ನವದೆಹಲಿ: ಐಪಿಎಲ್ 16ನೇ ಆವೃತ್ತಿಯ 40ನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಮೊದಲಿಗೆ ಬ್ಯಾಟಿಂಗ್ ಮಾಡುವುದಾಗಿ ಹೇಳಿದೆ. ಹೀಗಾಗಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ಫೀಲ್ಡಿಂಗ್ ಮಾಡಿ ಪ್ರವಾಸಿ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಬೇಕಾಗಿದೆ. ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹಾಲಿ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದು ಕ್ರಮವಾಗಿ 9 ಹಾಗೂ 10ನೇ ಸ್ಥಾನವನ್ನು ಪಡೆದುಕೊಂಡಿದೆ. ಡೆಲ್ಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಪಂದ್ಯ ಆಯೋಜನೆಗೊಂಡಿದೆ.
ನಾವು ಬ್ಯಾಟಿಂಗ್ ಮೊದಲು ಮಾಡಲಿದ್ದೇವೆ. ಪಿಚ್ ಒಣಗಿರುವಂತೆ ಕಾಣುತ್ತಿದೆ. ಸ್ಥಳೀಯ ವಾತಾವರಣದ ಪ್ರಕಾರ ರಾತ್ರಿ ಇಬ್ಬನಿ ಬೀಳದು. ಹೀಗಾಗಿ ನಾವು ಉತ್ತಮವಾಗಿ ಬ್ಯಾಟಿಂಗ್ ಮಾಡಿ ದೊಡ್ಡ ಮೊತ್ತವನ್ನು ಕಲೆಹಾಕುತ್ತೇವೆ ಎಂದು. ಎಲ್ಲಾ ಪ್ರಯೋಗಗಳು ಮುಗಿದಿದ್ದು. ಫಲಿತಾಂಶಗಳನ್ನು ಪಡೆಯುವ ಸಮಯ ಇದ. ನಮ್ಮ ತಂಡದ ಆಟಗಾರರಿಗೆ ಸಾಮರ್ಥ್ಯ ಪ್ರದರ್ಶಿಸುವ ಸಮಯ. ತಂಡದಲ್ಲಿ ವಾಷಿಂಗ್ಟನ್ ಸುಂದರ್ ಇಲ್ಲದಿರುವುದು ದೊಡ್ಡ ನಷ್ಟ. ಈ ಸ್ಥಾನ ಭದ್ರಡಿಸಲು ಬೇರೆಯವರಿಗೆ ಅವಕಾಶ ಇದೆ. ನಮ್ಮ ಬ್ಯಾಟಿಂಗ್ ಕಳಪೆಯಾಗಿದೆ. ಇದುವರೆಗೆ ದೊಡ್ಡ ಮೊತ್ತ ಗಳಿಸಿಲ್ಲ. ಅಕೇಲ್ ಹೊಸೈನ್ ತಂಡಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂದು ಟಾಸ್ ಗೆದ್ದಿರುವ ಎಸ್ಆರ್ಎಚ್ ತಂಡದ ನಾಯಕ ಏಡೆನ್ ಮಾರ್ಕ್ರಮ್ ಹೇಳಿದ್ದಾರೆ.
ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್ ಮಾತನಾಡಿ, ನಾವು ಪರಿಸ್ಥಿತಿಗೆ ಹೊಂದಿಕೊಳ್ಳಬೇಕಾಗಿದೆ. ನಾವು ಪವರ್ಪ್ಲೇನಲ್ಲಿ ವಿಕೆಟ್ ಕಳೆದುಕೊಳ್ಳುತ್ತಿದ್ದೇವೆ. ಈ ಬಾರಿ ಉತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ನೀಡಬೇಕಾಗಿದೆ. ನಾವು ಮೊದಲ 6 ಓವರ್ ಗಳಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಬೇಕಾಗಿತ್ತು. ತಂಡಕ್ಕೆ ಪ್ರಿಯಮ್ ಗರ್ಗ್ ಪದಾರ್ಪಣೆ ಮಾಡುತ್ತಿದ್ದು, ಅಮನ್ ಖಾನ್ ಆಡುತ್ತಿಲ್ಲ ಎಂದು ಹೇಳಿದ್ದಾರೆ.
ತಂಡಗಳು
ಡೆಲ್ಲಿ ಕ್ಯಾಪಿಟಲ್ಸ್ : ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ , ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಪ್ರಿಯಮ್ ಗರ್ಗ್, ಅಕ್ಷರ್ ಪಟೇಲ್, ರಿಪಾಲ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಮುಖೇಶ್ ಕುಮಾರ್.
ಸನ್ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಮ್ (ನಾಯಕ), ಹೆನ್ರಿಕ್ ಕ್ಲಾಸೆನ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಅಕೀಲ್ ಹುಸೇನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್.