ನವದೆಹಲಿ: 28 ವರ್ಷಗಳ ಬಳಿಕ ಭಾರತ ಕ್ರಿಕೆಟ್ ತಂಡಕ್ಕೆ ಏಕ ದಿನ ವಿಶ್ವ ಕಪ್(ICC World Cup 2023) ಗೆಲ್ಲಿಸಿ ಕೊಟ್ಟ ನಾಯಕ ಮಹೇಂದ್ರ ಸಿಂಗ್ ಧೋನಿ(MS Dhoni) ಅವರು, ಭಾರತದ ಆತಿಥ್ಯದಲ್ಲೇ ನಡೆಯುವ ಏಕದಿನ ವಿಶ್ವ ಕಪ್ ವೇಳೆ ಟೀಮ್ ಇಂಡಿಯಾದ(Team India Cricket) ಮೆಂಟರ್ ಆಗಿ ಕರ್ತವ್ಯ ನಿರ್ವಹಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಧೋನಿ ಅವರನ್ನು ಮೇಂಟರ್(MS Dhoni Mentor) ಆಗಿ ಆಯ್ಕೆ ಮಾಡಲು ಬಿಸಿಸಿಐ ಎಲ್ಲ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.
ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಟಿ20, ಏಕದಿನ ವಿಶ್ವ ಕಪ್ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಭಾತರ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಧೋನಿ ನಿವೃತ್ತಿ ಬಳಿಕ ಎರಡು ನಾಯಕರನ್ನು ಟೀಮ್ ಇಂಡಿಯಾ ಕಂಡರೂ ಐಸಿಸಿ ಟ್ರೋಫಿ ಮಾತ್ರ ನುಂಗಲಾರದ ತುತ್ತಾಗಿಯೇ ಉಳಿದುಕೊಂಡಿದೆ. ಇದೀಗ ಈ ಸಮಸ್ಯೆಯನ್ನು ಹೋಗಲಾಡಿಸಲು ಧೋನಿ ಅವರ ಮೊರೆ ಹೋಗಲು ಬಿಸಿಸಿಐ ನಿರ್ಧರಿಸಿದೆ. ಅವರನ್ನು ವಿಶ್ವ ಕಪ್ ಟೂರ್ನಿಯಲ್ಲಿ ತಂಡದ ಮೆಂಟರ್ ಆಗಿ ನೇಮಿಸಲು ಮುಂದಾಗಿದೆ.
ದುಬೈನಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್ನಲ್ಲಿಯೂ ಧೋನಿ ಭಾರತ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಆದರೆ ಭಾರತ ತಂಡಕ್ಕೆ ಇದು ಯಾವುದೇ ಪ್ರಯೋಜನಕಾರಿಯಾಗಿ ಆಗಿರಲಿಲ್ಲ. ತಂಡ ಮೊದಲ ಬಾರಿಗೆ ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ ವಿರುದ್ಧ 10 ವಿಕೆಟ್ಗಳ ಹೀನಾಯ ಸೋಲು ಕಂಡಿತ್ತು. ಸೋಲಿನ ಕಾರಣದಿಂದ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿದಿದ್ದರು. ಇದರ ಬೆನ್ನಲ್ಲೇ ಏಕದಿನ ಕ್ರಿಕೆಟ್ನಿಂದಲೂ ಅವರ ನಾಯಕತ್ವ ಕೈ ತಪ್ಪಿತ್ತು. ಜತೆಗೆ ತಂಡದ ಕೋಚ್ ಕೂಡ ಬದಲಾವಣೆಯಾಗಿತ್ತು. ರೋಹಿತ್ ತಂಡದ ನಾಯಕನಾದರೆ, ದ್ರಾವಿಡ್ ಕೋಚ್ ಆಗಿ ಕರ್ತವ್ಯ ವಹಿಸಿಕೊಂಡರು.
ಇದನ್ನೂ ಓದಿ ICC World Cup 2023: ವಿಶ್ವ ಕಪ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ
ಕೋಚ್ ಮತ್ತು ನಾಯಕನ ಬದಲಾವಣೆಯಾದರೂ ಭಾರತ ತಂಡದ ಪ್ರಗತಿಗೆ ಯಾವುದೇ ಪ್ರಯೋಜನವಾಗಲಿಲ್ಲ. ಮತ್ತೆ ಐಸಿಸಿ ಟೂರ್ನಿಗಳಲ್ಲಿ ಎಡವುತ್ತಲೇ ಬಂದಿದೆ. ಆದರೆ ಈ ಬಾರಿ ಭಾರತದಲ್ಲೇ ನಡೆಯುವ ವಿಶ್ವ ಕಪ್ ಟೂರ್ನಿಯಲ್ಲಿ ಗೆಲ್ಲಲ್ಲೇ ಬೇಕೆಂಬ ಜಿದ್ದಿಗೆ ಬಿದ್ದಿರುವ ಬಿಸಿಸಿಐ ಆಯ್ಕೆ ಸಮಿತಿಗೆ ಸೂಕ್ತ ಅಧ್ಯಕ್ಷನ ಹುಡುಕಾಡದಲ್ಲಿದೆ. ಇದಲ್ಲದೆ ಧೋನಿ ಅವರ ಸಲಹೆಗೂ ಮುಂದಾಗಿದೆ ಎಂದು ತಿಳಿದುಬಂದಿದೆ.
ಭಾರತ ಪಂದ್ಯದ ಸಂಪೂರ್ಣ ವೇಳಾಪಟ್ಟಿ
ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
ಭಾರತ vs ಅಫಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ
ಭಾರತ vs ಪಾಕಿಸ್ತಾನ- 15 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್
ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ
ಭಾರತ vs ನ್ಯೂಜಿಲ್ಯಾಂಡ್- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ
ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ
ಭಾರತ vs ಕ್ವಾಲಿಫೈಯರ್ 2- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ
ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ
ಭಾರತ vs ಕ್ವಾಲಿಫೈಯರ್ 1- 11 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು