ದುಬೈ: ಐಸಿಸಿ ನೂತನ ಏಕದಿನ ಬ್ಯಾಟಿಂಗ್ ಶ್ರೇಯಾಂಕ(ICC Rankings) ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಅಗ್ರ ಹತ್ತರೊಳಗೆ ಸ್ಥಾನ ಪಡೆದಿದ್ದಾರೆ. ಯುವ ಆಟಗಾರ ಶುಭಮನ್ ಗಿಲ್(Shubman Gill), ವಿರಾಟ್ ಕೊಹ್ಲಿ(Virat Kohli) ಮತ್ತು ರೋಹಿತ್ ಶರ್ಮಾ(Rohit Sharma) ಈ ಮೂವರು ಆಟಗಾರರಾಗಿದ್ದಾರೆ.
ಶುಭಮನ್ ಗಿಲ್ 738 ರೇಟಿಂಗ್ ಅಂಕದೊಂದಿಗೆ 4ನೇ ಸ್ಥಾನ ಪಡೆದಿದ್ದಾರೆ. 3ನೇ ಸ್ಥಾನದಲ್ಲಿರುವ ಪಾಕಿಸ್ತಾನದ ಇಮಾಮ್ ಉಲ್ ಹಕ್‌ಗಿಂತ ಕೇವಲ 2 ರೇಟಿಂಗ್ ಪಾಯಿಂಟ್ಸ್ ಕಡಿಮೆ ಹೊಂದಿದ್ದಾರೆ. ಈ ಮೊದಲು ನಾಲ್ಕನೇ ಸ್ಥಾನದಲ್ಲಿದ್ದ ಸೌತ್ ಆಫ್ರಿಕಾದ ಎಡಗೈ ಬ್ಯಾಟರ್ ಕ್ವಿಂಟನ್ ಡಿ ಕಾಕ್ 7ನೇ ಸ್ಥಾನಕ್ಕೆ ಜಾರಿದ್ದಾರೆ. ವಿರಾಟ್ ಕೊಹ್ಲಿ ಒಂದು ಸ್ಥಾನ ಪ್ರಗತಿ ಕಾಣುವ ಮೂಲಕ 7ನೇ ಸ್ಥಾನದಿಂದ 6ಕ್ಕೆ ಏರಿದ್ದಾರೆ. ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ 8ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಪಾಕಿಸ್ತಾನದ ಬಾಬರ್ ಅಜಮ್ ಮೊದಲ ಸ್ಥಾನದಲ್ಲಿದ್ದಾರೆ. ರಸ್ಸಿ ವಾನ್ ಡರ್ ಡಸ್ಸೆನ್ ದ್ವಿತೀಯ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ IPL 2023: ಟಾಸ್ ಗೆದ್ದ ರಾಜಸ್ಥಾನ್ ತಂಡದಿಂದ ಬೌಲಿಂಗ್ ಆಯ್ಕೆ; ಪಂಜಾಬ್ಗೆ ಬ್ಯಾಟಿಂಗ್ ಆಹ್ವಾನ
ಬೌಲಿಂಗ್ ವಿಭಾಗದಲ್ಲಿ ದೊಡ್ಡ ಮಟ್ಟದ ಬಲಾವಣೆ ಕಂಡುಬಂದಿಲ್ಲ. ಈ ಹಿಂದಿನಂತೆ ಮೊಹಮ್ಮದ್ ಸಿರಾಜ್ 3ನೇ ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್ವುಡ್ ಮೊದಲ ಸ್ಥಾನದಲ್ಲಿದ್ದರೆ, ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಮಿಚೆಲ್ ಸ್ಟಾರ್ಕ್ ಸ್ಟಾರ್ಕ್ 4 ಮತ್ತು ಅಫ್ಘಾನಿಸ್ಥಾನದ ರಶೀದ್ ಖಾನ್ 5ನೇ ಸ್ಥಾನದಲ್ಲಿದ್ದಾರೆ.
ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಆಲ್ರೌಂಡರ್ಗಳ ಪಟ್ಟಿಯಲ್ಲಿ 13 ನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಬಾಂಗ್ಲಾದೇಶದ ಹಿರಿಯ ಆಟಗಾರ ಶಕೀಬ್ ಅಲ್ ಹಸನ್ ಕಾಣಿಸಿಕೊಂಡಿದ್ದಾರೆ. ದ್ವಿತೀಯ ಸ್ಥಾನ ಅಫಘಾನಿಸ್ತಾನದ ಮೊಹಮ್ಮದ್ ನಬಿ ಪಾಲಾಗಿದೆ. ಉಳಿದಂತೆ ಬೌಲಿಂಗ್ನಲ್ಲಿ ಕುಲ್ದೀಪ್ ಯಾದವ್ (23), ಬುಮ್ರಾ (26), ಮೊಹಮ್ಮದ್ ಶಮಿ (32), ರವೀಂದ್ರ ಜಡೇಜಾ (78) ಸ್ಥಾನದಲ್ಲಿದ್ದಾರೆ.