ದುಬೈ: ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ತೋರಿದ ಸ್ಪಿನ್ನರ್ ಕುಲ್‌ದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್, ನೂತನ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಬೌಲರ್‌ಗಳ ವಿಭಾಗದಲ್ಲಿ ಭಾರಿ ಬಡ್ತಿ ಪಡೆದಿದ್ದಾರೆ.
ಬುಧವಾರ ಪ್ರಕಟವಾದ ನೂತನ ಬೌಲರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ಆಲ್‌ರೌಂಡರ್ ಅಕ್ಷರ್ ಪಟೇಲ್ 20 ಸ್ಥಾನ ಏರಿಕೆ ಕಾಣುವ ಮೂಲಕ ಜೀವನಶ್ರೇಷ್ಠ 18ನೇ ಸ್ಥಾನ ತಲುಪಿದ್ದಾರೆ. ಚೈನಾಮನ್ ಖ್ಯಾತಿಯ ಸ್ಪಿನ್ನರ್ ಕುಲ್‌ದೀಪ್ ಯಾದವ್ 19 ಸ್ಥಾನ ಏರಿಕೆ ಕಂಡು ಸದ್ಯ 49ನೇ ಸ್ಥಾನದಲ್ಲಿದ್ದಾರೆ. ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕುಲ್‌ದೀಪ್ ಒಟ್ಟು 13 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದರು.
ಬೆನ್ನು ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಜಸ್‌ಪ್ರೀತ್ ಬುಮ್ರಾ ಮತ್ತು ಹಿರಿಯ ಸ್ಪಿನ್ನರ್ ಆರ್. ಅಶ್ವಿನ್ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಉಳಿದಂತೆ ಬ್ಯಾಟರ್‌ಗಳ ವಿಭಾಗದಲ್ಲಿ ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿ ಮಿಂದಿದ್ದ ಚೇತೇಶ್ವರ್ ಪೂಜಾರ ಮತ್ತು ಶುಭಮನ್ ಗಿಲ್ ಕ್ರಮವಾಗಿ 16 ಮತ್ತು 54ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಯುವ ಆಟಗಾರ ರಿಷಭ್ ಪಂತ್ ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಇದನ್ನೂ ಓದಿ | IND VS BAN | ದ್ವಿತೀಯ ಟೆಸ್ಟ್: ಬಾಂಗ್ಲಾವನ್ನು ಕ್ಲೀನ್ ಸ್ವೀಪ್ ಮಾಡೀತೇ ಟೀಮ್ ಇಂಡಿಯಾ?