ಅಹಮದಾಬಾದ್: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ (ICC World Cup 2023) ಪಂದ್ಯದ ನಿರೀಕ್ಷೆ, ಕುತೂಹಲ, ಜೈಕಾರ, ಬೆಂಬಲ ಮುಗಿಲು ಮುಟ್ಟಿದೆ. ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಡಿಯಾ, ಇಂಡಿಯಾ ಎಂಬ ಘೋಷಣೆ ಮೊಳಗುತ್ತಿದೆ. ದೇಶಾದ್ಯಂತ ಭಾರತ ತಂಡದ ಗೆಲುವಿಗೆ ಪ್ರಾರ್ಥನೆ, ಪೂಜೆ, ಶುಭಾಶಯಗಳ ಸುರಿಮಳೆ ಸುರಿಯುತ್ತಿದೆ. ಶತಕೋಟಿ ಭಾರತೀಯರ ಕುತೂಹಲ, ಕೌತುಕ, ನಿರೀಕ್ಷೆ ಹೆಚ್ಚಿಸಿರುವ ಹೈವೋಲ್ಟೇಜ್ ಪಂದ್ಯದ ಕ್ಷಣಕ್ಷಣದ (IND vs AUS Final Live) ಮಾಹಿತಿ ಇಲ್ಲಿದೆ.
ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಮತ್ಕಾರ ಕಂಡು ಕ್ರಿಕೆಟ್ ಪ್ರೇಕ್ಷಕರು ಸಂತಸಗೊಂಡಿದ್ದಾರೆ. ಸೂರ್ಯಕಿರಣ್ ತಂಡದಿಂದ ಈ ಏರ್ ಶೋ ನಡೆಯುತ್ತಿದೆ.
ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ. ಲೋಹದ ಹಕ್ಕಿಗಳ ಚಮಕ್ ಕಂಡು ಪ್ರೇಕ್ಷಕರು ಫುಲ್ ಖುಷ್…
ಭಾರತ ಹಾಗೂ ಆಸ್ಟ್ರೇಲಿಯಾ ಆಡುವ 11 ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ನಾಯಕ), ಆಡಮ್ ಝಂಪಾ, ಜೋಶ್ ಹೇಜಲ್ವುಡ್.
ನಾವು ಮೊದಲು ಬೌಲಿಂಗ್ ಮಾಡುತ್ತೇವೆ. ಒಣಗಿದ ಪಿಚ್ನಂತೆ ಕಾಣುತ್ತದೆ. ಕಾಣುತ್ತದೆ. ಇಬ್ಬನಿ ಪರಿಣಾಮ ಇರಬಹುದು. ಚೇಸ್ ಮಾಡುವುದು ಸುಲಭ ಎಂದು ಪ್ಯಾಟ್ ಕಮಿನ್ಸ್ ಹೇಳಿದ್ದಾರೆ.
ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆ ತಂಡದ ನಾಯಕ ಹೇಳಿದ್ದಾರೆ.