ದುಬೈ: ನೂತನ ಟಿ20 ಶ್ರೇಯಾಂಕದಲ್ಲಿ(ICC T20 Rankings) ಭಾರತ ತಂಡ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಆದರೆ, ಭಾರತದ ಬದ್ಧ ಎದುರಾಳಿ ಪಾಕಿಸ್ತಾನ 7ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಸೋಲು ಮತ್ತು ಪ್ರಸ್ತುತ ಸಾಗುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದೇ ಪಾಕ್ ತಂಡದ ಶ್ರೇಯಾಂಕ ಕುಸಿತಕ್ಕೆ ಕಾರಣ.
ಭಾರತ ಇದುವರೆಗೆ 49 ಪಂದ್ಯ ಆಡಿ 265 ರೇಟಿಂಗ್ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 259 ರೇಟಿಂಗ್ ಅಂದೊಂದಿಗೆ ದ್ವಿತೀಯ ಸ್ಥಾನಿಯಾಗಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನಿಯಾಗಿದೆ. 7ನೇ ಸ್ಥಾನಿಯಾಗಿರುವ ಪಾಕ್ 241 ರೇಟಿಂಗ್ ಅಂಕ ಹೊಂದಿದೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ಆಡಿದ ಮೂರು ಪಂದ್ಯಗಳಲ್ಲಿ ಕೇವಲ 2 ಪಂದ್ಯ ಮಾತ್ರ ಗೆದ್ದಿದೆ. ಅಮೆರಿಕ ಮತ್ತು ಭಾರತ ಇನ್ನುಳಿದ ಪಂದ್ಯದಲ್ಲಿ ಗೆದ್ದರೆ ಪಾಕ್ ಟೂರ್ನಿಯಿಂದ ಹೊರಬೀಳಲಿದೆ. ಟೂರ್ನಿಗೂ ಮುನ್ನ ಮಿಲಿಟರಿ ಪಡೆಯೊಂದಿಗೆ ಫಿಟ್ನೆಸ್ ತರಬೇತಿ ಪಡೆದು ಬಂದರೂ ಕೂಡ ಪಾಕ್ ತಂಡದ ಕಳಪೆ ಪ್ರದರ್ಶನ ಮಾತ್ರ ಬದಲಾಗಲಿಲ್ಲ.
ಅಗ್ರ ಶ್ರೇಯಾಂಕ ಪಟ್ಟಿಯ 10 ತಂಡಗಳು
ತಂಡ | ರೇಟಿಂಗ್ ಅಂಕ |
ಭಾರತ | 265 |
ಆಸ್ಟ್ರೇಲಿಯಾ | 258 |
ಇಂಗ್ಲೆಂಡ್ | 254 |
ವೆಸ್ಟ್ ಇಂಡೀಸ್ | 253 |
ನ್ಯೂಜಿಲ್ಯಾಂಡ್ | 248 |
ದಕ್ಷಿಣ ಆಫ್ರಿಕಾ | 247 |
ಪಾಕಿಸ್ತಾನ | 241 |
ಶ್ರೀಲಂಕಾ | 230 |
ಬಾಂಗ್ಲಾದೇಶ | 226 |
ಅಫಘಾನಿಸ್ತಾನ | 220 |
ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ 837 ರೇಟಿಂಗ್ ಅಂಕದೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್ನ ಫಿಲ್ ಸಾಲ್ಟ್(800) 2ನೇ ಸ್ಥಾನಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿ ಬಾಬರ್ ಅಜಂ(756) ಮತ್ತು 4ನೇ ಸ್ಥಾನಿಯಾಗಿ ಮೊಹಮ್ಮದ್ ರಿಜ್ವಾನ್(752) ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ
ಪಾಕ್ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್ ಸಿಂಗ್
ಮುಂಬಯಿ: ಭಾರತ ಮತ್ತು ಪಾಕ್(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಕಮ್ರಾನ್ ಅಕ್ಮಲ್(Kamran Akmal) ವಿರುದ್ಧ ಹರ್ಭಜನ್ ಸಿಂಗ್(Harbhajan Singh) ಮತ್ತೆ ಕಿಡಿ ಕಾರಿದ್ದಾರೆ. ನಿನೋಬ್ಬ ನಾಲಾಯಕ್(Nalaayak) ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(viral video) ಆಗಿದೆ.
ಎಎನ್ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್ ಸಿಂಗ್ ಅವರು ಕಮ್ರಾನ್ ಅಕ್ಮಲ್ ಒಬ್ಬ ನಾಲಾಯಕ್, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.
ಇದಕ್ಕೂ ಮುನ್ನ ಹರ್ಭಜನ್ ಸಿಂಗ್ ಅವರು ಟ್ವೀಟ್ ಮಾಡಿ ಅಕ್ಮಲ್ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದರು.