ಅಹಮದಾಬಾದ್: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ (ICC World Cup 2023) ಪಂದ್ಯದ ನಿರೀಕ್ಷೆ, ಕುತೂಹಲ, ಜೈಕಾರ, ಬೆಂಬಲ ಮುಗಿಲು ಮುಟ್ಟಿದೆ. ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಡಿಯಾ, ಇಂಡಿಯಾ ಎಂಬ ಘೋಷಣೆ ಮೊಳಗುತ್ತಿದೆ. ದೇಶಾದ್ಯಂತ ಭಾರತ ತಂಡದ ಗೆಲುವಿಗೆ ಪ್ರಾರ್ಥನೆ, ಪೂಜೆ, ಶುಭಾಶಯಗಳ ಸುರಿಮಳೆ ಸುರಿಯುತ್ತಿದೆ. ಶತಕೋಟಿ ಭಾರತೀಯರ ಕುತೂಹಲ, ಕೌತುಕ, ನಿರೀಕ್ಷೆ ಹೆಚ್ಚಿಸಿರುವ ಹೈವೋಲ್ಟೇಜ್ ಪಂದ್ಯದ ಕ್ಷಣಕ್ಷಣದ (IND vs AUS Final Live) ಮಾಹಿತಿ ಇಲ್ಲಿದೆ.
ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದಿದ್ದಾರೆ. ಮೊದಲು ಬ್ಯಾಟ್ ಮಾಡುವಂತೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಆಹ್ವಾನ ಕೊಟ್ಟಿದ್ದಾರೆ.
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು ಕೂಡ ಪಂದ್ಯ ವೀಕ್ಷಿಸಲು ಆಗಮಿಸಿದ್ದಾರೆ.
ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸ್ಟೇಡಿಯಮ್ ಆಗಮಿಸಿದ್ದಾರೆ. ಅವರ ಉಪಸ್ಥಿತಿಯಲ್ಲಿ ದೊಡ್ಡ ಪಂದ್ಯ ನಡೆಯಲಿದೆ.
ಪಿಚ್ ಸಂಖ್ಯೆ ಐದರಲ್ಲಿ ಪಂದ್ಯ ನಡೆಯಲಿದೆ. ಇದೇ ಪಿಚ್ ಅನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಬಳಸಲಾಗಿದೆ. ಇದು ಅದಕ್ಕಿಂತ ಭಿನ್ನವಾಗಿದೆ ಏಕೆಂದರೆ ಇದನ್ನು ಬಹಳ ಸಮಯದವರೆಗೆ ತೆರೆದಿಡಲಾಗಿದೆ. ಇದು ತುಂಬಾ ಒಣಗಿದಂತೆ ಕಾಣುತ್ತದೆ, ಹೆಚ್ಚು ಉರುಳುವುದಿಲ್ಲ. ವಿಶೇಷವಾಗಿ ಸ್ಪಿನ್ನರ್ ಗಳಿಗೆ ನೆರವಾಗುವಂತೆ. ಅದು ಸ್ವಲ್ಪ ತಿರುಗುತ್ತದೆ ಎಂದು ನಾನು ನಿರೀಕ್ಷಿಸುತ್ತೇನೆ. ಇಬ್ಬನಿ ಇಲ್ಲದಿದ್ದರೆ, ನೀವು ತೊಂದರೆಗೆ ಸಿಲುಕಬಹುದು. ಮೊದಲು ಬ್ಯಾಟಿಂಗ್ ಮಾಡಿ, ದೊಡ್ಡ ಸ್ಕೋರ್ ಬಾರಿಸುವುದೇ ಉತ್ತಮ ಆದರೆ ಭಾರತ ತಂಡ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಎಂದು ಕಾಮೆಂಟೇಟರ್ ರವಿ ಶಾಸ್ತ್ರಿ ಹೇಳಿದ್ದಾರೆ.