ICC Test Rankings: ಮತ್ತೆ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮೇಲೇರಿದ ಯಶಸ್ವಿ ಜೈಸ್ವಾಲ್ - Vistara News

ಕ್ರೀಡೆ

ICC Test Rankings: ಮತ್ತೆ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮೇಲೇರಿದ ಯಶಸ್ವಿ ಜೈಸ್ವಾಲ್

ಯಶಸ್ವಿ ಜೈಸ್ವಾಲ್(Yashasvi Jaiswal) ಅವರು ಐಸಿಸಿ ನೂತನ ಟೆಸ್ಟ್​ ಬ್ಯಾಟಿಂಗ್​(ICC Test Rankings) ಶ್ರೇಯಾಂಕದಲ್ಲಿ ಮತ್ತೆ ಮೂರು ಸ್ಥಾನಗಳ ಜಿಗಿತ ಕಂಡು 12ನೇ ಸ್ಥಾನ ಪಡೆದಿದ್ದಾರೆ.

VISTARANEWS.COM


on

yashasvi jaiswal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿರುವ ಟೀಮ್​ ಇಂಡಿಯಾದ ಯುವ ಬ್ಯಾಟರ್​ ಯಶಸ್ವಿ ಜೈಸ್ವಾಲ್(Yashasvi Jaiswal) ಅವರು ಐಸಿಸಿ ನೂತನ ಟೆಸ್ಟ್​ ಬ್ಯಾಟಿಂಗ್​(ICC Test Rankings) ಶ್ರೇಯಾಂಕದಲ್ಲಿ ಮತ್ತೆ ಮೂರು ಸ್ಥಾನಗಳ ಜಿಗಿತ ಕಂಡು 12ನೇ ಸ್ಥಾನ ಪಡೆದಿದ್ದಾರೆ. ಕಳೆದ ವಾರ 14 ಸ್ಥಾನಗಳ ಪ್ರಗತಿ ಸಾಧಿಸಿ 15ನೇ ಸ್ಥಾನ ಅಲಂಕರಿಸಿದ್ದರು.

ನೂತನ ಶ್ರೇಯಾಂಕದಲ್ಲಿ ಜೈಸ್ವಾಲ್​ 727 ರೇಟಿಂಗ್​ ಅಂಕದೊಂದಿಗೆ 12ನೇ ಸ್ಥಾನ ಪಡೆದಿದ್ದಾರೆ. ಅಂತಿಮ ಟೆಸ್ಟ್​ನಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದರೆ ಅಗ್ರ 10ರೊಳಗೆ ಸ್ಥಾನ ಪಡೆಯುವ ಅವಕಾಶವಿದೆ. 893 ರೇಟಿಂಗ್​ ಅಂಕ ಹೊಂದಿರುವ ನ್ಯೂಜಿಲ್ಯಾಂಡ್​ನ ಮಾಜಿ ನಾಯಕ ಕೇನ್​ ವಿಲಿಯಮ್ಸನ್(Kane WILLIAMSON)​ ಈ ಬಾರಿಯೂ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ. ರಾಂಚಿ ಟೆಸ್ಟ್​ನ ಮೊದಲ ಇನಿಂಗ್ಸ್​ನಲ್ಲಿ ಶತಕ ಬಾರಿಸಿದ ಜೋ ರೂಟ್(Joe Root)​ 2 ಸ್ಥಾನಗಳ ಪ್ರಗತಿ ಸಾಧಿಸಿ ಮೂರನೇ ಸ್ಥಾನಕ್ಕೇರಿದ್ದಾರೆ.

ಈ ಬಾರಿಯ ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಅತಿ ಹೆಚ್ಚು ಪ್ರಗತಿ ಸಾಧಿಸಿದ್ದು ಇಂಗ್ಲೆಂಡ್​ನ ಜಾಕ್​ ಕ್ರಾಲಿ. 10 ಸ್ಥಾನಗಳ ಏರಿಕೆ ಕಂಡು 17ನೇ ಸ್ಥಾನ ಪಡೆದಿದ್ದಾರೆ. ವೈಯಕ್ತಿಕ ಕಾರಣ ನೀಡಿ ಟೆಸ್ಟ್​ ಸರಣಿಯಿಂದ ಹಿಂದೆ ಸರಿದ ಟೀಮ್​ ಇಂಡಿಯಾದ ಅನುಭವಿ ಬ್ಯಾಟರ್​ ವಿರಾಟ್ ಕೊಹ್ಲಿ 2 ಸ್ಥಾನಗಳ ಕುಸಿತದೊಂದಿಗೆ 9ನೇ ಸ್ಥಾನ ಪಡೆದಿದ್ದಾರೆ.

ಕಾರು ಅಪಘಾತದಲ್ಲಿ ಗಾಯಗೊಂಡು ಸರಿ ಸುಮಾರು ಒಂದು ವರ್ಷಗಳಿಗಿಂತಲೂ ಕ್ರಿಕೆಟ್​ನಿಂದ ದೂರ ಉಳಿದಿರುವ ಟೀಮ್​ ಇಂಡಿಯಾದ ರಿಷಭ್​ ಪಂತ್​ 699 ರೇಟಿಂಗ್​ ಅಂಕದೊಂದಿಗೆ ಬ್ಯಾಟಿಂಗ್​ ಶ್ರೇಯಾಂಕದಲ್ಲಿ 14ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಯಾವುದೇ ದೊಡ್ಡ ಬದಲಾವಣೆ ಸಂಭವಿಸಿಲ್ಲ. ಕಳೆದ ಬಾರಿಯಂತೆಯೇ ರವಿಂದ್ರ ಜಡೇಜಾ ಅಗ್ರಸ್ಥಾನ, ಆರ್​.ಅಶ್ವಿನ್​ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಬೌಲಿಂಗ್​ ಶ್ರೇಯಾಂಕದಲ್ಲಿ ಜಸ್​ಪ್ರೀತ್​ ಬುಮ್ರಾ 4ನೇ ಟೆಸ್ಟ್​ ಆಡದಿದ್ದರೂ ಕೂಡ ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅಶ್ವಿನ್​ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚೈನಾಮನ್​ ಖ್ಯಾತಿಯ ಸ್ಪಿನ್ನರ್​ ಕುಲ್​ದೀಪ್ ಯಾದವ್ ಬರೋಬ್ಬರಿ 10 ಸ್ಥಾನಗಳ ಜಿಗಿತ ಕಂಡು 32ನೇ ಸ್ಥಾನಕ್ಕೇರಿದ್ದಾರೆ.​

ಇದನ್ನೂ ಓದಿ KL Rahul: ಲಂಡನ್​ನಲ್ಲಿ ಚಿಕಿತ್ಸೆ; ಐಪಿಎಲ್ ಟೂರ್ನಿಯಿಂದ ಹೊರಬೀಳಲಿದ್ದಾರೆ ರಾಹುಲ್​!​

ಟಾಪ್​ 5 ಬ್ಯಾಟರ್​ಗಳು


1. ಕೇನ್​ ವಿಲಿಯಮ್ಸನ್​- 893 ರೇಟಿಂಗ್ ಅಂಕ

2. ಸ್ಟೀವನ್​ ಸ್ಮಿತ್​-818 ರೇಟಿಂಗ್​ ಅಂಕ

3. ಜೋ ರೂಟ್​-799 ರೇಟಿಂಗ್​ ಅಂಕ

4. ಡ್ಯಾರಿಲ್​ ಮಿಚೆಲ್​-780 ರೇಟಿಂಗ್​ ಅಂಕ

5. ಬಾಬರ್​ ಅಜಂ-768 ರೇಟಿಂಗ್​ ಅಂಕ

ಟಾಪ್​ 5 ಬೌಲರ್​ಗಳು


1. ಜಸ್​ಪ್ರೀತ್​ ಬುಮ್ರಾ-867 ರೇಟಿಂಗ್​ ಅಂಕ

2. ರವಿಚಂದ್ರನ್​ ಅಶ್ವಿನ್​-846 ರೇಟಿಂಗ್​ ಅಂಕ

3. ಕಗಿಸೊ ರಬಾಡ-834 ರೇಟಿಂಗ್​ ಅಂಕ

4. ಪಾಟ್ ಕಮಿನ್ಸ್​-828 ರೇಟಿಂಗ್​ ಅಂಕ

5. ಜೋಶ್​ ಹ್ಯಾಜಲ್​ವುಡ್​-818 ರೇಟಿಂಗ್​ ಅಂಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ ಪಂದ್ಯ ನಡೆಯುವ ತಾಣ,ಭಾರತದ ಪಂದ್ಯಗಳ ಪ್ರಸಾರದ ಮಾಹಿತಿ ಹೀಗಿದೆ

T20 World Cup 2024: ಟೀಮ್​ ಇಂಡಿಯಾದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8ಗಂಟೆಗೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ನೇರ ಪ್ರಸಾರದ ಹಕ್ಕನ್ನು ಹೊಂದಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು OTT ಪ್ಲಾಟ್‌ಫಾರ್ಮ್‌ನಲ್ಲಿ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಬಹುದು.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಒಂಬತ್ತನೇ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿ(T20 World Cup 2024) ಆರಂಭಕ್ಕೆ ಅಮೆರಿಕ ಮತ್ತು ವೆಸ್ಟ್ ಸಜ್ಜಾಗಿದೆ. ಉಭಯ ದೇಶಗಳು ಟೂರ್ನಿಯ ಜಂಟಿ ಆತಿಥ್ಯವಹಿಸಿಕೊಂಡಿದೆ. ನಾಳೆ(ಜೂನ್​ 1) ನಡೆಯುವ ಉದ್ಘಾಟನ ಪಂದ್ಯದಲ್ಲಿ ಅಮೆರಿಕ ತಂಡ ಕೆನಡಾ ತಂಡದ ಸವಾಲು ಎದುರಿಸಲಿದೆ. ಅಮೆರಿಕ ಇದೇ ಮೊದಲ ಬಾರಿಗೆ ಐಸಿಸಿ ಕ್ರಿಕೆಟ್​ ಟೂರ್ನಿಯ ಆತಿಥ್ಯವಹಿಸಿಕೊಂಡಿ​ದೆ. ವೆಸ್ಟ್‌ ಇಂಡೀಸ್‌ನಲ್ಲಿ ಆರು ಹಾಗೂ ಅಮೆರಿಕದ ಮೂರು ಸೇರಿದಂತೆ ಒಟ್ಟು ಒಂಬತ್ತು ತಾಣಗಳಲ್ಲಿ ವಿಶ್ವಕಪ್ ಆಯೋಜನೆಯಾಗಲಿದೆ.

ಭಾಗವಹಿಸುವ ತಂಡಗಳು


ಭಾರತ, ವೆಸ್ಟ್‌ ಇಂಡೀಸ್, ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್, ಪಾಕಿಸ್ತಾನ, ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ನೆದರ್ಲೆಂಡ್ಸ್, ಅಫಘಾನಿಸ್ತಾನ, ಬಾಂಗ್ಲಾದೇಶ, ಐರ್ಲೆಂಡ್, ಸ್ಕಾಟ್ಲೆಂಡ್, ಕೆನಡಾ, ನೇಪಾಳ, ಒಮಾನ್, ನಮೀಬಿಯಾ, ಉಗಾಂಡ ಮತ್ತು ಪಪುವಾ ನ್ಯೂಗಿನಿ.

ಟಿ20 ವಿಶ್ವಕಪ್ ವಿಜೇತ ತಂಡಗಳು

ದೇಶವರ್ಷ
ಭಾರತ2007
ಪಾಕಿಸ್ತಾನ2009
ಇಂಗ್ಲೆಂಡ್2010
ವೆಸ್ಟ್‌ಇಂಡೀಸ್2012
ಶ್ರೀಲಂಕಾ2014
ವೆಸ್ಟ್‌ಇಂಡೀಸ್2016
ಆಸ್ಟ್ರೇಲಿಯಾ2021
ಇಂಗ್ಲೆಂಡ್2022

ಪಂದ್ಯ ನಡೆಯುವ ತಾಣ

ವೆಸ್ಟ್‌ಇಂಡೀಸ್ಅಮೆರಿಕ
ನೌರ್ತ್ ಸೌಂಡ್ (ಆಯಂಟಿಗುವಾ ಮತ್ತು ಬಾರ್ಬುಡಾ)ಫ್ಲೋರಿಡಾ (ಲೌಂಡರ್‌ಹಿಲ್ )
ಬ್ರಿಡ್ಜ್‌ಟೌನ್ (ಬಾರ್ಬಡೋಸ್)ನ್ಯೂಯಾರ್ಕ್
ಜಾರ್ಜ್‌ಟೌನ್ (ಗಯಾನ)ಟೆಕ್ಸಾಸ್ (ಡಲ್ಲಾಸ್)
ಗ್ರಾಸ್‌ ಐಲ್ (ಸೇಂಟ್ ಲೂಸಿಯಾ)
ಕಿಂಗ್ಸ್‌ಟೌನ್ (ಸೇಂಟ್ ವಿನ್ಸೆಂಟ್)
ತರೌಬಾ (ಟ್ರಿನಿಡಾಡ್‌ ಆಯಂಡ್‌ ಟೊಬಾಗೊ).

ನಾಲ್ಕು ಗುಂಪುಗಳು


‘ಎ’ ಗುಂಪು: ಭಾರತ, ಪಾಕಿಸ್ತಾನ, ಅಮೆರಿಕ, ಕೆನಡಾ, ಐರ್ಲೆಂಡ್

‘ಬಿ’ ಗುಂಪು: ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಒಮಾನ್, ಇಂಗ್ಲೆಂಡ್

‘ಸಿ’ ಗುಂಪು: ವೆಸ್ಟ್‌ಇಂಡೀಸ್, ಅಪಘಾನಿಸ್ತಾನ, ಉಗಾಂಡ, ಪಪುವಾ ನ್ಯೂಗಿನಿ, ನ್ಯೂಜಿಲೆಂಡ್.

‘ಡಿ’ ಗುಂಪು: ನೆದರ್ಲೆಂಡ್ಸ್, ನೇಪಾಳ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ.

ಭಾರತದ ಪಂದ್ಯಗಳ ಪ್ರಸಾರ

ಟೀಮ್​ ಇಂಡಿಯಾದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8ಗಂಟೆಗೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ನೇರ ಪ್ರಸಾರದ ಹಕ್ಕನ್ನು ಹೊಂದಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಡಿಸ್ನಿ + ಹಾಟ್‌ಸ್ಟಾರ್​ನಲ್ಲಿ ಪ್ರಸಾರಗೊಳ್ಳಲಿದೆ. 

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಕ್ಷಣಗಣನೆ; ಭಾರತ ಸೇರಿ ಬಲಿಷ್ಠ ತಂಡಗಳ ಪಂದ್ಯದ ವೇಳಾಪಟ್ಟಿ ಇಲ್ಲಿದೆ

20 ತಂಡಗಳು ಭಾಗಿ


ಈ ಬಾರಿ ಟೂರ್ನಿಯಲ್ಲಿ ಗರಿಷ್ಠ 20 ತಂಡಗಳು ಕಣಕ್ಕಿಳಿಯಲಿವೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಟೂರ್ನಿಯಲ್ಲೂ ವಿಭಿನ್ನ ಸ್ವರೂಪವಿದೆ. 20 ತಂಡಗಳನ್ನು ತಲಾ ಐದು ತಂಡಗಳಂತೆ ನಾಲ್ಕು ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಗುಂಪು ವಿಭಾಗದಲ್ಲಿ ಪ್ರತಿ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಲಿವೆ. ಪ್ರತಿ ಗುಂಪಿನಿಂದ ತಲಾ ಎರಡು ತಂಡಗಳು ಸೂಪರ್ ಎಂಟರ ಹಂತಕ್ಕೆ ತೇರ್ಗಡೆ ಪಡೆಯಲಿವೆ. ಅಲ್ಲೂ ತಲಾ ನಾಲ್ಕು ತಂಡಗಳ ಎರಡು ಗುಂಪುಗಳು ಇದ್ದು, ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಲಗ್ಗೆ ಇಡಲಿವೆ.

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ಗೆ ಕ್ಷಣಗಣನೆ; ಭಾರತ ಸೇರಿ ಬಲಿಷ್ಠ ತಂಡಗಳ ಪಂದ್ಯದ ವೇಳಾಪಟ್ಟಿ ಇಲ್ಲಿದೆ

T20 World Cup 2024: ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಬುನಿರೀಕ್ಷಿತ ಪುರುಷರ ಐಸಿಸಿ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ನಾಳೆಯಿಂದ ಆರಂಭಗೊಳ್ಳಲಿದೆ. ಭರ್ತಿ ಒಂದು ತಿಂಗಳ ಕಾಲ ಟೂರ್ನಿ ನಡೆತಲಿದ್ದು ಕ್ರಿಕೆಟ್​ ಅಭಿಮಾನಿಗಳಿಗೆ ಈ ಒಂದು ತಿಂಗಳು ರಸದೌತಣ ಸಿಗಲಿದೆ. ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಗರಿಷ್ಠ 20 ತಂಡಗಳು ಭಾಗವಹಿಸುತ್ತಿವೆ. ಭಾರತ ಮತ್ತು, ಇನ್ನುಳಿದ ಬಲಿಷ್ಠ ತಂಡಗಳ ಪಂದ್ಯದ(T20 World Cup Schedule) ವೇಳಾಪಟ್ಟಿ ಇಂತಿದೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ

ಮೊದಲ ಸುತ್ತಿನ ಇತರ ಪಂದ್ಯಗಳು

ದಿನಾಂಕಪಂದ್ಯಸ್ಥಳ
ಜೂನ್ 3ಶ್ರೀಲಂಕಾ-ದಕ್ಷಿಣ ಆಫ್ರಿಕಾನ್ಯೂಯಾರ್ಕ್
ಜೂನ್​ 7ನ್ಯೂಜಿಲ್ಯಾಂಡ್​-ಅಫಘಾನಿಸ್ತಾನಗಯಾನ
ಜೂನ್​ 7 ಶ್ರೀಲಂಕಾ-ಬಾಂಗ್ಲಾದೇಶಡಲ್ಲಾಸ್
ಜೂನ್​ 8ಆಸ್ಟ್ರೇಲಿಯಾ-ಇಂಗ್ಲೆಂಡ್ಬಾರ್ಬಡೋಸ್​
ಜೂನ್​ 10ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶನ್ಯೂಯಾರ್ಕ್
ಜೂನ್​ 12ವೆಸ್ಟ್​ ಇಂಡೀಸ್​-ನ್ಯೂಜಿಲ್ಯಾಂಡ್ನ್ಯೂಯಾರ್ಕ್
ಜೂನ್​ 15ಆಸ್ಟ್ರೇಲಿಯಾ-ಸ್ಕಾಟ್ಲೆಂಡ್ಸೇಂಟ್​ ಲೂಸಿಯಾ
ಜೂನ್​ 17ವೆಸ್ಟ್​ ಇಂಡೀಸ್​-ಅಫಘಾನಿಸ್ತಾನಸೇಂಟ್​ ಲೂಸಿಯಾ

ನಾಕೌಟ್​ ಪಂದ್ಯಗಳ ವೇಳಾಪಟ್ಟಿ

ದಿನಾಂಕಪಂದ್ಯಸ್ಥಳ
ಜೂನ್​ 26 ಮೊದಲ ಸೆಮಿಫೈನಲ್ಗಯಾನ
ಜೂನ್​ 27ದ್ವಿತೀಯ ಸೆಮಿಫೈನಲ್ಟ್ರಿನಿಡಾಡ್
ಜೂನ್​ 29ಫೈನಲ್ಬಾರ್ಬಡೋಸ್

ಅಮೆರಿಕದಲ್ಲೇ ಭಾರತದ ಬಹುಪಾಲು ಪಂದ್ಯ


ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ T20 World Cup 2024: ನಾಳೆಯಿಂದ ಟಿ20 ವಿಶ್ವಕಪ್​ ಸಮರ ಆರಂಭ; 20 ತಂಡಗಳ ಮಾಹಿತಿ ಹೀಗಿದೆ

ಮೀಸಲು ದಿನ


ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

4 ಗುಂಪುಗಳ ತಂಡಗಳ ಪಟ್ಟಿ

ಗುಂಪು ಎ- ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್​ಎ.

ಗುಂಪು ಬಿ- ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಓಮನ್.

ಗುಂಪು ಸಿ- ನ್ಯೂಜಿಲ್ಯಾಂಡ್​, ಅಫಘಾನಿಸ್ತಾನ, ವೆಸ್ಟ್ ಇಂಡೀಸ್, ಉಗಾಂಡಾ, ಪಿಎನ್​ಜಿ.

ಗುಂಪು ಡಿ- ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್, ಶ್ರೀಲಂಕಾ, ನೇಪಾಳ.

ಸ್ವರೂಪ ಬದಲು

2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಆದರೆ 2024ರ ಟೂರ್ನಿಯಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ.  ಹಿಂದಿನ ಆವೃತ್ತಿಗಳಿಗಿಂತ ಈ ಬಾರಿ ಟೂರ್ನಿ ವಿಭಿನ್ನ ಸ್ವರೂಪವನ್ನು ಹೊಂದಿದೆ. ಒಟ್ಟು 20 ತಂಡಗಳನ್ನು ತಲಾ ಐದು ತಂಡಗಳಂತೆ ನಾಲ್ಕು ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಗುಂಪು ವಿಭಾಗದಲ್ಲಿ ಪ್ರತಿ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಲಿವೆ. ಪ್ರತಿ ಗುಂಪಿನಿಂದ ತಲಾ ಎರಡು ತಂಡಗಳು ಸೂಪರ್ ಎಂಟರ ಹಂತಕ್ಕೆ ತೇರ್ಗಡೆ ಪಡೆಯಲಿವೆ. ಅಲ್ಲೂ ತಲಾ ನಾಲ್ಕು ತಂಡಗಳ ಎರಡು ಗುಂಪುಗಳು ಇದ್ದು, ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಲಗ್ಗೆ ಇಡಲಿವೆ.

Continue Reading

ಕ್ರೀಡೆ

T20 World Cup 2024: ನಾಳೆಯಿಂದ ಟಿ20 ವಿಶ್ವಕಪ್​ ಸಮರ ಆರಂಭ; 20 ತಂಡಗಳ ಮಾಹಿತಿ ಹೀಗಿದೆ

T20 World Cup 2024:ನಾಳೆ ನಡೆಯುವ ಉದ್ಘಾಟನ ಪಂದ್ಯದಲ್ಲಿ ಅಮೆರಿಕ ಮತ್ತು ಕೆನಡಾ ಮುಖಾಮುಖಿಯಾಗುವುದರೊಂದಿಗೆ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಪ್ರತಿಷ್ಠಿತ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ನಡೆಯುವ ಉದ್ಘಾಟನ ಪಂದ್ಯದಲ್ಲಿ ಅಮೆರಿಕ ಮತ್ತು ಕೆನಡಾ ಮುಖಾಮುಖಿಯಾಗುವುದರೊಂದಿಗೆ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಫೈನಲ್​ ಪಂದ್ಯ ಜೂನ್​ 29ರಂದು ನಡೆಯಲಿದೆ. ಒಟ್ಟು 20 ತಂಡಗಳ ನಡುವಣ ಕಾದಾಟ ಇದಾಗಿದೆ. ಎಲ್ಲ 20 ತಂಡಗಳ ಪಟ್ಟಿ ಇಂತಿದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಪಾಕಿಸ್ತಾನ ತಂಡ


ಬಾಬರ್ ಅಜಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್ ಖಾನ್.

ಆಸ್ಟ್ರೇಲಿಯಾ ತಂಡ

ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. ಪ್ರಯಾಣದ ಮೀಸಲು ಆಟಗಾರರು: ಮ್ಯಾಟ್ ಶಾರ್ಟ್, ಜೇಕ್ ಫ್ರೇಸರ್-ಮೆಕ್‌ಗುರ್ಕ್.

ಇಂಗ್ಲೆಂಡ್​ ತಂಡ


ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜ್ಯಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.

ದಕ್ಷಿಣ ಆಫ್ರಿಕಾ ತಂಡ


ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಡ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನಾರ್ಜೆ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ಟ್ರೀಸ್ಟಾನ್ ಸ್ಟಬ್ಸ್​, ತಬ್ರೈಜ್ ಶಂಸಿ. ಮೀಸಲು ಆಟಗಾರು: ಲುಂಗಿ ಎನ್​ಗಿಡಿ, ಬರ್ಗರ್.

ಅಫಘಾನಿಸ್ಥಾನ ತಂಡ


ರಶೀದ್‌ ಖಾನ್‌ (ನಾಯಕ), ರೆಹಮಾನುಲ್ಲ ಗುರ್ಬಜ್‌, ಇಬ್ರಾಹಿಂ ಜದ್ರಾನ್‌, ಅಜ್ಮತುಲ್ಲ ಒಮರ್‌ಜಾಯ್‌, ನಜೀಬುಲ್ಲ ಜದ್ರಾನ್‌, ಮೊಹಮ್ಮದ್‌ ಇಶಾಖ್‌, ಮೊಹಮ್ಮದ್‌ ನಬಿ, ಗುಲ್ಬದಿನ್‌ ನೈಬ್‌, ಕರೀಂ ಜನ್ನತ್‌, ನಂಗ್ಯಾಲ್‌ ಖರೋಟಿ, ಮುಜೀಬ್‌ ಉರ್‌ ರೆಹಮಾನ್‌, ನೂರ್‌ ಅಹ್ಮದ್‌, ನವೀನ್‌ ಉಲ್‌ ಹಕ್‌, ಫ‌ಜಲ್‌ ಹಕ್‌ ಫಾರೂಖೀ, ಫ‌ರೀದ್‌ ಅಹ್ಮದ್‌ ಮಲಿಕ್‌. ಮೀಸಲು ಆಟಗಾರರು: ಸಾದಿಕ್‌ ಉಲ್ಲ ಅಟಲ್‌, ಹಜ್ರತುಲ್ಲ ಜಜಾಯ್‌, ಮೊಹಮ್ಮದ್‌ ಸಲೀಂ ಸಫಿ.

ಕೆನಡಾ ತಂಡ


ಸಾದ್ ಬಿನ್ ಜಾಫರ್ (ನಾಯಕ), ಆರನ್ ಜಾನ್ಸನ್, ದಿಲೋನ್ ಹೇಲಿಗರ್, ದಿಲ್‌ಪ್ರೀತ್ ಬಜ್ವಾ, ಹರ್ಷ್ ಠಾಕರ್, ಜೆರೆಮಿ ಗಾರ್ಡನ್, ಜುನೈದ್ ಸಿದ್ದಿಕಿ, ಕಲೀಮ್ ಸನಾ, ಕನ್ವರ್‌ಪಾಲ್ ತತ್‌ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ಪರ್ಗತ್ ಸಿಂಗ್, ರವೀಂದರ್‌ಪಾಲ್ ಸಿಂಗ್, ರಾಯನ್‌ಖಾನ್‌ಸ್ಹಾನ್, ಶ್ವಾಖಾನ್‌ಸ್ಹಾನ್‌ಸ್ಯಾನ್. ಮೀಸಲು ಆಟಗಾರ: ತಜೀಂದರ್ ಸಿಂಗ್, ಆದಿತ್ಯ ವರದರಾಜನ್, ಅಮ್ಮರ್ ಖಾಲಿದ್, ಜತೀಂದರ್ ಮಥಾರು, ಪರ್ವೀನ್ ಕುಮಾರ್.

ನೇಪಾಳ ತಂಡ


ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅಬಿನಾಶ್ ಬೋಹರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.

ಒಮಾನ್​ ತಂಡ


ಅಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಲೆ (ವಿಕಿ), ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ (ವಿಕಿ), ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫಿಯುಲ್ಲಾ, ಕಲೀಮುಲ್ಲಾ, ಫಯಾಜ್ ಬಟ್, ಶಕೀಲ್ ಅಹ್ಮದ್ , ಖಾಲಿದ್ ಕೈಲ್. ಮೀಸಲು ಆಟಗಾರ: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫ್ಯಾನ್ ಮೆಹಮೂದ್, ಜೇ ಒಡೆದ್ರಾ.

ಸ್ಕಾಟ್ಲೆಂಡ್​ ತಂಡ


ರಿಚಿ ಬೆರಿಂಗ್ಟನ್ (ನಾಯಕ), ಮ್ಯಾಥ್ಯೂ ಕ್ರಾಸ್, ಬ್ರಾಡ್ ಕ್ಯೂರಿ, ಕ್ರಿಸ್ ಗ್ರೀವ್ಸ್, ಒಲಿ ಹೇರ್ಸ್, ಜ್ಯಾಕ್ ಜಾರ್ವಿಸ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮನ್ಸೆ, ಸಫ್ಯಾನ್ ಷರೀಫ್, ಕ್ರಿಸ್ ಸೋಲ್, ಚಾರ್ಲಿ ಟಿಯರ್, ಮಾರ್ಕ್ ವ್ಯಾಟಲ್.

ಉಗಾಂಡ ತಂಡ

ಬ್ರಿಯಾನ್ ಮಸಾಬಾ (ನಾಯಕ), ಸೈಮನ್ ಸ್ಸೆಸಾಜಿ, ರೋಜರ್ ಮುಕಾಸಾ, ಕಾಸ್ಮಾಸ್ ಕ್ಯೆವುಟಾ, ದಿನೇಶ್ ನಕ್ರಾನಿ, ಫ್ರೆಡ್ ಅಚೆಲಮ್, ಕೆನ್ನೆತ್ ವೈಸ್ವಾ, ಅಲ್ಪೇಶ್ ರಾಮ್‌ಜಾನಿ, ಫ್ರಾಂಕ್ ನ್ಸುಬುಗಾ, ಹೆನ್ರಿ ಸೆನ್ಯೊಂಡೋ, ಬಿಲಾಲ್ ಹಸುನ್, ರಾಬಿನ್ಸನ್ ಒಬುಯಾ, ರಿಯಾಝತ್ ಅಲಿ ಮಿಯಾಜಿ, ರನಾಕ್​ ಪಟೇಲ್. ಪ್ರಯಾಣ ಮೀಸಲು: ಇನೋಸೆಂಟ್ ಮ್ವೆಬಾಜ್, ರೊನಾಲ್ಡ್ ಲುತಾಯಾ​.

ಅಮೆರಿಕ ತಂಡ

ಮೊನಾಂಕ್ ಪಟೇಲ್ (ನಾಯಕ), ಆರನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ಟುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸ್ಟೀವನ್ ಟೇಯ್ , ಶಯಾನ್ ಜಹಾಂಗೀರ್. ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.

ವೆಸ್ಟ್​ ಇಂಡೀಸ್​ ತಂಡ


ರೋವ್‌ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋಟಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರೊಥರ್‌ಫೋರ್ಡ್.

ನೆದರ್ಲೆಂಡ್ಸ್‌ ತಂಡ

ಸ್ಕಾಟ್‌ ಎಡ್ವರ್ಡ್ಸ್‌ (ನಾಯಕ), ಆರ್ಯನ್‌ ದತ್ತ, ಬಾಸ್‌ ಡಿ ಲೀಡ್‌, ಡೇನಿಯಲ್‌ ಡೋರಮ್‌, ಫ್ರೆಡ್‌ ಕ್ಲಾಸೆನ್‌, ಕೈಲ್‌ ಕ್ಲೀನ್‌, ಲೋಗನ್‌ ವಾನ್‌ ಬೀಕ್‌, ಮ್ಯಾಕ್ಸ್‌ ಓ’ಡೌಡ್‌, ಮೈಕಲ್‌ ಲೆವಿಟ್‌, ಪಾಲ್‌ ವಾನ್‌ ಮೀಕೆರೆನ್‌, ಸಿಬ್ರಾಂಡ್‌ ಏಂಜೆಲ್‌ಬ್ರೆಟ್‌, ತೇಜ ನಿಡಮನೂರು, ಟಿಮ್‌ ಪ್ರಿಂಗ್ಲ್, ವಿಕ್ರಮ್‌ ಸಿಂಗ್‌, ವೆಸ್ಲಿ ಬರೇಸಿ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಟೂರ್ನಿಗೆ ಕಾಮೆಂಟರಿ ಬಳಗ ಘೋಷಿಸಿದ ಐಸಿಸಿ; ದಿನೇಶ್​ ಕಾರ್ತಿಕ್​ಗೂ ಸ್ಥಾನ

ಐರ್ಲೆಂಡ್ ತಂಡ

ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

ಪಪುವಾ ನ್ಯೂಗಿನಿಯಾ ತಂಡ


ಅಸ್ಸಾದ್ ವಾಲಾ(ನಾಯಕ),ಸಿಜೆ ಅಮಿನಿ(ಉಪನಾಯಕ),ಅಲೆಯ್ ನಾವೊ, ಚಾಡ್ ಸೋಪರ್, ಹಿಲಾ ವರೇ, ಹಿರಿ ಹಿರಿ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೋರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಾಮಿಯಾ, ಸೆಸೆ ಬೌ, ಟೋನಿ ಉರಾ.

ಇದನ್ನೂ ಓದಿ T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

ಶ್ರೀಲಂಕಾ ತಂಡ


ವನಿಂದು ಹಸರಂಗ (ನಾಯಕ), ಚರಿತ್ ಅಸಲಂಕಾ, ಕುಸಲ್ ಮೆಂಡಿಸ್, ಪಾತುಂ ನಿಸ್ಸಂಕ, ಕಮಿಂದು ಮೆಂಡಿಸ್, ಸದೀರ ಸಮರವಿಕ್ರಮ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ಧನಂಜಯ ಡಿ ಸಿಲ್ವ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮಥೀಷ್ ತೀಕ್ಷಣ, ದುಷ್ಮಂತ ತುಷಾರ ಚಮೀರ, ನುವಾಂತಾ ಚಮೀರ ಮಧುಶಂಕ. ಪ್ರಯಾಣ ಮೀಸಲು: ಅಸಿತ ಫೆರ್ನಾಂಡೋ, ವಿಜಯಕಾಂತ್ ವ್ಯಾಸಕಾಂತ್, ಭಾನುಕಾ ರಾಜಪಕ್ಸೆ, ಜನಿತ್ ಲಿಯಾನಗೆ.

ಬಾಂಗ್ಲಾದೇಶ ತಂಡ


ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಸ್ಕಿನ್ ಅಹ್ಮದ್, ಲಿಟ್ಟನ್ ದಾಸ್, ಸೌಮ್ಯ ಸರ್ಕಾರ್, ತಂಝಿದ್ ಹಸನ್ ತಮೀಮ್, ಶಕೀಬ್ ಅಲ್ ಹಸನ್, ತೌಹಿದ್ ಹೃದಯೋಯ್, ಮಹ್ಮುದುಲ್ಲಾ ರಿಯಾದ್, ಜೇಕರ್ ಅಲಿ ಅನಿಕ್, ತನ್ವಿರ್ ಇಸ್ಲಾಂ, ಶಾಕ್ ಮಹೇದಿ ಹಸನ್, ರಿಶಾದ್ ಹೊಸ್ರಿ ಫುಲ್ ರಹ್ಮಾನ್, ಶೋಝಿನ್, ಇಸ್ಲಾಂ, ತಂಝೀಮ್ ಹಸನ್ ಸಾಕಿಬ್. ಪ್ರಯಾಣ ಮೀಸಲು: ಅಫೀಫ್ ಹೊಸೈನ್, ಹಸನ್ ಮಹಮೂದ್.

ನಮೀಬಿಯಾ ತಂಡ


ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಝೇನ್ ಗ್ರೀನ್, ಮೈಕೆಲ್ ವ್ಯಾನ್ ಲಿಂಗೆನ್, ಡೈಲನ್ ಲೀಚರ್, ರೂಬೆನ್ ಟ್ರಂಪೆಲ್ಮನ್, ಜ್ಯಾಕ್ ಬ್ರಾಸೆಲ್, ಬೆನ್ ಶಿಕೊಂಗೊ, ತಂಗೇನಿ ಲುಂಗಮೆನಿ, ನಿಕೊ ಡೇವಿನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಜೆಪಿ ಕೋಟ್ಜೆ, ಡೇವಿಡ್ ವೈಸ್, ಮಲನ್ ಸ್ಕೋಲ್ಟ್ಜ್ , ಪಿಡಿ ಬ್ಲಿಗ್ನಾಟ್.

Continue Reading

ಕ್ರಿಕೆಟ್

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Virat Kohli : ಕ್ರಿಕೆಟ್​ಬಜ್​ನಲ್ಲಿ ದಿನೇಶ್ ಕಾರ್ತಿಕ್ ಅವರೊಂದಿಗಿನ ಇತ್ತೀಚಿನ ಮಾತುಕತೆ ವೇಳೆ ಡೌಲ್ ತಮಗಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಬಲಗೈ ಬ್ಯಾಟರ್ ಕೊಹ್ಲಿ ಬಗ್ಗೆ ಹಲವಾರು ಒಳ್ಳೆಯ ವಿಷಯಗಳನ್ನು ಹೇಳಿದ್ದರೂ, ಅವರ ಒಂದು ನಕಾರಾತ್ಮಕ ಹೇಳಿಕೆಯ ಪರಿಣಾಮವಾಗಿ ತಮ್ಮ ಜೀವಕ್ಕೆ ಬೆದರಿಕೆ ಬಂದಿತ್ತು ಎಂದು ಬಹಿರಂಗಪಡಿಸಿದರು.

VISTARANEWS.COM


on

Virat kohli
Koo

ಬೆಂಗಳೂರು: ವಿರಾಟ್ ಕೊಹ್ಲಿ (Virat Kohli) ವಿಶ್ವದ ಅತ್ಯಂತ ಪ್ರಸಿದ್ಧ ಕ್ರಿಕೆಟಿಗರಲ್ಲಿ ಒಬ್ಬರು. ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿಯ ಬಗ್ಗೆ ಟೀಕೆ ಟಿಪ್ಪಣಿಗಳನ್ನು ಮಾಡುವಾಗ ಎಚ್ಚರಿಕೆಯಿಂದ ಇರುವುದು ಮುಖ್ಯವಾಗುತ್ತದೆ. ಆದಾಗ್ಯೂ ಅವರನ್ನು ಹೊಗಳಿದರೆ ಸಿಕ್ಕಾಪಟ್ಟೆ ಪ್ರೀತಿ ಸಿಗುವುದು ಖಾತರಿ. ಹಲವಾರು ಬಾರಿ ನೋಡಿದಂತೆ ವಿರಾಟ್​ ಕೊಹ್ಲಿಯ ಅಭಿಮಾನಿ ಬಳಗವು ಆಗಾಗ್ಗೆ ಅವರನ್ನು ಟೀಕಿಸಿರುವರ ನಿದ್ದೆಗೆಡಿಸಿದ್ದಾರೆ. ಇದೀಗ ಕೊಹ್ಲಿಯ ಅಭಿಮಾನಿಗಳಿಗೆ ಹೆದರಿದವರು ನ್ಯೂಜಿಲ್ಯಾಂಡ್​ ಮಾಜಿ ಆಟಗಾರ ಸೈಮನ್ ಡೌಲ್ಐ. ಪಿಎಲ್ 2024 ರ ಋತುವಿನಲ್ಲಿ ವಿರಾಟ್ ಕೊಹ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಅವರು ಹೇಳಿಕೆ ನೀಡಿದ್ದರು. ಅಲ್ಲಿಂದ ಅವರಿಗೆ ಕೊಹ್ಲಿ ಅಭಿಮಾನಿಗಳು ಸರಿಯಾಗಿ ನಿದ್ದೆ ಮಾಡಲೂ ಬಿಟ್ಟಿಲ್ಲ. ನ್ಯೂಜಿಲೆಂಡ್​​ನ ಮಾಜಿ ಕ್ರಿಕೆಟಿಗನಿಗೆ ಕೊಲೆ ಬೆದರಿಕೆಗಳನ್ನೂ ಹಾಕಿದ್ದಾರೆ.

ಕ್ರಿಕೆಟ್​ಬಜ್​ನಲ್ಲಿ ದಿನೇಶ್ ಕಾರ್ತಿಕ್ ಅವರೊಂದಿಗಿನ ಇತ್ತೀಚಿನ ಮಾತುಕತೆ ವೇಳೆ ಡೌಲ್ ತಮಗಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಬಲಗೈ ಬ್ಯಾಟರ್ ಕೊಹ್ಲಿ ಬಗ್ಗೆ ಹಲವಾರು ಒಳ್ಳೆಯ ವಿಷಯಗಳನ್ನು ಹೇಳಿದ್ದರೂ, ಅವರ ಒಂದು ನಕಾರಾತ್ಮಕ ಹೇಳಿಕೆಯ ಪರಿಣಾಮವಾಗಿ ತಮ್ಮ ಜೀವಕ್ಕೆ ಬೆದರಿಕೆ ಬಂದಿತ್ತು ಎಂದು ಬಹಿರಂಗಪಡಿಸಿದರು.

ಇದನ್ನೂ ಓದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

ವಿರಾಟ್​ ಕೊಹ್ಲಿ ತುಂಬಾ ಒಳ್ಳೆಯ ಆಟಗಾರ. ಅದು ಯಾವಾಗಲೂ ಅವರ ಸ್ಟ್ರೈಕ್​ರೇಟ್​ ಸುತ್ತ ನನ್ನ ವಿಚಾರಗಳು ಇದ್ದವು. ನಾನು ವಿರಾಟ್ ಕೊಹ್ಲಿ ಬಗ್ಗೆ ಸಾವಿರ ಉತ್ತಮ ವಿಷಯಗಳನ್ನು ಹೇಳಿದ್ದೇನೆ. ಆದರೆ ನಾನು ಸ್ಟ್ರೈಕ್​ ರೇಟ್​ ಬಗ್ಗೆ ಮಾತನಾಡಿದೆ. ಅದು ಸ್ವಲ್ಪ ನಕಾರಾತ್ಮಕವಾಗಿರಬಹುದು ಅಥವಾ ನಕಾರಾತ್ಮಕವಾಗಿದ್ದವು. ಅದಕ್ಕಾಗಿ ನನಗೆ ಕೊಲೆ ಬೆದರಿಕೆಗಳು ಬಂದವು ಎಂದು ಹೇಳಿದ್ದಾರೆ.

ವಿದೇಶಿ ಆಟಗಾರರ ಟೀಕೆ

ಕೊಹ್ಲಿಯ ಸ್ಟ್ರೈಕ್​ ರೇಟ್​ ಬಗ್ಗೆ ಟೀಕೆ ಸೈಮನ್ ಡೌಲ್​ ಅವರದ್ದೇ ಮೊದಲಲ್ಲ. ಹಲವಾರು ಭಾರತೀಯ ಕ್ರಿಕೆಟ್​ ದೈತ್ಯದು ಅವರ ಸ್ಟ್ರೈಕ್ ರೇಟ್ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಪಂದ್ಯದ ನಂತರದ ಸಂದರ್ಶನದಲ್ಲಿ, ವಿರಾಟ್ ಕೊಹ್ಲಿ ತಮ್ಮ ಟೀಕೆಗಳಿಗೆ ಉತ್ತರಿಸಿದ್ದರು. ಅದು ತಮ್ಮ ಆದ್ಯತೆ ಎಂದು ಹೇಳಿದ್ದರು.

“ಎಲ್ಲರೂ ನನ್ನ ಸ್ಟ್ರೈಕ್ ರೇಟ್ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ನಾನು ಸ್ಪಿನ್ ಬೌಲಿಂಗ್​ಗೆ ಸರಿಯಾಗಿ ಆಡದಿರುವ ಬಗ್ಗೆ (ಅಂಕಿಅಂಶಗಳು) ಮಾತನಾಡುತ್ತಾರೆ. ಆದರೆ ನನಗೆ ನನ್ನ ಕೆಲಸವನ್ನು ಮಾಡುವ ಬಗ್ಗೆ ಮಾತ್ರ ಯೋಚನೆಯಿದೆ. ಅವರು ಏನು ಬೇಕಾದರೂ ಮಾತನಾಡಬಹುದು. ಇದು ಈಗ ನನಗೆ ಒಂದು ರೀತಿಯ ಸ್ಮರಣೆಯಾಗಿದೆ ಎಂದು ಹೇಳಿದ್ದರು.

ಕೊಹ್ಲಿ ಈ ಋತುವಿನಲ್ಲಿ 15 ಇನಿಂಗ್ಸ್​ಗಳಿಂದ 154.70 ಸ್ಟ್ರೈಕ್ ರೇಟ್​​ನಲ್ಲಿ 741 ರನ್ ಗಳಿಸಿದ್ದದ್ದರು. ಅದಕ್ಕಾಗಿ ಅವರು ಆರೆಂಜ್ ಕ್ಯಾಪ್ ಪಡೆದಿದ್ದರು. ಪಂದ್ಯಾವಳಿಯ ಅವಧಿಯಲ್ಲಿ ಅವರು ಐದು ಅರ್ಧಶತಕಗಳೊಂದಿಗೆ 1 ಶತಕವನ್ನು ಬಾರಿಸಿದ್ದರು.

Continue Reading
Advertisement
Donald Trump
ವಿದೇಶ5 mins ago

ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ

Nandamuri Balakrishna pushed incident Anjali breaks silence
South Cinema14 mins ago

Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

T20 World Cup 2024
ಕ್ರಿಕೆಟ್15 mins ago

T20 World Cup 2024: ಟಿ20 ವಿಶ್ವಕಪ್​ ಪಂದ್ಯ ನಡೆಯುವ ತಾಣ,ಭಾರತದ ಪಂದ್ಯಗಳ ಪ್ರಸಾರದ ಮಾಹಿತಿ ಹೀಗಿದೆ

Shatru Bhairavi yaga ಶತ್ರು ಭೈರವಿ ಯಾಗ
ರಾಜಕೀಯ36 mins ago

ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

T20 World Cup 2024
ಕ್ರಿಕೆಟ್52 mins ago

T20 World Cup 2024: ಟಿ20 ವಿಶ್ವಕಪ್​ಗೆ ಕ್ಷಣಗಣನೆ; ಭಾರತ ಸೇರಿ ಬಲಿಷ್ಠ ತಂಡಗಳ ಪಂದ್ಯದ ವೇಳಾಪಟ್ಟಿ ಇಲ್ಲಿದೆ

Shilpa Shetty Shares Special Video From KD Kannada Movie
ಸ್ಯಾಂಡಲ್ ವುಡ್53 mins ago

Shilpa Shetty: ʻಕೆಡಿʼಸಿನಿಮಾ ಶೂಟಿಂಗ್‌ ಮುಗಿಸಿ ಹೊಸ ವಿಡಿಯೊ ಹಂಚಿಕೊಂಡ ಶಿಲ್ಪಾ ಶೆಟ್ಟಿ!

World No Tobacco Day
ಆರೋಗ್ಯ60 mins ago

World No Tobacco Day: ಇಂದು ವಿಶ್ವ ತಂಬಾಕು ರಹಿತ ದಿನ; ತಂಬಾಕು ಸೇವನೆಯಿಂದ ವರ್ಷಕ್ಕೆ 60 ಲಕ್ಷ ಜನರ ಸಾವು!

Air India Flight
ದೇಶ1 hour ago

Air India Flight: ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

PM Narendra Modi
ದೇಶ1 hour ago

PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

T20 World Cup 2024
ಕ್ರೀಡೆ1 hour ago

T20 World Cup 2024: ನಾಳೆಯಿಂದ ಟಿ20 ವಿಶ್ವಕಪ್​ ಸಮರ ಆರಂಭ; 20 ತಂಡಗಳ ಮಾಹಿತಿ ಹೀಗಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ21 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌