Site icon Vistara News

ICC World Cup 2023: ಭಾರತದಲ್ಲೇ ನಡೆಯಲಿದೆ ವಿಶ್ವ ಕಪ್​ ಪಂದ್ಯ; ಐಸಿಸಿ ಸ್ಪಷ್ಟನೆ

ICC World Cup 2023: The World Cup match will be held in India; ICC Clarification

ICC World Cup 2023: The World Cup match will be held in India; ICC Clarification

ದುಬೈ: ಭಾರತದ ಆತಿಥ್ಯದಲ್ಲಿ ಇದೇ ವರ್ಷ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ(ICC World Cup 2023) ಪಾಕಿಸ್ತಾನ ತಂಡವು ತನ್ನ ಪಾಲಿನ ಪಂದ್ಯಗಳನ್ನು ಬಾಂಗ್ಲಾದೇಶದಲ್ಲಿ ಆಡುತ್ತದೆ ಎಂದು ವರದಿಯಾಗಿತ್ತು. ಇದೀಗ ಈ ಬಗ್ಗೆ ಐಸಿಸಿ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಐಸಿಸಿ(ICC) ಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಲ್ಲ ಪಂದ್ಯಗಳು ಭಾರತದಲ್ಲಿಯೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.

ಏಷ್ಯಾ ಕಪ್​ಗಾಗಿ ಪಾಕಿಸ್ತಾನಕ್ಕೆ ಭಾರತ ತಂಡ ಬರಲು ಒಪ್ಪದ ಕಾರಣ ಪಾಕ್ ಕೂಡ ಭದ್ರತಾ ಕೊರತೆಯ ನೆಪವೊಡ್ಡಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವ ಕಪ್​ ಟೂರ್ನಿಯಲ್ಲಿ ನಾವು ಪಾಲ್ಗೊಳ್ಳಲು ಹಿಂದೇಟು ಹಾಕಿದೆ. ಇದೇ ಕಾರಣಕ್ಕೆ ಪಾಕಿಸ್ತಾನದ ಪಂದ್ಯಗಳು ತಟಸ್ಥ ತಾಣವಾದ ಬಾಂಗ್ಲಾದೇಶದಲ್ಲಿ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಇದೀಗ ಐಸಿಸಿ ಇದು ಸುಳ್ಳು ಸುದ್ದಿ ಎಂದು ತಿಳಿಸಿದೆ.

ಈ ಬಾರಿಯ ಏಷ್ಯಾ ಕಪ್​ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿದೆ. ಆದರೆ ಪಾಕಿಸ್ತಾನದಲ್ಲಿ ಪಂದ್ಯಗಳು ನಡೆದರೆ ಭಾರತ ಈ ಟೂರ್ನಿಯಲ್ಲಿ ಆಡುವುದಿಲ್ಲ ಎಂದು ಬಿಸಿಸಿ ಹೇಳಿತ್ತು. ಇದೇ ವಿಚಾರವಾಗಿ ಪಾಕ್​ ಕ್ರಿಕೆಟ್​ ಮಂಡಳಿ ಮತ್ತು ಬಿಸಿಸಿಐ(BCCI) ಮಧ್ಯೆ ಕಿತ್ತಾಟ ನಡೆಯುತ್ತಲೇ ಇತ್ತು. ಇದೇ ವಿಚಾರವಾಗಿ ಕಳೆದ ವಾರ ದುಬೈಯಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ ಸಭೆಯಲ್ಲಿ ಈ ಬಾರಿ ಪಾಕಿಸ್ತಾನದ ಆತಿಥ್ಯದಲ್ಲೇ ಏಷ್ಯಾ ಕಪ್​ ನಡೆಸುವಂತೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಭಾರತದ ಪಂದ್ಯಗಳು ಮಾತ್ರ ಸಾಗರೋತ್ತರ ತಟಸ್ಥ ಸ್ಥಳದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು.

ಇದೇ ಸಿಟ್ಟಿನಲ್ಲಿ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವ ಟೂರ್ನಿಯಲ್ಲಿ ಪಾಕಿಸ್ತಾನದ ಪಂದ್ಯಗಳು ಬಾಂಗ್ಲಾದೇಶನಲ್ಲಿ ನಡೆಸುವಂತೆ ಮನವಿ ಮಾಡಿದೆ ಎಂದು ವರದಿಯಾಗಿತ್ತು. ಇನ್ನು ಕೆಲ ವರದಿಗಳ ಪ್ರಕಾರ ಪಾಕ್​ ಪಂದ್ಯಗಳು ಬಾಂಗ್ಲಾದಲ್ಲಿ ನಡೆಯಲಿದೆ ಎಂದು ಖಚಿತ ಪಡಿಸಿತ್ತು. ಆದರೆ ಈ ಎಲ್ಲ ಅನುಮಾನಗಳಿಗೆ ಐಸಿಸಿ ತೆರೆ ಎಳೆದಿದೆ.

ಇದನ್ನೂ ಓದಿ IND VS PAK: ಏಕದಿನ ವಿಶ್ವಕಪ್​; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!

‘ಪಿಸಿಬಿ ಮುಖ್ಯಸ್ಥ ನಜಾಮ್ ಸೇಥಿ ಮತ್ತು ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ನಜ್ಮುಲ್ ಹಸನ್ ಪಪೊನ್ ಅವರಿಬ್ಬರು ಭೇಟಿಯಾಗಿ ದ್ವಿಪಕ್ಷೀಯ ಕ್ರಿಕೆಟ್ ಸರಣಿಯ​ ವಿಚಾರವಾಗಿ ಮಾತನಾಡಿದ್ದಾರೆ. ಆದರೆ ಇಲ್ಲಿ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವ ಕಪ್​ ಕುರಿತು ಯಾವುದೇ ಚರ್ಚೆ ನಡೆದಿಲ್ಲ’ ಎಂದು ಐಸಿಸಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ Asia Cup 2023 : ಪಾಕ್​​ನಲ್ಲೇ ಏಷ್ಯಾ ಕಪ್​; ಭಾರತ, ಪಾಕಿಸ್ತಾನ ಪಂದ್ಯ ತಟಸ್ಥ ತಾಣದಲ್ಲಿ

‘ವಿಶ್ವಕಪ್ ಟೂರ್ನಿಯಲ್ಲಿ ಆಡಲು ಭಾರತಕ್ಕೆ ಪ್ರವಾಸ ಮಾಡುವ ಎಲ್ಲ ತಂಡಗಳಿಗೂ ಬಿಸಿಸಿಐ ಈಗಾಗಲೇ ವೀಸಾ ವ್ಯವಸ್ಥೆ ಮಾಡಿದೆ. ಹೀಗಿರುವಾಗ ಪಾಕಿಸ್ತಾನ ಅಂತಿಮ ಹಂತದಲ್ಲಿ ಈ ರೀತಿಯ ಗೊಂದಲದ ಹೇಳಿಹೆ ನೀಡುವುದು ಅಸಂಬದ್ಧವಾಗಲಿದೆ’ ಎಂದು ಐಸಿಸಿ ಮಂಡಳಿಯ ಸದಸ್ಯರೊಬ್ಬರು ಹೇಳಿದ್ದಾರೆ.

Exit mobile version