ಮುಂಬಯಿ: ನಿರೀಕ್ಷೆಯಂತೆ ಏಕದಿನ ವಿಶ್ವಕಪ್ಗೆ(ICC World Cup) ಆತಿಥೇಯ ಭಾರತ ತನ್ನ 15 ಮಂದಿ ಸಂಭಾವ್ಯ(icc world cup india squad) ಆಟಗಾರರ ಪಟ್ಟಿಯನ್ನು ಮಂಗಳವಾರ ಬಿಡುಗಡೆಗೊಳಿಸಿದೆ. ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ಈ ತಂಡವನ್ನು ಪ್ರಕಟಿಸಿದರು. ಈಗಾಗಲೇ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಸಂಭಾವ್ಯ ತಂಡಗಳ ಪಟ್ಟಿಯನ್ನು ಪ್ರಕಟಿಸಿತ್ತು. ಇದೀಗ ಭಾರತವೂ ಸಂಭಾವ್ಯ ತಂಡದ ಪಟ್ಟಿಯನ್ನು ಪ್ರಕಟಿಸಿದೆ. ಬಹುತೇಕ ಈ ತಂಡವೇ ಪ್ರಧಾನ ತಂಡವಾಗಿದ್ದು ಈ ತಂಡದಲ್ಲಿ ಯಾರಾದರೂ ಗಾಯವಾದರೆ ಮಾತ್ರ ಬದಲಾವಣೆ ಎಂದು ಅಗರ್ಕರ್ ತಿಳಿಸಿದರು.
ಮೊದಲ ಬಾರಿಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್(ICC World Cup) ಟೂರ್ನಿ ಆರಂಭಕ್ಕೆ ಇನ್ನು ಭರ್ತಿ ಒಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಟೂರ್ನಿ ಅಕ್ಟೋಬರ್ 5 ರಿಂದ ಆಂಭವಾಗಿ ನವೆಂಬರ್ 19ರ ತನಕ ನಡೆಯಲಿದೆ. ಉದ್ಘಾಟನ ಮತ್ತು ಫೈನಲ್ ಪಂದ್ಯಗಳು ಅಹಮದಾಬಾದ್ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಪಂದ್ಯ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ವಿರುದ್ಧ ನಡೆಯಲಿದೆ. ಆತಿಥೇಯ ಭಾರತ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8ರಂದು ಆಸ್ಟ್ರೇಲಿಯಾ ಎದುರು ಆಡಲಿದೆ. ಈ ಪಂದ್ಯ ಚೆನ್ನೈಯಲ್ಲಿ ನಡೆಯಲಿದೆ.
ರಾಹುಲ್ಗೆ ಕೀಪಿಂಗ್ ಹೊಣೆ
ಕಾರು ಅಪಘಾತದಲ್ಲಿ ರಿಷಭ್ ಪಂತ್ ಅವರು ತಂಡದಿಂದ ಹೊರಗಿರುವ ಕಾರಣ ವಿಕೆಟ್ ಕೀಪಿಂಗ್ ಆಗಿ ರಾಹುಲ್ ಮೊದಲ ಆಯ್ಕೆಯಾಗಿದ್ದಾರೆ. ಐಪಿಎಲ್ ಸಂದರ್ಭದಲ್ಲಿ ತೊಡೆಯ ಗಾಯದಿಂದ ಬಳಲಿದ್ದ ರಾಹುಲ್ ಶಸ್ತ್ರಚಿಕಿತ್ಸೆ ಪಡೆದಿದ್ದರು. ನಂತರ ಎನ್‌ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದರು. ಏಷ್ಯಾ ಕಪ್ ಟೂರ್ನಿಯಲ್ಲಿ ಆಡುವ ತಂಡಕ್ಕೆ ಆಯ್ಕೆಯಾಗಿದ್ದರೂ, ಮೊದಲೆರಡು ಪಂದ್ಯಗಳಿಂದ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಸೂಪರ್ 4ನಲ್ಲಿ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ.
ತಿಲಕ್ ವರ್ಮಗೆ ಕೊಕ್
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣ ಏಷ್ಯಾ ಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಯುವ ಎಡಗೈ ಆಟಗಾರ ತಿಲಕ್ ವರ್ಮಾ ಅವರನ್ನು ವಿಶ್ವಕಪ್ ತಂಡದಿಂದ ಕೈಬಿಡಲಾಗಿದೆ. ಇವರ ಜತೆ ಏಷ್ಯಾಕಪ್ನಲ್ಲಿ ಮೀಸಲು ಆಟಗಾರನಾಗಿದ್ದ ಸಂಜು ಅವರಿಗೂ ಅವಕಾಶ ನೀಡಿಲ್ಲ. ಜತೆಗೆ ಪ್ರಸಿದ್ಧ್ ಕೃಷ್ಣ ಅವರು ಕೂಡ ಆಯ್ಕೆಯಾಗಿಲ್ಲ. ಅನುಭವಿ ಸ್ಪಿನ್ನರ್ ಯಜುವೇಂದ್ರ ಚಹಲ್, ಶಿಖರ್ ಧವನ್ ಮತ್ತು ಆರ್.ಅಶ್ವಿನ್ ಕೂಡ ಅವಕಾಶ ವಂಚಿತರಾದರು.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್‌ಪ್ರಿತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಸೂರ್ಯಕುಮಾರ್.
ಇದನ್ನೂ ಓದಿ ICC World Cup: ವಿಶ್ವಕಪ್ನಲ್ಲಿ 4ನೇ ಕ್ರಮಾಂಕಕ್ಕೆ ಕೊಹ್ಲಿಪರ್ಫೆಕ್ಟ್; ಗೆಳೆಯನಿಂದ ಸಲಹೆ
ಅಭ್ಯಾಸ ಪಂದ್ಯದಲ್ಲಿ ಆಸೀಸ್ ಎದುರಾಳಿ
ಭಾರತ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ನಡೆಯಲಿದೆ. 29ರಂದು ಆರಂಭಗೊಳ್ಳಲಿರುವ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಅದೇ ದಿನ ನಡೆಯುವ ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿದೆ. ಲಂಕಾ ಮತ್ತು ಬಾಂಗ್ಲಾ ಪಂದ್ಯ ಗುವಾಹಟಿಯಲ್ಲಿ ನಡೆದರೆ ಪಾಕ್-ಕಿವೀಸ್ ಪಂದ್ಯ ಹೈದರಾಬಾದ್ನಲ್ಲಿ ನಡೆಯಲಿದೆ.
ಭಾರತ ಪಂದ್ಯದ ಸಂಪೂರ್ಣ ವೇಳಾಪಟ್ಟಿ
ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
ಭಾರತ vs ಅಫಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ
ಭಾರತ vs ಪಾಕಿಸ್ತಾನ- 14 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್
ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ
ಭಾರತ vs ನ್ಯೂಜಿಲ್ಯಾಂಡ್- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ
ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ
ಭಾರತ vs ಶ್ರೀಲಂಕಾ- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ
ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ
ಭಾರತ vs ನೆದರ್ಲೆಂಡ್ಸ್ – 12 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು