ಭಾರತದ ಆತಿಥ್ಯದಲ್ಲಿ ನಡೆಯುವ ಬಹು ನಿರೀಕ್ಷಿತ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ (ICC World Cup 2023 schedule) ಕೊನೆಗೂ ಅಧಿಕೃತವಾಗಿ ಪ್ರಕಟಗೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬೈನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ. ಮಹತ್ವದ ಈ ಟೂರ್ನಿ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದ್ದು, ಫೈನಲ್ ಪಂದ್ಯ ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.
GET YOUR CALENDARS READY! 🗓️🏆
— ICC (@ICC) June 27, 2023
The ICC Men's @cricketworldcup 2023 schedule is out now ⬇️#CWC23https://t.co/j62Erj3d2c
ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲೇ ನಡೆಯಲಿದೆ. ಈ ಹಿಂದೆ ಪಾಕ್ ಇಲ್ಲಿ ಪಂದ್ಯ ಆಡುವುದಿಲ್ಲ ಎಂದು ಪಟ್ಟು ಹಿಡಿತ್ತು. ಆದರೆ ಈಗ ಪಂದ್ಯ ಇದೇ ಮೈದಾನದಲ್ಲಿ ನಡೆಯಲಿದೆ. ಟೂರ್ನಿಯ ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿದೆ. ಭಾರತ ತಂಡ ತನ್ನ ಮೊದಲ ಲೀಗ್ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಆಡಲಿದೆ.
ಇದನ್ನೂ ಓದಿ IPL 2023: ಅಹಮದಾಬಾದ್‌ನಲ್ಲಿ ಹವಾಮಾನ ಹೇಗಿದೆ? ಫೈನಲ್ ಪಂದ್ಯ ನಡೆಯುತ್ತಾ?
ಭಾರತ ಪಂದ್ಯದ ಸಂಪೂರ್ಣ ವೇಳಾಪಟ್ಟಿ
ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
ಭಾರತ vs ಅಫಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ
ಭಾರತ vs ಪಾಕಿಸ್ತಾನ- 15 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್
ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ
ಭಾರತ vs ನ್ಯೂಜಿಲ್ಯಾಂಡ್- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ
ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ
ಭಾರತ vs ಕ್ವಾಲಿಫೈಯರ್ 2- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ
ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ
ಭಾರತ vs ಕ್ವಾಲಿಫೈಯರ್ 1- 11 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು