ICC World Cup 2023: ಹಾಲಿ ಚಾಂಪಿಯನ್​ ಇಂಗ್ಲೆಂಡ್​ ವಿರುದ್ಧ ಭಾರತದ ಪ್ರ್ಯಾಕ್ಟೀಸ್‌ ಗೇಮ್‌ - Vistara News

ಕ್ರಿಕೆಟ್

ICC World Cup 2023: ಹಾಲಿ ಚಾಂಪಿಯನ್​ ಇಂಗ್ಲೆಂಡ್​ ವಿರುದ್ಧ ಭಾರತದ ಪ್ರ್ಯಾಕ್ಟೀಸ್‌ ಗೇಮ್‌

ಇಂದು ನಡೆಯುವ ಅಭ್ಯಾಸ ಪಂದ್ಯದಲ್ಲಿ(India vs England, 4th Warm-up game) ಹಾಲಿ ಚಾಂಪಿಯನ್​ ಇಂಗ್ಲೆಂಡ್​ ವಿರುದ್ಧ ಭಾರತ ಅದೃಷ್ಟ ಪರೀಕ್ಷೆ ಇಳಿಯಲಿದೆ.

VISTARANEWS.COM


on

josh butler and rohit sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗುವಾಹಟಿ: ಆಸ್ಟ್ರೇಲಿಯಾ ವಿರುದ್ಧದ ತವರಿನ ಸರಣಿಯನ್ನು ಗೆದ್ದು ಬೀಗಿರುವ ಭಾರತ ತಂಡ ವಿಶ್ವಕಪ್​ ಟೂರ್ನಿಯನ್ನಾಡಲು(ICC World Cup 2023) ಸಜ್ಜುಗೊಂಡಿದೆ. ಟೂರ್ನಿಯ ಪೂರ್ವ ಭಾಗವಾಗಿ ನಡೆಯುವ ಅಭ್ಯಾಸ ಪಂದ್ಯದಲ್ಲಿ(India vs England, 4th Warm-up game) ಹಾಲಿ ಚಾಂಪಿಯನ್​ ಇಂಗ್ಲೆಂಡ್​ ವಿರುದ್ಧ ಅದೃಷ್ಟ ಪರೀಕ್ಷೆ ಇಳಿಯಲಿದೆ. ಇತ್ತಂಡಗಳ ಈ ಮುಖಾಮುಖಿ ಇಂದು ಮಧ್ಯಾಹ್ನ ಗುವಾಹಟಿಯಲ್ಲಿ ನಡೆಯಲಿದೆ.

ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ಬಲಿಷ್ಠ ಬ್ಯಾಟಿಂಗ್​ ಪಡೆಯನ್ನು ಹೊಂದಿರುವ ತಂಡ. ಜಾನಿ ಬೇರ್‌ಸ್ಟೊ, ಡೇವಿಡ್​ ಮಲಾನ್‌, ಬ್ರೂಕ್‌, ಲಿವಿಂಗ್‌ಸ್ಟೋನ್‌, ನಾಯಕ ಜಾಸ್​ ಬಟ್ಲರ್​ ಮತ್ತು ನಿವೃತ್ತಿ ವಾಪಸ್​ ಪಡೆದು ತಂಡಕ್ಕೆ ಮರಳಿರುವ ವಿಶ್ವಕಪ್​ ಹೀರೊ ಬೆನ್​ ಸ್ಟೋಕ್ಸ್​ ಅತ್ಯಂತ ಅಪಾಯಕಾರಿಯಾಗಿ ಗೋಚರಿಸಿದ್ದಾರೆ. ಭಾರತದ ನೆಲದಲ್ಲಿ ಈ ಎಲ್ಲ ಆಟಗಾರರು ಐಪಿಎಲ್​ ಆಡಿರುವ ಅನುಭವ ಹೊಂದಿರುವ ಕಾರಣ ಇವರೆಲ್ಲರಿಗೆ ಇಲ್ಲಿನ ಪಿಚ್​ನಲ್ಲಿ ಆಡುವುದು ಕಷ್ಟಕರವಾಗದು. ಸ್ಪಿನ್ ದಾಳಿಯುನ್ನು ಸಮರ್ಥವಾಗಿ ಎದುರಿಸಿ ನಿಲ್ಲುವ ಸಾಮರ್ಥ್ಯ ಇವರಿಗಿದೆ. ಹೀಗಾಗಿ ಈ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆ ಇದೆ.

ಅಕ್ಷರ್​ ಪಟೇಲ್​ ಅವರು ಗಾಯಗೊಂಡು ಟೂರ್ನಿಯಿಂದ ಹೊರಬಿದ್ದ ಕಾರಣ ಅವರ ಬದಲು ಸ್ಥಾನ ಪಡೆದ ಅನುಭವಿ ಸ್ಪಿನ್​ ಆಲ್​ರೌಂಡರ್​ ಆರ್​.ಅಶ್ವಿನ್​ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಏಕೆಂದರೆ ಇಲ್ಲಿ ಅವರು ತೋರುವ ಪ್ರದರ್ಶನವನ್ನು ಮನಗಂಡು ಲೀಗ್​ ಹಂತದಲ್ಲಿ ಆಯ್ಕೆ ಮಾಡುವ ಯೋಜನೆಯಲ್ಲಿದೆ ಬಿಸಿಸಿಐ.

ಇದನ್ನೂ ಓದಿ ICC World Cup 2023: ವಿಶ್ವ ಕಪ್ ವೀಕ್ಷಕ ವಿವರಣೆಕಾರರ ಪಟ್ಟಿ ರಿಲೀಸ್! ಪಾಂಟಿಂಗ್, ಶಾಸ್ತ್ರಿ, ಹುಸೇನ್ ಜತೆ ಮತ್ತೆ ಯಾರಿದ್ದಾರೆ?

ಉಭಯ ತಂಡಗಳು

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೇರ್​ಸ್ಟೋ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ ಸ್ಟೋನ್, ಡೇವಿಡ್ ಮಾಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ , ಸೂರ್ಯಕುಮಾರ್ ಯಾದವ್.

10 ತಾಣಗಳಲ್ಲಿ ಪಂದ್ಯವಾಳಿ

ವಿಶ್ವಕಪ್​ನಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿದ್ದು 10 ತಂಡಗಳು ಸೆಣಸಾಟ ನಡೆಸಲಿವೆ. ದೇಶದ ಪ್ರಮುಖ 10 ತಾಣಗಳಲ್ಲಿ ಈ ಪಂದ್ಯ ನಡೆಯಲಿದೆ. ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ನ್ಯೂಜಿಲ್ಯಾಂಡ್​ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡ ತನ್ನ ಮೊದಲ ಲೀಗ್​ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್​ 8 ರಂದು ಆಡಲಿದೆ. ಅಕ್ಟೋಬರ್ 14 ರಂದು ಭಾರತ ತನ್ನ ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯಲಿದೆ ಈ ಪಂದ್ಯ ಕಣ್ತುಬಿಂಕೊಳ್ಳಲು ಕ್ರಿಕೆಟ್​ ಅಭಿಮಾನಿಗಳು ಕಾತರದಿಂದ ಕಾದು ಕುಳಿತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

Virat Kohli’s Phone Wallpaper: ಕೊಹ್ಲಿ ಮಾತ್ರವದಲ್ಲದೆ, ಆ್ಯಪಲ್‌ ಸಿಇಒ ಸ್ಟೀವ್ ಜಾಬ್ಸ್, ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ಸೇರಿ ಜಗತ್ತಿನಾದ್ಯಂತ ಹಲವು ಪ್ರಸಿದ್ಧ ರಾಜಕಾರಣಿಗಳು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳೆಲ್ಲ ಬಾಬಾ ಭಕ್ತರಾಗಿದ್ದಾರೆ

VISTARANEWS.COM


on

Virat Kohli's Phone Wallpaper
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡದ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(Virat Kohli) ಅವರು ಮೊಬೈಲ್​ನ ಹೋಮ್​ ಸ್ಕ್ರೀನ್​ನಲ್ಲಿರುವ(Virat Kohli’s phone wallpaper) ಫೋಟೊ ಒಂದು ವೈರಲ್​ ಆಗಿದ್ದು, ಈ ಫೋಟೊದಲ್ಲಿರುವ ವ್ಯಕ್ತಿ ಯಾರೆಂದು ತಿಳಿದುಕೊಳ್ಳುವ ಆಸಕ್ತಿ ಮತ್ತು ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.​

ಹೌದು ವಿರಾಟ್​ ಮೊಬೈಲ್​ ವಾಲ್​ ಪೇಪರ್​ನಲ್ಲಿರುವ ಫೋಟೊ ಬಾಮ್ ಕರೋಲಿ ಬಾಬಾ ಅವರದ್ದಾಗಿದೆ. ವಿರಾಟ್​ ಕೊಹ್ಲಿ ಅವರು 2 ವರ್ಷಗಳ ಕಾಲ ತಮ್ಮ ಬ್ಯಾಟಿಂಗ್​ ಫಾರ್ಮ್​ ಕಳೆದುಕೊಂಡು ಇನ್ನೇನು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಕೊನೆಗೊಳ್ಳುತ್ತದೆ ಎನ್ನುವಷ್ಟರಲ್ಲಿ ಕೊಹ್ಲಿ ಅವರನ್ನು ಪತ್ನಿ ಅನುಷ್ಕಾ ಶರ್ಮ ಕರೋಲಿ ಬಾಬಾ ಆಶ್ರಮಕ್ಕೆ ಕರೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದಾಗಿ ಕೊಹ್ಲಿ ಆಡಿದ ಮರು ಪಂದ್ಯದಲ್ಲೇ ಶತಕ ಬಾರಿಸಿ ಸಂಭ್ರಮಿಸಿದ್ದರು. ಈ ಪವಾಡ ನಡೆದಾಗಿನಿಂದಲೂ ಕೊಹ್ಲಿ ಅವರು ಕರೋಲಿ ಬಾಬಾ ಅವರ ಭಕ್ತರಾಗಿದ್ದಾರೆ.

ಕೊಹ್ಲಿ ಮಾತ್ರವದಲ್ಲದೆ, ಆ್ಯಪಲ್‌ ಸಿಇಒ ಸ್ಟೀವ್ ಜಾಬ್ಸ್, ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ಸೇರಿ ಜಗತ್ತಿನಾದ್ಯಂತ ಹಲವು ಪ್ರಸಿದ್ಧ ರಾಜಕಾರಣಿಗಳು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳೆಲ್ಲ ಬಾಬಾ ಭಕ್ತರಾಗಿದ್ದಾರೆ. ಕೊಹ್ಲಿ ಬಿಡುವು ಸಿಕ್ಕ ವೇಳೆ ಕುಟುಂಬ ಸಮೇತರಾಗಿ ಕರೋಲಿ ಬಾಬಾ ಆಶ್ರಮಕ್ಕೆ ಭೇಟಿ ನೀಡುತ್ತಿರುತ್ತಾರೆ.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಯಾರು ಈ ಕರೋಲಿ ಬಾಬಾ?


ಕರೋಲಿ ಬಾಬಾರನ್ನು ಅವರ ಭಕ್ತರು ಭಗವಾನ್ ಹನುಮಂತನ ಅವತಾರವೆಂದೇ ನಂಬುತ್ತಾರೆ. ತಾನೊಬ್ಬ ಸಾಮಾನ್ಯ ವ್ಯಕ್ತಿ ಎಂದು ಸ್ವತಃ ಬಾಬಾ ಹೇಳಿದ್ದರೂ ಕೂಡ ಭಕ್ತರು ಮಾತ್ರ ಅವರನ್ನು ಪೂಜಿಸುವುದು ನಿಲ್ಲಿಸಿಲ್ಲ. ನೀಮ್ ಕರೋಲಿ ಬಾಬಾ ಅವರ ಮೂಲ ಹೆಸರು ಲಕ್ಷ್ಮೀನಾರಾಯಣ ಶರ್ಮಾ. ಬಾಬಾರ ಜೀವನದಲ್ಲಿ ನಡೆದ ಅನೇಕ ಘಟನೆಗಳು ಅವರ ಸಾಮರ್ಥ್ಯ, ಶಕ್ತಿ ಮತ್ತು ದಯೆಯಿಂದ ಅವರನ್ನು ಆಂಜನೇಯನ ಅವತಾರವೆಂದು ಪರಿಗಣಿಸಲಾಗಿದೆ.

    ಲಂಡನ್​ಗೆ ತೆರಳಿದ ಕೊಹ್ಲಿ


    ಟೀಮ್​ ಇಂಡಿಯಾ ವಿಜಯೋತ್ಸವ ಆಚರಣೆ ಮುಗಿದ ತಕ್ಷಣ ವಿರಾಟ್​ ಕೊಹ್ಲಿ ಅವರು ಲಂಡನ್​ಗೆ ಪ್ರಯಾಣಿಸಿದ್ದಾರೆ. ಪತ್ನಿ ಅನುಷ್ಕಾ ಮತ್ತು ಇಬ್ಬರು ಮಕ್ಕಳು ಲಂಡನ್​ನಲ್ಲಿರುವ ಕಾರಣ ಕುಟುಂಬದ ಜತೆ ಕಾಲ ಕಳೆಯಲು ಕೊಹ್ಲಿ ನೇರವಾಗಿ ಮುಂಬೈನಿಂದ ಲಂಡನ್​ ವಿಮಾನ ಏರಿದ್ದಾರೆ.

    ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

    ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು.

    Continue Reading

    ಕ್ರೀಡೆ

    Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

    Rohit Sharma: ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

    VISTARANEWS.COM


    on

    Rohit Sharma
    Koo

    ಮುಂಬಯಿ: ಟಿ20 ವಿಶ್ವಕಪ್(T20 World Cup 2024)​ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮಗೆ(Rohit Sharma) ತಮ್ಮ ಬಾಲ್ಯದ ಗೆಳೆಯರು(Rohit Sharma’s childhood friends) ವಿಶೇಷವಾಗಿ ವೆಲ್​ಕಮ್​ ಮಾಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಗುರುವಾರ  ಮುಂಬೈಯಲ್ಲಿ ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ತಂಡದ ಆಟಗಾರರಿಗೆ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ಎಲ್ಲ ಕಾರ್ಯಕ್ರಮ ಮುಗಿದ ಬಳಿಕ ರೋಹಿತ್​ ಅವರು ಬಾಲ್ಯದ ಗೆಳೆಯನ್ನು ಭೇಟಿ ಮಾಡಿದರು. ಈ ವೇಳೆ ಗೆಳೆಯರು ಸೆಲ್ಯೂಟ್​ ಹೊಡೆದು, ರೋಹಿತ್​ ಅವರನ್ನು ಭುಜದ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಈ ವೇಳೆ​ ಟೀಮ್​ ಇಂಡಿಯಾ ಆಟಗಾರ, ರೋಹಿತ್​ ಅವರ ಆಪ್ತರಾಗಿರುವ ತಿಲಕ್​ ವರ್ಮಾ ಕೂಡ ಜತೆಗಿದ್ದರು. ಇವರು ಕೂಡ ಸೆಲ್ಯೂಟ್​ ಹೊಡೆದು ರೋಹಿತ್​ಗೆ ಗೌರವಿಸಿದ್ದಾರೆ.

    ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಆಟಗಾರರು ತೆರೆದ ಬಸ್​ನಲ್ಲಿ ವಿಶ್ವಕಪ್​ ಟ್ರೋಫಿಯೊಂದಿಗೆ ರೋಡ್ ಶೋ ನಡೆಸಿದ್ದರು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

    ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

    ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ‘ಆ ವಿಷಯಗಳನ್ನು ನನ್ನಿಂದ ವಿವರಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಏಕೆಂದರೆ, ಯಾವುದನ್ನೂ ನಾನು ಸ್ಕ್ರಿಪ್ಟ್ ಮಾಡಿಲ್ಲ. ನಾನು ಮೈದಾನಕ್ಕೆ ಇಳಿದಾಗ ಆ ಕ್ಷಣವನ್ನು ಅನುಭವಿಸುತ್ತಿದ್ದೆ. ಗೆಲುವು ತಂದು ಕೊಟ್ಟ ಈ ಪಿಚ್​ನ ಋಣವನ್ನು ಮರೆಯಲು ಸಾಧ್ಯವಿಲ್ಲ. ನನ್ನ ಜೀವನದುದ್ದಕ್ಕೂ ಈ ಪಿಚ್​ನ ಮಣ್ಣಿನ ನೆನಪನ್ನು ಇಟ್ಟು ಕೊಳ್ಳುವ ಸಲುವಾಗಿ ನಾನು ಪಿಚ್​ನ ಮಣ್ಣು ತಿಂದೆ” ಎಂದು ಹೇಳಿದ್ದರು.

    ವಿದಾಯ ಹೇಳಿದ ರೋಹಿತ್​


    ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

    Continue Reading

    ಕ್ರಿಕೆಟ್

    Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

    Team India’s Victory Parade:ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

    VISTARANEWS.COM


    on

    Team India's Victory Parade
    Koo

    ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ನಿನ್ನೆ(ಗುರುವಾರ) ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ತಂಡದ ಈ ವಿಜಯೋತ್ಸವದ(Team India’s Victory Parade) ವೇಳೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಪೈಕಿ ಕೆಲವರಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ಇದೀಗ ವರದಿಯಾಗಿವೆ. ಸದ್ಯದ ಮಾಹಿತಿ ಪ್ರಕಾರ 11 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

    ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಮಹಿಳೆಯೊಬ್ಬರು ಉಸಿರಾಟ ಸಮಸ್ಯೆಗೆ ಸಿಲುಕಿ ಬಳಿಕ ಪೊಲೀಸ್​ ಅಧಿಕಾರಿಯೊಬ್ಬರು ಮಹಿಳೆಯನ್ನು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ದೃಶ್ಯ ಕೂಡ ವೈರಲ್​ ಆಗಿದೆ. ಒಟ್ಟು 9 ಮಂದಿ ಉಸಿರಾಟದ ಸಮಸ್ಯೆಗೆ ಸಿಲುಕಿ ಇಲ್ಲಿನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

    17 ವರ್ಷಗಳ ಬಳಿಕ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

    ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

    ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್‌ ಪ್ರೇಮಿಗಳ ಜಯಘೋಷ ಮೊಳಗಿತು. ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳನ್ನು ಸಲ್ಲಿಸಿದರು.

    ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

    ಜೂನ್ 29ರಂದು ಬಾರ್ಬಾಡೋಸ್‌ನಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಎದುರು ಜಯಿಸಿತ್ತು. ಆದರೆ ಕೆರೀಬಿಯನ್ ದ್ವೀಪದಲ್ಲಿ ಚಂಡಮಾರುತ ಬೀಸಿದ್ದ ಕಾರಣ ವಿಮಾನಯಾನ ಸೌಲಭ್ಯ ರದ್ದಾಗಿತ್ತು. ಆದ್ದರಿಂದ ಬುಧವಾರದವರೆಗೂ ತಂಡವು ಬಾರ್ಬಾಡೋಸ್‌ನಲ್ಲಿಯೇ ಉಳಿದಿತ್ತು.

    ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

    Continue Reading

    ಕ್ರೀಡೆ

    IND vs ZIM: ನಾಳೆಯಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ; ಯುವ ಪಡೆಗೆ ಸ್ಫೂರ್ತಿಯಾಗಲಿ ಟಿ20 ವಿಶ್ವಕಪ್​ ಗೆಲುವು

    IND vs ZIM:ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಯಂಗ್​ ಟೀಮ್​ ಇಂಡಿಯಾ ಆಟಗಾರರ ಎಚ್ಚರಿಕೆಯಿಂದ ಆಡಬೇಕು.

    VISTARANEWS.COM


    on

    IND vs ZIM
    Koo

    ಹರಾರೆ: ಇದುವರೆಗೂ ಟಿ20 ವಿಶ್ವಕಪ್​ ಗೆಲುವಿನ ಗುಂಗಿನಲ್ಲಿದ್ದ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಇನ್ನು ನಾಳೆಯಿಂದ(ಶನಿವಾರ) ಆರಂಭಗೊಳ್ಳುವ ಜಿಂಬಾಬ್ವೆ ಮತ್ತು ಭಾರತ(IND vs ZIM) ನಡುವಣ ಟಿ20(
    Zimbabwe vs India) ಸರಣಿಯತ್ತ ಗಮನ ಹರಿಸಲಿದ್ದಾರೆ. ಹರಾರೆಯಲ್ಲಿ ಇತ್ತಂಡಗಳ ಮೊದಲ ಪಂದ್ಯ ನಡೆಯಲಿದೆ. ಯುವ ಪಡೆಯನ್ನೇ ನೆಚ್ಚಿಕೊಂಡಿರುವ ಶುಭಮನ್​ ಗಿಲ್(shubman gill)​ ಸಾರಥ್ಯದ ಟೀಮ್​ ಇಂಡಿಯಾ ಹೇಗೆ ಪ್ರದರ್ಶನ ತೋರಲಿದೆ ಎನ್ನುವುದು ಈ ಸೆರಣಿಯ ಕೌತುಕ.

    ಈಗಾಗಲೇ ಹಿರಿಯ ಆಟಗಾರರಾದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರೆ. ಮುಂದಿನ ವರ್ಷ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಕೂಡ ನಡೆಯಲಿದೆ. ಇದು ಟಿ20 ಸ್ವರೂಪದಲ್ಲಿಯೇ ನಡೆಯಲಿದೆ. ಜತೆಗೆ 2026ರಲ್ಲಿ ಟಿ20 ವಿಶ್ವಕಪ್​ ಕೂಡ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ರಚಿಸಲು ಬಿಸಿಸಿಐ ಸಿದ್ಧತೆ ಆರಂಭಿಸಿದೆ. ಇದೀಗ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಸಿಕ್ಕ ಅವಕಾಶವನ್ನು ಯುವ ಆಟಗಾರರು ಸರಿಯಾಗಿ ಬಳಸಿಕೊಂಡರೆ ಭಾರತ ಸೀನಿಯರ್​ ತಂಡದಲ್ಲಿ ಆಡುವ ಅವಕಾಶ ಪಡೆಯಬಹುದು. ಹೀಗಾಗಿ ಎಲ್ಲ ಆಟಗಾರರು ಶ್ರೇಷ್ಠ ಪ್ರದರ್ಶನ ತೋರಬೇಕು.

    ರೋಹಿತ್​ ನಿವೃತ್ತಿಯಿಂದ ತೆರವಾದ ಟಿ20 ತಂಡದ ನಾಯಕತ್ವಕ್ಕೆ ಈಗಾಗಲೇ ಹಾರ್ದಿಕ್​ ಹೆಸರು ಕೇಳಿ ಬಂದಿದೆ. ಜಿಂಬಾಬ್ವೆ ಸರಣಿಯಲ್ಲಿ ತಂಡ ಮುನ್ನಡೆಸುತ್ತಿರುವ ಶುಭಮನ್​ ಗಿಲ್​ ಈ ಸರಣಿಯಲ್ಲಿ ಯಶಸ್ವಿಯಾದರೆ ಮುಂದಿನ ದಿನದಲ್ಲಿ ನಾಯಕನಾಗುವ ಸಾಧ್ಯತೆಯೂ ಇದೆ. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಪರ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಮಳೆಯನ್ನೇ ಸುರಿಸಿದ್ದ ಎಡಗೈ ಬ್ಯಾಟರ್​ ಅಭಿಷೇಕ್​ ಶರ್ಮ ಬ್ಯಾಟಿಂಗ್​ ಪ್ರದರ್ಶನದ ಮೇಕೆಯೂ ಬಹಳ ನಿರೀಕ್ಷೆ ಇದೆ. ಒಟ್ಟಾರೆ ಈ ಸರಣಿಯಲ್ಲಿ ಆಟಗಾರರು ತೋರುವ ಪ್ರದರ್ಶನದಲ್ಲಿ ಅವರ ಮುಂದಿನ ಕ್ರಿಕೆಟ್​ ಭವಿಷ್ಯ ಅಡಗಿದೆ ಎನ್ನಲಡ್ಡಿಯಿಲ್ಲ.

    ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

    ಜಿಂಬಾಬ್ವೆ ಕೂಡ ಬಲಿಷ್ಠ


    ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಜತೆಗೆ ತಂಡದ ನೂತನ ಕೋಚ್​ ಆಗಿರುವ ಜಸ್ಟಿನ್‌ ಸ್ಯಾಮ್ಸನ್‌ ಅವರ ಮಾರ್ಗದರ್ಶನ ಕೂಡ ತಂಡಕ್ಕೆ ನೆರವಾಗಬಹುದು. ಹೀಗಾಗಿ ಭಾರತ ಎಚ್ಚರಿಕೆಯಿಂದ ಆಡಬೇಕು.

    ಮುಖಾಮುಖಿ


    ಭಾರತ ಮತ್ತು ಜಿಂಬಾಬ್ವೆ ಇದುವರೆಗೆ ಒಟ್ಟು 8 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 6 ಪಂದ್ಯ ಗೆದ್ದಿದ್ದರೆ, ಜಿಂಬಾಬ್ವೆ 2 ಪಂದ್ಯ ಗೆದ್ದಿದೆ. ಕೊನೆಯ ಬಾರಿ ಇತ್ತಂಡಗಳು ಆಡಿದ್ದು 2022ರಲ್ಲಿ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ. ಈ ಪಂದ್ಯವನ್ನು ಭಾರತ 71 ರನ್​ ಅಂತರದಿಂದ ಗೆದ್ದು ಬೀಗಿತ್ತು.

    ಭಾರತ ತಂಡ

    ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

    ವೇಳಾಪಟ್ಟಿ

    1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

    2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

    3ನೇ T20: ಜುಲೈ 10, ಹರಾರೆ, ಸಂಜೆ 4.30

    4ನೇ T20: ಜುಲೈ 13, ಹರಾರೆ, ಸಂಜೆ 4.30

    5 ನೇ T20: ಜುಲೈ 14, ಹರಾರೆ, ಸಂಜೆ 4.30

    Continue Reading
    Advertisement
    Stock Market
    ವಾಣಿಜ್ಯ21 seconds ago

    Stock Market: 1 ಲಕ್ಷ ಪಾಯಿಂಟ್‌ ಮೈಲಿಗಲ್ಲಿನತ್ತ ಸೆನ್ಸೆಕ್ಸ್‌; ಅಂಕಿ-ಅಂಶ ಹೇಳೋದೇನು?

    Virat Kohli's Phone Wallpaper
    ಕ್ರೀಡೆ30 seconds ago

    Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

    natana Tarangini 20th anniversary celebration on July 6 and 7 in Bengaluru
    ಕರ್ನಾಟಕ9 mins ago

    Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

    HDFC Life certified as one of Indias Best Companies to Work For in 2024
    ಬೆಂಗಳೂರು11 mins ago

    HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

    Baby Death
    Latest15 mins ago

    Baby Death: ಹೋಮ್‌ ವರ್ಕ್‌ ಮಾಡುತ್ತಿದ್ದ ಬಾಲಕಿಗೆ ಸಾವಾಗಿ ಕಾಡಿದ ಪೆನ್‌!

    Medical negligence
    ದಾವಣಗೆರೆ17 mins ago

    Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

    Prajwal Revanna Case
    ಕರ್ನಾಟಕ23 mins ago

    Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

    kumble sridhara rao
    ಶ್ರದ್ಧಾಂಜಲಿ26 mins ago

    Kumble Sridhara Rao: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

    Kung Fu Panda 4 OTT Jio cinema july 15th onwards
    ಒಟಿಟಿ27 mins ago

    Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ; ಕನ್ನಡ ಭಾಷೆಯಲ್ಲೂ ಲಭ್ಯ!

    CM Siddaramaiah
    ಕರ್ನಾಟಕ31 mins ago

    CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka rain
    ಮಳೆ2 hours ago

    Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

    Elephant attack in Hassan and Chikmagalur
    ಹಾಸನ3 hours ago

    Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

    Physical Abuse
    ಬೆಂಗಳೂರು5 hours ago

    Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

    Self Harming in bengaluru
    ಬೆಂಗಳೂರು5 hours ago

    Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

    karnataka Weather Forecast Rain
    ಮಳೆ9 hours ago

    Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

    karnataka Weather Forecast
    ಮಳೆ22 hours ago

    Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

    karnataka Rain
    ಮಳೆ23 hours ago

    Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

    wild animal attack
    ಬೆಂಗಳೂರು ಗ್ರಾಮಾಂತರ1 day ago

    Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

    Chikkaballapura News
    ಚಿಕ್ಕಬಳ್ಳಾಪುರ1 day ago

    Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

    karnataka Rain
    ಮಳೆ1 day ago

    Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

    ಟ್ರೆಂಡಿಂಗ್‌