ದುಬೈ: ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ನಡೆಯಲಿರುವ ಈ ವರ್ಷದ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗೆ(ICC Women’s T20 World Cup 2024) ಶ್ರೀಲಂಕಾ(Sri Lanka Women’s T20) ಎರಡನೇ ಕ್ವಾಲಿಫೈಯರ್ ತಂಡವಾಗಿ ಅರ್ಹತೆ ಪಡೆದಿದೆ. ಸ್ಕಾಟ್ಲೆಂಡ್ ಮೊದಲ ಕ್ವಾಲಿಫೈಯರ್ ತಂಡವಾಗಿದೆ. ಆತಿಥೇಯ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಜತೆ ಶ್ರೀಲಂಕಾ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.
ಎರಡನೇ ಸೆಮಿಫೈನಲ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ಕಣಕ್ಕಿಳಿದ್ದ ಲಂಕಾ ತಂಡ ಗೆಲುವು ಸಾಧಿಸುವ ಮೂಲಕ ಪ್ರಧಾನ ಸುತ್ತಿಗೆ ಅರ್ಹತೆ ಪಡೆದುಕೊಂಡಿತು. ಮೊದಲು ಬ್ಯಾಟಿಂಗ್ ನಡೆಸಿದ ಲಂಕಾ 6 ವಿಕೆಟ್ಗೆ 149 ರನ್ ಬಾರಿಸಿತು. ಈ ಮೊತ್ತವನ್ನು ದಿಟ್ಟವಾಗಿ ಒಂದು ಹಂತದ ವರೆಗೆ ಬೆನ್ನಟ್ಟಿಕೊಂಡು ಹೋದ ಯುಎಇ 7 ವಿಕೆಟ್ಗೆ 134 ರನ್ ಗಳಿಸಿ 15 ರನ್ ಅಂತರದಿಂದ ಸೋಲೊಪ್ಪಿಕೊಂಡಿತು.
Sri Lanka booked their place at the Women's #T20WorldCup with a hard-fought victory over UAE 💪https://t.co/JFf4U1HzYQ
— ICC (@ICC) May 6, 2024
ಈಗಾಗಲೇ ಟೂರ್ನಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. ಭಾನುವಾರ ಐಸಿಸಿ ಈ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಟೂರ್ನಮೆಂಟ್‌ನಲ್ಲಿ ಪ್ರತಿ ತಂಡವು ನಾಲ್ಕು ಗುಂಪು ಪಂದ್ಯಗಳನ್ನು ಆಡುತ್ತದೆ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್ ಪ್ರವೇಶಿಸಲಿದೆ. ಸೆಮಿಫೈನಲ್ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಫೈನಲ್ ಪಂದ್ಯ ಅಕ್ಟೋಬರ್ 20 ರಂದು ಢಾಕಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳನ್ನು ಆಡಲಾಗುತ್ತದೆ. 19 ದಿನ ಪಂದ್ಯಾವಳಿ ಸಾಗಲಿದೆ. ಢಾಕಾ ಮತ್ತು ಸಿಲ್ಹೆಟ್‌ನಲ್ಲಿ ಪಂದ್ಯಗಳು ನಡೆಯಲಿವೆ. ಲೀಗ್ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನವಿಲ್ಲ. ಕೇಲವ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮಾತ್ರ ಮೀಸಲು ದಿನ ನಿಗದಿಯಾಗಿದೆ.
ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್‌ಗೆ ಪಾಕ್ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ
ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿದೆ. ಮತ್ತೊಂದು ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ. ಈ ಪಂದ್ಯ ಅಕ್ಟೋಬರ್ 3 ರಂದು ನಡೆಯಲಿದೆ. ಎಲ್ಲಾ ಗುಂಪು ಪಂದ್ಯಗಳು ಸಿಲ್ಹೆಟ್‌ನಲ್ಲಿ ನಡೆಯಲಿದೆ. ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.