಎಂಬ ಗರಿಮೆ. ಯುವರಾಜ್‌ ಸಿಂಗ್‌ ನೈಜ ವರ್ಲ್ಡ್ ಚಾಂಪಿಯನ್‌ ಆಗಿ ಮೆರೆದಿದ್ದರು.

Continue Reading

ಕ್ರೀಡೆ

BCCI Annual Contract: ಅಯ್ಯರ್, ಇಶಾನ್​ಗೆ ಗುತ್ತಿಗೆ ಪಟ್ಟಿ ಸೇರಲು ಇನ್ನೂ ಇದೆ ಅವಕಾಶ; ಈ ಷರತ್ತು ಅನ್ವಯ!

ಇಶಾನ್‌ ಕಿಶನ್​(Ishan Kishan) ಹಾಗೂ ಶ್ರೇಯಸ್‌ ಅಯ್ಯರ್​(Shreyas) ಮರಳಿ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಡೆಯಲು ಅಗತ್ಯವಿರುವಷ್ಟು ಪಂದ್ಯಗಳನ್ನು ಆಡಬೇಕಿದೆ.

VISTARANEWS.COM


on

Koo

ಮುಂಬಯಿ: ಹಲವು ಬಾರಿ ದೇಶಿಯ ಕ್ರಿಕೆಟ್​ನಲ್ಲಿ ಭಾಗಿಯಾಗುವಂತೆ ಬಿಸಿಸಿಐ(BCCI) ನೀಡಿದ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿದ ಕಾರಣ ಕೇಂದ್ರ ಗುತ್ತಿಗೆ(BCCI Annual Contract) ಪಟ್ಟಿಯಿಂದ ಹೊರಬಿದ್ದ ಇಶಾನ್‌ ಕಿಶನ್​(Ishan Kishan) ಹಾಗೂ ಶ್ರೇಯಸ್‌ ಅಯ್ಯರ್​(Shreyas) ಮರಳಿ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಡೆಯುವ ಅವಕಾಶವಿದೆ. ಆದರೆ, ಇದಕ್ಕೆ ಒಂದು ಷರತ್ತು ಅನ್ವಯವಾಗಲಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಬಿಸಿಸಿಐ ಕೇಂದ್ರೀಯ ಒಪ್ಪಂದದಿಂದ ಆಟಗಾರರನ್ನು ಕೈಬಿಟ್ಟರೂ ಕೂಡ ಆ ಆಟಗಾರರು ಭಾರತದ ಪರ ಆಡಲು ಲಭ್ಯವಿರುತ್ತಾರೆ. ಆಟಗಾರರ ಪ್ರದರ್ಶನ ಮತ್ತು ಫಿಟ್ನೆಸ್ ಮೇಲೆ ಅವರ ಆಯ್ಕೆ ನಿರ್ಧಾರವಾಗುತ್ತದೆ. ಹೀಗಾಗಿ ಇಶಾನ್​ ಮತ್ತು ಅಯ್ಯರ್​ ಭಾರತ ಪರ ಆಡಲು ಯಾವುದೇ ಸಮಸ್ಯೆ ಇಲ್ಲ ಎನ್ನುವುದು ಈಗಾಗಲೇ ತಿಳಿದುಬಂದಿತ್ತು. ಇದೀಗ ಉಭಯ ಆಟಗಾರರಿಗೆ ಮತ್ತೆ ಕೇಂದ್ರ ಗುತ್ತಿಗೆ ಪಟ್ಟಿಗೆ ಸೇರುವ ಅವಕಾಶವಿದೆ. ಇದಕ್ಕಾಗಿ ಇವರು ಗುತ್ತಿಗೆ ಪಡೆಯಲು ಅಗತ್ಯವಿರುವಷ್ಟು ಪಂದ್ಯಗಳನ್ನು ಆಡಬೇಕಿದೆ. ಈಗಾಗಲೇ ಶ್ರೇಯಸ್​ ಅಯ್ಯರ್​ ಅವರು ರಣಜಿ ಟ್ರೋಫಿಗಾಗಿ ಮುಂಬೈ ಪರ ಆಡಲು ಆರಂಭಿಸಿದ್ದಾರೆ. ಇಶಾನ್​ ಮಾತ್ರ ಶೋಕಿ ಮಾಡುತ್ತಾ ಕೇವಲ ಐಪಿಎಲ್ ಕಡೆ ಮಾತ್ರ ಗಮನಹರಿಸಿದ್ದಾರೆ.​

ವೇತನ ಶ್ರೇಣಿ ಹೇಗೆ?


ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರನಿಧಿಸುವ ಆಟಗಾರರಿಗೆ ಬಿಸಿಸಿಐ ಪ್ರತಿ ವರ್ಷ ಅಂದರೆ 12 ತಿಂಗಳಿಗೆ ಅನ್ವಯವಾಗುವಂತೆ ವೇತನ ಒಪ್ಪಂದವನ್ನು ನೀಡುತ್ತದೆ. ಈ ಒಪ್ಪಂದದ ಪ್ರಕಾರ ಆಟಗಾರರು ಈ ವರ್ಷದಲ್ಲಿ ಭಾರತ ಪರ ಆಡಲಿ ಅಥವಾ ಇಲ್ಲದಿರಲಿ ಅವರಿಗೆ ನಿಗದಿಪಡಿಸಿದ ಮೊತ್ತವನ್ನು ಬಿಸಿಸಿಐ ನೀಡುತ್ತದೆ. ಅದಂರಂತೆ ಬಿಸಿಸಿಐ ನಾಲ್ಕು ಗ್ರೇಡ್​ಗಳಾಗಿ ಆಟಗಾರರನ್ನು ವಿಂಗಡಿಸುತ್ತದೆ. A+ ಗ್ರೇಡ್​ ಪಡೆದ ಆಟಗಾರರು ವರ್ಷಕ್ಕೆ 7 ಕೋಟಿ ರೂ. ಮೊತ್ತ ಪಡೆದರೆ, A ಗ್ರೇಡ್​ ಆಟಗಾರರು 5 ಕೋಟಿ ರೂ, B ಗ್ರೇಡ್​ ಆಟಗಾರರು 3 ಕೋಟಿ ಮತ್ತು C ದರ್ಜೆಯ ಆಟಗಾರರು ವಾರ್ಷಿಕ 1 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ.

ಇದನ್ನೂ ಓದಿ WPL Points Table: ಯುಪಿ​ಗೆ ಸತತ 2ನೇ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಮುಂಬೈ

2022-23 ಋತುವಿನಲ್ಲಿ ಬಿಸಿಸಿಐ ಕೇಂದ್ರ ಗುತ್ತಿಗೆಯಲ್ಲಿ ಸ್ಥಾನ ಪಡೆದಿದ್ದ ಅನುಭವಿ ಆಟಗಾರರಾದ ಚೇತೇಶ್ವರ್ ಪೂಜಾರ, ಉಮೇಶ್ ಯಾದವ್, ಶಿಖರ್ ಧವನ್, ದೀಪಕ್ ಹೂಡಾ, ಯಜುವೇಂದ್ರ ಚಹಲ್ ಮತ್ತು ಅಜಿಂಕ್ಯ ರಹಾನೆ ಈ ಬಾರಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇವರನ್ನು ಪ್ರಸಕ್ತ ಸಾಲಿನ ಆಟಗಾರರ ಒಪ್ಪಂದ ಪಟ್ಟಿಯಿಂದ ಬಿಸಿಸಿಐ ಕೈಬಿಟ್ಟಿದೆ. ಆಯ್ಕೆ ಸಮಿತಿಯು ವೇಗದ ಬೌಲಿಂಗ್ ಒಪ್ಪಂದಗಳಿಗಾಗಿ ಚೊಚ್ಚಲ ಟೆಸ್ಟ್​ ಆಡಿದ ಆಕಾಶ್ ದೀಪ್, ವಿಜಯ್ ಕುಮಾರ್ ವೈಶಾಕ್, ಉಮ್ರಾನ್ ಮಲಿಕ್, ಯಶ್ ದಯಾಳ್ ಮತ್ತು ವಿದ್ವತ್ ಕಾವೇರಪ್ಪ ಅವರ ಹೆಸರನ್ನು ಶಿಫಾರಸು ಮಾಡಿದೆ.

ಬಿಸಿಸಿಐ ಕೇಂದ್ರ ಒಪ್ಪಂದಗಳ ಪಟ್ಟಿ

ಗ್ರೇಡ್ A+ (4 ಕ್ರಿಕೆಟಿಗರು): ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಮತ್ತು ರವೀಂದ್ರ ಜಡೇಜಾ.

ಗ್ರೇಡ್ ಎ (6 ಕ್ರಿಕೆಟಿಗರು): ಆರ್ ಅಶ್ವಿನ್, ಮೊಹಮ್ಮದ್​ ಶಮಿ, ಮೊಹಮ್ಮದ್ ಸಿರಾಜ್, ಕೆ.ಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ.

ಗ್ರೇಡ್ ಬಿ (5 ಕ್ರಿಕೆಟಿಗರು) ಸೂರ್ಯಕುಮಾರ್ ಯಾದವ್, ರಿಷಭ್​ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್.

ಗ್ರೇಡ್ ಸಿ (15 ಕ್ರಿಕೆಟಿಗರು) ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆ.ಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್.

Continue Reading

ದೇಶ

Gautam Gambhir: ರಾಜಕೀಯಕ್ಕೆ ಗುಡ್‌ಬೈ ಹೇಳಿದ ಗೌತಮ್‌ ಗಂಭೀರ್‌; ಮಾಜಿ ಕ್ರಿಕೆಟಿಗನ ಈ ನಿರ್ಧಾರಕ್ಕೆ ಕಾರಣವೇನು?

Gautam Gambhir: ಬಿಜೆಪಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

VISTARANEWS.COM


on

gambhir
Koo

ನವದೆಹಲಿ: ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಅಚ್ಚರಿಯ ಬೆಳವಣಿಗೆಯೊಂದ ನಡೆದಿದ್ದು, ಬಿಜೆಪಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ (Gautam Gambhir) ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಶನಿವಾರ (ಮಾರ್ಚ್‌ 2) ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, ʼʼರಾಜಕೀಯ ಕರ್ತವ್ಯಗಳಿಂದ ಬಿಡುಗಡೆ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬಳಿ ಮನವಿ ಮಾಡಿರುವುದಾಗಿʼʼ ತಿಳಿಸಿದ್ದಾರೆ. ಮೈದಾನದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಿದ್ದ ಗಂಭೀರ್‌ 2019ರಲ್ಲಿ ರಾಜಕೀಯಕ್ಕೆ ಧುಮಿಕ್ಕಿದ್ದರು. ಆ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಪೂರ್ವ ದೆಹಲಿಯಿಂದ ಆಯ್ಕೆಯಾಗಿದ್ದರು.

ಕಾರಣವೇನು?

ʼʼರಾಜಕೀಯ ಚಟುವಟಿಕೆಗಳಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡುತ್ತಿದ್ದೇನೆ. ಇದರಿಂದಾಗಿ ನಾನು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚು ಗಮನಹರಿಸಬಹುದಾಗಿದೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಜೈ ಹಿಂದ್!ʼʼ ಎಂದು ಗಂಭೀರ್ ಬರೆದುಕೊಂಡಿದ್ದಾರೆ.

2019ರ ಮಾರ್ಚ್‌ನಲ್ಲಿ ಗಂಭೀರ್‌ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಳಿಕ ದೆಹಲಿ ಬಿಜೆಪಿಯ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಪೂರ್ವ ದೆಹಲಿಯಿಂದ ಕಣಕ್ಕಿಳಿದು ಕಾಂಗ್ರೆಸ್ ಅಭ್ಯರ್ಥಿ ಅರವಿಂದರ್ ಸಿಂಗ್ ಲವ್ಲಿ ವಿರುದ್ಧ ಜಯಗಳಿಸಿದ್ದರು. ಮುಂದಿನ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಸಿಗುವುದಿಲ್ಲ ಎನ್ನುವ ವರದಿ ಹಿನ್ನಲೆಯಲ್ಲಿ ಅವರು ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ ಎನ್ನಲಾಗುತ್ತಿದೆ.

ಮೊದಲ ಪಟ್ಟಿ ಶೀಘ್ರ

2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಶೀಘ್ರದಲ್ಲೇ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಂತಹ ಪ್ರಮುಖರ ಹೆಸರಿರುವ ಸಾಧ್ಯತೆ ಇದೆ. ಹಲವು ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್‌ ಲಭಿಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Gautam Gambhir : ಪಾಕಿಸ್ತಾನ ವಿರುದ್ಧ ಸೋತರೆ… ಗಮನ ಸೆಳೆದ ಗಂಭೀರ್ ಹೇಳಿಕೆ

ಕ್ರಿಕೆಟ್‌ನಲ್ಲಿ ಛಾಪು

42 ವರ್ಷದ ಗಂಭೀರ್‌ ಭಾರತೀಯ ಕ್ರಿಕೆಟ್‌ ತಂಡದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರು 147 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 39.68 ಸರಾಸರಿಯಲ್ಲಿ 5,238 ರನ್ ಗಳಿಸಿದ್ದಾರೆ. ಏಕದಿನದಲ್ಲಿ 11 ಶತಕ ದಾಖಲಿಸಿದ್ದಾರೆ. 2011ರ ವಿಶ್ವಕಪ್ ಫೈನಲ್‌ನಲ್ಲಿ 97 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಅನ್ನು ಅಭಿಮಾನಿಗಳು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ಇನ್ನು ಟೆಸ್ಟ್‌ ಪಂದ್ಯದಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಅವರು 58 ಟೆಸ್ಟ್ ಪಂದ್ಯಗಳಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿದ್ದಾರೆ ಮತ್ತು 41.95 ರ ಸರಾಸರಿಯಲ್ಲಿ 4,154 ರನ್​​ ಗಳಿಸಿದ್ದಾರೆ. ಇದರಲ್ಲಿ ಒಂಬತ್ತು ಶತಕಗಳಿವೆ. ಮಾತ್ರವಲ್ಲ 2007ರ ಟಿ20 ವಿಶ್ವಕಪ್ ವಿಜೇತ ಭಾರತ ತಂಡದಲ್ಲಿಯೂ ಗಂಭೀರ್‌ ಇದ್ದರು. ಐಪಿಎಲ್‌ನಲ್ಲಿಯೂ ಆಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
thdc
ಉದ್ಯೋಗ38 seconds ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಇಂದೇ ಅಪ್ಲೈ ಮಾಡಿ

Gadag Shivananda Mutt seer's appointment issue temporarily closed
ಕರ್ನಾಟಕ8 mins ago

Gadag News: ಗದಗ ಶಿವಾನಂದ ಮಠದ ಪೀಠಾಧಿಪತಿ ವಿವಾದಕ್ಕೆ ತಾತ್ಕಾಲಿಕ ತೆರೆ; ಇಬ್ಬರೂ ಸ್ವಾಮೀಜಿಗಳಿಂದ ಧ್ವಜಾರೋಹಣ

vrinda dinesh injury
ಕ್ರೀಡೆ21 mins ago

WPL 2024: ಭುಜದ ಗಾಯ; ಟೂರ್ನಿಯಿಂದಲ್ಲೇ ಹೊರಬಿದ್ದ ಕನ್ನಡತಿ ವೃಂದಾ

rameshwaram cafe bengaluru incident
ಬೆಂಗಳೂರು25 mins ago

Blast In Bengaluru: ಬೆಂಗಳೂರಿಗರೇ Be alert; ಸಂಶಯ ಬಂದರೆ ಇಲ್ಲಿಗೆ ಕಾಲ್‌ ಮಾಡಿ

Blast in Bengaluru Karnataka is becoming a haven for terrorists under Congress rule says Pralhad Joshi
ಕ್ರೈಂ25 mins ago

Blast in Bengaluru: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕವಾಗುತ್ತಿದೆ ಉಗ್ರರ ಸ್ವರ್ಗ: ಪ್ರಲ್ಹಾದ್‌ ಜೋಶಿ

Narendra Modi
ದೇಶ33 mins ago

ಮ್ಯಾಟ್ರಿಮೋನಿ ಸೇರಿ ಹಲವು ಆ್ಯಪ್‌ಗಳಿಗೆ ಗೂಗಲ್‌ ಕೊಕ್;‌ ಕೇಂದ್ರದ ಮುಂದಿನ ನಡೆ ಏನು?

Yuvraj Singh
ಕ್ರೀಡೆ56 mins ago

Yuvraj Singh: ಲೋಕಸಭಾ ಸ್ಪರ್ಧೆ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಯುವರಾಜ್​ ಸಿಂಗ್​

Anant Ambani wedding bollywood celebrities Pose
ಬಾಲಿವುಡ್60 mins ago

Anant Ambani: ಅಂಬಾನಿ ಫ್ಯಾಮಿಲಿಯ ಪ್ರಿ-ವೆಡ್ಡಿಂಗ್‌ಗೆ ಬಾಲಿವುಡ್‌ ಸೆಲೆಬ್ರಿಟಿಗಳು ಪೋಸ್‌ ಕೊಟ್ಟಿದ್ದು ಹೀಗೆ!

Share Market
ದೇಶ60 mins ago

Stock Market: ರಜಾ ದಿನವೂ ಸ್ಪೆಷಲ್‌ ಟ್ರೇಡಿಂಗ್, ಸೆನ್ಸೆಕ್ಸ್‌, ನಿಫ್ಟಿ ಅಬ್ಬರ ಜೋರು

Blast in Bengaluru NIA to take over probe into Rameswaram Cafe bomb blast case
ಕ್ರೈಂ1 hour ago

Blast in Bengaluru: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್ ಕೇಸ್‌ ತನಿಖೆ NIA ಹೆಗಲಿಗೆ? ಇಂದೇ ಹಸ್ತಾಂತರ!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rameswaram Cafe Blast Suspected travels in BMTC Volvo bus
ಬೆಂಗಳೂರು3 hours ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು22 hours ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು1 day ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ1 day ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ1 day ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ2 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ4 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ4 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ4 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಟ್ರೆಂಡಿಂಗ್‌