ದುಬೈ : ವೆಸ್ಟ್ ಇಂಡೀಸ್ ವಿರುದ್ಧದ ಟಿ೨೦ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ Team India ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಟಿ೨೦ Ranking ಪಟ್ಟಿಯಲ್ಲಿ ಎರಡು ಸ್ಥಾನ ಬಡ್ತಿ ಪಡೆದುಕೊಂಡಿದ್ದಾರೆ. ಅವರೀಗ ಎರಡನೇ ಸ್ಥಾನಕ್ಕೇರಿದ್ದು, ಇನ್ನೊಂದೆರಡು ಇನಿಂಗ್ಸ್‌ಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರೆ ನಂಬರ್ ಒನ್ ಸ್ಥಾನಕ್ಕೇರುವುದು ಖಚಿತ. ಅದೇ ರೀತಿ ಸದ್ಯ ಅವರು ಪಡೆದಿರುವ rank ಅವರ ವೃತ್ತಿ ಕ್ರಿಕೆಟ್‌ನ ಅತ್ಯುತ್ತಮ ಸಾಧನೆಯಾಗಿದೆ.
ಸೂರ್ಯಕುಮಾರ್ ಯಾದವ್ ಅವರು ಸದ್ಯ ೮೧೬ ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಅಂತೆಯೇ ಪಾಕಿಸ್ತಾನದ ಬಾಬರ್ ಅಜಮ್ ೮೧೮ ರೇಟಿಂಗ್ಸ್ ಹೊಂದಿದ್ದಾರೆ. ಇದೇ ವೇಳೆ ವೆಸ್ಟ್ ಇಂಡೀಸ್ ವಿರುದ್ಧ ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿದ್ದು, ಅದರಲ್ಲೂ ಸೂರ್ಯ ಪ್ರಕಾಶಿಸಿದರೆ ಒಂದನೇ ಸ್ಥಾನಕ್ಕೇರುವುದು ಬಹುತೇಕ ಖಾತರಿ. ranking ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ೭೯೪ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಮ್ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಅಂತೆಯೆ ಡೇವಿಡ್ ಮಲಾನ್ ಐದನೇ ಸ್ಥಾನವನ್ನು ಪಡೆದಿದ್ದಾರೆ.
ಮಂಗಳವಾರ ರಾತ್ರಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ ೪೪ ಎಸೆತಗಳಲ್ಲಿ ಎಂಟು ಬೌಂಡರಿ, ನಾಲ್ಕು ಸಿಕ್ಸರ್‌ಗಳೊಂದಿಗೆ ೭೬ ರನ್ ಬಾರಿಸಿ ತಂಡವನ್ನು ಗೆಲುವಿನ ಪಥದೆಡೆಗೆ ಕೊಂಡೊಯ್ದಿದ್ದರು. ಅಂತೆಯೇ ರಿಷಭ್ ಪಂತ್ ಹಾಗೂ ಶ್ರೇಯಸ್ ಅಯ್ಯರ್ ಕೂಡ ಸಾಥ್ ಕೊಟ್ಟಿದ್ದರು. ಈ ಮೂವರ ಪರಾಕ್ರಮದಿಂದ ಭಾರತ ತಂಡ ಗೆಲುವು ಸಾಧಿಸಿತ್ತು.