ಮುಂಬಯಿ: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ(ICC World Cup 2023) ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಇದೀಗ ಪಂದ್ಯಗಳ ಟಿಕೆಟ್ ಮಾರಾಟ(icc world cup 2023 tickets booking) ಆಗಸ್ಟ್ 10ರಿಂದ ಆರಂಭಗೊಳ್ಳಲಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದುಬಂದಿದೆ.
2023ರ ಐಸಿಸಿ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸುವ ರಾಜ್ಯ ಅಸೋಸಿಯೇಷನ್‌ಗಳ ಮುಖ್ಯಸ್ಥರನ್ನು ಭೇಟಿ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಟಿಕೆಟ್ ಮಾರಾಟದ ಬಗ್ಗೆ ಮಾತನಾಡಿದ್ದಾರೆ. ಜುಲೈ 31ಕ್ಕೆ ಈ ಕುರಿತು ತಿಳಿಸಿಸುವುದಾಗಿ ಹೇಳಿದ್ದಾರೆ. ಮೂಲಗಳ ಪ್ರಕಾರ ಆನ್ಲೈನ್ ಮತ್ತು ಆಫ್ಲೈನ್ ಟಿಕೆಟ್ ಮಾರಾಟಗಳು ಆಗಸ್ಟ್ 10ರಿಂದ ಆರಂಭಗೊಳ್ಳಲಿದೆ ಎನ್ನಲಾಗಿದೆ.
ವಿಶ್ವ ಕಪ್ ಟೂರ್ನಿ ಅಕ್ಟೋಬರ್ 5 ರಿಂದ ಆರಂಭವಾಗಿ ನವೆಂಬರ್ 19ರ ತನಕ ನಡೆಯಲಿದೆ. ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುವ ಈ ಕೂಟದಲ್ಲಿ ಎಲ್ಲ ತಂಡಗಳು ಮುಖಾಮುಖಿಯಾಗಲಿವೆ. ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿವೆ. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3ರವರೆಗೆ 10 ಅಭ್ಯಾಸ ಪಂದ್ಯಗಳು ನಡೆಯಲಿದೆ.
ಇದನ್ನೂ ಓದಿ ICC World Cup 2023: ಜೈಸ್ವಾಲ್ಗೆ ಏಕದಿನ ವಿಶ್ವಕಪ್ನಲ್ಲಿ ಅವಕಾಶ ನೀಡಿ; ಗಂಗೂಲಿ ಒತ್ತಾಯ
ಅಭ್ಯಾಸ ಪಂದ್ಯದಲ್ಲಿ ಎಲ್ಲ ತಂಡಗಳು ಎರಡು ಪಂದ್ಯಗಳನ್ನು ಆಡಲಿವೆ. ಆತಿಥೇಯ ಭಾರತ(IND vs ENG) ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಭಾರತ ತನ್ನ ಮೊದಲ ಲೀಗ್ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಆಡಲಿದೆ.
ಭಾರತ ಪಂದ್ಯದ ಸಂಪೂರ್ಣ ವೇಳಾಪಟ್ಟಿ
ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
ಭಾರತ vs ಅಫಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ
ಭಾರತ vs ಪಾಕಿಸ್ತಾನ- 14 ಅಥವಾ 15 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್
ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ
ಭಾರತ vs ನ್ಯೂಜಿಲ್ಯಾಂಡ್- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ
ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ
ಭಾರತ vs ಶ್ರೀಲಂಕಾ- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ
ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ
ಭಾರತ vs ನೆದರ್ಲೆಂಡ್ಸ್ 1- 11 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು