ದುಬೈ: ಭಾರತ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿ ಮುಗಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನೂತನ ಏಕ ದಿನ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಅದರಂತೆ ಟೀಮ್ ಇಂಡಿಯಾದ ಯುವ ಆಟಗಾರರಾದ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಪ್ರಗತಿ ಕಂಡಿದ್ದಾರೆ.
ಹಿರಿಯ ಆಟಗಾರರ ಅನುಪಸ್ಥಿಯಲ್ಲಿ ಕಿವೀಸ್ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ತೋರಿದ ಶ್ರೇಯಸ್ ಅಯ್ಯರ್ 6 ಸ್ಥಾನ ಏರಿಕೆ ಕಂಡು 27ನೇ ಶ್ರೇಯಾಂಕ ಪಡೆದಿದ್ದಾರೆ. ಶುಭಮನ್ ಗಿಲ್ 3 ಸ್ಥಾನ ಜಿಗಿದು 34ನೇ ಸ್ಥಾನ ಅಲಂಕರಿಸಿದ್ದಾರೆ. ಉಳಿದಂತೆ ಮೂರು ಪಂದ್ಯಗಳ ಸರಣಿಯಲ್ಲಿ ಕೇವಲ ಒಂದು ಪಂದ್ಯದಲ್ಲಿ ಆಡುವ ಅವಕಾಶ ಪಡೆದ ಸಂಜು ಸ್ಯಾಮ್ಸನ್ 10 ಸ್ಥಾನ ಪ್ರಗತಿ ಕಾಣುವ ಮೂಲಕ 82ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಕೊಹ್ಲಿ, ರೋಹಿತ್ ಕುಸಿತ
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಇಬ್ಬರೂ ತಲಾ ಒಂದು ಸ್ಥಾನ ಕುಸಿತ ಕಾಣುವ ಮೂಲಕ ಕ್ರಮವಾಗಿ 8ನೇ ಮತ್ತು 9ನೇ ಸ್ಥಾನ ಪಡೆದಿದ್ದಾರೆ. ಆದರೆ ಮುಂಬರುವ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶ ತೋರಿದರೆ ತಮ್ಮ ಶ್ರೇಯಾಂಕ ಸುಧಾರಿಸಿಕೊಳ್ಳುವ ಅವಕಾಶ ಉಭಯ ಆಟಗಾರರಿಗೂ ಸಿಗಲಿದೆ.
ಇದನ್ನೂ ಓದಿ | IND VS NZ | ರಿಷಭ್ ಪಂತ್ ಮ್ಯಾಚ್ ವಿನ್ನಿಂಗ್ ಆಟಗಾರ; ಧವನ್ ಹೀಗೆ ಹೇಳಿದ್ದು ಏಕೆ?