ದುಬೈ: ಒಂಬತ್ತನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ(ICC Women’s T20 World Cup) ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ ತಂಡ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಮತ್ತು ಪಾಕಿಸ್ತಾನ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ವರ್ಷದ ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ಟೂರ್ನಿ ನಡೆಯಲಿದೆ. ಸಿಲ್ಹೆಟ್‌ನಲ್ಲಿ ತಮ್ಮ ಎಲ್ಲಾ ಗುಂಪು ಪಂದ್ಯಗಳು ನಡೆಯಲಿದ್ದು, ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.
Breaking: Pakistan and India are in the same group for ICC Women's T20 World Cup 2024 🇵🇰🇮🇳♥️
— Farid Khan (@_FaridKhan) May 5, 2024
Pakistan vs India will be played on October 6 in Sylhet, Bangladesh. Aajao padosiyo 🔥🔥 pic.twitter.com/qbpOXlA2sT
ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತದ ವನಿತೆಯರು ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದ್ದಾರೆ. ಅಕ್ಟೋಬರ್ 13 ರಂದು ಆರು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾದ ವಿರುದ್ಧ ಆಡಲಿದೆ. ಒಂದು ಪಂದ್ಯ ಕ್ವಾಲಿಫೈಯರ್ನಲ್ಲಿ ಗೆದ್ದು ಬಂದ ತಂಡದ ವಿರುದ್ಧ ಆಡಲಿದೆ. ಆತಿಥೇಯ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.
ಇದನ್ನೂ ಓದಿ T20 World Cup : ಉನ್ಮುಕ್ತ್ ಚಾಂದ್ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್ ತಂಡದಲ್ಲಿ ಇಲ್ಲ ಚಾನ್ಸ್!
England v South Africa opening game for the ICC Women’s T20 World Cup 🏆
— Georgie Heath🎙️ (@GeorgieHeath27) May 5, 2024
Remember – South Africa knocked England out in the semi-finals last time around….👀
Which game catches your eye?#womenscricket #T20WorldCup #womenscricket pic.twitter.com/cPt1CfK7eq
ಟೂರ್ನಮೆಂಟ್‌ನಲ್ಲಿ ಪ್ರತಿ ತಂಡವು ನಾಲ್ಕು ಗುಂಪು ಪಂದ್ಯಗಳನ್ನು ಆಡುತ್ತದೆ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್ ಪ್ರವೇಶಿಸಲಿದೆ. ಸೆಮಿಫೈನಲ್ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಫೈನಲ್ ಪಂದ್ಯ ಅಕ್ಟೋಬರ್ 20 ರಂದು ಢಾಕಾದಲ್ಲಿ ನಡೆಯಲಿದೆ ಎಂದು ಐಸಿಸಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಅರ್ಹತಾ ಸುತ್ತಿನಲ್ಲಿ ಫೈನಲ್ ಪ್ರವೇಶಿಸಿದ 2 ತಂಡಗಳು ಪ್ರಧಾನ ಸುತ್ತಿನಲ್ಲಿ ಆಡಲಿದೆ.
ICC reveals the groups of ICC women's T20 World Cup 2024 which will start from 3rd October 🏏#T20WorldCup2024 #WomensCricket #CricketTwitter pic.twitter.com/z7Agqn2jsX
— InsideSport (@InsideSportIND) May 5, 2024
ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳನ್ನು ಆಡಲಾಗುತ್ತದೆ. 19 ದಿನ ಪಂದ್ಯಾವಳಿ ಸಾಗಲಿದೆ. ಢಾಕಾ ಮತ್ತು ಸಿಲ್ಹೆಟ್‌ನಲ್ಲಿ ಪಂದ್ಯಗಳು ನಡೆಯಲಿವೆ. ಲೀಗ್ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನವಿಲ್ಲ. ಕೇಲವ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮಾತ್ರ ಮೀಸಲು ದಿನ ನಿಗದಿಯಾಗಿದೆ.
The Hon’ble Prime Minister of Bangladesh Sheikh Hasina with Bangladesh captain Nigar Sultana and India captain Harmanpreet Kaur at the fixtures launch of the ICC Women's #T20WorldCup 2024 📸 pic.twitter.com/5tbCN8UFHC
— ICC (@ICC) May 5, 2024