ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್ - Vistara News

ಕ್ರೀಡೆ

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

ICC T20 Rankings: ಭಾರತ ಇದುವರೆಗೆ 49 ಪಂದ್ಯ ಆಡಿ 265 ರೇಟಿಂಗ್​ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 259 ರೇಟಿಂಗ್​ ಅಂದೊಂದಿಗೆ ದ್ವಿತೀಯ ಸ್ಥಾನಿಯಾಗಿದೆ. ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನಿಯಾಗಿದೆ. 7ನೇ ಸ್ಥಾನಿಯಾಗಿರುವ ಪಾಕ್​ 241 ರೇಟಿಂಗ್​ ಅಂಕ ಹೊಂದಿದೆ.

VISTARANEWS.COM


on

ICC T20 Rankings
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ನೂತನ ಟಿ20 ಶ್ರೇಯಾಂಕದಲ್ಲಿ(ICC T20 Rankings) ಭಾರತ ತಂಡ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಆದರೆ, ಭಾರತದ ಬದ್ಧ ಎದುರಾಳಿ ಪಾಕಿಸ್ತಾನ 7ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಇಂಗ್ಲೆಂಡ್​ ವಿರುದ್ಧದ ಟಿ20 ಸರಣಿ ಸೋಲು ಮತ್ತು ಪ್ರಸ್ತುತ ಸಾಗುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದೇ ಪಾಕ್​ ತಂಡದ ಶ್ರೇಯಾಂಕ ಕುಸಿತಕ್ಕೆ ಕಾರಣ.

ಭಾರತ ಇದುವರೆಗೆ 49 ಪಂದ್ಯ ಆಡಿ 265 ರೇಟಿಂಗ್​ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 259 ರೇಟಿಂಗ್​ ಅಂದೊಂದಿಗೆ ದ್ವಿತೀಯ ಸ್ಥಾನಿಯಾಗಿದೆ. ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನಿಯಾಗಿದೆ. 7ನೇ ಸ್ಥಾನಿಯಾಗಿರುವ ಪಾಕ್​ 241 ರೇಟಿಂಗ್​ ಅಂಕ ಹೊಂದಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಪಾಕ್​ ಆಡಿದ ಮೂರು ಪಂದ್ಯಗಳಲ್ಲಿ ಕೇವಲ 2 ಪಂದ್ಯ ಮಾತ್ರ ಗೆದ್ದಿದೆ. ಅಮೆರಿಕ ಮತ್ತು ಭಾರತ ಇನ್ನುಳಿದ ಪಂದ್ಯದಲ್ಲಿ ಗೆದ್ದರೆ ಪಾಕ್​ ಟೂರ್ನಿಯಿಂದ ಹೊರಬೀಳಲಿದೆ. ಟೂರ್ನಿಗೂ ಮುನ್ನ ಮಿಲಿಟರಿ ಪಡೆಯೊಂದಿಗೆ ಫಿಟ್​ನೆಸ್​ ತರಬೇತಿ ಪಡೆದು ಬಂದರೂ ಕೂಡ ಪಾಕ್​ ತಂಡದ ಕಳಪೆ ಪ್ರದರ್ಶನ ಮಾತ್ರ ಬದಲಾಗಲಿಲ್ಲ.

ಅಗ್ರ ಶ್ರೇಯಾಂಕ ಪಟ್ಟಿಯ 10 ತಂಡಗಳು

ತಂಡರೇಟಿಂಗ್​ ಅಂಕ
ಭಾರತ265
ಆಸ್ಟ್ರೇಲಿಯಾ258
ಇಂಗ್ಲೆಂಡ್​254
ವೆಸ್ಟ್​ ಇಂಡೀಸ್​253
ನ್ಯೂಜಿಲ್ಯಾಂಡ್​248
ದಕ್ಷಿಣ ಆಫ್ರಿಕಾ247
ಪಾಕಿಸ್ತಾನ241
ಶ್ರೀಲಂಕಾ230
ಬಾಂಗ್ಲಾದೇಶ226
ಅಫಘಾನಿಸ್ತಾನ220

ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಸೂರ್ಯಕುಮಾರ್​ ಯಾದವ್​ 837 ರೇಟಿಂಗ್​ ಅಂಕದೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್​ನ ಫಿಲ್​ ಸಾಲ್ಟ್​(800) 2ನೇ ಸ್ಥಾನಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿ ಬಾಬರ್​ ಅಜಂ(756) ಮತ್ತು 4ನೇ ಸ್ಥಾನಿಯಾಗಿ ಮೊಹಮ್ಮದ್​ ರಿಜ್ವಾನ್​(752) ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

ಪಾಕ್​ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್​ ಸಿಂಗ್

ಮುಂಬಯಿ: ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಕಮ್ರಾನ್​ ಅಕ್ಮಲ್(Kamran Akmal) ವಿರುದ್ಧ ಹರ್ಭಜನ್​ ಸಿಂಗ್(Harbhajan Singh) ಮತ್ತೆ ಕಿಡಿ ಕಾರಿದ್ದಾರೆ. ನಿನೋಬ್ಬ ನಾಲಾಯಕ್(Nalaayak)​ ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.

ಇದಕ್ಕೂ ಮುನ್ನ ಹರ್ಭಜನ್​ ಸಿಂಗ್​ ಅವರು ಟ್ವೀಟ್​ ಮಾಡಿ ಅಕ್ಮಲ್​ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Vinesh Phogat: ಕೆಲವೇ ಗಂಟೆಗಳಲ್ಲಿ ವಿನೇಶ್ ಫೋಗಟ್​ ಬೆಳ್ಳಿ ಪದಕದ ತೀರ್ಪು ಪ್ರಕಟ

Vinesh Phogat: ಗುರುವಾರವೇ ರಾತ್ರಿ 9.30ರ ವೇಳೆಗೆ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ವಿನೇಶ್​ಗೆ ಭಾರತೀಯ ವಕೀಲರನ್ನು ನೇಮಿಸಿಕೊಳ್ಳಲು ಹೆಚ್ಚಿನ ಸಮಯ ನೀಡುವ ಸಲುವಾಗಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ ಫೈನಲ್​ ಅನರ್ಹತೆಯ ಬಳಿಕ ಜಂಟಿ ಬೆಳ್ಳಿ ಪದಕ ನೀಡಬೇಕೆಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಕ್ಕೆ(ಸಿಎಎಸ್​) ವಿನೇಶ್ ಫೋಗಟ್(Vinesh Phogat) ಅವರು ಸಲ್ಲಿದ್ದ ಮನವಿಯನ್ನು ಗುರುವಾರ (ಆಗಸ್ಟ್ 8) ಆರ್ಬಿಟ್ರೇಷನ್ ನ್ಯಾಯಾಲಯವು (CAS) ಸ್ವೀಕರಿಸಿತ್ತು. ಇದೀಗ ಶುಕ್ರವಾರ ಮಧ್ಯಾಹ್ನ 1.30ರಿಂದ ವಿಚಾರಣೆ ನಡೆಯಲಿದೆ. ಗುರುವಾರವೇ ರಾತ್ರಿ 9.30ರ ವೇಳೆಗೆ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ವಿನೇಶ್​ಗೆ ಭಾರತೀಯ ವಕೀಲರನ್ನು ನೇಮಿಸಿಕೊಳ್ಳಲು ಹೆಚ್ಚಿನ ಸಮಯ ನೀಡುವ ಸಲುವಾಗಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು. ಇಂದು ನಡೆಯುವ ವಿಚಾರಣೆಯಲ್ಲಿ ವಿನೇಶ್​ಗೆ ಗೆಲುವು ಸಿಕ್ಕಿ ಅವರಿಗೆ ಪದಕ ಒಲಿಯಲಿ ಎಂದು ಇಡೀ ದೇಶವೇ ಪ್ರಾರ್ಥಿಸುತ್ತಿದೆ.

ಸಿಎಎಸ್ ಎನ್ನುವುದು 1984ರಲ್ಲಿ ಸ್ಥಾಪಿತವಾದ ಸ್ವತಂತ್ರ ಸಂಸ್ಥೆಯಾಗಿದ್ದು, ಕ್ರೀಡಾಸಂಬಂಧಿ ವ್ಯಾಜ್ಯಗಳನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸುತ್ತದೆ. ಸ್ವಿಡ್ಜರ್ಲೆಂಡ್ ನ ಲೌಸನ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿಎಎಸ್, ನ್ಯೂಯಾರ್ಕ್ ಹಾಗೂ ಸಿಡ್ನಿಯಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಹೊಂದಿದ್ದು, ಒಲಿಂಪಿಕ್ ಆತಿಥ್ಯ ವಹಿಸುವ ದೇಶಗಳಲ್ಲಿ ತಾತ್ಕಾಲಿಕ ಕೋರ್ಟ್ ಗಳನ್ನು ಹೊಂದಿರುತ್ತದೆ.

ಮಂಗಳವಾರ ನಡೆದ ಅರ್ಹತಾ ಸುತ್ತಿಗೂ ಮುನ್ನ ವಿನೇಶ್‌ ಅವರ ತೂಕವನ್ನು ಲೆಕ್ಕ ಮಾಡಲಾಗಿತ್ತು. ಈ ವೇಳೆ ಅವರು 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ಇದನ್ನೂ ಓದಿ Vinesh Phogat: ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಪಿತೂರಿಯ ಬಗ್ಗೆ ಗಂಭೀರ ಆರೋಪ ಮಾಡಿದ್ದ ವಿನೇಶ್​; ವೈರಲ್​ ಟ್ವೀಟ್​ ಇಲ್ಲಿದೆ

ವಿನೇಶ್‌ ಫೋಗಟ್‌ ಅವರ ಸಹಾಯಕ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಭಾರತೀಯ ಕುಸ್ತಿ ಪ್ರಾಧಿಕಾರದ ಅಧ್ಯಕ್ಷ ಸಂಜಯ್‌ ಸಿಂಗ್‌ ಈಗಾಗಲೇ ಆಗ್ರಹಿಸಿದ್ದಾರೆ. ಇದು ವಿನೇಶ್‌ ಅವರ ತಪ್ಪಾಗಿರಲು ಸಾಧ್ಯವಿಲ್ಲ. ಅವರು ಉತ್ತಮವಾಗಿ ಭಾಗಿಯಾಗಿದ್ದರು. ಅವರ ಕೋಚ್‌, ನ್ಯೂಟ್ರಿಶಿಯನ್‌ ಮತ್ತು ಬೆಂಬಲ ಸಿಬ್ಬಂದಿ ಇದರ ಜವಾಬ್ದಾರಿ ಹೊರಬೇಕು ಎಂದು ಅವರು ಹೇಳಿದ್ದರು. ವಿನೇಶ್‌ ತೂಕ ಹೆಚ್ಚಳವಾಗದಂತೆ ಅವರು ನೋಡಿಕೊಳ್ಳಬೇಕಿತ್ತು. ಇದಕ್ಕೆ ಕಾರಣರಾದವರ ವಿರುದ್ಧ ಭಾರತ ಸರಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಬ್ರಿಜ್​ ಭೂಷಣ್​ಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ದೇಶದ ಉನ್ನತ ಕುಸ್ತಿಪಟುಗಳ ಜತೆ ಸೇರಿಕೊಂಡು ಕಳೆದ ವರ್ಷ ಜನವರಿಯಲ್ಲಿ ವಿನೇಶ್ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ಬಂಧನಕ್ಕೂ ಒಳಗಾಗಿದ್ದರು.

Continue Reading

ಕ್ರೀಡೆ

Antim Panghal: 3 ವರ್ಷ ನಿಷೇಧ ಶಿಕ್ಷೆಯಿಂದ ಪಾರಾದ ಕುಸ್ತಿಪಟು ಅಂತಿಮ್‌ ಪಂಘಲ್‌

Antim Panghal: ಅಂತಿಮ್ ಪಂಘಲ್‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಮೊದಲ ಸುತ್ತಿನಲ್ಲೇ ಸೋತು ಅಭಿಯಾನ ಕೊನೆಗೊಳಿಸಿದ್ದರು. ಬುಧವಾರ ನಡೆದಿದ್ದ ಮಹಿಳೆಯರ 53 ಕೆ.ಜಿ. ವಿಭಾಗದ ಪಂದ್ಯದಲ್ಲಿ ಟರ್ಕಿಯ ಯೆಟ್ಗಿಲ್‌ ಝೈನೆಬ್‌ ವಿರುದ್ಧ 0-10 ಅಂಕಗಳಿಂದ ಹೀನಾಯ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದ್ದರು.

VISTARANEWS.COM


on

Antim Panghal
Koo

ಪ್ಯಾರಿಸ್: ಒಲಿಂಪಿಕ್ಸ್‌ನ ಕ್ರೀಡಾ ಗ್ರಾಮದಲ್ಲಿ(olympic village) ತಮ್ಮ ಗುರುತಿನ ಕಾರ್ಡ್ ದುರ್ಬಳಕೆ ಮಾಡಿದ ಆರೋಪದಡಿ ಕುಸ್ತಿಪಟು(Wrestler Antim Panghal) ಅಂತಿಮ್‌ ಪಂಘಲ್‌(Antim Panghal) ಅವರನ್ನು ಮೂರು ವರ್ಷಗಳ ಕಾಲ ನಿಷೇಧ ಶಿಕ್ಷೆಗೆ ಗುರಿಪಡಿಸಲಾಗುವುದು ಎಂಬ ವಿಚಾರದಲ್ಲಿ ಇದೀಗ ಸ್ವತಃ ಐಒಎ (ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ) ಸ್ಪಷ್ಟನೆ ನೀಡಿದೆ. ಪಂಘಲ್‌ ಅವರನ್ನು 3 ವರ್ಷ ಸ್ಪರ್ಧೆಗಳಿಂದ ನಿಷೇಧಿಸುವ ಯಾವುದೇ ಉದ್ದೇಶ ನಮ್ಮ ಮುಂದಿಲ್ಲ ಎಂದು ಹೇಳಿದೆ.

ಬುಧವಾರ ತಮ್ಮ ಸಾಮಾಗ್ರಿಯನ್ನು ತರಲು, ಅಂತಿಮ್ ತಮ್ಮ ಐಡಿ ಕಾರ್ಡ್‌ನ್ನು ಸಹೋದರಿ ನಿಶಾ ಪಂಘಲ್‌ಗೆ ನೀಡಿದ್ದರು. ಆಕೆ ಅಂತಿಮ್‌ ಐಡಿ ಕಾರ್ಡ್ ಬಳಸಿ ಕ್ರೀಡಾ ಗ್ರಾಮಕ್ಕೆ ಪ್ರವೇಶಿಸಿ, ಹಿಂದಿರುಗುವಾಗ ಸೆಕ್ಯುರಿಟಿ ಕೈಗೆ ಸಿಕ್ಕಿಬಿದ್ದಿದ್ದರು. ಕೂಡಲೇ ಅವರನ್ನು ಪೊಲೀಸರ ವಶಕ್ಕೆ ನೀಡಲಾಗಿದ್ದು, ಪೊಲೀಸರು ಹೇಳಿಕೆ ದಾಖಲಿಸಿದ ಬಳಿಕ ಬಿಡುಗಡೆ ಮಾಡಲಾಗಿತ್ತು. ಅಶಿಸ್ತಿನ ಕಾರಣದಿಂದಾಗಿ ಅಂತಿಮ್‌ ಪಂಘಲ್‌ ಅವರನ್ನು ಪ್ಯಾರಿಸ್‌ನಿಂದ ಗಡೀಪಾರು ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿತ್ತು, ಜತೆಗೆ ಈ ತಪ್ಪು ಮಾಡಿದ ಕಾರಣಕ್ಕೆ ಅವರಿಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ ಮೂರು ವರ್ಷಗಳ ನಿಷೇಧ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎಂದು ಸುದ್ದಿಯಾಗಿತ್ತು. ಇದೀಗ ಅವರನ್ನು ನಿಷೇಧ ಮಾಡುವುದಿಲ್ಲ ಎಂದು ಐಒಎ ತಿಳಿಸಿದೆ.

ಸಹೋದರಿ ಕ್ರೀಡಾಗ್ರಾಮ ಪ್ರವೇಶಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದ್ದ ಅಂತಿಮ್ ಪಂಘಲ್‌, ‘ಗೊಂದಲದಿಂದ ಹೀಗಾಗಿದೆ. ಇದು ಉದ್ದೇಶ ಪೂರ್ವಕ ತಪ್ಪಲ್ಲ. ನನ್ನ ಕಾರ್ಡ್ ಪಡೆದಿದ್ದ ಸಹೋದರಿ ಕ್ರೀಡಾ ಗ್ರಾಮಕ್ಕೆ ತೆರಳಿ, ಒಳ ಪ್ರವೇಶಿಸಲು ಭದ್ರತಾ ಸಿಬ್ಬಂದಿ ಜತೆ ಅನುಮತಿಯನ್ನು ಕೇಳಿದ್ದಾಳೆ. ಕಾರ್ಡ್ ಪರಿಶೀಲನೆಗಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ’ ಎಂದಿದ್ದರು.

ಇದನ್ನೂ ಓದಿ Paris Olympics 2024: ವಿನೇಶ್‌ ಫೋಗಟ್‌ ಅನರ್ಹಗೊಂಡ ಬೆನ್ನಲ್ಲೇ ಮತ್ತೊಂದು ಆಘಾತ; ಕುಸ್ತಿಪಟು ಆಂಟಿಮ್ ಪಂಘಲ್ ಗಡೀಪಾರಿಗೆ ಆದೇಶ

ಅಂತಿಮ್ ಪಂಘಲ್‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಮೊದಲ ಸುತ್ತಿನಲ್ಲೇ ಸೋತು ಅಭಿಯಾನ ಕೊನೆಗೊಳಿಸಿದ್ದರು. 2022ರ ವಿಶ್ವ ಕಿರಿಯರ ಚಾಂಪಿಯನ್‌ ಅಂತಿಮ್‌ ಅವರು ಬುಧವಾರ ನಡೆದಿದ್ದ ಮಹಿಳೆಯರ 53 ಕೆ.ಜಿ. ವಿಭಾಗದ ಪಂದ್ಯದಲ್ಲಿ ಟರ್ಕಿಯ ಯೆಟ್ಗಿಲ್‌ ಝೈನೆಬ್‌ ವಿರುದ್ಧ 0-10 ಅಂಕಗಳಿಂದ ಹೀನಾಯ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಅಂತಿಮ್ ಪಂಘಲ್‌ ಅವರು ಶುಕ್ರವಾರ ಬೆಳಗ್ಗೆ ನವದೆಹಲಿಗೆ ಆಗಮಿಸಿದ್ದಾರೆ.

ಇಂದಿನ ವೇಳಾಪಟ್ಟಿ

ಮಧ್ಯಾಹ್ನ 12:30: ಗಾಲ್ಫ್ – ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇ ರೌಂಡ್ 2 ರಲ್ಲಿ ದೀಕ್ಷಾ ದಾಗರ್ ಮತ್ತು ಅದಿತಿ ಅಶೋಕ್.

ಮಧ್ಯಾಹ್ನ 2:10: ಅಥ್ಲೆಟಿಕ್ಸ್ – ಮಹಿಳೆಯರ 4×400 ಮೀಟರ್ ರಿಲೇ ಹೀಟ್ಸ್.
ಭಾರತದ ಜ್ಯೋತಿಕಾ ಶ್ರೀ ದಂಡಿ, ಕಿರಣ್ ಪಹಲ್, ಎಂ.ಪೂವಮ್ಮ ರಾಜು ಮತ್ತು ವಿಠ್ಠಲ ರಾಮರಾಜ್ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ Paris Olympics 2024: ಒಲಿಂಪಿಕ್ಸ್‌ನಲ್ಲಿ ಇಂದು ಭಾರತದ ಸ್ಪರ್ಧಿಗಳ ಕಾದಾಟ; ಯಾವ ಪದಕ ನಿರೀಕ್ಷೆ? ಇಲ್ಲಿದೆ ವೇಳಾಪಟ್ಟಿ

ಮಧ್ಯಾಹ್ನ 2:35: ಅಥ್ಲೆಟಿಕ್ಸ್ – ಪುರುಷರ 4×400 ಮೀಟರ್ ರಿಲೇ ಹೀಟ್ಸ್.
ಅಮೋಜ್ ಜಾಕೋಬ್, ರಾಜೇಶ್ ರಮೇಶ್, ಸಂತೋಷ್ ಕುಮಾರ್ ತಮಿಳರಸನ್ ಮತ್ತು ಮುಹಮ್ಮದ್ ಅಜ್ಮಲ್ ವರಿಯತೋಡಿ ಸೆಮಿಫೈನಲ್ ಗೆ ಅರ್ಹತೆ ಪಡೆಯುವ ಗುರಿ ಹೊಂದಿದ್ದಾರೆ.

ಮಧ್ಯಾಹ್ನ 2:30: ಮಹಿಳೆಯರ 57 ಕೆ.ಜಿ ಫ್ರೀಸ್ಟೈಲ್​ನಲ್ಲಿ ಕುಸ್ತಿಯಲ್ಲಿ ಅನ್ಶು ಮಲಿಕ್ . ಅನ್ಶು ಅವರ ಅದೃಷ್ಟ ಮಾಜಿ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಹೆಲೆನ್ ಮರೌಲಿಸ್ ಅವರ ವಿರುದ್ಧ ಗೆಲ್ಲುವ ಮೂಲಕ ನಿರ್ಧಾರವಾಗಲಿದೆ.

ರಾತ್ರಿ 11:10: ಪುರುಷರ 57 ಕೆ.ಜಿ ಫ್ರೀಸ್ಟೈಲ್ ಕಂಚಿನ ಅಥವಾ ಚಿನ್ನದ ಪದಕ ಪಂದ್ಯದಲ್ಲಿ (ಪದಕ ಸ್ಪರ್ಧೆಗಳು) ಅಮನ್ ಸೆಹ್ರಾವತ್.

Continue Reading

ಕ್ರೀಡೆ

Vinesh Phogat: ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಪಿತೂರಿಯ ಬಗ್ಗೆ ಗಂಭೀರ ಆರೋಪ ಮಾಡಿದ್ದ ವಿನೇಶ್​; ವೈರಲ್​ ಟ್ವೀಟ್​ ಇಲ್ಲಿದೆ

Vinesh Phogat: ನಾಲ್ಕು ತಿಂಗಳ ಹಿಂದೆ ಅಂದರೆ ಎಪ್ರಿಲ್​ನಲ್ಲಿ ವಿನೇಶ್​ ಫೋಗಟ್​ ಅವರು ಭಾರತ ಕುಸ್ತಿ ಫೆಡರೇಷನ್ (WFI) ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ಗಂಭೀರ ಆರೋಪ ಮಾಡಿ ಟ್ವೀಟ್​ ಮಾಡಿದ್ದರು.

VISTARANEWS.COM


on

Vinesh Phogat
Koo

ನವದೆಹಲಿ: ನಿಗದಿತ ತೂಕಗಿಂತ ಹೆಚ್ಚಿನ ಭಾರ ಇದ್ದ ಕಾರಣ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಪೋಗಟ್‌ ವಿಚಾರದಲ್ಲಿ ಕೆಲವು ರಾಜಕೀಯ ನಾಯಕರು ಪರ ಮತ್ತು ವಿರೋಧದ ಚರ್ಚೆಗಳನ್ನು ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ವಿನೇಶ್​ ಪೋಗಟ್(Vinesh Phogat)​ ಅವರು ಒಲಿಂಪಿಕ್ಸ್​ ಆರಂಭಕ್ಕೂ 4 ತಿಂಗಳ ಹಿಂದೆಯೇ ಟ್ವೀಟ್​ ಮೂಲಕ ಭಾರತ ಕುಸ್ತಿ ಫೆಡರೇಷನ್ ವಿರುದ್ಧ ಗಂಭೀರ ಆರೋಪ ಆಡಿದ್ದರು. ಈ ಟ್ವಿಟ್​ ಇದೀಗ ವೈರಲ್​ ಆಗಿದೆ.

ನಾಲ್ಕು ತಿಂಗಳ ಹಿಂದೆ ಅಂದರೆ ಎಪ್ರಿಲ್​ನಲ್ಲಿ ವಿನೇಶ್​ ಫೋಗಟ್​ ಅವರು ಭಾರತ ಕುಸ್ತಿ ಫೆಡರೇಷನ್ (WFI) ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ಗಂಭೀರ ಆರೋಪ ಮಾಡಿದ್ದರು. ಆದರೆ, ಫೆಡರೇಷನ್ ಈ ಆರೋಪವನ್ನು ತಳ್ಳಿಹಾಕಿತ್ತು.

ವಿನೇಶ್​ ಮಾಡಿದ್ದ ಆರೋಪವೇನು?


“ಒಲಿಂಪಿಕ್ಸ್ ಅರ್ಹತಾ ಪಂದ್ಯಗಳಲ್ಲಿ ನನ್ನ ಭಾಗವಹಿಸುವಿಕೆ ತಡೆಯಲು ಡಬ್ಲ್ಯುಎಫ್‌ಐ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಡೋಪಿಂಗ್ ಪ್ರಕರಣದಲ್ಲಿ ತನ್ನನ್ನು ಸಿಲುಕಿಸುವ ಭಯವಿದೆ. ನಾನು ಅಭ್ಯಾಸದ ವೇಳೆ ಸೇವಿಸುವ ನೀರಿನಲ್ಲಿ ಡೋಪಿಂಗ್ ಅಂಶವುಳ್ಳ ಕೆಲ ರಾಸಾಯನಿಕವನ್ನು ಬೆರೆಸಿರುವ ಅನುಮಾನವಿದೆ” ಎಂದು ವಿನೇಶ್​ ಫೋಗಟ್‌ ಆರೋಪಿಸಿದ್ದರು.

ವಿನೇಶ್​ ಆರೋಪಕ್ಕೆ ಅಂದು ಪ್ರತಿಕ್ರಿಯೆ ನೀಡಿದ ಡಬ್ಲ್ಯುಎಫ್‌ಐ, ವಿನೇಶ್ ಅವರ ಕೋರಿಕೆಯ ಇ-ಮೇಲ್ ಮಾರ್ಚ್ 18 ರಂದು ಬಂದಿತ್ತು. ಆದರೆ ನೋಂದಣಿ ದಿನಾಂಕ ಮಾರ್ಚ್ 11 ಆಗಿದ್ದರಿಂದ ಅದಾಗಲೇ ಸ್ಪರ್ಧಿಗಳು, ತರಬೇತುದಾರರು ಮತ್ತು ವೈದ್ಯಕೀಯ ಸಿಬ್ಬಂದಿ ಪ್ರವೇಶಗಳನ್ನು ಯುಡಬ್ಲ್ಯುಡಬ್ಲ್ಯುಗೆ ಕಳುಹಿಸಲಾಗಿತ್ತು ಎಂದು ಸ್ಪಷ್ಟನೆ ನೀಡಿ ಆರೋಪವನ್ನು ತಳ್ಳಿ ಹಾಕಿತ್ತು. ಇದೀಗ ಅಂದು ವಿನೇಶ್​ ಹೇಳಿದಂತೆ ಫೈನಲ್​ ಪಂದ್ಯಕ್ಕೂ ಮುನ್ನ ಅವರು ಸೇವಿಸಿದ ನೀರಿನಲ್ಲಿ ರಾಸಾಯನಿಕ ಬಳಿಸಿ ಅವರನ್ನು ಉದ್ದೇಶಪೂರ್ವಕವಾಗಿ ಅನರ್ಹಗೊಳ್ಳುವಂತೆ ಮಾಡಲಾಯಿತೇ ಎಂಬ ಹೊಸ ಚರ್ಚೆಗಳು ಹುಟ್ಟಿಕೊಂಡಿದೆ.

ಇದನ್ನೂ ಓದಿ Vinesh Phogat: ವಿನೇಶ್​ರನ್ನು ಪ.ಬಂಗಾಳ ಸಿಎಂ ಮಾಡಿ; ಭಾರತ ರತ್ನ ಕೊಡಿ ಎಂದ ಟಿಎಂಸಿ ನಾಯಕನಿಗೆ ಸವಾಲ್!

ಮಂಗಳವಾರ ನಡೆದ ಅರ್ಹತಾ ಸುತ್ತಿಗೂ ಮುನ್ನ ವಿನೇಶ್‌ ಅವರ ತೂಕವನ್ನು ಲೆಕ್ಕ ಮಾಡಲಾಗಿತ್ತು. ಈ ವೇಳೆ ಅವರು 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ವಿನೇಶ್‌ ಫೋಗಟ್‌ ಅವರ ಸಹಾಯಕ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಭಾರತೀಯ ಕುಸ್ತಿ ಪ್ರಾಧಿಕಾರದ ಅಧ್ಯಕ್ಷ ಸಂಜಯ್‌ ಸಿಂಗ್‌ ಈಗಾಗಲೇ ಆಗ್ರಹಿಸಿದ್ದಾರೆ. ಇದು ವಿನೇಶ್‌ ಅವರ ತಪ್ಪಾಗಿರಲು ಸಾಧ್ಯವಿಲ್ಲ. ಅವರು ಉತ್ತಮವಾಗಿ ಭಾಗಿಯಾಗಿದ್ದರು. ಅವರ ಕೋಚ್‌, ನ್ಯೂಟ್ರಿಶಿಯನ್‌ ಮತ್ತು ಬೆಂಬಲ ಸಿಬ್ಬಂದಿ ಇದರ ಜವಾಬ್ದಾರಿ ಹೊರಬೇಕು ಎಂದು ಅವರು ಹೇಳಿದ್ದರು. ವಿನೇಶ್‌ ತೂಕ ಹೆಚ್ಚಳ ವಾಗದಂತೆ ಅವರು ನೋಡಿಕೊಳ್ಳಬೇಕಿತ್ತು. ಇದಕ್ಕೆ ಕಾರಣರಾದವರ ವಿರುದ್ಧ ಭಾರತ ಸರಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು. ಒಟ್ಟಾರೆ ಅಂದು ವಿನೇಶ್​ ಮಾಡಿದ ಆರೋಪ ಇದೀಗ ವಿಪಕ್ಷಗಳಿಗೆ ಆಹಾರವಾಗಿದೆ. ಇದೇ ವಿಚಾರವಾಗಿ ಸದನಲ್ಲಿ ಮತ್ತೆ ಕಿತ್ತಾಟ ನಡೆಯುವ ಸಾಧ್ಯತೆಯೊಂದು ಕಂಡು ಬಂದಿದೆ.

Continue Reading

ಕ್ರೀಡೆ

Paris Olympics: ಚೊಚ್ಚಲ ಪ್ರಯತ್ನದಲ್ಲೇ ಒಲಿಂಪಿಕ್ಸ್​ ಪದಕ ಗೆಲ್ಲಲು ಸಜ್ಜಾದ ಅಮನ್‌ ಸೆಹ್ರಾವತ್‌

Paris Olympics: ಗುರುವಾರ ನಡೆದಿದ್ದ ಪ್ರಿ-ಕಾರ್ಟರ್‌ ಫೈನಲ್‌ ಮತ್ತು ಕ್ವಾರ್ಟರ್‌ ಫೈನಲ್‌ನಲ್ಲಿ ತಾಂತ್ರಿಕ ಮೇಲುಗೈ ಸಾಧಿಸುವ ಮೂಲಕ ಜಯ ಸಾಧಿಸಿದ್ದ ಅಮನ್‌, ಸೆಮಿಫೈನಲ್‌ನಲ್ಲಿ ತಾಂತ್ರಿಕ ಹಿನ್ನಡೆಯಿಂದಲೇ ಸೋಲನುಭವಿಸಿದ್ದರು

VISTARANEWS.COM


on

Paris Olympics
Koo

ಪ್ಯಾರಿಸ್​: ಈ ಬಾರಿಯ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗಿರುವ ಭಾರತದ ಏಕೈಕ ಪುರುಷ ಕುಸ್ತಿಪಟು, 21 ವರ್ಷದ ಅಮನ್‌ ಸೆಹ್ರಾವತ್‌(Aman Sehrawat) ಇಂದು ನಡೆಯುವ ಕಂಚಿನ ಪದಕದ ಸ್ಪರ್ಧೆಯಲ್ಲಿ ಕಣಕ್ಕಿಳಿಯಲಿದ್ದಾರೆ. ಎದುರಾಳಿ ಡೇರಿಯನ್ ಕ್ರೂಜ್. ಈ ಪಂದ್ಯ ರಾತ್ರಿ 10.45ಕ್ಕೆ ನಡೆಯಲಿದೆ. ನಿನ್ನೆ(ಗುರುವಾರ) ನಡೆದಿದ್ದ ಪ್ರೀ ಕ್ವಾರ್ಟರ್​ ಮತ್ತು ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಗೆಲುವು ಸಾಧಿಸಿದ್ದ ಅಮನ್​ ಬಳಿಕ ನಡೆದ ಸೆಮಿ ಫೈನಲ್​ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ಜಪಾನ್‌ನ ರೀ ಹಿಗುಚಿ ವಿರುದ್ಧ ಸೋಲು ಕಂಡಿದ್ದರು. ಹಿಗುಚಿ ರಿಯೊ ಒಲಿಂಪಿಕ್ಸ್‌ನಲ್ಲಿ (2016) ಬೆಳ್ಳಿ ಗೆದ್ದ ಸಾಧಕನಾಗಿದ್ದರು.

ಗುರುವಾರ ನಡೆದಿದ್ದ ಪ್ರಿ-ಕಾರ್ಟರ್‌ ಫೈನಲ್‌ ಮತ್ತು ಕ್ವಾರ್ಟರ್‌ ಫೈನಲ್‌ನಲ್ಲಿ ತಾಂತ್ರಿಕ ಮೇಲುಗೈ ಸಾಧಿಸುವ ಮೂಲಕ ಜಯ ಸಾಧಿಸಿದ್ದ ಅಮನ್‌, ಸೆಮಿಫೈನಲ್‌ನಲ್ಲಿ ತಾಂತ್ರಿಕ ಹಿನ್ನಡೆಯಿಂದಲೇ ಸೋಲನುಭವಿಸಿದ್ದರು. 57 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಕಳೆದ ಟೋಕಿಯೊ ಬೆಳ್ಳಿ ಪದಕ ಗೆದ್ದಿದ್ದ ರವಿ ದಹಿಯಾ ಅವರನ್ನು ರಾಷ್ಟ್ರೀಯ ಆಯ್ಕೆ ಟ್ರಯಲ್ಸ್‌ನಲ್ಲಿ ಮಣಿಸುವ ಮೂಲಕ ಅಮನ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು. ಇದೀಗ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಂಚಿನ ಪದಕ ನಿರೀಕ್ಷೆಯಲ್ಲಿದ್ದಾರೆ.

ಇಂದಿನ ವೇಳಾಪಟ್ಟಿ

ಮಧ್ಯಾಹ್ನ 12:30: ಗಾಲ್ಫ್ – ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇ ರೌಂಡ್ 2 ರಲ್ಲಿ ದೀಕ್ಷಾ ದಾಗರ್ ಮತ್ತು ಅದಿತಿ ಅಶೋಕ್.

ಮಧ್ಯಾಹ್ನ 2:10: ಅಥ್ಲೆಟಿಕ್ಸ್ – ಮಹಿಳೆಯರ 4×400 ಮೀಟರ್ ರಿಲೇ ಹೀಟ್ಸ್.
ಭಾರತದ ಜ್ಯೋತಿಕಾ ಶ್ರೀ ದಂಡಿ, ಕಿರಣ್ ಪಹಲ್, ಎಂ.ಪೂವಮ್ಮ ರಾಜು ಮತ್ತು ವಿಠ್ಠಲ ರಾಮರಾಜ್ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ Paris Olympics 2024: ಒಲಿಂಪಿಕ್ಸ್‌ನಲ್ಲಿ ಇಂದು ಭಾರತದ ಸ್ಪರ್ಧಿಗಳ ಕಾದಾಟ; ಯಾವ ಪದಕ ನಿರೀಕ್ಷೆ? ಇಲ್ಲಿದೆ ವೇಳಾಪಟ್ಟಿ

ಮಧ್ಯಾಹ್ನ 2:35: ಅಥ್ಲೆಟಿಕ್ಸ್ – ಪುರುಷರ 4×400 ಮೀಟರ್ ರಿಲೇ ಹೀಟ್ಸ್.
ಅಮೋಜ್ ಜಾಕೋಬ್, ರಾಜೇಶ್ ರಮೇಶ್, ಸಂತೋಷ್ ಕುಮಾರ್ ತಮಿಳರಸನ್ ಮತ್ತು ಮುಹಮ್ಮದ್ ಅಜ್ಮಲ್ ವರಿಯತೋಡಿ ಸೆಮಿಫೈನಲ್ ಗೆ ಅರ್ಹತೆ ಪಡೆಯುವ ಗುರಿ ಹೊಂದಿದ್ದಾರೆ.

ಮಧ್ಯಾಹ್ನ 2:30: ಮಹಿಳೆಯರ 57 ಕೆ.ಜಿ ಫ್ರೀಸ್ಟೈಲ್​ನಲ್ಲಿ ಕುಸ್ತಿಯಲ್ಲಿ ಅನ್ಶು ಮಲಿಕ್ . ಅನ್ಶು ಅವರ ಅದೃಷ್ಟ ಮಾಜಿ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಹೆಲೆನ್ ಮರೌಲಿಸ್ ಅವರ ವಿರುದ್ಧ ಗೆಲ್ಲುವ ಮೂಲಕ ನಿರ್ಧಾರವಾಗಲಿದೆ.

ರಾತ್ರಿ 11:10: ಪುರುಷರ 57 ಕೆ.ಜಿ ಫ್ರೀಸ್ಟೈಲ್ ಕಂಚಿನ ಅಥವಾ ಚಿನ್ನದ ಪದಕ ಪಂದ್ಯದಲ್ಲಿ (ಪದಕ ಸ್ಪರ್ಧೆಗಳು) ಅಮನ್ ಸೆಹ್ರಾವತ್.

5 ಪದಕ ಗೆದ್ದ ಭಾರತ


ಭಾರತ ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಸದ್ಯ 5 ಪದಕ ಗೆದ್ದು ಪದಕ ಪಟ್ಟಿಯಲ್ಲಿ 64ನೇ ಸ್ಥಾನದಲ್ಲಿದೆ. 1, ಬೆಳ್ಳಿ ಮತ್ತು 4 ಕಂಚುಗಳು ಒಳಗೊಂಡಿದೆ. ಇಂದು ನಡೆಯುವ ಪುರುಷರ ಕುಸ್ತಿಯಲ್ಲಿ ಅಮನ್​ ಕಂಚು ಗೆದ್ದರೆ ಪದಕದ ಸಂಖ್ಯೆ 6ಕ್ಕೆ ಏರಲಿದೆ.

Continue Reading
Advertisement
Actor Yash called the actor that if you grow beyond all of us dance karnataka dance
ಸ್ಯಾಂಡಲ್ ವುಡ್5 mins ago

Actor Yash: ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ ಎಂದು ನಟನಿಗೆ ಕರೆ ಮಾಡಿದ ‘ರಾಕಿಂಗ್ ಸ್ಟಾರ್’ ಯಶ್!

bangalore traffic signal
ಪ್ರಮುಖ ಸುದ್ದಿ7 mins ago

Bangalore Traffic: ಬೆಂಗಳೂರಿನ ಟ್ರಾಫಿಕ್‌ ಸಿಗ್ನಲ್‌ನಲ್ಲಿ 15 ನಿಮಿಷ ನಿಲ್ಲೋ ಪರಿಸ್ಥಿತಿ ಬರಲಿದೆ, ಎಚ್ಚರ!

Vinesh Phogat
ಕ್ರೀಡೆ25 mins ago

Vinesh Phogat: ಕೆಲವೇ ಗಂಟೆಗಳಲ್ಲಿ ವಿನೇಶ್ ಫೋಗಟ್​ ಬೆಳ್ಳಿ ಪದಕದ ತೀರ್ಪು ಪ್ರಕಟ

Manish Sisodia
ದೇಶ35 mins ago

Manish Sisodia: ದೆಹಲಿ ಅಬಕಾರಿ ನೀತಿ ಅಕ್ರಮ: ಮನೀಶ್‌ ಸಿಸೋಡಿಯಾಗೆ ಜಾಮೀನು

Antim Panghal
ಕ್ರೀಡೆ1 hour ago

Antim Panghal: 3 ವರ್ಷ ನಿಷೇಧ ಶಿಕ್ಷೆಯಿಂದ ಪಾರಾದ ಕುಸ್ತಿಪಟು ಅಂತಿಮ್‌ ಪಂಘಲ್‌

train service
ಹಾಸನ1 hour ago

Train services: ಎಡಕುಮೇರಿಯಲ್ಲಿ ದುರಸ್ಥಿ ಪೂರ್ಣ; ರೈಲುಗಳ ಪುನರ್‌ ಆರಂಭವಾದರೂ ವೇಗದ ಮಿತಿಗೆ ನಿರ್ಬಂಧ

ದೇಶ1 hour ago

Kangana v/s Rahul Gandhi: ರಾಹುಲ್‌ ಗಾಂಧಿಯ ತಿರುಚಿದ ಫೊಟೋ ಶೇರ್‌; ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ

ಪ್ರಮುಖ ಸುದ್ದಿ2 hours ago

CM Siddaramaiah: ಮೈಸೂರು ಜನಾಂದೋಲನ ಸಮಾವೇಶ ಸ್ಥಳಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್‌ ಪಡೆ; ಲೈವ್‌ ಇಲ್ಲಿದೆ ವೀಕ್ಷಿಸಿ

Laapataa Ladies to be screened in Supreme Court
ಬಾಲಿವುಡ್2 hours ago

Laapataa Ladies: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ ‘ಲಾಪತಾ ಲೇಡೀಸ್’!

Vinesh Phogat
ಕ್ರೀಡೆ2 hours ago

Vinesh Phogat: ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಪಿತೂರಿಯ ಬಗ್ಗೆ ಗಂಭೀರ ಆರೋಪ ಮಾಡಿದ್ದ ವಿನೇಶ್​; ವೈರಲ್​ ಟ್ವೀಟ್​ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ19 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ21 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ22 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌