Site icon Vistara News

ICC T20 RANKING: ದಿನೇಶ್‌ ಕಾರ್ತಿಕ್‌ಗೆ ಭಾರಿ ಬಡ್ತಿ

icc t20 ranking

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿಯು ಬಿಡುಗಡೆ ಮಾಡಿರುವ ಇತ್ತೀಚಿನ ICC T20 RANKING ಪಟ್ಟಿಯಲ್ಲಿ ಭಾರತದ ತಂಡದ ಫಿನಿಶರ್‌ ದಿನೇಶ್‌ ಕಾರ್ತಿಕ್‌ ಹಾಗೂ ಆರಂಭಿಕ ಬ್ಯಾಟರ್‌ ಇಶಾನ್‌ ಕಿಶನ್‌ ಭಾರಿ ಬಡ್ತಿ ಕಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಯಲ್ಲಿ ಈ ಇಬ್ಬರು ಆಟಗಾರರು ಉತ್ತಮ ಪ್ರದರ್ಶನ ತೋರಿದ್ದ ಈ ಇಬ್ಬರು ಆಟಗಾರರು ಸಹಜವಾಗಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಅಂಕಗಳನ್ನು ಹೆಚ್ಚಿಸಿಕೊಂಡು ದೊಡ್ಡ ಜಿಗಿತ ಕಂಡಿದ್ದಾರೆ.
ಐಪಿಎಲ್ 2022ನೇ ಆವೃತ್ತಿಯಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದ ದಿನೇಶ್‌ ಕಾರ್ತಿಕ್‌ ಅದೇ ಮಾನದಂಡದ ಆಧಾರದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ೨೦ ಸರಣಿಗೆ ಆಯ್ಕೆಯಾಗಿದ್ದರು. ಅಲ್ಲೂ ಅವರು ಅದೇ ರೀತಿಯ ಪ್ರದರ್ಶನ ನೀಡುವ ಮೂಲಕ ಮುಂದಿನ ವಿಶ್ವ ಕಪ್‌ಲ್ಲಿ ಆಡಲಿರುವ ಟಿ20 ತಂಡಕಕೆ ಆಯ್ಕೆಯಾಗಲಿರುವ ಸಂಭಾವ್ಯ ಆಟಗಾರ ಎನಿಸಿಕೊಂಡಿದ್ದಾರೆ. ಇದೀಗ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 108 ಸ್ಥಾನ ಮೇಲೇರಿ 87ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

ದಿನೇಶ್‌ ಕಾರ್ತಿಕ್‌ 2006ರಲ್ಲೇ ಭಾರತ ಟಿ20 ತಂಡಕ್ಕೆ ಪದಾರ್ಪಣೆ ಮಾಡಿದ್ದರು, ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಮೊದಲ ಅಂತಾರಾಷ್ಟ್ರೀಯ ಟಿ20 ಅರ್ಧ ಶತಕ ಬಾರಿಸಿದ್ದರು.

ಟೀಮ್‌ ಇಂಡಿಯಾದ ಆರಂಭಿಕ ಬ್ಯಾಟರ್‌ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ಪರ ಅತಿ ಹೆಚ್ಚು ರನ್‌ ಬಾರಿಸಿದ ಬ್ಯಾಟರ್‌. ಹೀಗಾಗಿ ಅವರು ರ‍್ಯಾಂಕ್‌ ಪಟ್ಟಿಯಲ್ಲಿ ಮೊದಲ ಬಾರಿ ಅಗ್ರ 10ರ ಒಳಗೆ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಹರಿಣಗಳ ವಿರುದ್ಧದ ಟಿ೨೦ ಸರಣಿಯಲ್ಲಿ ಅವರು 5 ಇನಿಂಗ್ಸ್‌ಗಳಿಂದ 2 ಅರ್ಧ ಶತಕ ಒಳಗೊಂಡಂತೆ ಒಟ್ಟಾರೆ 206 ರನ್‌ಗಳನ್ನು ಸಿಡಿಸಿದ್ದಾರೆ. ಈ ಮೂಲಕ ರ‍್ಯಾಂಕ್‌ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದಾರೆ.

ಅಜಮ್‌ಗೆ ಮೊದಲ ಸ್ಥಾನ

ಪಾಕಿಸ್ತಾನ ತಂಡದ ನಾಯಕ ಬಾಬರ್‌ ಅಜಮ್‌ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಇಶಾನ್‌ ಕಿಶನ್‌ ಈ ಪಟ್ಟಿಯ ಅಗ್ರ 10ರ ಒಳಗೆ ಸ್ಥಾನ ಪಡೆದಿರುವ ಭಾರತದ ಏಕಮಾತ್ರ ಬ್ಯಾಟ್ಸ್‌ಮನ್‌. ಭಾರತ ತಂಡದ ಹಾಲಿ ನಾಯಕ ರೋಹಿತ್‌ ಶರ್ಮ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಪಾಲ್ಗೊಂಡಿಲ್ಲ. ಹೀಗಾಗಿ ಒಂದು ಸ್ಥಾನ ಕಳೆದುಕೊಂಡು 18ನೇ ರ‍್ಯಾಂಕ್‌ ಗಳಿಸಿದ್ದಾರೆ. ಸರಣಿಯಲ್ಲಿ ಬ್ಯಾಟಿಂಗ್‌ ವೈಫಲ್ಯ ಕಂಡ ಶ್ರೇಯಸ್‌ ಅಯ್ಯರ್‌ ಕೂಡ ಒಂದು ಸ್ಥಾನ ಕಳೆದುಕೊಂಡು 19ನೇ ಶ್ರೇಯಾಂಕ ಗಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ೨೦ ಸರಣಿಯ 4 ಇನಿಂಗ್ಸ್‌ಗಳಲ್ಲಿ 6 ವಿಕೆಟ್‌ಗಳನ್ನು ಪಡೆದ ಲೆಗ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ ಮೂರು ಸ್ಥಾನ ಮೇಲೇರಿ 23ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಜೋಶ್‌ ಹೇಜಲ್‌ವುಡ್‌ ನಂ.1 ಸ್ಥಾನದಲ್ಲಿದ್ದಾರೆ. ಟೆಸ್ಟ್‌ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ. ಶಕಿಬ್ ಅಲ್‌ ಹಸನ್‌ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
ಕೊಹ್ಲಿಗೆ 10ನೇ ರ‍್ಯಾಂಕ್‌
ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಸ್ಟಾರ್‌ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ 10ನೇ ರ‍್ಯಾಂಕ್‌ ಕಾಯ್ದುಕೊಂಡಿದ್ದಾರೆ. ಬೌಲರ್‌ಗಳ ವಿಭಾಗದಲ್ಲಿ ಆಫ್‌ ಸ್ಪಿನ್ನರ್‌ ಆರ್‌ ಅಶ್ವಿನ್‌ ಮತ್ತು ವೇಗಿ ಜಸ್‌ಪ್ರೀತ್‌ ಬುಮ್ರಾ ಕ್ರಮವಾಗಿ 2ನೇ ಮತ್ತು 3ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದರೆ, ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ನಂ.1 ಟೆಸ್ಟ್‌ ಬೌಲರ್‌ ಆಗಿದ್ದಾರೆ.

ಇದನ್ನೂ ಓದಿ| ICC ODI Ranking |‌ ಟಾಪ್‌ 5 ತಂಡಗಳು ಯಾವುವು?

Exit mobile version